ETV Bharat / state

ಬುಡಕಟ್ಟು ಜನರ ಮೂಲಸೌಕರ್ಯ ಸಂಬಂಧ ಸೂಚನೆಗಳು ಜಾರಿಯಾಗದೇ ಇದ್ದರೆ ಶಿಸ್ತು ಕ್ರಮ: ಸಿಎಂ ಸಿದ್ದರಾಮಯ್ಯ - CM SIDDARAMAIAH

ಸಿಎಂ ಸಿದ್ದರಾಮಯ್ಯ ಬುಡಕಟ್ಟು ಜನರ ಮೂಲಸೌಕರ್ಯದ ಕುರಿತು ಮಾತನಾಡಿದ್ದಾರೆ.

cm-siddaramaiah
ಸಿಎಂ ಸಿದ್ದರಾಮಯ್ಯ (ETV Bharat)
author img

By ETV Bharat Karnataka Team

Published : Nov 26, 2024, 10:29 PM IST

ಬೆಂಗಳೂರು : ಅರಣ್ಯ ಹಾಗೂ ಅರಣ್ಯದಂಚಿನಲ್ಲಿ ವಾಸಿಸುವ ಬುಡಕಟ್ಟು ಸಮುದಾಯಗಳಿಗೆ ಮೂಲಸೌಕರ್ಯ ಕಲ್ಪಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದು, ಕೆಲಸ ಮಾಡದೇ ಇದ್ದರೆ ಡಿಸಿಗಳ ವಿರುದ್ಧ ಕ್ರಮ ಜರುಗಿಸಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ಎಚ್ಚರಿಕೆ ನೀಡಿದ್ದಾರೆ.

ಗೃಹ ಕಚೇರಿ ಕೃಷ್ಣಾದಲ್ಲಿ ಸಭೆ ನಡೆಸಿದ ಅವರು, ಅರಣ್ಯ ಹಾಗೂ ಅರಣ್ಯದಂಚಿನಲ್ಲಿ ವಾಸಿಸುವ ಬುಡಕಟ್ಟು ಸಮುದಾಯಗಳ ಜನರಿಗೆ ಮನೆ, ಕುಡಿಯುವ ನೀರು, ರಸ್ತೆ ಸಂಪರ್ಕ, ವಿದ್ಯುತ್ ಸಂಪರ್ಕ ಸೇರಿದಂತೆ ಅಗತ್ಯ ಮೂಲಸೌಕರ್ಯಗಳನ್ನು ಕಲ್ಪಿಸಲು ಕ್ರಮ ಕೈಗೊಳ್ಳಬೇಕು. ರಸ್ತೆಗಳ ಅಭಿವೃದ್ಧಿಗೆ ಮತ್ತು ಕುಡಿಯುವ ನೀರು ಸೌಲಭ್ಯ ಕಲ್ಪಿಸಲು ಯಾವುದೇ ಅಡ್ಡಿ ಉಂಟು ಮಾಡಬಾರದು. ಪ್ರತಿ ಹಾಡಿಯಲ್ಲಿ ಕುಡಿಯುವ ನೀರಿನ ಸಂಪರ್ಕ ಕಲ್ಪಿಸಬೇಕು. ಪಡಿತರ ಚೀಟಿ ಹೊಂದಿಲ್ಲದ ಬುಡಕಟ್ಟು ಕುಟುಂಬಗಳಿಗೆ 15 ದಿನಗಳ ಒಳಗಾಗಿ ಬಿಪಿಎಲ್ ಪಡಿತರ ಚೀಟಿ ಒದಗಿಸಿ ವರದಿ ಸಲ್ಲಿಸಬೇಕು. ಅರಣ್ಯ ಹಕ್ಕು ಸಮಿತಿಗಳ ಮುಂದೆ ಬಾಕಿಯಿರುವ ಅರ್ಜಿಗಳನ್ನು ನಿಗದಿತ ಅವಧಿಯ ಒಳಗಾಗಿ ವಿಲೇವಾರಿ ಮಾಡಲು ಕ್ರಮ ಕೈಗೊಳ್ಳಬೇಕು ಎಂದು ಸೂಚಿಸಿದರು.

ಹಾಡಿಗಳಲ್ಲಿ ಸ್ಮಶಾನ ಭೂಮಿ ಒದಗಿಸಲು ಸೂಚನೆ: ಆರೋಗ್ಯ ಇಲಾಖೆಯಲ್ಲಿ ಬುಡಕಟ್ಟು ಜನರನ್ನು ಸ್ಥಳೀಯವಾಗಿ ನೇಮಕ ಮಾಡುವ ಬಗ್ಗೆ ಪರಿಶೀಲನೆ ಮಾಡಲಾಗುವುದು. ಬುಡಕಟ್ಟು ಸಮುದಾಯದವರಿಗೆ ಹಾಡಿಗಳಲ್ಲಿ ಸ್ಮಶಾನ ಭೂಮಿ ಒದಗಿಸಬೇಕು. ಬುಡಕಟ್ಟು ಸಮುದಾಯ ಕಲ್ಪಿಸುವ ವಿಷಯದಲ್ಲಿ ಕಂದಾಯ, ಅರಣ್ಯ ಮತ್ತು ಸಮಾಜ ಕಲ್ಯಾಣ ಇಲಾಖೆಗಳು ಸಮನ್ವಯದಿಂದ ಕಾರ್ಯ ನಿರ್ವಹಿಸಬೇಕು. ಸಂಪರ್ಕ ರಸ್ತೆಗಳ ದುರಸ್ತಿ, ಉನ್ನತೀಕರಣಕ್ಕೆ ರಾಜ್ಯ ಸರ್ಕಾರದ ಹಂತದಲ್ಲಿ ಇರುವ ಅವಕಾಶಗಳನ್ನು ಬಳಸಿಕೊಳ್ಳಬೇಕು. ಎರಡು ತಿಂಗಳ ಒಳಗಾಗಿ ಮತ್ತೆ ಸಭೆ ಕರೆದು ಈ ಎಲ್ಲ ವಿಷಯಗಳ ಕುರಿತು ಪರಿಶೀಲನೆ ನಡೆಸಲಾಗುವುದು. ಅದರ ಒಳಗಾಗಿ ಎಲ್ಲ ಸಮಸ್ಯೆಗಳನ್ನು ಪರಿಹರಿಸಬೇಕು ಎಂದು ಸೂಚನೆ ನೀಡಿದ್ದಾರೆ.

ನಿವೇಶನ ರಹಿತರು ಒಪ್ಪಿಗೆ ಸೂಚಿಸಿದರೆ ಅವರಿಗೆ ಬೇರೆ ಕಡೆ ನಿವೇಶನ ಒದಗಿಸಿ ಪುನರ್ವಸತಿ ಕಲ್ಪಿಸಲು ಕ್ರಮ ಕೈಗೊಳ್ಳಲಾಗುವುದು. ಇದಕ್ಕಾಗಿ ಅರಣ್ಯದ ಅಂಚಿನಲ್ಲಿ ಜಮೀನುಗಳನ್ನು ಗುರುತಿಸಲು ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಿದರು. ನಿವೇಶನ ಇದ್ದರೂ ಮನೆಯಿಲ್ಲದವರಿಗೆ ರಾಜೀವ್‌ ಗಾಂಧಿ ವಸತಿ ನಿಗಮದ ವತಿಯಿಂದ ಮನೆ ಮಂಜೂರಾತಿಗೆ ಕ್ರಮ ಕೈಗೊಳ್ಳಬೇಕು.

ಮೈಸೂರು ಜಿಲ್ಲೆಯಲ್ಲಿ 2,963 ಕುಟುಂಬಗಳಿಗೆ ನಿವೇಶನ ಇರುವುದಿಲ್ಲ. 1,222 ಕುಟುಂಬಗಳಿಗೆ ನಿವೇಶನ ಇದ್ದರೂ, ಮನೆ ಇರುವುದಿಲ್ಲ. ಚಾಮರಾಜನಗರ ಜಿಲ್ಲೆಯಲ್ಲಿ 5,164 ಕುಟುಂಬಗಳಿಗೆ ಪಕ್ಕಾ ಮನೆಯಿದೆ. 234 ಕುಟುಂಬಗಳಿಗೆ ನಿವೇಶನ ಇರುವುದಿಲ್ಲ. 2,761 ಕುಟುಂಬಗಳಿಗೆ ನಿವೇಶನ ಇದ್ದರೂ, ಮನೆ ಇರುವುದಿಲ್ಲ. ಕೊಡಗು ಜಿಲ್ಲೆಯಲ್ಲಿ 2,882 ಕುಟುಂಬಗಳಿಗೆ ಪಕ್ಕಾ ಮನೆಯಿದೆ. 1050 ಕುಟುಂಬಗಳಿಗೆ ನಿವೇಶನ ಇರುವುದಿಲ್ಲ. 1182 ಕುಟುಂಬಗಳಿಗೆ ನಿವೇಶನ ಇದ್ದರೂ ಮನೆ ಇರುವುದಿಲ್ಲ ಎಂದು ಹೇಳಿದರು.

125 ಹಾಡಿಗಳಿಗೆ ವಿದ್ಯುತ್‌ ಸಂಪರ್ಕ : ಮೈಸೂರು ಜಿಲ್ಲೆಯಲ್ಲಿ 194 ಹಾಡಿಗಳು ಅರಣ್ಯದಂಚಿನಲ್ಲಿದ್ದು, ವಿದ್ಯುತ್‌ ಸಂಪರ್ಕ ಕಲ್ಪಿಸಲಾಗಿದೆ. ಅರಣ್ಯದೊಳಗಿರುವ 21 ಹಾಡಿಗಳ ಪೈಕಿ ಮೂರು ಹಾಡಿಗಳಿಗೆ ವಿದ್ಯುತ್‌ ಸಂಪರ್ಕ ಕಲ್ಪಿಸಲಾಗಿದ್ದು, 18 ಹಾಡಿಗಳಿಗೆ ವಿದ್ಯುತ್‌ ಸಂಪರ್ಕ ಇರುವುದಿಲ್ಲ. 18 ಹಾಡಿಗಳಿಗೆ ಇಂಧನ ಇಲಾಖೆಯಿಂದ ಸೋಲಾರ್‌ ದೀಪಗಳನ್ನು ಅಳವಡಿಸಲಾಗಿದೆ. ಚಾಮರಾಜನಗರ ಜಿಲ್ಲೆಯಲ್ಲಿ ಅರಣ್ಯದಂಚಿನಲ್ಲಿರುವ ಎಲ್ಲಾ 125 ಹಾಡಿಗಳಿಗೆ ವಿದ್ಯುತ್‌ ಸಂಪರ್ಕ ಕಲ್ಪಿಸಲಾಗಿದೆ ಎಂದರು.

ಅರಣ್ಯದೊಳಗಿರುವ 33 ಹಾಡಿಗಳ ಪೈಕಿ 15 ಹಾಡಿಗಳಿಗೆ ವಿದ್ಯುತ್‌ ಸಂಪರ್ಕ ಕಲ್ಪಿಸಲಾಗಿದೆ. ಇನ್ನುಳಿದಿರುವ 18 ಹಾಡಿಗಳಿಗೆ ಇಂಧನ ಇಲಾಖೆಯಿಂದ ಸೋಲಾರ್‌ ದೀಪಗಳನ್ನು ಅಳವಡಿಸಲಾಗಿದೆ. ಕೊಡಗು ಜಿಲ್ಲೆಯಲ್ಲಿ ಅರಣ್ಯದಂಚಿನಲ್ಲಿರುವ 211 ಹಾಡಿಗಳ ಪೈಕಿ 154 ಹಾಡಿಗಳಿಗೆ ಹಾಗೂ ಅರಣ್ಯದೊಳಗಿರುವ 74 ಹಾಡಿಗಳ ಪೈಕಿ 57 ಹಾಡಿಗಳಿಗೆ ವಿದ್ಯುತ್‌ ಸಂಪರ್ಕ ಕಲ್ಪಿಸಲಾಗಿದೆ. 17 ಹಾಡಿಗಳಿಗೆ ವಿದ್ಯುತ್‌ ಸಂಪರ್ಕ ಇರುವುದಿಲ್ಲ. 5 ಹಾಡಿಗಳಿಗೆ ಸೋಲಾರ್‌ ದೀಪಗಳನ್ನು ಅಳವಡಿಸಲಾಗಿದೆ ಎಂದು ತಿಳಿಸಿದರು.

ವಿದ್ಯುತ್‌ ಸಂಪರ್ಕ ಕಲ್ಪಿಸಲು ಬಾಕಿಯಿರುವ ಪ್ರಸ್ತಾವನೆಗಳಿಗೆ ಶೀಘ್ರ ಅನುಮತಿ ನೀಡಿ ಶಾಶ್ವತ ವಿದ್ಯುತ್‌ ಸಂಪರ್ಕ ಕಲ್ಪಿಸಬೇಕು. ಮೈಸೂರು ಜಿಲ್ಲೆಯಲ್ಲಿ 215 ಹಾಡಿಗಳಿದ್ದು, 49,778 ಜನರು ವಾಸಿಸುತ್ತಿದ್ದಾರೆ. ಚಾಮರಾಜನಗರ ಜಿಲ್ಲೆಯಲ್ಲಿ 158 ಹಾಡಿಗಳಿದ್ದು, 27,763 ಜನರು ವಾಸಿಸುತ್ತಿದ್ದಾರೆ. ಕೊಡಗು ಜಿಲ್ಲೆಯಲ್ಲಿ 228 ಹಾಡಿಗಳಿದ್ದು, 26,909 ಮಂದಿ ವಾಸಿಸುತ್ತಿದ್ದಾರೆ ಎಂದು ತಿಳಿಸಿದರು.

6,363 ಎಕರೆ ವಿಸ್ತೀರ್ಣದ ಜಮೀನು ಮಂಜೂರು: ಬುಡಕಟ್ಟು ಜನರಿಗೆ ಹಕ್ಕುಪತ್ರ ವಿತರಣೆಗೆ ಇರುವ ತಾಂತ್ರಿಕ ತೊಡಕುಗಳನ್ನು ನಿವಾರಿಸಲು ಕ್ರಮ ಕೈಗೊಳ್ಳಬೇಕು. ಹಕ್ಕುಪತ್ರ ಹೊಂದಿದವರು ಸರ್ಕಾರದ ಎಲ್ಲ ಸೌಲಭ್ಯಗಳನ್ನು ಹೊಂದಲು ಅರ್ಹತೆ ಪಡೆಯುವ ಕುರಿತು ಕ್ರಮ ಕೈಗೊಳ್ಳಬೇಕು. ಅರಣ್ಯ ಹಕ್ಕು ಕಾಯ್ದೆಯಡಿ ಬುಡಕಟ್ಟು ಸಮುದಾಯದ ಅರಣ್ಯವಾಸಿಗಳಿಗೆ ವೈಯಕ್ತಿಕ ಹಕ್ಕುಪತ್ರಕ್ಕಾಗಿ 12,222 ಅರ್ಜಿ ಸ್ವೀಕರಿಸಲಾಗಿದ್ದು, 4,856 ಹಕ್ಕುಪತ್ರಗಳನ್ನು ವಿತರಿಸಲಾಗಿದ್ದು, 6,363 ಎಕರೆ ವಿಸ್ತೀರ್ಣದ ಜಮೀನು ಮಂಜೂರು ಮಾಡಲಾಗಿದೆ ಎಂದು ಹೇಳಿದರು.

6,808 ಅರ್ಜಿಗಳು ತಿರಸ್ಕೃತಗೊಂಡಿದ್ದು, ವಿಲೇವಾರಿ ಮಾಡಲು ಬಾಕಿಯಿರುವ 558 ಅರ್ಜಿಗಳನ್ನು ಪರಿಶೀಲಿಸಿ ಆದಷ್ಟು ಬೇಗನೆ ವಿಲೇವಾರಿ ಮಾಡಬೇಕು. ಅರಣ್ಯ ಹಕ್ಕು ಕಾಯ್ದೆಯಡಿ ಇತರ ಪಾರಂಪರಿಕ ಅರಣ್ಯವಾಸಿಗಳಿಗೆ ಹಕ್ಕುಪತ್ರಕ್ಕಾಗಿ 1,626 ಅರ್ಜಿ ಸ್ವೀಕರಿಸಲಾಗಿದ್ದು, 531 ಹಕ್ಕುಪತ್ರ ವಿತರಿಸಿ 104 ವಿಸ್ತೀರ್ಣದ ಜಮೀನು ಮಂಜೂರು ಮಾಡಲಾಗಿದೆ. 1,095 ಅರ್ಜಿಗಳು ತಿರಸ್ಕೃತಗೊಂಡಿವೆ. ಅರಣ್ಯ ಹಕ್ಕು ಕಾಯ್ದೆಯಡಿ ಸಮುದಾಯದ ಹಕ್ಕುಪತ್ರಕ್ಕಾಗಿ 260 ಅರ್ಜಿ ಸ್ವೀಕರಿಸಲಾಗಿದ್ದು, 160 ಹಕ್ಕುಪತ್ರ ವಿತರಿಸಿ 38,117 ಎಕರೆ ವಿಸ್ತೀರ್ಣ ಪ್ರದೇಶ ಸಮುದಾಯ ಅರಣ್ಯ ಹಕ್ಕು ಒದಗಿಸಲಾಗಿದೆ ಎಂದು ವಿವರಿಸಿದರು.

ಇದನ್ನೂ ಓದಿ : ಸಾಮಾಜಿಕ ನ್ಯಾಯದ ವಿರೋಧಿಗಳಿಂದ ಸಂವಿಧಾನ ಬದಲಾಯಿಸುವ ಮಾತು: ಸಿಎಂ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.