ETV Bharat / state

ರಾಜ್ಯಕ್ಕೆ-ರಾಜ್ಯದ ಜನರ ತೆರಿಗೆಯ ಪಾಲಿಗೆ ಆಗುತ್ತಿರುವ ಅನ್ಯಾಯವನ್ನು ಪ್ರಶ್ನಿಸುವುದು ತಪ್ಪಾ?: ಸಿಎಂ ಸಿದ್ದರಾಮಯ್ಯ

ರಾಜ್ಯಗಳನ್ನು ಕೇಂದ್ರ ದುರ್ಬಲಗೊಳಿಸಬಾರದು ಎಂದು ಸಿಎಂ ಸಿದ್ದರಾಮಯ್ಯ ಅವರು ಹೇಳಿದ್ದಾರೆ.

ಸಿಎಂ ಸಿದ್ದರಾಮಯ್ಯ
ಸಿಎಂ ಸಿದ್ದರಾಮಯ್ಯ
author img

By ETV Bharat Karnataka Team

Published : Feb 21, 2024, 4:11 PM IST

Updated : Feb 21, 2024, 4:49 PM IST

ಬೆಂಗಳೂರು : ರಾಜ್ಯಗಳು ಸುಭದ್ರವಾಗಿದ್ದರೆ ಮಾತ್ರ ದೇಶ ಸುಭದ್ರ. ರಾಜ್ಯಗಳನ್ನು ಕೇಂದ್ರ ದುರ್ಬಲಗೊಳಿಸಬಾರದು. ರಾಜ್ಯಕ್ಕೆ-ರಾಜ್ಯದ ಜನರ ತೆರಿಗೆಯ ಪಾಲಿಗೆ ಆಗುತ್ತಿರುವ ಅನ್ಯಾಯವನ್ನು ಪ್ರಶ್ನಿಸುವುದು ತಪ್ಪಾ? ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪ್ರಶ್ನಿಸಿದರು.

ವಿಧಾನ ಪರಿಷತ್​ನಲ್ಲಿ ರಾಜ್ಯಪಾಲರ ಭಾಷಣದ ಮೇಲೆ ನಡೆದ ಚರ್ಚೆಗೆ ಉತ್ತರ ನೀಡಿದ ಸಿಎಂ, ನಮ್ಮ ಸಂವಿಧಾನ ನಮ್ಮದು ಒಕ್ಕೂಟ ವ್ಯವಸ್ಥೆ ಎಂದು ರೂಪಿಸಿದೆ. ಇದನ್ನು ಇಡೀ ದೇಶ ಒಪ್ಪಿಕೊಂಡಿದೆ. ಆದರೆ, ಈ ಒಕ್ಕೂಟ ವ್ಯವಸ್ಥೆಯನ್ನು ಹಾಳು ಮಾಡಬಾರದು. ನರೇಂದ್ರ ಮೋದಿಯವರು ‘ಕೋ ಆಪರೇಟಿವ್ ಫೆಡರಿಲಿಸಂ’ ಎಂದು ಹೇಳುತ್ತಾರೆ. ಆದರೆ, ಅವರ ಮತ್ತು ಕೇಂದ್ರ ಸರ್ಕಾರದ ನಡವಳಿಕೆಯಲ್ಲಿ ಇದು ಕಾಣುತ್ತಿಲ್ಲ ಎನ್ನುತ್ತಾ ಕೇಂದ್ರದಿಂದ ರಾಜ್ಯಕ್ಕೆ ಕಳೆದ 10 ವರ್ಷಗಳಿಂದ ನಿರಂತರವಾಗಿ ಆಗುತ್ತಿರುವ ಅನ್ಯಾಯದ ಅಂಕಿ-ಅಂಶಗಳನ್ನು ಸಿಎಂ ಬಿಚ್ಚಿಟ್ಟರು.

ಸಿಎಂ ಸಿದ್ದರಾಮಯ್ಯ

ರಾಜ್ಯ ಬಲಿಷ್ಠವಾದರೆ, ಕೇಂದ್ರ ಬಲಿಷ್ಠವಾಗುತ್ತದೆ : ರಾಜ್ಯದಿಂದ ಕೇಂದ್ರಕ್ಕೆ ತೆರಿಗೆ ಹೋಗುತ್ತದೆ. ರಾಜ್ಯದಿಂದ 4.30 ಲಕ್ಷ ಕೋಟಿ ತೆರಿಗೆ ಹೋಗುತ್ತಿದೆ. ತೆರಿಗೆ ಹಂಚಿಕೆಯಲ್ಲಿ 2023-24ಕ್ಕೆ 37,252 ಕೋಟಿ ರೂ. ಬರುತ್ತಿದೆ. ಕೇಂದ್ರ ಪುರಸ್ಕೃತ ಯೋಜನೆಗಳಿಂದ 13,005 ಕೋಟಿ ಸೇರಿ ಒಟ್ಟು 50,257 ಕೋಟಿ ರೂ. ಮಾತ್ರ ಬರುತ್ತಿದೆ. ಕೇಂದ್ರದ ಬಜೆಟ್ ಗಾತ್ರ ಹೆಚ್ಚಾದ ಹಾಗೆ ರಾಜ್ಯದ ಪಾಲು ಕೂಡ ನಿಯಮಬದ್ದವಾಗಿ ಹೆಚ್ಚಾಗಬೇಕು. ಆದರೆ, ಕೇಂದ್ರದ ಬಜೆಟ್ ಗಾತ್ರ ಹೆಚ್ಚಾಗುತ್ತಾ ಹೋದಂತೆ, ಕೇಂದ್ರದಿಂದ ರಾಜ್ಯಕ್ಕೆ ಬರಬೇಕಾದ ಪಾಲು, ಕನ್ನಡಿಗರ ಹಕ್ಕಿನ ತೆರಿಗೆ ಮತ್ತು ಅನುದಾನದ ಪಾಲು ಕಡಿಮೆ ಆಗುತ್ತಿದೆ. ಕನ್ನಡಿಗರ ಹಿತರಕ್ಷಣೆ ಮಾಡುವುದು ನಮ್ಮ ಕರ್ತವ್ಯ. ರಾಜ್ಯ ಬಲಿಷ್ಠವಾದರೆ, ಕೇಂದ್ರ ಬಲಿಷ್ಠವಾಗುತ್ತದೆ ಎಂದರು.

ರಾಜ್ಯಕ್ಕೆ ಮತ್ತು ರಾಜ್ಯದ ಜನತೆಯ ಪಾಲಿಗೆ ಆಗುತ್ತಿರುವ ಅನ್ಯಾಯವನ್ನು ನಾವು ಪ್ರಶ್ನಿಸಿದರೆ, ಪ್ರಧಾನಿ ಮೋದಿ ಅವರು ದೇಶ ವಿಭಜನೆಯ ಬಗ್ಗೆ ಮಾತಾಡುತ್ತಾರೆ. ಪ್ರಧಾನಿ ಅವರ ಮಾತನ್ನು ಪ್ರಸ್ತಾಪಿಸಿದ ಬಳಿಕ ಬಿಜೆಪಿ ಸದಸ್ಯರು ಜೋರು ಧ್ವನಿಯಲ್ಲಿ ಪ್ರಧಾನಿ ಅವರು ಹಾಗೆ ಹೇಳಿಯೇ ಇಲ್ಲ ಎಂದರು. ಇದಕ್ಕೆ ಕಾಂಗ್ರೆಸ್ ಸದಸ್ಯರಾದ ಪ್ರಕಾಶ್ ರಾಥೋಡ್ ಅವರು, ಪ್ರಧಾನಿ ಮೋದಿಯವರಂತೂ ಸುಳ್ಳು ಹೇಳುವುದು ಮೂಮೂಲು. ಬಿಜೆಪಿ ಸದಸ್ಯರೂ ಸುಳ್ಳು ಹೇಳುವುದನ್ನು ಮುಂದುವರೆಸಿದ್ದಾರೆ ಎಂದು ಟೀಕಿಸಿದರು.

ಮೋದಿ ಅವರು ಒಕ್ಕೂಟ ವ್ಯವಸ್ಥೆಗೆ ಅಪಾಯ : ಮೋದಿ ಅವರು ಒಕ್ಕೂಟ ವ್ಯವಸ್ಥೆಗೆ ಅಪಾಯ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಬಿಜೆಪಿ ಸದಸ್ಯರ ಕೇಂದ್ರದ ಸಮರ್ಥನೆಗೆ ತಿರುಗೇಟು ನೀಡಿದರು. ಕೇಂದ್ರದಲ್ಲಿ ಯುಪಿಎ ಸರ್ಕಾರ ಇದ್ದಾಗ ನಡೆದಿದ್ದ ಬಿಜೆಪಿ ಕಾರ್ಯಕಾರಣಿ ಸಭೆಯಲ್ಲಿ ಮುಖ್ಯಮಂತ್ರಿ ಆಗಿದ್ದ ಮೋದಿಯವರು, ಯುಪಿಎ ಸರ್ಕಾರ ಒಕ್ಕೂಟ ವ್ಯವಸ್ಥೆಗೆ ಬೆದರಿಕೆ ಎಂದು ಹೇಳಿದ್ದ ಮಾತನ್ನು ಮುಖ್ಯಮಂತ್ರಿಗಳು ಉಲ್ಲೇಖಿಸಿದರು.

ಸಿಎಂ ಸಿದ್ದರಾಮಯ್ಯ

ಮೋದಿ ಅವರು ಸಿಎಂ ಆಗಿದ್ದಾಗ, ರಾಜ್ಯಗಳು ಕೇಂದ್ರದ ಮುಂದೆ ಭಿಕ್ಷುಕರಲ್ಲ. ಗುಜರಾತ್ ರಾಜ್ಯದಿಂದ ಸಂಗ್ರಹ ಆಗುವ ತೆರಿಗೆಯಲ್ಲಿ ಶೇ. 50ರಷ್ಟು ವಾಪಾಸ್ ಕೊಡಿ ಎಂದು ಕೇಂದ್ರಕ್ಕೆ ಕೇಳಿದ್ದರು. ಗುಜರಾತ್ ರಾಜ್ಯದ ತೆರಿಗೆಯನ್ನು ನಾವು ಕೇಂದ್ರಕ್ಕೆ ಕೊಡುವುದಿಲ್ಲ ಎನ್ನುವ ಮಾತನ್ನೂ ಮೋದಿ ಅವರು ಆಡಿದ್ದರು. ಆದರೆ, ಈಗ ಅದೇ ಮೋದಿ ಅವರು ಪ್ರಧಾನಿ ಆಗಿರುವಾಗ ಕರ್ನಾಟಕ ರಾಜ್ಯಕ್ಕೆ ವಾಪಾಸ್ ಕೊಡುತ್ತಿರುವುದು ಶೇ. 12-13 ರಷ್ಟು ಮಾತ್ರ. ಮೋದಿ ಅವರು ಆಗೊಂದು ಮಾತು, ಈಗೊಂದು ರೀತಿ ಮಾತನಾಡಿದ್ದಾರೆ. ಇದನ್ನು ಪ್ರಸ್ತಾಪಿಸಿದರೆ ನಿಮಗೇಕೆ ಸಿಟ್ಟು ಎಂದು ಮುಖ್ಯಮಂತ್ರಿಗಳು ಬಿಜೆಪಿ ಸದಸ್ಯರನ್ನು ಪ್ರಶ್ನಿಸಿದರು.

ನಾವು ಕೊಡುವ ಪ್ರತಿ 100 ರೂಪಾಯಿಗೆ ಕೇವಲ 12 ರೂ. ವಾಪಾಸ್ ಕೊಟ್ಟರೆ ರಾಜ್ಯದ ಅಭಿವೃದ್ಧಿ ಆಗಲು ಹೇಗೆ ಸಾಧ್ಯ? ಇಷ್ಟು ಕಡಿಮೆ ಪಾಲು ನಮಗೆ ಕೊಟ್ಟರೆ ರಾಜ್ಯದ ಶೂದ್ರರು, ದಲಿತರು, ಆದಿವಾಸಿಗಳು, ದುಡಿಯುವವರು, ಶ್ರಮಿಕರು, ಯುವಕರು, ಮಹಿಳೆಯರ ಅಭಿವೃದ್ಧಿ ಹೇಗೆ ಸಾಧ್ಯ? ಎಂದು ಪ್ರಶ್ನಿಸಿದರು.

ಕೇಂದ್ರದಿಂದ ರಾಜ್ಯಕ್ಕೆ ಬರುತ್ತಿರುವ ಹಣದ ಪಾಲು ಅನ್ಯಾಯವಾದುದು. 2018-19ರಲ್ಲಿ ಕೇಂದ್ರ ಬಜೆಟ್ ಗಾತ್ರ 24,44,213 ಕೋಟಿ ಇತ್ತು. ಅಂದು ರಾಜ್ಯಕ್ಕೆ 51,000 ಕೋಟಿ ಮಾತ್ರ ಬಂತು. 2020-21ನೇ ಸಾಲಿನಲ್ಲಿ ಕೇಂದ್ರದ ಬಜೆಟ್ ಗಾತ್ರ 30,42,243 ಕೋಟಿ ಇದ್ದರೆ ನಮಗೆ ಬಂದಿದ್ದು 31,734 ಕೋಟಿ ರೂ. 2021-22 ರಲ್ಲಿ 34,83,236 ಕೋಟಿ ಗಾತ್ರದ ಬಜೆಟ್​ಗೆ, ರಾಜ್ಯಕ್ಕೆ 48,589 ಕೋಟಿ ಬಂತು. 2022-23ರಲ್ಲಿ ಕೇಂದ್ರದ ಬಜೆಟ್ 41,81,232 ಕೋಟಿ, ರಾಜ್ಯಕ್ಕೆ 53,510 ಕೋಟಿ ಮಾತ್ರ ಬಂತು. 2023-24ರಲ್ಲಿ 45,03,007 ಕೋಟಿ ಕೇಂದ್ರದ ಬಜೆಟ್ ಗಾತ್ರ. ರಾಜ್ಯಕ್ಕೆ ಬಂದಿದ್ದು 50,257 ಕೋಟಿ ಮಾತ್ರ. 2024-25ರಲ್ಲಿ ರಾಜ್ಯಕ್ಕೆ 59,785 ಕೋಟಿ ಬರುತ್ತದೆ ಎಂದು ರಾಜ್ಯಕ್ಕೆ ಆಗುತ್ತಲೇ ಇರುವ ಅನ್ಯಾಯದ ಅಂಕಿ -ಅಂಶಗಳನ್ನು ಬಿಚ್ಚಿಟ್ಟರು.

ಒಕ್ಕೂಟ ವ್ಯವಸ್ಥೆಗೆ ವಿರೋಧವಲ್ಲವೇ? : ಈ ರೀತಿ ಬಜೆಟ್ ಗಾತ್ರ ದೊಡ್ಡದಾದರೂ, ನಮಗೆ ಬರುತ್ತಿರುವ ಪಾಲು ಕಡಿಮೆಯಾಗುತ್ತಿದೆ. ಪ್ರಧಾನಿ ಅವರು ರಾಷ್ಟ್ರಪತಿಗಳ ಭಾಷಣದ ಚರ್ಚೆಗೆ ಉತ್ತರಿಸುತ್ತಾ, ರಾಜ್ಯದ ತೆರಿಗೆ ಪ್ರತಿಭಟನೆಯನ್ನು ಗುರಿಯಾಗಿಸಿಕೊಂಡು ‘ದೇಶದ ಐಕ್ಯತೆಗೆ ಅಪಾಯವೊಡ್ಡುತ್ತದೆ’ ಎಂದಿದ್ದರು. ಅದೇ ಪ್ರಧಾನ ಮಂತ್ರಿಗಳು ಗುಜರಾತಿನ ಸಿಎಂ ಆಗಿದ್ದಾಗ 2012ರಲ್ಲಿ ಗುಜರಾತಿಗೆ ಬರುತ್ತಿರುವ ಆರ್ಥಿಕ ಪಾಲನ್ನು ವಿರೋಧಿಸಿದ್ದರು. ಗುಜರಾತ್ ರಾಜ್ಯ ’ನಾವು ಭಿಕ್ಷುಕ ರಾಜ್ಯವೇ, ನಾವು ಭಿಕ್ಷುಕರೆ, ನಾವು ಕೇಂದ್ರದ ಕರುಣೆಯ ಮೇಲೆ ಬದುಕಬೇಕೇ?’ ಎಂದಿದ್ದರು. ಅಂದಿನ ಕೇಂದ್ರಕ್ಕೆ ‘ಗುಜರಾತಿನಿಂದ ತೆರಿಗೆ ತೆಗೆದುಕೊಳ್ಳಬೇಡಿ, ಅದನ್ನು ನಾವೇ ಬಳಸಿಕೊಳ್ಳುತ್ತೇವೆ’ಎಂದು ಮೋದಿ ಅವರು ಅಂದಿದ್ದರು. ಇದು ಸಂವಿಧಾನ, ಒಕ್ಕೂಟ ವ್ಯವಸ್ಥೆಗೆ ವಿರೋಧವಲ್ಲವೇ? ಎಂದು ಅಂದಿನ ಮೋದಿಯವರ ಮಾತನ್ನೇ ಉಲ್ಲೇಖಿಸಿ ಸಿಎಂ ಸಿದ್ದರಾಮಯ್ಯ ಅವರು ಪ್ರಶ್ನಿಸಿದರು.

ಏಕ ವಚನ ಬಳಕೆಗೆ ವಿಷಾಧಿಸಿದ್ದೇನೆ : ಕೇಂದ್ರದಿಂದ ರಾಜ್ಯಕ್ಕೆ ಬರಬೇಕಾದ ರಾಜ್ಯದ ಪಾಲಿನ ನಮ್ಮ ಹಣ ವಾಪಾಸ್ ಕೊಡಿಸಿ. ನಿಮಗೆ ನೂರು ಕೋಟಿ ನಮಸ್ಕಾರ ಹಾಕ್ತೀನಿ ಎಂದು ಸಿಎಂ ಸಿದ್ದರಾಮಯ್ಯ ಅವರು ಬಿಜೆಪಿ ಸದಸ್ಯರಿಗೆ ಸವಾಲು ಹಾಕಿದರು. ಈ ವೇಳೆ ಪರಿಷತ್ ವಿರೋಧ ಪಕ್ಷದ ನಾಯಕರಾದ ಕೋಟಾ ಶ್ರೀನಿವಾಸ್ ಪೂಜಾರಿಯವರು ಮಧ್ಯ ಪ್ರವೇಶಿಸಿ, ನಿಮ್ಮ ಕೋಟಿ ನಮಸ್ಕಾರ ನಮಗೆ ಬೇಡ. ಆದರೆ, ಪ್ರಧಾನಿ ಮತ್ತು ರಾಷ್ಟ್ರಪತಿಯವರನ್ನು ಏಕವಚನದಲ್ಲಿ ಕರೆಯುವುದನ್ನು ನಿಲ್ಲಿಸಿ ಎನ್ನುವ ಮೂಲಕ ವಿಷಯಾಂತರ ಮಾಡಿದರು.

ಇದಕ್ಕೆ ಪ್ರತಿಕ್ರಿಯಿಸಿದ ಮುಖ್ಯಮಂತ್ರಿಗಳು, ನಾನು ರಾಷ್ಟ್ರಪತಿಗಳಿಗೆ ಬಿಜೆಪಿ ಮಾಡಿದ ಅವಮಾನವನ್ನು ಪ್ರಸ್ತಾಪಿಸುವಾಗ ಬಾಯಿತಪ್ಪಿ ಏಕವಚನ ಬಳಸಿದೆ. ಇದಕ್ಕೆ ತಕ್ಷಣವೇ ವಿಷಾದ ಕೂಡ ವ್ಯಕ್ತಪಡಿಸಿದ್ದೇನೆ. ಆದರೆ, ನೂತನ ಪಾರ್ಲಿಮೆಂಟಿನ ಉದ್ಘಾಟನೆಗೆ ಗೌರವಾನ್ವಿತ ರಾಷ್ಟ್ರಪತಿ ದ್ರೌಪದಿ ಮರ್ಮು ಅವರನ್ನು ಆಹ್ವಾನಿಸದೇ ಇದ್ದದ್ದು ರಾಷ್ಟ್ರಪತಿಗಳಿಗೆ, ರಾಷ್ಟ್ರಪತಿ ಹುದ್ದೆಗೆ ಮಾಡಿದ ಅವಮಾನ ಅಲ್ಲವೇ? ರಾಷ್ಟ್ರಪತಿಗಳಿಗೆ ನೀವು ಮಾಡಿದ ಅವಮಾನ ಸರಿಯೇ? ಎಂದು ಪ್ರಶ್ನಿಸಿದರು.

ಬಿಜೆಪಿ ಪರಿವಾರದವರು ರಾಷ್ಟ್ರೀಯವಾದಿಗಳಾ? : ದೇಶದ ಸ್ವಾತಂತ್ರ್ಯಕ್ಕಾಗಿ ಹೋರಾಟ ಮಾಡಿ ಹುತಾತ್ಮರಾಗಿ, ಜೈಲು ಸೇರಿದವರು ರಾಷ್ಟ್ರೀಯವಾದಿಗಳಲ್ವಾ?. ದೇಶದ ಸ್ವಾತಂತ್ರ್ಯಕ್ಕಾಗಿ ಹೋರಾಟ ಮಾಡಿ ಹುತಾತ್ಮರಾಗಿ, ಜೈಲು ಸೇರಿದ ಕಾಂಗ್ರೆಸ್ಸಿನವರೇ ನಿಜವಾದ ರಾಷ್ಟ್ರೀಯವಾದಿಗಳು. ಸ್ವಾತಂತ್ರ್ಯ ಹೋರಾಟದಲ್ಲಿ ಅಪ್ಪಿ ತಪ್ಪಿಯೂ ಭಾಗವಹಿಸದ ಜನಸಂಘ ಮತ್ತು ಬಿಜೆಪಿ ಪರಿವಾರದವರು ರಾಷ್ಟ್ರೀಯವಾದಿಗಳಾ? ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬಿಜೆಪಿಯನ್ನು ಕುಟುಕಿದರು.

ಕಾಂಗ್ರೆಸ್​ನ ರಾಷ್ಟ್ರೀಯವಾದಿ ಹೋರಾಟ ಮತ್ತು ಚಳವಳಿಯ ಚರಿತ್ರೆಯನ್ನು ಎಳೆ ಎಳೆಯಾಗಿ ವಿವರಿಸಿದ ಸಿಎಂ, ದೇಶದ ಸ್ವಾತಂತ್ರ್ಯಕ್ಕಾಗಿ ಜೈಲು ಸೇರಿದವರು, ಹುತಾತ್ಮರಾದವರು, ಬ್ರಿಟಿಷರಿಂದ ಹಿಂಸೆ ಅನುಭವಿಸಿದವರು ಕಾಂಗ್ರೆಸ್ಸಿನವರು. ಬಿಜೆಪಿ ಪರಿವಾರದವರಿಗೆ ಸ್ವಾತಂತ್ರ್ಯ ಹೋರಾಟದ ಚರಿತ್ರೆಯೇ ಇಲ್ಲ. ಅವರು ದೇಶಕ್ಕಾಗಿ ಹೋರಾಡಿದ ಚರಿತ್ರೆಯೇ ಇಲ್ಲ. ನಮ್ಮ ಹೋರಾಟದಿಂದ ದೇಶಕ್ಕೆ ಸ್ವಾತಂತ್ರ್ಯ ಸಿಕ್ಕ ಬಳಿಕ ಈಗ ಇವರು ರಾಷ್ಟ್ರೀಯವಾದಿಗಳು ಎಂದು ಹೇಳಿಕೊಳ್ಳುತ್ತಿದ್ದಾರೆ. ಆದರೆ ಭಾರತದ ಇತಿಹಾಸ ಮತ್ತು ಚರಿತ್ರೆಯಲ್ಲಿ ಯಾರು ನಿಜವಾದ ರಾಷ್ಟ್ರೀಯವಾದಿಗಳು ಎನ್ನುವುದು ದಾಖಲಾಗಿದೆ ಎಂದರು.

ದೇಶದ ಸ್ವಾತಂತ್ರ್ಯ ಹೋರಾಟ ಮತ್ತು ರಾಷ್ಟ್ರ ನಿರ್ಮಾಣದಲ್ಲಿ ಕಾಂಗ್ರೆಸ್​ನ ದಾಖಲೆ, ಸಾಧನೆಗಳನ್ನು ಮುಖ್ಯಮಂತ್ರಿಗಳು ಪರಿಷತ್​ನಲ್ಲಿ ವಿವರವಾಗಿ ಹೇಳುವಾಗ ಜೆಡಿಎಸ್​ನ ಸದಸ್ಯ ಬೋಜೇಗೌಡರು ಮಧ್ಯ ಪ್ರವೇಶಿಸಿ, ಏನನ್ನೋ ಹೇಳಲು ಮುಂದಾದರು. ಈ ವೇಳೆ ಮುಖ್ಯಮಂತ್ರಿಗಳು ತಮ್ಮ ಮಾಮೂಲು ಹಾಸ್ಯದ ಶೈಲಿಯಲ್ಲಿ "ಬೋಜೇಗೌಡರೇ ನೀವು ಸೆಕ್ಯುಲರ್ ಆದ್ರೆ ಈ ಕಡೆ ಬನ್ನಿ. ಕೋಮುವಾದಿಯಾಗಿದ್ದರೆ ಅಲ್ಲೇ ಇರಿ'' ಎಂದರು. ಮುಖ್ಯಮಂತ್ರಿಗಳ ಮಾತನ್ನು ಗೌರವದಿಂದ ಸ್ವೀಕರಿಸಿದ ಬೋಜೇಗೌಡರು ಸಿಎಂಗೆ ಕೈ ಮುಗಿದು ಕುಳಿತರು.

ನಿಮ್ಮ ದಾಖಲೆ ಮುರಿಯಲು ಯಾರಿಂದಲೂ ಸಾಧ್ಯವಿಲ್ಲ: ಪುಟ್ಟಣ್ಣ ಪರಿಷತ್ ಸದಸ್ಯರಾಗಿ ಪ್ರಮಾಣವಚನ ಸ್ವೀಕರಿಸಿದರು. 5ನೇ ಬಾರಿಗೆ ಪುಟ್ಟಣ್ಣ ಪರಿಷತ್ ಪ್ರವೇಶಿಸಿದ ಬಗ್ಗೆ ನಡೆದ ಚರ್ಚೆ ವೇಳೆ ಮಾತನಾಡಿದ ಮುಖ್ಯಮಂತ್ರಿಗಳು, "ಸಭಾಪತಿಗಳೇ ನೀವು ಎಂಟು ಬಾರಿ ಗೆಲುವು ಸಾಧಿಸಿದ್ದೀರಿ. ನಿಮ್ಮ ದಾಖಲೆಯನ್ನು ಸದ್ಯಕ್ಕೆ ಯಾರೂ ಸರಿಗಟ್ಟಲು ಸಾಧ್ಯವಿಲ್ಲ" ಎಂದು ಹೊರಟ್ಟಿಯವರ ಬಗ್ಗೆ ಮೆಚ್ಚುಗೆಯ ಮಾತುಗಳನ್ನು ಸಿಎಂ ಆಡಿದರು.

JD "S" ಅಲ್ಲ ಈಗ JD "C": ನಾನೂ ಶೂದ್ರ-ನೀವೂ ಶೂದ್ರರು, ರವಿಕುಮಾರ್ ಕೂಡ ಶೂದ್ರರು. ಹೀಗಿದ್ದೂ ಯಾಕ್ರೀ ಇದೆಲ್ಲಾ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬಿಜೆಪಿಯ ಶ್ರೀನಿವಾಸ್ ಪೂಜಾರಿ ಮತ್ತು ರವಿಕುಮಾರ್ ಅವರನ್ನು ಪ್ರಶ್ನಿಸಿದರು. ಸಂವಿಧಾನ ಜಾರಿಯ ಮುನ್ನಾ ದಿನ ಅಂಬೇಡ್ಕರ್ ಅವರು ಪಾರ್ಲಿಮೆಂಟಿನಲ್ಲಿ ಮಾಡಿದ ಭಾಷಣದ ಪ್ರಮುಖ ಅಂಶಗಳನ್ನು ಉಲ್ಲೇಖಿಸಿ, ಮುಖ್ಯಮಂತ್ರಿಗಳು ವಿವರವಾಗಿ ಮಾತನಾಡುತ್ತಿದ್ದರು. ಈ ವೇಳೆ ತಮ್ಮ ಮಾತಿಗೆ ಮಧ್ಯ ಪ್ರವೇಶಿಸಿದ ಪೂಜಾರ್ ಮತ್ತು ರವಿಕುಮಾರ್ ಅವರಿಗೆ ನಾವೂ ಶೂದ್ರರು, ನೀವೂ ಶೂದ್ರರು ಎನ್ನುವುದನ್ನು ನೆನಪಿಸಿದರು.

ಪ್ರಬಲ ವಿರೋಧ ಪಕ್ಷ ಪ್ರಜಾಪ್ರಭುತ್ವಕ್ಕೆ ಪೂರಕ. ಆಪರೇಷನ್ ಕಮಲ ಪ್ರಜಾಪ್ರಭುತ್ವಕ್ಕೆ ಮಾರಕ ಎಂದು ಇದೇ ಸಂದರ್ಭದಲ್ಲಿ ಪ್ರಸ್ತಾಪಿಸಿದರು. ಕುವೆಂಪು ಅವರ ಸರ್ವೋದಯವಾಗಲಿ ಸರ್ವರಲಿ ಎನ್ನುವ ಮಾತನ್ನು ಉಲ್ಲೇಖಿಸಿದರು. ಇದಕ್ಕೆ ಪ್ರತಿಕ್ರಿಯಿಸಿದ ಜೆಡಿಎಸ್ ಸದಸ್ಯ ಬೋಜೇಗೌಡರು ಕುವೆಂಪು ಅವರ ಮಾತನ್ನು ಮುಂದುವರೆಸಿದರು.

ಈ ವೇಳೆ ಮುಖ್ಯಮಂತ್ರಿಗಳು, ಕುವೆಂಪು ಆಶಯ ಇಟ್ಟುಕೊಂಡು ಇನ್ನೂ ಬಿಜೆಪಿ-ಜೆಡಿಎಸ್ ಜತೆಗಿದ್ದೀರಿ ಏಕೆ? ಎಂದು ಪ್ರಶ್ನಿಸಿದರು. ಜತೆಗೆ ಈಗ ನಿಮ್ಮದು JD "S" ಅಲ್ಲ ಈಗ JD "C" ಆಗಿದೆ ಅಂದರು. ಇದಕ್ಕೆ ಕಾಂಗ್ರೆಸ್ ಸದಸ್ಯರು C ಫಾರ್ ಕಮ್ಯುನಲ್ ಎಂದು ಟೇಬಲ್ ಬಡಿದರು. ಈ ಮಧ್ಯೆ ಬಿಜೆಪಿಯ ರವಿಕುಮಾರ್ ಅವರು ಪರಿಷತ್ ವಿರೋಧ ಪಕ್ಷದ ನಾಯಕ ಪೂಜಾರಿ ಅವರಿಗೆ ಕಿವಿಯಲ್ಲಿ ಏನೋ ಹೇಳುತ್ತಿದ್ದರು. ಈ ಸಂದರ್ಭದಲ್ಲಿ ಮುಖ್ಯಮಂತ್ರಿಗಳು, ರವಿಕುಮಾರ್ ಅವರೇ ಆರ್​ಎಸ್​ಎಸ್ ಹೇಳಿಕೊಟ್ಟಿದ್ದನ್ನೆಲ್ಲಾ ನೀವು ಆಮೇಲೆ ಹೇಳಿಕೊಡಿ. ನಾನು ಮಾತು ಮುಗಿಸಲು ಬಿಡಿ ಎಂದು ಕಾಲೆಳೆದರು.

ಇದನ್ನೂ ಓದಿ: ನಮ್ಮದು ಗುಡ್ ಎಕನಾಮಿಕ್ಸ್ , ಸಿದ್ಧ ಎಕನಾಮಿಕ್ಸ್ ಅಲ್ಲ : ಸಿಎಂ ಸಿದ್ದರಾಮಯ್ಯ ತಿರುಗೇಟು

Last Updated : Feb 21, 2024, 4:49 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.