ETV Bharat / state

ಉದಾಸೀನ, ನಿರ್ಲಕ್ಷ್ಯ, ಕರ್ತವ್ಯಲೋಪಕ್ಕೆ ಹಿರಿಯ ಅಧಿಕಾರಿಗಳನ್ನೂ ಹೊಣೆ ಮಾಡಿ ಕ್ರಮ: ಸಿಎಂ - CM Siddaramaiah

ಉದಾಸೀನ, ನಿರ್ಲಕ್ಷ್ಯ, ಕರ್ತವ್ಯಲೋಪಕ್ಕೆ ಇವತ್ತಿನಿಂದ ಹಿರಿಯ ಅಧಿಕಾರಿಗಳನ್ನೂ ಹೊಣೆ ಮಾಡಿ ಕ್ರಮ ಕೈಗೊಳ್ಳುತ್ತೇನೆ ಎಂದು ಸಿಎಂ ಸಿದ್ದರಾಮಯ್ಯ ಖಡಕ್​​ ಎಚ್ಚರಿಕೆ ನೀಡಿದ್ದಾರೆ.

author img

By ETV Bharat Karnataka Team

Published : Jul 8, 2024, 2:14 PM IST

ಸಿಎಂ ಸಿದ್ದರಾಮಯ್ಯ ಅಧಿಕಾರಿಗಳಿಗೆ ಸೂಚನೆ
ಸಿಎಂ ಸಿದ್ದರಾಮಯ್ಯ (ETV Bharat)

ಬೆಂಗಳೂರು: ಜಿಲ್ಲಾಧಿಕಾರಿಗಳಿಗೆ ಮಹಾರಾಜರು ಎನ್ನುವ ಭಾವನೆ ಇದ್ದರೆ ಅಭಿವೃದ್ಧಿ ಮತ್ತು ಪ್ರಗತಿ ಸಾಧ್ಯವಿಲ್ಲ. ರಾಜಕಾರಣಿಗಳು ಮತ್ತು ಅಧಿಕಾರಿಗಳು ಇಬ್ಬರೂ ಜನ ಸೇವಕರು ಎನ್ನುವುದನ್ನು ನೆನಪಿನಲ್ಲಿಟ್ಟುಕೊಂಡು ಜನಸೇವೆ ಮಾಡಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚನೆ ನೀಡಿದ್ದಾರೆ.

ಇಂದು ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ನಡೆದ ಜಿಲ್ಲಾಧಿಕಾರಿ ಮತ್ತು ಸಿಇಒ ಹಾಗೂ ಉಸ್ತುವಾರಿ ಕಾರ್ಯದರ್ಶಿಗಳ ಸಭೆಯಲ್ಲಿ ಸಿಎಂ ಈ ಸೂಚನೆ ನೀಡಿದರು.

ಸರ್ಕಾರದ ಕಾರ್ಯಕ್ರಮಗಳು, ಯೋಜನೆಗಳು ಪರಿಣಾಮಕಾರಿಯಾಗಿ ಜನ ಸಾಮಾನ್ಯರಿಗೆ ತಲುಪಿಸಲು DC-SP-CEO ಗಳು ಕ್ರಿಯಾಶೀಲತೆಯಿಂದ, ಸಮನ್ವಯತೆಯಿಂದ ಕೆಲಸ ಮಾಡಬೇಕು. ಆಗ ಮಾತ್ರ ಸರ್ಕಾರದ ಕಾಳಜಿಗಳು ಜನರಿಗೆ ತಲುಪಲು ಸಾಧ್ಯ ಎಂದರು.

ರಾಜ್ಯದಲ್ಲಿ ಡೆಂಗ್ಯೂ ನಿಯಂತ್ರಣಕ್ಕೆ ಸಮರೋಪಾದಿಯಲ್ಲಿ ಕೆಲಸ ಮಾಡಿ. DC, DHO ಗಳು ತಾಲೂಕು ಮಟ್ಟದ ಅಧಿಕಾರಿಗಳ ಜೊತೆ ಸಭೆ ಮಾಡಿ ಕ್ಷಿಪ್ರವಾಗಿ ಕೆಲಸ ಮಾಡಿ. ಇಷ್ಟು ದಿನ ಉದಾಸೀನ, ನಿರ್ಲಕ್ಷ್ಯಕ್ಕೆ, ಕರ್ತವ್ಯಲೋಪಕ್ಕೆ ಕೆಳ ಹಂತದ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಲಾಗಿದೆ. ಇವತ್ತಿನಿಂದ ಹಿರಿಯ ಅಧಿಕಾರಿಗಳನ್ನೂ ಹೊಣೆ ಮಾಡಿ ಕ್ರಮ ಕೈಗೊಳ್ಳುತ್ತೇನೆ ಎಂದು ಸ್ಪಷ್ಟ ಎಚ್ಚರಿಕೆ ನೀಡಿದರು.

DC-CEO ಗಳು, ತಮ್ಮ ಜಿಲ್ಲೆಯ ಸಮಗ್ರ ಮಾಹಿತಿಗಳನ್ನು ಅಂಗೈಯಲ್ಲಿ ಇಟ್ಟುಕೊಂಡು ಉತ್ಸಾಹದಿಂದ ಕೆಲಸ ಮಾಡಬೇಕು. ಆಗ ಮಾತ್ರ ಪ್ರಗತಿ ಮತ್ತು ಅಭಿವೃದ್ಧಿಯ ವೇಗ ಕಾಣಲು ಸಾಧ್ಯ. ರಾಜಕಾರಣಿಗಳು, ಅಧಿಕಾರಿಗಳ ಅನುಭವದ ಮೇಲೆ ಆಡಳಿತ ಹೆಚ್ಚು ಪರಿಣಾಮಕಾರಿಯಾಗಿ ಆಗಬೇಕಿತ್ತು.‌ 40 ವರ್ಷಗಳ ಹಿಂದೆ ಅಧಿಕಾರಿಗಳು ಕೆಲಸ ನಿರ್ವಹಿಸುವ ರೀತಿಗೂ, ಇವತ್ತಿನ ಅಧಿಕಾರಿಗಳು ಕರ್ತವ್ಯ ನಿರ್ವಹಿಸುವ ರೀತಿಗೂ ಹೋಲಿಸಿದರೆ ಕಾರ್ಯಾಂಗ ಮತ್ತು ಶಾಸಕಾಂಗ ಈಗ ಹೆಚ್ಚು ಪರಿಣಾಮಕಾರಿಯಾಗಿ, ಗುಣಾತ್ಮಕವಾಗಿ ಕೆಲಸ ಮಾಡುತ್ತಿಲ್ಲ ಎನ್ನುವುದು ಗೊತ್ತಾಗುತ್ತಿದೆ. ಇದು ಬಹಳ ಬೇಸರದ ಸಂಗತಿ ಎಂದು ವಿಷಾದ ವ್ಯಕ್ತಪಡಿಸಿದರು.

ಅಭಿವೃದ್ಧಿ ಮತ್ತು ಕಾನೂನು ಸುವ್ಯವಸ್ಥೆ ಪರಸ್ಪರ ಪೂರಕ. ಒಂದು ಇಲ್ಲದಿದ್ದರೆ ಮತ್ತೊಂದು ಇರಲು ಸಾಧ್ಯವಿಲ್ಲ. ಕರ್ನಾಟಕ ಗುಡ್ ಗೌರ್ನೆನ್ಸ್​​ನಲ್ಲಿ ಮಾದರಿ ರಾಜ್ಯವಾಗಿದೆ ಎನ್ನುವುದನ್ನು ಮರೆಯಬಾರದು. ಈ ಹೆಗ್ಗಳಿಕೆಯನ್ನು ಮುಂದುವರೆಸಿಕೊಂಡು ಹೋಗುವ ಜವಾಬ್ದಾರಿ ನಿಮ್ಮ ಮೇಲಿದೆ. ಜಿಲ್ಲಾಧಿಕಾರಿಗಳು ಯಾವುದೇ ಜಿಲ್ಲೆಗೆ ಹೋಗುವ ಮೊದಲು ಆಯಾ ಜಿಲ್ಲೆಗಳ ಮಾನವ ಅಭಿವೃದ್ಧಿ ಸೂಚ್ಯಂಕಗಳ ಜೊತೆಗೆ ಜಿಲ್ಲೆಯ ಸಮಗ್ರ ಮಾಹಿತಿ ತಿಳಿದುಕೊಳ್ಳಬೇಕು. SSLC ಫಲಿತಾಂಶದಲ್ಲಿ ಕೆಲವು ಜಿಲ್ಲೆಗಳಲ್ಲಿ ಕುಸಿತ ಕಂಡಿರುವುದನ್ನು ಪ್ರಸ್ತಾಪಿಸಿದ ಮುಖ್ಯಮಂತ್ರಿಗಳು, ಈ ಬಾರಿ ನಕಲು ಮಾಡುವುದನ್ನು ಸಂಪೂರ್ಣ ನಿಲ್ಲಿಸಿದ್ದು ಶ್ಲಾಘನೀಯ. ಆದರೆ ಈ ಕಾರಣಕ್ಕೆ ಫಲಿತಾಂಶ ಕುಸಿತ ಆಯಿತು ಎನ್ನುವ ಸಮರ್ಥನೆ ಸರಿಯಲ್ಲ.

DC, CEO, ಇಲಾಖಾ ಕಾರ್ಯದರ್ಶಿಗಳ ಜವಾಬ್ದಾರಿ ಇಲ್ಲವಾ? ಆತ್ಮಾವಲೋಕನ ಮಾಡಿಕೊಂಡು ಪರಿಸ್ಥಿತಿ ಸುಧಾರಿಸಲು ಪ್ರಯತ್ನಿಸಲೇಬೇಕು. DDPI, DC, CEO ಗಳು ಒಟ್ಟಿಗೇ ಕುಳಿತು ಚರ್ಚಿಸಿ ಪರಿಸ್ಥಿತಿ ಸುಧಾರಿಸಬೇಕು. ಜನಸಂಪರ್ಕ, ಜನಸ್ಪಂದನ ಸಭೆಗಳಲ್ಲಿ 15-20 ಸಾವಿರ ಅರ್ಜಿಗಳು ಬರುತ್ತವೆ. ನೀವು ಸರಿಯಾಗಿ ಸ್ಥಳೀಯವಾಗಿ ಕೆಲಸ ಮಾಡಿದ್ದರೆ ಇಷ್ಟೊಂದು ಮಂದಿ ನನ್ನ ಬಳಿಗೆ ಏಕೆ ಬರುತ್ತಾರೆ ಎಂದು ಪ್ರಶ್ನಿಸಿದ ಸಿಎಂ, DC, CEO ಗಳು ಇರುವುದು ಜನಸಂಪರ್ಕ ಸಭೆಗಳಿಗೆ ಬಂದ ಅರ್ಜಿಗಳನ್ನು ರವಾನಿಸಿ ಮುಚ್ಚಳಿಕೆ ಕೊಟ್ಟು ಕೈತೊಳೆದುಕೊಳ್ಳೋಕಾ ಇರೋದು?. ಪರಿಹಾರ ಕೊಡಿಸುವವರು ಯಾರು ಎಂದು ಖಾರವಾಗಿ ಪ್ರಶ್ನಿಸಿದರು.

ನೀವು ಪರಿಹಾರ ಕೊಡಲಿಲ್ಲ ಅಂತ ನನ್ನ ತನಕ ಬಂದಿದ್ದಾರೆ. ಜನರ ಸಮಸ್ಯೆಗಳ ಅರ್ಜಿಗಳು ಸಕಾರಾತ್ಮಕವಾಗಿ ವಿಲೇವಾರಿ ಆಗಿಲ್ಲ, ಗುಣಾತ್ಮಕವಾಗಿ ವಿಲೇವಾರಿ ಆಗಿಲ್ಲ ಅಂದರೆ ನಿಮ್ಮ ವಿರುದ್ಧ ಕ್ರಮ ಖಚಿತ ಎಂದು ಎಚ್ಚರಿಸಿದರು. ತಹಶೀಲ್ದಾರ್, ಜಿಲ್ಲಾಧಿಕಾರಿಗಳ ಸಮೇತ ಜಿಲ್ಲಾ, ತಾಲ್ಲೂಕು ಮಟ್ಟದ ಅಧಿಕಾರಿಗಳು ಜನರನ್ನು ನೇರ ಭೇಟಿ ಮಾಡುತ್ತಿಲ್ಲ. ಅಧಿಕಾರಿಗಳು ಕರ್ತವ್ಯ ನಿರ್ವಹಿಸುವ ಕಡೆಯೇ ಉಳಿಯಬೇಕು ಎನ್ನುವ ನನ್ನ ಸೂಚನೆ ಸರಿಯಾಗಿ ಪಾಲನೆ ಆಗುತ್ತಿಲ್ಲ. PDO ಗಳು, VA ಗಳು ಕೆಲಸ ಮಾಡುವ ಜಾಗದಲ್ಲೇ ಉಳಿಯಬೇಕು. ಈ ಬಗ್ಗೆ DC, CEO ಗಳು ಗಮನ ಹರಿಸಬೇಕು.

ಸಂಚಾರಿ ಕುರಿಗಾಹಿಗಳಿಗೆ ಗುರುತಿನ ಚೀಟಿ ನೀಡಬೇಕು, ಕುರಿ-ಮೇಕೆಗಳ ಟೆಂಟ್ ಹಾಕಿರುವ ಸ್ಥಳಕ್ಕೇ ಹೋಗಿ ಲಸಿಕೆ ಮತ್ತು ಚುಚ್ಚುಮದ್ದುಗಳನ್ನು ನೀಡಬೇಕು. ಸಂಚಾರಿ ಕುರಿಗಾಹಿಗಳಿಗೆ ಬಂದೂಕು ಲೈಸೆನ್ಸ್ ಕೊಡುವುದು ಕಡ್ಡಾಯ". 'ಕುರಿ ಕಳ್ಳತನ ತಡೆಯಲು ಇದು ಅಗತ್ಯ ಎನ್ನುವ ಸ್ಪಷ್ಟ ಸೂಚನೆಗಳನ್ನು' ಸಿಎಂ ನೀಡಿದರು. "ಮಣ್ಣಿನ ಫಲವತ್ತತೆ ಕಡಿಮೆ ಆಗುತ್ತಿದೆ. ಇದನ್ನು ಹೆಚ್ಚಿಸಲು ಅಗತ್ಯ ಕ್ರಮ ಕೈಗೊಳ್ಳುವ ಜೊತೆಗೆ ರೈತರಿಗೆ ಮಣ್ಣಿನ ಆರೋಗ್ಯ ಕಾರ್ಡ್​ನ್ನು ಕಡ್ಡಾಯವಾಗಿ ನೀಡಬೇಕು. ಪ್ರತೀ ಎರಡು ವರ್ಷಕ್ಕೊಮ್ಮೆ ಮಣ್ಣಿನ ಪರೀಕ್ಷೆ ನಡೆಸಬೇಕು. ಈ ಎಲ್ಲಾ ಕೆಲಸಗಳನ್ನು ಜಿಲ್ಲಾ ಮತ್ತು ತಾಲೂಕು ಮಟ್ಟದ ಅಧಿಕಾರಿಗಳು ಪರಸ್ಪರ ಸಮನ್ವಯತೆಯಿಂದ ಮಾಡಬೇಕು.

ತಹಶೀಲ್ದಾರ್ ನ್ಯಾಯಾಲಯಗಳಲ್ಲಿ 8,234 ಪ್ರಕರಣಗಳು ಬಾಕಿ ಇವೆ. ಉಪವಿಭಾಹಾಧಿಕಾರಿಗಳ ಬಳಿ RRT (ಹಕ್ಕು ಬದಲಾವಣೆ) ಪ್ರಕರಣಗಳು 37,587 ಬಾಕಿ ಇವೆ. ಇವುಗಳಲ್ಲಿ 5 ವರ್ಷಕ್ಕೂ ಮೇಲ್ಪಟ್ಟವು 7,522 ಪ್ರಕರಣಗಳಿವೆ, DCಗಳ ಬಳಿ 10,838 ಪ್ರಕರಣಗಳು ಬಾಕಿ ಇವೆ. 5 ವರ್ಷಕ್ಕೂ ಮೇಲ್ಪಟ್ಟವು 4,207 ಪ್ರಕರಣಗಳಿವೆ. DC ಗಳೇ ಬಾಕಿ ಉಳಿಸಿಕೊಂಡರೆ ನೀವು AC ಮತ್ತು ತಹಶೀಲ್ದಾರ್​​ಗಳಿಗೆ ಏನು ಸೂಚನೆ ಕೊಡುತ್ತೀರಿ?. ಕೆಲವು DC ಗಳ ಬಳಿ ಒಂದೂ ಪ್ರಕರಣಗಳೂ ಬಾಕಿ ಇಲ್ಲ. ಉಳಿದ DC ಗಳಿಂದ ಏಕೆ ಸಾಧ್ಯವಾಗುತ್ತಿಲ್ಲ. ಜನ DC, AC ತಹಶೀಲ್ದಾರ್ ಕಚೇರಿಗಳಿಗೆ ಅಲೆಯೋದು ಅಧಿಕಾರಿಗಳು ಜನರ ಕೈಗೆ ಸಿಗದೇ ಇದ್ದರೆ ಮಾತ್ರ ಎಂದ ಸಿಎಂ ಸಿದ್ದರಾಮಯ್ಯ ಹಿರಿಯ ವರ್ಗದ ಅಧಿಕಾರಿಗಳಿಗೆ ಖಡಕ್ ಸೂಚನೆ ನೀಡಿದ್ದಾರೆ.

ಇದನ್ನೂ ಓದಿ: ಸಂಸದ ಕೆ.ಸುಧಾಕರ್ ಮದ್ಯ ಹಂಚಿರುವ ಬಗ್ಗೆ ಬಿಜೆಪಿ ಅಧ್ಯಕ್ಷ ನಡ್ಡಾ ಉತ್ತರಿಸಲಿ: ಡಿಕೆಶಿ - D K Shivakumar

ETV Bharat Logo

Copyright © 2024 Ushodaya Enterprises Pvt. Ltd., All Rights Reserved.