ETV Bharat / state

ಬೆಳಗಾವಿಗೆ ನಾಳೆ ಸಿಎಂ ಸಿದ್ದರಾಮಯ್ಯ: ಜಾರಕಿಹೊಳಿ ಬ್ರದರ್ಸ್ ಭದ್ರಕೋಟೆಯಲ್ಲಿ ರಾಯಣ್ಣ ಪ್ರತಿಮೆ ಲೋಕಾರ್ಪಣೆ - CM siddaramaiah - CM SIDDARAMAIAH

ಮುಖ್ಯಮಂತ್ರಿ ಸಿದ್ದರಾಮಯ್ಯ ಸೋಮವಾರ ಬೆಳಗಾವಿ ಜಿಲ್ಲಾ ಪ್ರವಾಸ ಕೈಗೊಳ್ಳಲಿದ್ದಾರೆ. ಕೌಜಲಗಿ ಗ್ರಾಮ ಸೇರಿದಂತೆ ನಾಲ್ಕು ಕಡೆಗಳಲ್ಲಿ ಕ್ರಾಂತಿ ವೀರ ಸಂಗೊಳ್ಳಿ ರಾಯಣ್ಣನ ಪ್ರತಿಮೆಗಳನ್ನು ಲೋಕಾರ್ಪಣೆ ಮಾಡಲಿದ್ದಾರೆ.

cm siddaramaiah
ಸಿಎಂ ಸಿದ್ದರಾಮಯ್ಯ (ETV Bharat)
author img

By ETV Bharat Karnataka Team

Published : Aug 25, 2024, 3:34 PM IST

ಬೆಳಗಾವಿ: ಜಾರಕಿಹೊಳಿ ಬ್ರದರ್ಸ್ ಭದ್ರಕೋಟೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತೊಮ್ಮೆ ಭೇಟಿ ನೀಡುತ್ತಿದ್ದಾರೆ. ತಿಂಗಳ ಅವಧಿಯಲ್ಲಿ ಎರಡನೇ ಬಾರಿಗೆ ಗೋಕಾಕ್​ಗೆ ಆಗಮಿಸುತ್ತಿರುವುದು ತೀವ್ರ ಕುತೂಹಲ ಮೂಡಿಸಿದೆ.

ಮುಡಾ ಹಗರಣದ ತನಿಖೆ ಸಂಬಂಧ ಇದೇ 29ರಂದು ಹೈಕೋರ್ಟ್​​ನಲ್ಲಿ ಮಹತ್ವದ ವಿಚಾರಣೆ ನಡೆಯಲಿದೆ. ವಿಪಕ್ಷಗಳು ಮುಖ್ಯಮಂತ್ರಿಗಳ ರಾಜೀನಾಮೆಗೆ ಪಟ್ಟು ಹಿಡಿದಿವೆ. ಇಂತಹ ಒತ್ತಡದಲ್ಲಿದ್ದರೂ ಸಿಎಂ ಸಿದ್ದರಾಮಯ್ಯ ಬೆಳಗಾವಿ ಪ್ರವಾಸ ಹಮ್ಮಿಕೊಂಡಿದ್ದಾರೆ.

ಆಗಸ್ಟ್ 5ರಂದು ನೆರೆ ವೀಕ್ಷಿಸಲು ಗೋಕಾಕ್ ತಾಲೂಕಿಗೆ ಭೇಟಿ ನೀಡಿದ್ದ ಸಿಎಂ ಸಿದ್ದರಾಮಯ್ಯ, ನಾಳೆ ಗೋಕಾಕ್ ಹಾಗೂ ಮೂಡಲಗಿ ತಾಲೂಕುಗಳಲ್ಲಿ ನಾಲ್ಕು ಕಡೆ ಕ್ರಾಂತಿ ವೀರ ಸಂಗೊಳ್ಳಿ ರಾಯಣ್ಣನ ಪ್ರತಿಮೆಗಳ ಲೋಕಾರ್ಪಣೆ ಕಾರ್ಯಕ್ರಮಗಳಲ್ಲಿ ಭಾಗವಹಿಸಲಿದ್ದಾರೆ. ಬೆಳಗ್ಗೆ ‌11.45ಕ್ಕೆ ಬೆಂಗಳೂರಿನಿಂದ ವಿಶೇಷ ವಿಮಾನದಲ್ಲಿ ಬೆಳಗಾವಿ ವಿಮಾನ ನಿಲ್ದಾಣಕ್ಕೆ ಆಗಮಿಸಲಿರುವ ಸಿಎಂ, ರಸ್ತೆ ಮಾರ್ಗವಾಗಿ ಗೋಕಾಕ್ ತಾಲೂಕಿನ ಕೌಜಲಗಿ ಗ್ರಾಮಕ್ಕೆ ಭೇಟಿ ನೀಡಲಿದ್ದಾರೆ. ಕೌಜಲಗಿಯಲ್ಲಿ ಸಂಗೊಳ್ಳಿ ರಾಯಣ್ಣನ ಪ್ರತಿಮೆ ಲೋಕಾರ್ಪಣೆಗೊಳಿಸಿದ ಬಳಿಕ ಕುರುಬ ಸಂಘದ ರಾಜ್ಯಾಧ್ಯಕ್ಷ ಡಾ.ರಾಜೇಂದ್ರ ಸಣ್ಣಕ್ಕಿ ಫಾರ್ಮ್ ಹೌಸ್​​ಗೆ ತೆರಳಲಿದ್ದಾರೆ.

ಇದಾದ ನಂತರ ಕಳ್ಳಿಗುದ್ದಿ, ಯಾದವಾಡ ಹಾಗೂ ಕಲ್ಲೋಳಿಯಲ್ಲಿ ರಾಯಣ್ಣ ಪ್ರತಿಮೆ ಲೋಕಾರ್ಪಣೆಗೊಳಿಸಿ ವಿಶೇಷ ವಿಮಾನದ ಮೂಲಕ ಬೆಂಗಳೂರಿಗೆ ಸಿಎಂ ಸಿದ್ದರಾಮಯ್ಯ ಪ್ರಯಾಣ ಬೆಳೆಸಲಿದ್ದಾರೆ.

ಸಿದ್ದರಾಮಯ್ಯ ಬೆನ್ನಿಗೆ ನಿಂತ ಜಾರಕಿಹೊಳಿ ಬ್ರದರ್ಸ್‌: ರಾಜಕೀಯ ಜೀವನದಲ್ಲಿ ತೀವ್ರ ಒತ್ತಡದಲ್ಲಿರುವ ಸಿಎಂ ಸಿದ್ದರಾಮಯ್ಯ ಬೆನ್ನಿಗೆ ಜಾರಕಿಹೊಳಿ ಬ್ರದರ್ಸ್ ಪರೋಕ್ಷವಾಗಿ ನಿಂತಿದ್ದು, ಅವರಿಗೆ ಶಕ್ತಿ ತುಂಬುವ ಕೆಲಸ ಮಾಡುತ್ತಿದ್ದಾರೆ ಎಂಬ ಮಾತುಗಳು ಕೇಳಿಬರುತ್ತಿವೆ. ಸದ್ಯ ಗೋಕಾಕ್ ಪ್ರವಾಸ ಇದಕ್ಕೆ ಮತ್ತಷ್ಟು ಪುಷ್ಠಿ ನೀಡುವಂತಿದೆ ಎಂದು ಹೇಳಲಾಗುತ್ತಿದೆ.

ಇದನ್ನೂ ಓದಿ: "ಜಿಂದಾಲ್​ ಕಂಪನಿಗೆ ಅತ್ಯಂತ ಕಡಿಮೆ ಬೆಲೆಯಲ್ಲಿ ಭೂಮಿ, ರಾಜ್ಯ ಸರ್ಕಾರದ್ದು ಹಗರಣಗಳ ಮೇಲೆ ಹಗರಣ" : ಅರವಿಂದ್ ಬೆಲ್ಲದ್​ - allegations on state govt

ETV Bharat Logo

Copyright © 2025 Ushodaya Enterprises Pvt. Ltd., All Rights Reserved.