ETV Bharat / state

ಕುಮಾರಸ್ವಾಮಿಯವರೇ, ನಿಮ್ಮ ಊಟದೆಲೆಯಲ್ಲಿ ಆನೆ ಸತ್ತು ಬಿದ್ದಿದೆ ನೋಡಿ: ಸಿಎಂ ಸಿದ್ದರಾಮಯ್ಯ ಕಿಡಿ - CM Siddaramaiah

ಕೇಂದ್ರ ಸಚಿವ ಸ್ಥಾನದಿಂದ ವಂಚಿತರನ್ನಾಗಿ ಮಾಡಿ, ತಮ್ಮ ರಾಜಕೀಯ ವಿರೋಧಿಗಳ ವಿರುದ್ಧದ ದ್ವೇಷ ರಾಜಕಾರಣಕ್ಕೆ ದಲಿತ ಸಮುದಾಯದ ನಾಯಕನನ್ನು ದುರ್ಬಳಕೆ ಮಾಡಿಕೊಳ್ಳುವುದು ಆ ಸಮುದಾಯಕ್ಕೆ ಮಾಡುವ ಅನ್ಯಾಯ-ಅವಮಾನ ಅಲ್ಲವೇ?, ದಲಿತ ನಾಯಕರೊಬ್ಬರನ್ನು ತಮ್ಮ ರಾಜಕೀಯ ಸ್ವಾರ್ಥಕ್ಕಾಗಿ ಬಳಸುವಾಗ ಕನಿಷ್ಠ ನಿಮ್ಮ ಆತ್ಮಸಾಕ್ಷಿಯೂ ಚುಚ್ಚಲಿಲ್ಲವೇ ಎಂದು ಬಿಜೆಪಿಗರ ವಿರುದ್ಧ ಸಿಎಂ ಸಿದ್ದರಾಮಯ್ಯ ಟೀಕಾಪ್ರಹಾರ ನಡೆಸಿದ್ದಾರೆ.

ಕುಮಾರಸ್ವಾಮಿ, ಸಿದ್ದರಾಮಯ್ಯ
ಕುಮಾರಸ್ವಾಮಿ, ಸಿದ್ದರಾಮಯ್ಯ (ETV Bharat)
author img

By ETV Bharat Karnataka Team

Published : Aug 22, 2024, 4:36 PM IST

ಬೆಂಗಳೂರು: ಕೇಂದ್ರ ಸಚಿವ ಹೆಚ್​.ಡಿ.ಕುಮಾರಸ್ವಾಮಿ ಮತ್ತು ಬಿಜೆಪಿ ನಾಯಕರ ವಿರುದ್ಧ ಮುಖ್ಯಮಂತ್ರಿ ಸಿದ್ದರಾಮಯ್ಯ ತೀವ್ರ ವಾಗ್ದಾಳಿ ನಡೆಸಿದ್ದಾರೆ. ಈ ಸಂಬಂಧ 'ಎಕ್ಸ್' ಪೋಸ್ಟ್ ಮಾಡಿರುವ ಸಿಎಂ, 'ನೋಂದಣಿಯೇ ಆಗದ ಕಂಪನಿಗೆ 550 ಎಕರೆ ಅರಣ್ಯ ಭೂಮಿಯನ್ನು ಅಕ್ರಮವಾಗಿ ಮಂಜೂರು ಮಾಡಿ, ಈಗ "ಸಹಿ ನನ್ನದಲ್ಲ, ಯಾರೋ ಪೋರ್ಜರಿ ಮಾಡಿದ್ದಾರೆ" ಎಂದು ಕಣ್ಣೀರು ಸುರಿಸುತ್ತಿರುವ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿಯವರೇ, ನಿಮ್ಮ ಬ್ರಹ್ಮಾಂಡ ಭ್ರಷ್ಟಾಚಾರದ ಪುರಾಣದ ಮೊದಲ ಅಧ್ಯಾಯ ಮಾಧ್ಯಮದಲ್ಲಿ ಪ್ರಕಟವಾಗಿದೆ. ಮುಂದೆ ಇನ್ನೇನೆಲ್ಲಾ ಬಹಿರಂಗವಾಗಲಿವೆಯೋ' ಎಂದು ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ.

'ಮುಡಾ ಬದಲಿ ನಿವೇಶನ ಹಂಚಿಕೆ ಪ್ರಕರಣದಲ್ಲಿ ನನ್ನ ಸಹಿ, ಟಿಪ್ಪಣಿ ಯಾವುದೂ ಇಲ್ಲ, ನನ್ನ ಅಧಿಕಾರವಧಿಯಲ್ಲಿ ನಡೆದದ್ದೇ ಅಲ್ಲ - ಹೀಗಿದ್ದರೂ ನನ್ನ ರಾಜೀನಾಮೆ ಕೇಳುತ್ತಿರುವ ಕುಮಾರಸ್ವಾಮಿಯವರೇ?. ನಿಮ್ಮ ಊಟದೆಲೆಯಲ್ಲಿ ಆನೆ ಸತ್ತು ಬಿದ್ದಿದೆ ನೋಡಿ' ಎಂದು ಟೀಕಿಸಿದ್ದಾರೆ.

'ನ್ಯಾ.ಎನ್.ಸಂತೋಷ್ ಹೆಗ್ಡೆ ನೇತೃತ್ವದ ಲೋಕಾಯುಕ್ತವೇ ತನಿಖೆ ನಡೆಸಿ ಆರೋಪಪಟ್ಟಿ ಸಲ್ಲಿಸಿದೆ. ರಾಜ್ಯಪಾಲರು ಪ್ರಾಸಿಕ್ಯೂಷನ್‌ಗೆ ಅನುಮತಿ ಕೊಡುವುದೊಂದೇ ಬಾಕಿ. ಯಾರನ್ನು ಕಾಯುತ್ತಾ ಕೂತಿದ್ದೀರಿ? ನರೇಂದ್ರ ಮೋದಿಯವರು ಬಂದು ರಕ್ಷಿಸುತ್ತಾರೆಂದೇ? ಸ್ವಂತ ಪಕ್ಷದ ಮುಖ್ಯಮಂತ್ರಿಯನ್ನೇ ಜೈಲಿಗೆ ಕಳಿಸಿದ್ದ ಪಕ್ಷ ನಿಮ್ಮ ರಕ್ಷಣೆಗೆ ಬರುತ್ತಾರೆ ಎಂದು ಅಂದುಕೊಡಿದ್ದೀರಾ' ಎಂದು ಪ್ರಶ್ನಿಸಿದ್ದಾರೆ.

'ಯಾರೋ ಹೇಳಿದ ಕಾಗಕ್ಕ ಗುಬ್ಬಕ್ಕನ ಕಥೆ ಕೇಳಿ ನನ್ನ ವಿರುದ್ಧ ಪ್ರಾಸಿಕ್ಯೂಷನ್​​ಗೆ ಅನುಮತಿ ನೀಡಿರುವ ರಾಜ್ಯಪಾಲರೇ, ನಿಮ್ಮ ಕೈಯಲ್ಲಿರುವ ಹೆಚ್.ಡಿ.ಕುಮಾರಸ್ವಾಮಿಯವರ ಗಣಿ ಹಗರಣದ ದಾಖಲೆ ಪತ್ರಗಳು ಈಗ ಸಾರ್ವಜನಿಕರ ಮುಂದೆ ಇದೆ. ಇವುಗಳ ಒಂದು ಪ್ರತಿಯನ್ನು ನಿಮ್ಮ ಒಡೆಯರಿಗೆ ಕಳಿಸಿಕೊಡಿ, ಪ್ರಾಸಿಕ್ಯೂಷನ್​​ಗೆ ಅನುಮತಿ ನೀಡದಂತೆ ಕೈಕಟ್ಟಿಹಾಕಿರುವ ಹಗ್ಗ ಬಿಚ್ಚಿಕೊಳ್ಳಬಹುದು' ಎಂದಿದ್ದಾರೆ.

ಹಿಂದೂಗಳಲ್ಲಿ ಜಾತಿ, ಧರ್ಮವೇ ಎಲ್ಲ ಎಂದು ಉಪದೇಶಿಸುವ ಬಿಜೆಪಿಗರ ಬುಡಕ್ಕೆ ನೀರು ಬಂದಾಗ ಜಾತಿ ನೆನಪಾಗುತ್ತದೆ- ಸಿಎಂ: 'ರಾಜ್ಯದ ಘನತೆವೆತ್ತ ರಾಜ್ಯಪಾಲರಾಗಿರುವ ಥಾವರ್ ಚಂದ್ ಗೆಹ್ಲೋತ್ ಅವರ ತಪ್ಪು ನಡೆಯ ಬಗೆಗಿನ ನಮ್ಮ ಪ್ರಶ್ನೆಗಳಿಗೆ ಉತ್ತರ ನೀಡಲಾಗದ ರಾಜ್ಯದ ಬಿಜೆಪಿ ನಾಯಕರು "ದಲಿತ ಗುರಾಣಿ" ಬಳಸುತ್ತಿರುವುದು ಸಮಸ್ತ ಸ್ವಾಭಿಮಾನಿ ದಲಿತ ಸಮುದಾಯಕ್ಕೆ ಮಾಡಿರುವ ಅವಮಾನವಾಗಿದೆ. ‘ಹಿಂದುಗಳಲ್ಲಿ ಜಾತಿಯೇ ಇಲ್ಲ, ಧರ್ಮವೇ ಎಲ್ಲ’ ಎಂದು ಉಪದೇಶ ಮಾಡುತ್ತಿರುವ ಬಿಜೆಪಿ ನಾಯಕರ ಬುಡಕ್ಕೆ ನೀರು ಬಂದಾಗ ಜಾತಿ ನೆನಪಾಗುತ್ತದೆ' ಎಂದು ವಾಗ್ದಾಳಿ ನಡೆಸಿದ್ದಾರೆ.

ರಾಜ್ಯಪಾಲರಿಗೆ ಅವಮಾನವಾಗಿದೆ ಎಂದು ಪ್ರತಿಭಟಿಸುತ್ತಿರುವ ರಾಜ್ಯದ ಬಿಜೆಪಿ ನಾಯಕರಿಗೆ ನನ್ನ ಕೆಲವು ಸರಳ ಪ್ರಶ್ನೆಗಳಿವೆ. ಮೊದಲನೆಯದಾಗಿ, ದಲಿತ ಸಮುದಾಯಕ್ಕೆ ಸೇರಿರುವ ಥಾವರಚಂದ್ ಗೆಹ್ಲೋತ್ ಅವರ ಬಗ್ಗೆ ನಿಮ್ಮಲ್ಲಿ ಅಷ್ಟೊಂದು ಗೌರವ ಮತ್ತು ಅಭಿಮಾನವಿದ್ದರೆ ಕೇಂದ್ರ ಸಚಿವ ಸಂಪುಟದಲ್ಲಿರಬೇಕಾಗಿದ್ದ ಅವರನ್ನು ಇಲ್ಲಿ ತಂದು ‘‘ಪಂಜರದ ಗಿಣಿ’’ ಯನ್ನಾಗಿ ಯಾಕೆ ಮಾಡಿದ್ದೀರಿ?. ‘‘ಮಾರ್ಗದರ್ಶಕ ಮಂಡಳಿ ಎಂಬ ವನವಾಸಾಶ್ರಮ’’ ಸೇರುವಷ್ಟು ವಯಸ್ಸಾಗದೆ ಇದ್ದರೂ ಅವರ ಸಕ್ರಿಯ ರಾಜಕೀಯ ಜೀವನವನ್ನು ಯಾಕೆ ಮೊಟಕುಗೊಳಿಸಿದಿರಿ ಎಂದು ಪ್ರಶ್ನಿಸಿದರು.

ದಲಿತರನ್ನು ಬಳಸಿ ಬಿಸಾಡುವ ಬಿಜೆಪಿ ಮತ್ತು ಸಂಘ ಪರಿವಾರದ ಪಿತೂರಿ ರಾಜಕಾರಣವನ್ನು ಅರ್ಥಮಾಡಿಕೊಳ್ಳುವಷ್ಟು ದಲಿತ ಸಮುದಾಯ ಜಾಗೃತವಾಗಿದೆ. ಈಗ ನೀವು ದಲಿತರ ಹೆಸರಲ್ಲಿ ಸುರಿಸುತ್ತಿರುವ ಮೊಸಳೆ ಕಣ್ಣೀರಿನ ಹಿಂದಿನ ಪ್ರಾಮಾಣಿಕತೆ ತಿಳಿಯದಷ್ಟು ದಡ್ಡರಲ್ಲ. ಕನಿಷ್ಠ ಅಟಲ್ ಬಿಹಾರಿ ವಾಜಪೇಯಿ ಅವರು ದಲಿತ ಸಮುದಾಯಕ್ಕೆ ಸೇರಿರುವ ಬಂಗಾರು ಲಕ್ಷ್ಮಣ್ ಅವರನ್ನು ಪಕ್ಷದ ರಾಷ್ಟ್ರೀಯ ಅಧ್ಯಕ್ಷರನ್ನಾಗಿ ನೇಮಕ ಮಾಡಿದರು. ಆದರೆ ಬಿಜೆಪಿಯೊಳಗಿನ ‘‘ಸಂಘಿ ಮನಸ್ಸು’’ ಅದನ್ನು ಸಹಿಸಿಕೊಳ್ಳದೆ ಅವರ ಮೇಲೆ ಭ್ರಷ್ಟಾಚಾರದ ಆರೋಪ ಹೊರಿಸಿತು, ಕೊನೆಗೆ ಅದೇ ಕೊರಗಿನಲ್ಲಿ ಅವರು ಸಾವಿಗೀಡಾದರು ಎಂದರು.

ದಲಿತ ಸಮುದಾಯದಕ್ಕೆ ಸೇರಿರುವ ನಮ್ಮ ಪಕ್ಷದ ಈಗಿನ ರಾಷ್ಟ್ರೀಯ ಅಧ್ಯಕ್ಷರಾಗಿರುವ ಮಲ್ಲಿಕಾರ್ಜುನ ಖರ್ಗೆ ಅವರನ್ನು ಪಕ್ಷದ ಹಿರಿಯ ನಾಯಕರು ಎಷ್ಟು ಗೌರವ ಮತ್ತು ಘನತೆಯಿಂದ ನಡೆಸಿಕೊಳ್ಳುತ್ತಿದ್ದಾರೆ ಎನ್ನುವುದನ್ನು ನೋಡಿ ಕಲಿಯಿರಿ. ಸಂವಿಧಾನವನ್ನೇ ಬದಲಾಯಿಸಲು ಹೊರಟಿರುವ, ಮೀಸಲಾತಿಯನ್ನು ವಿರೋಧಿಸುತ್ತಿರುವ ಮತ್ತು ಜಾತಿ ತಾರತಮ್ಯವನ್ನು ಅಂತರಂಗದಲ್ಲಿ ಒಪ್ಪಿಕೊಂಡು ಬಹಿರಂಗದಲ್ಲಿ ಜಾತ್ಯತೀತತೆಯ ಸೋಗುಹಾಕಿರುವ ನಿಮಗೆ ದಲಿತರ ಬಗ್ಗೆ ಮಾತನಾಡುವ ಯಾವ ನೈತಿಕತೆಯೂ ಇಲ್ಲ. ನಿಮಗೆ ದಲಿತ ಸಮುದಾಯದ ಬಗ್ಗೆ ನಿಜವಾಗಿಯೂ ಗೌರವ ಇದ್ದರೆ ಥಾವರಚಂದ್ ಗೆಹ್ಲೋತ್ ಅವರ ಮೇಲೆ ಕೆಟ್ಟ ಕೆಲಸ ಮಾಡಲು ರಾಜಕೀಯ ಒತ್ತಡ ಹೇರಲು ಹೋಗದೆ, ಅವರು ಸಂವಿಧಾನದತ್ತವಾಗಿ ಕರ್ತವ್ಯ ನಿರ್ವಹಣೆ ಮಾಡಲು ಅವಕಾಶ ಮಾಡಿಕೊಡಿ, ಈ ಪ್ರತಿಭಟನೆ, ಪ್ರತಿರೋಧದ ನಾಟಕಗಳನ್ನು ನಿಲ್ಲಿಸಿ ಎಂದು ಒತ್ತಾಯಿಸಿದರು.

ಇದನ್ನೂ ಓದಿ: ಜಮ್ಮು-ಕಾಶ್ಮೀರದ ರಾಜ್ಯ ಸ್ಥಾನಮಾನ ಮರುಸ್ಥಾಪನೆ ನಮ್ಮ ಆದ್ಯತೆ: ರಾಹುಲ್ ಗಾಂಧಿ - Rahul Gandhi

ETV Bharat Logo

Copyright © 2024 Ushodaya Enterprises Pvt. Ltd., All Rights Reserved.