ETV Bharat / state

ಎತ್ತಿನಹೊಳೆ ಯೋಜನೆಯಿಂದ 7 ಜಿಲ್ಲೆಗಳಿಗೆ ನೀರು ಗ್ಯಾರಂಟಿ : ಸಿಎಂ ಸಿದ್ದರಾಮಯ್ಯ - CM Siddaramaiah

ಸಿಎಂ ಸಿದ್ದರಾಮಯ್ಯ ಅವರು ಎತ್ತಿನಹೊಳೆ ಯೋಜನೆಯ ಎರಡನೇ ಹಂತದ ಕುರಿತು ಮಾತನಾಡಿದರು. ಈ ಯೋಜನೆ 2027ಕ್ಕೆ ಮುಕ್ತಾಯಗೊಂಡು ಲಕ್ಷಾಂತರ ಫಲಾನುಭವಿಗಳಿಗೆ ಅನುಕೂಲವಾಗಲಿದೆ ಎಂದಿದ್ದಾರೆ.

cm-siddaramaiah
ಸಿಎಂ ಸಿದ್ದರಾಮಯ್ಯ (ETV Bharat)
author img

By ETV Bharat Karnataka Team

Published : Sep 6, 2024, 9:12 PM IST

ಸಿಎಂ ಸಿದ್ದರಾಮಯ್ಯ (ETV Bharat)

ಹಾಸನ : ಎತ್ತಿನಹೊಳೆ ಎರಡನೆ ಹಂತ 2027ಕ್ಕೆ ಮುಗಿದು, 7 ಜಿಲ್ಲೆಗಳ ಲಕ್ಷಾಂತರ ಮನೆಗಳಿಗೆ ಕುಡಿಯುವ ನೀರು ತಲುಪುವುದು ಶತಸಿದ್ಧ ಎಂದು ಮುಖ್ಯಮಂತ್ರಿ ಅವರು ಭರವಸೆ ವ್ಯಕ್ತಪಡಿಸಿದ್ದಾರೆ. ಎತ್ತಿನಹೊಳೆ ಸಮಗ್ರ ಕುಡಿಯುವ ನೀರಿನ ಯೋಜನೆಯ ಹಂತ-1ಕ್ಕೆ ಸಕಲೇಶಪುರ ತಾಲೂಕಿನ ಬೈಕೆರೆ ದೊಡ್ಡನಗರದ ಪಂಪ್​​ ಹೌಸ್​ನಲ್ಲಿ ಚಾಲನೆ ನೀಡಿದ ಬಳಿಕ, ಹೆಬ್ಬಹಳ್ಳಿಯ 4ನೇ ವಿತರಣಾ ತೊಟ್ಟಿ ಬಳಿ ಯೋಜನೆಗೆ ಚಾಲನೆ ನೀಡಿ ಮಾತನಾಡಿದರು.

ಇದು ಎರಡು ಹಂತದ ಯೋಜನೆ. ಮೊದಲ ಹಂತ ಉದ್ಘಾಟನೆಯಾಗಿದೆ. ಎರಡನೇ ಹಂತ 2027 ಕ್ಕೆ ಮುಕ್ತಾಯಗೊಂಡು ಇಡೀ ಯೋಜನೆ ಯಶಸ್ವಿಯಾಗಿ ಜಾರಿ ಆಗುತ್ತದೆ. ಲಕ್ಷಾಂತರ ಫಲಾನುಭವಿಗಳಿಗೆ ಯೋಜನೆಯ ಅನುಕೂಲ ತಲುಪಲಿದೆ. 7 ಜಿಲ್ಲೆಗಳ ಜನತೆಯ ಮನೆಗೆ ಕುಡಿಯುವ ನೀರು ತಲುಪುತ್ತದೆ. ಹತ್ತಾರು ಕೆರೆಗಳನ್ನು ತುಂಬಿಸಲಾಗುತ್ತದೆ ಎಂದು ಸ್ಪಷ್ಟ ಭರವಸೆ ನೀಡಿದರು.

ಹೀಗಿದ್ದರೂ ಕೆಲವರು, ನಿಮ್ಮ ಕಣ್ಣೆದುರಿಗೆ ಇರುವ ಸತ್ಯವನ್ನು ಸುಳ್ಳು ಎಂದು ಬಿಂಬಿಸಿ ನಿಮ್ಮನ್ನು ಬಕ್ರಾ ಮಾಡಲು ಯತ್ನಿಸುತ್ತಾರೆ. ಆದ್ದರಿಂದ ಅಪನಂಬಿಕೆ ಸೃಷ್ಟಿಸುವವರ ಮಾತುಗಳನ್ನು ಕೇಳಬೇಡಿ. ನಿಮ್ಮ ಕಣ್ಣೆದುರಿಗೆ ಇರುವುದನ್ನು ನಂಬಿ ಎಂದು ಕರೆ ನೀಡಿದರು.

ಎತ್ತಿನಹೊಳೆಗೆ ನನ್ನ ಕಾಲದಲ್ಲೇ ಭೂಮಿಪೂಜೆ ಆಗಿತ್ತು. ಮೊದಲ ಹಂತದ ಯೋಜನೆಯನ್ನೂ ನಾನೇ ಉದ್ಘಾಟಿಸಿದ್ದೇನೆ. ಎರಡನೇ ಹಂತದ ಯೋಜನೆಯನ್ನೂ ನಾನೇ ಉದ್ಘಾಟಿಸಿ ಯೋಜನೆಯನ್ನು ಪೂರ್ಣ ಮಾಡಿ ಕುಡಿಯುವ ನೀರನ್ನು ಕೊಟ್ಟೇ ಕೊಡ್ತೀವಿ. ಕೆರೆಗಳನ್ನು ತುಂಬಿಸಿಯೇ ತೀರುವುದು ಶತಸಿದ್ಧ ಎಂದು ಗ್ಯಾರಂಟಿ ಮಾತುಗಳನ್ನಾಡಿದರು. ಕುಡಿಯುವ ನೀರಿನ ವಿಚಾರದಲ್ಲಿ ರೈತರಿಗೆ ಅರಣ್ಯಾಧಿಕಾರಿಗಳು ಯಾವುದೇ ತೊಂದರೆ ಕೊಡಬಾರದು ಎಂದು ಇದೇ ಸಂದರ್ಭದಲ್ಲಿ ಸ್ಪಷ್ಟ ಸೂಚನೆ ನೀಡಿದರು.

ಉಪಮುಖ್ಯಮಂತ್ರಿ ಹಾಗೂ ಜಲ ಸಂಪನ್ಮೂಲ ಸಚಿವ ಡಿ. ಕೆ ಶಿವಕುಮಾರ್ ಹಾಗೂ ಸಚಿವರಾದ ರಾಜಣ್ಣ, ಎಂ. ಬಿ ಪಾಟೀಲ್, ಜಿ. ಪರಮೇಶ್ವರ್, ಕೆ. ಜೆ ಜಾರ್ಜ್ ಸೇರಿ ಐದು ತಾಲೂಕುಗಳ ಶಾಸಕರು, ಚುನಾಯಿತ ಪ್ರತಿನಿಧಿಗಳು ಇಲಾಖೆಯ ಹಿರಿಯ ಅಧಿಕಾರಿಗಳು ಈ ಸಂಭ್ರಮದ ಕ್ಷಣಕ್ಕೆ ಸಾಕ್ಷಿಯಾದರು.

ಇದನ್ನೂ ಓದಿ : ಮಹತ್ವಾಕಾಂಕ್ಷೆಯ ಎತ್ತಿನಹೊಳೆ ಯೋಜನೆಯ ಮೊದಲ ಹಂತ ಲೋಕಾರ್ಪಣೆಗೊಳಿಸಿದ ಸಿಎಂ - yettinahole project inauguration

ETV Bharat Logo

Copyright © 2024 Ushodaya Enterprises Pvt. Ltd., All Rights Reserved.