ಬೆಂಗಳೂರು: ಮಳೆಯಿಂದ ರಸ್ತೆ, ಮನೆ ಬಿದ್ದಿರುವುದು ಹಾಗೂ ಬೆಳೆ ಹಾನಿಯಾಗಿರುವುದಕ್ಕೆ ಪರಿಹಾರ ಕಾರ್ಯಗಳನ್ನು ತುರ್ತಾಗಿ ಕೈಗೊಳ್ಳಬೇಕು ಎಂದು ಸೂಚಿಸಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.
ಕಳೆದ ಕೆಲವು ದಿನಗಳಿಂದ ಎಡಬಿಡದೆ ಸುರಿಯುತ್ತಿರುವ ಮಳೆಯಿಂದಾಗಿ ಅತಿಹೆಚ್ಚು ಹಾನಿಗೆ ಒಳಗಾದ ಉತ್ತರ ಕನ್ನಡ ಜಿಲ್ಲೆಯ ಆಯ್ದ ಸ್ಥಳಗಳಿಗೆ ನಾಳೆ ಭೇಟಿನೀಡಿ, ಪರಿಹಾರ ಕಾರ್ಯದ ಪರಿಶೀಲನೆ ನಡೆಸಿ, ಸಂತ್ರಸ್ತರ ಅಹವಾಲುಗಳನ್ನು ಆಲಿಸಲಿದ್ದೇನೆ.
— Siddaramaiah (@siddaramaiah) July 20, 2024
ಪ್ರವಾಹ ಪೀಡಿತ ಪ್ರದೇಶಗಳ ಜನರ ಪುನರ್ವಸತಿ ಹಾಗೂ ಪರಿಹಾರ ಕಾರ್ಯಗಳಿಗೆ ನಮ್ಮ ಸರ್ಕಾರವು ಈಗಾಗಲೇ ರೂ.775… pic.twitter.com/fWN7WAlCUw
ಅಜೀಂಪ್ರೇಮ್ ಜಿ ಫೌಂಡೇಷನ್ ಸಹಭಾಗಿತ್ವದಲ್ಲಿ ಸರ್ಕಾರಿ, ಅನುದಾನಿತ ಪ್ರಾಥಮಿಕ ಮತ್ತು ಪ್ರೌಢಶಾಲಾ ಮಕ್ಕಳಿಗೆ ವಾರದಲ್ಲಿ ಉಚಿತ 6 ದಿನ ಪೂರಕ ಪೌಷ್ಠಿಕ ಆಹಾರ ನೀಡುವ ಕಾರ್ಯಕ್ರಮದ ನಂತರ ಮಾಧ್ಯಮಗಳ ಜೊತೆ ಅವರು ಮಾತನಾಡಿದರು. ಉತ್ತರ ಕನ್ನಡ ಜಿಲ್ಲೆಯ ಅಂಕೋಲಾ ಸೇತುವೆ ಪರಿಶೀಲಿಸಲು ನಾಳೆ ತೆರಳುತ್ತಿರುವುದಾಗಿಯೂ ಸಿಎಂ ತಿಳಿಸಿದರು.
ಮಾನಸಿಕ ಆರೋಗ್ಯ ಮತ್ತು ಉತ್ತಮ ಶಿಕ್ಷಣಕ್ಕೆ ಗುಣಮಟ್ಟದ ಆಹಾರ ಮುಖ್ಯ.
— CM of Karnataka (@CMofKarnataka) July 20, 2024
ಉಪಹಾರ ಇಲ್ಲದೆ ಶಾಲೆಗೆ ಬಂದು, ಊಟ ಇಲ್ಲದೆ ಮಧ್ಯಾಹ್ನದವರೆಗೂ ಶಾಲೆಯಲ್ಲಿರುವ ಮಕ್ಕಳನ್ನು ನಾನು ನೋಡಿದ್ದೇನೆ. ಹೀಗಾಗಿ ವಾರದಲ್ಲಿ ಎರಡು ದಿನ ಊಟ ಮತ್ತು ಮೊಟ್ಟೆ ಕೊಡಲು ಮುಂದಾದೆವು. ಈಗ ಅಜೀಂ ಪ್ರೇಮ್ಜಿ ಫೌಂಡೇಷನ್ ಅವರು ವಾರದಲ್ಲಿ ನಾಲ್ಕು ದಿನ ಮಕ್ಕಳಿಗೆ ಮೊಟ್ಟೆ… pic.twitter.com/P603f2hjSu
ಅಜೀಂಪ್ರೇಮ್ ಜಿ ಪ್ರತಿಷ್ಠಾನದೊಂದಿಗೆ ಮಾಡಿಕೊಂಡಿರುವ ಒಪ್ಪಂದದಲ್ಲಿ ವಾರದ ನಾಲ್ಕು ದಿನಗಳು ಸರ್ಕಾರಿ ಶಾಲೆಗಳು ಹಾಗೂ ಸರ್ಕಾರಿ ಅನುದಾನಿತ ಶಾಲೆಗಳಿಗೆ ಮೊಟ್ಟೆ ಸರಬರಾಜು ಮಾಡಲು ಒಪ್ಪಿಕೊಂಡಿದೆ ಎಂದರು.
ಈ ಕಾರ್ಯಕ್ರಮವನ್ನು ಇಂದು ಉದ್ಘಾಟಿಸಿದ್ದು, ಮಕ್ಕಳು ಆರೋಗ್ಯವಂತರಾಗಿರಲು ಪೌಷ್ಟಿಕ ಆಹಾರ ಅಗತ್ಯ ಎಂದು ಹೇಳಿದರು. ಕಾರ್ಯಕ್ರಮದಲ್ಲಿ ಉದ್ಯಮಿ ಅಜೀಂಪ್ರೇಮ್‍ಜಿ, ಶಾಲಾ ಶಿಕ್ಷಣ ಸಾಕ್ಷರತಾ ಸಚಿವ ಮಧುಬಂಗಾರಪ್ಪ, ಶಾಸಕ ರಿಜ್ವಾನ್ ಹರ್ಷದ್ ಹಾಗೂ ಮತ್ತಿತರರು ಉಪಸ್ಥಿತರಿದ್ದರು.
ಮುಖ್ಯಮಂತ್ರಿ @siddaramaiah ಅವರು ಅಜೀಂ ಪ್ರೇಮ್ಜಿ ಫೌಂಡೇಷನ್ ಸಹಭಾಗಿತ್ವದಲ್ಲಿ ಸರ್ಕಾರಿ, ಅನುದಾನಿತ ಪ್ರಾಥಮಿಕ ಮತ್ತು ಪ್ರೌಢಶಾಲಾ ಮಕ್ಕಳಿಗೆ ವಾರದಲ್ಲಿ ಉಚಿತ 6 ದಿನ ಪೂರಕ ಪೌಷ್ಠಿಕ ಆಹಾರ ನೀಡುವ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.
— CM of Karnataka (@CMofKarnataka) July 20, 2024
ಶಿಕ್ಷಣ ಸಚಿವರಾದ ಮಧು ಬಂಗಾರಪ್ಪ, ವಿಪ್ರೋ ಮುಖ್ಯಸ್ಥರಾದ ಅಜೀಂ ಪ್ರೇಮ್ ಜಿ ದಂಪತಿ,… pic.twitter.com/cjcGF78Rfq
ಆಯ್ದ ಸ್ಥಳಗಳಿಗೆ ನಾಳೆ ಭೇಟಿ : ಕಳೆದ ಕೆಲವು ದಿನಗಳಿಂದ ಎಡಬಿಡದೇ ಸುರಿಯುತ್ತಿರುವ ಮಳೆಯಿಂದಾಗಿ ಅತಿಹೆಚ್ಚು ಹಾನಿಗೆ ಒಳಗಾದ ಉತ್ತರ ಕನ್ನಡ ಜಿಲ್ಲೆಯ ಆಯ್ದ ಸ್ಥಳಗಳಿಗೆ ನಾಳೆ ಭೇಟಿ ನೀಡಿ, ಪರಿಹಾರ ಕಾರ್ಯದ ಪರಿಶೀಲನೆ ನಡೆಸಿ, ಸಂತ್ರಸ್ತರ ಅಹವಾಲುಗಳನ್ನು ಆಲಿಸಲಿದ್ದೇನೆ. ಪ್ರವಾಹ ಪೀಡಿತ ಪ್ರದೇಶಗಳ ಜನರ ಪುನರ್ವಸತಿ ಹಾಗೂ ಪರಿಹಾರ ಕಾರ್ಯಗಳಿಗೆ ನಮ್ಮ ಸರ್ಕಾರವು ಈಗಾಗಲೇ ರೂ. 775 ಕೋಟಿ ಹಣ ನೀಡಿದ್ದು, ಅಗತ್ಯವಿದ್ದರೆ ಇನ್ನೂ ಹೆಚ್ಚಿನ ನೆರವು ನೀಡಲಾಗುವುದು ಎಂದು ಸಿಎಂ ಎಕ್ಸ್ ಖಾತೆಯಲ್ಲಿ ಬರೆದುಕೊಂಡಿದ್ದಾರೆ.
ಇದನ್ನೂ ಓದಿ: ಮಳೆಯ ಆರ್ಭಟ: ಪ್ರವಾಹ ಪೀಡಿತ ಜಿಲ್ಲೆಗಳಲ್ಲಿ ಈವರೆಗಿನ ಸ್ಥಿತಿಗತಿ ಏನಿದೆ? - KARNATAKA RAIN UPDATE