ETV Bharat / state

ಸಿಎಂ ಪತ್ನಿ ಮುಡಾದಿಂದ ಕಾನೂನಾತ್ಮವಾಗಿ ನಿವೇಶನ ಪಡೆದಿದ್ದಾರೆ: ಸಚಿವ ಮಹದೇವಪ್ಪ - H C Mahadevappa - H C MAHADEVAPPA

ಸಿಎಂ ಸಿದ್ದರಾಮಯ್ಯನವರ ಪತ್ನಿ ಪಾರ್ವತಮ್ಮ ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಿಂದ ಕಾನೂನುಬದ್ಧವಾಗಿಯೇ ನಿವೇಶನ ಪಡೆದಿದ್ದಾರೆ. 50:50 ಅನುಪಾತದಲ್ಲಿ ನಿವೇಶನ ಹಂಚಿಕೆಗೂ ಸಿದ್ದರಾಮಯ್ಯ ಅವರ ಕುಟುಂಬದವರು ಪಡೆದಿರುವ ನಿವೇಶನಕ್ಕೂ ಸಂಬಂಧವಿಲ್ಲ ಎಂದು ಸಚಿವ ಡಾ.ಎಚ್‌.ಸಿ.ಮಹದೇವಪ್ಪ ತಿಳಿಸಿದರು.

ಸಚಿವ ಮಹದೇವಪ್ಪ
ಸಚಿವ ಮಹದೇವಪ್ಪ (ETV Bharat)
author img

By ETV Bharat Karnataka Team

Published : Jul 7, 2024, 7:39 PM IST

ಮೈಸೂರು: ಸಿಎಂ ಸಿದ್ದರಾಮಯ್ಯ ಪತ್ನಿ ಪಾರ್ವತಮ್ಮ ಅವರು ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಿಂದ ಕಾನೂನುಬದ್ಧವಾಗಿ ನಿವೇಶನ ಪಡೆದಿದ್ದಾರೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಚ್‌.ಸಿ.ಮಹದೇವಪ್ಪ ಹೇಳಿದ್ದಾರೆ. ನಗರದ ಜಲದರ್ಶಿನಿ ಅತಿಥಿಗೃಹದಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, 50:50 ಅನುಪಾತದಲ್ಲಿ ನಿವೇಶನ ಹಂಚಿಕೆಗೂ ಸಿದ್ದರಾಮಯ್ಯ ಅವರ ಕುಟುಂಬದವರು ಪಡೆದಿರುವ ನಿವೇಶನಕ್ಕೂ ಸಂಬಂಧವಿಲ್ಲ. ಯಾವುದೇ ದುರುಪಯೋಗ ನಡೆದಿಲ್ಲ. ತಪ್ಪು ಮಾಡಿಲ್ಲ. ರೆಕಾರ್ಡ್ಸ್‌ ಕ್ರಮಬದ್ಧವಾಗಿದೆ. ನಿಯಮವನ್ನೂ ಮೀರಿಲ್ಲ ಎಂದು ಹೇಳಿದರು.

ಕೆಸರೆ ಗ್ರಾಮದ 464 ಸರ್ವೇ ನಂಬರ್‌ನ 3.16 ಎಕರೆ ಜಮೀನನ್ನು ಕಾನೂನುಬಾಹಿರವಾಗಿ ವಶಕ್ಕೆ ಪಡೆದಿರುವುದಕ್ಕೆ ತಪ್ಪೊಪ್ಪಿಕೊಂಡು ಮುಡಾ ಅಧಿಕಾರಿಗಳು ಕೌನ್ಸಿಲ್‌ನಲ್ಲಿ ಚರ್ಚಿಸಿ ತೀರ್ಮಾನ ಮಾಡಿ ಪರ್ಯಾಯವಾಗಿ ವಿಜಯನಗರದಲ್ಲಿ ನಿವೇಶನ ಕೊಟ್ಟಿದ್ದಾರೆ. ಆದರೆ, ಈ ಪ್ರಕರಣದಲ್ಲಿ ರಾಜಕೀಯವಾಗಿ ತಪ್ಪು ಹುಡುಕಲು ಕೆಲವರು ಪ್ರಯತ್ನ ಮಾಡುತ್ತಿದ್ದಾರೆ. ಕಳಂಕ ಮತ್ತು ಭ್ರಷ್ಟಾಚಾರ ರಹಿತವಾಗಿರುವ ಬದ್ಧತೆಯ ರಾಜಕಾರಣಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮೇಲೆ ಕೆಲವರು ಆರೋಪ ಮಾಡುತ್ತಿದ್ದಾರೆ ಎಂದರು.

ದಲಿತರ ಭೂಮಿಯಲ್ಲ: ಕೆಸರೆ ಗ್ರಾಮದಲ್ಲಿ ಸಿದ್ದರಾಮಯ್ಯ ಅವರ ಬಾಮೈದ ಖರೀದಿಸಿರುವುದು ದಲಿತರ ಭೂಮಿಯಲ್ಲ. ನಿಂಗ ಬಿನ್‌ ಜವರ ಅವರು ಬಹಿರಂಗ ಹರಾಜಿನ ಮೂಲಕ 100 ರೂ. ಖರೀದಿ ಮಾಡಿದ್ದಾರೆ. ಆದರೆ, ಹಿಂದಿನ ಸರ್ಕಾರದಲ್ಲಿ ಪಿಟಿಸಿಎಲ್‌ ಕಾಯಿದೆಯನ್ನೇ ರದ್ದು ಮಾಡಿದ್ದನ್ನು ಪ್ರಶ್ನೆ ಮಾಡಿದವರು ಈಗ ಟೀಕೆ ಮಾಡುತ್ತಿದ್ದಾರೆ ಎಂದು ಹೆಚ್‌.ವಿಶ್ವನಾಥ್‌ ವಿರುದ್ಧ ಪರೋಕ್ಷವಾಗಿ ವಾಗ್ದಾಳಿ ನಡೆಸಿದರು.

ಕಾನೂನಾತ್ಮಕ ಕ್ರಮ: ಮುಡಾದಲ್ಲಿನ ಹಗರಣ ಸಂಬಂಧ ತನಿಖೆ ಪ್ರಗತಿಯಲ್ಲಿದೆ. ವರದಿ ಬಂದ ಬಳಿಕ ರಾಜಕಾರಣಿಗಳ ಸಹಿತವಾಗಿ ಎಲ್ಲರ ವಿರುದ್ಧ ಕ್ರಮ ತೆಗೆದುಕೊಳ್ಳುತ್ತೇವೆ. ಯಾರನ್ನೂ ರಕ್ಷಿಸುವ ಪ್ರಶ್ನೆಯೇ ಇಲ್ಲ ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು. ಮುಡಾ ಹಗರಣವನ್ನು ಸಿಬಿಐ ತನಿಖೆಗೆ ವಹಿಸುವಂತೆ ಪತ್ರಕರ್ತರು ಕೇಳಿದ ಪ್ರಶ್ನೆಗೆ ಗರಂ ಆದ ಸಚಿವ ಮಹದೇವಪ್ಪ, ಇಲಿ, ಕೋತಿ, ನಾಯಿ ಹೋದದ್ದಕ್ಕೆಲ್ಲಾ ಸಿಬಿಐಗೆ ಕೊಡುವಂತೆ ಒತ್ತಾಯಿಸುತ್ತಾರೆ. ಹಿಂದೆ ಎಷ್ಟು ಪ್ರಕರಣಗಳನ್ನು ಸಿಬಿಐಗೆ ಕೊಟ್ಟಿದ್ದರು. ಈಗ ಯಾಕೇ ಸಿಬಿಐ ಮೇಲೆ ವಿಶೇಷ ಒಲವು ಬಂದಿದೆ ಎಂದು ಕಿಡಿಕಾರಿದರು.

ಜನಪ್ರತಿನಿಧಿ ನೇಮಕ ರದ್ದು ಮಾಡಲು ಮನವಿ: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರಕ್ಕೆ ಶಾಸಕರು, ವಿಧಾನ ಪರಿಷತ್‌ ಸದಸ್ಯರ ನೇಮಕ ರದ್ದು ಮಾಡುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಮನವಿ ಮಾಡಿರುವುದಾಗಿ ತಿಳಿಸಿದರು. ಹಿಂದೆ ಮುಡಾದಲ್ಲಿ ಮೂವರು ಮಾತ್ರ ಸದಸ್ಯರಿದ್ದರು. ಅದೇ ಮಾದರಿಯನ್ನು ಮುಂದುವರಿಸುವಂತೆ ಕೋರಿದ್ದೇನೆ. ಮುಖ್ಯಮಂತ್ರಿಗಳು ಇದಕ್ಕೆ ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ ಎಂದು ಹೇಳಿದರು.

ಇದನ್ನೂ ಓದಿ: ಮುಡಾ ಹಗರಣ ಆರೋಪ: ನಿವೃತ್ತ ಅಧಿಕಾರಿ ಹೇಳಿದ್ದೇನು? - MUDA Scam

ETV Bharat Logo

Copyright © 2024 Ushodaya Enterprises Pvt. Ltd., All Rights Reserved.