ETV Bharat / state

ಪ್ರಾಸಿಕ್ಯೂಷನ್‌ಗೆ ರಾಜ್ಯಪಾಲರ ಅನುಮತಿ: ಆಗಸ್ಟ್‌ 23ಕ್ಕೆ ಸಿಎಂ ಸಿದ್ದರಾಮಯ್ಯ ದೆಹಲಿಗೆ - CM Siddaramaiah - CM SIDDARAMAIAH

ಸಿಎಂ ಸಿದ್ದರಾಮಯ್ಯ ಆ.23ರಂದು ದೆಹಲಿಗೆ ತೆರಳಿ ಹೈಕಮಾಂಡ್ ಭೇಟಿಯಾಗಲಿದ್ದಾರೆ.

cm-siddaramaiah
ಸಿಎಂ ಸಿದ್ದರಾಮಯ್ಯ (ETV Bharat)
author img

By ETV Bharat Karnataka Team

Published : Aug 18, 2024, 11:01 PM IST

ಬೆಂಗಳೂರು: ಮುಡಾ ಪ್ರಕರಣದಲ್ಲಿ ರಾಜ್ಯಪಾಲರು ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿರುವ ಹಿನ್ನೆಲೆಯಲ್ಲಿ ಸಿಎಂ ಸಿದ್ದರಾಮಯ್ಯ ಆಗಸ್ಟ್‌ 23ಕ್ಕೆ ದೆಹಲಿಗೆ ತೆರಳಿ ಹೈಕಮಾಂಡ್ ನಾಯಕರನ್ನು ಭೇಟಿಯಾಗಲಿದ್ದಾರೆ.

ಈ ಸಂದರ್ಭದಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ್ ಖರ್ಗೆ, ರಾಹುಲ್ ಗಾಂಧಿ, ಸೋನಿಯಾ ಗಾಂಧಿ, ಕೆ.ಸಿ.ವೇಣುಗೋಪಾಲ್ ಅವ​ರನ್ನು ಭೇಟಿಯಾಗಿ ಮುಡಾ ಪ್ರಕರಣ ಸಂಬಂಧ ವಿವರಣೆ ನೀಡಲಿದ್ದಾರೆ.‌ ಕಾನೂನು ಹೋರಾಟ, ರಾಜಕೀಯ ಹೋರಾಟದ ಬಗ್ಗೆ ಚರ್ಚೆ ನಡೆಸಲಿದ್ದಾರೆ.

ಈಗಾಗಲೇ ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿರುವ ರಾಜ್ಯಪಾಲರ ನಡೆ ರಾಜಕೀಯ ಪ್ರೇರಿತ. ಕೇಂದ್ರ ಸರ್ಕಾರ ರಾಜ್ಯಪಾಲರ ಮೂಲಕ ಸರ್ಕಾರ ಪತನಕ್ಕೆ ಯತ್ನಿಸುತ್ತಿದೆ ಎಂದು ಎಂದು ಸಿದ್ದರಾಮಯ್ಯ ಆರೋಪಿಸಿದ್ದಾರೆ. ಈಗಾಗಲೇ ಹೈಕಮಾಂಡ್ ನಾಯಕರು ದೂರವಾಣಿ ಕರೆ ಮಾಡಿ ಸಿಎಂ ಸಿದ್ದರಾಮಯ್ಯಗೆ ಬೆಂಬಲ ವ್ಯಕ್ತಪಡಿಸಿದ್ದಾರೆ.

ಈಗಾಗಲೇ ವಿಶೇಷ ಸಚಿವ ಸಂಪುಟ ಸಭೆಯಲ್ಲಿ ಸಂಪುಟ ಸಚಿವರು, ಪಕ್ಷ ಸಿಎಂ ಬೆನ್ನಿಗೆ ನಿಲ್ಲುವುದಾಗಿ ಅಭಯ ನೀಡಿದೆ. ಯಾವುದೇ ಕಾರಣಕ್ಕೂ ರಾಜೀನಾಮೆ ನೀಡುವುದಿಲ್ಲ ಎಂದು ಸಿದ್ದರಾಮಯ್ಯ ಈಗಾಗಲೇ ಸ್ಪಷ್ಟಪಡಿಸಿದ್ದಾರೆ. ದೆಹಲಿಗೆ ತೆರಳುವ ಮುನ್ನ ಆಗಸ್ಟ್ 22ರಂದು ಶಾಸಕಾಂಗ ಪಕ್ಷದ ಸಭೆ ಕರೆದಿದ್ದು, ಸಭೆಯಲ್ಲಿ ಎಲ್ಲಾ ಶಾಸಕರು ತಮ್ಮ ಬೆಂಬಲಕ್ಕಿರುವಂತೆ ಮನವಿ ಮಾಡಲಿದ್ದಾರೆ.

ಇದನ್ನೂ ಓದಿ: ಆಗಸ್ಟ್‌ 22ರಂದು ತುರ್ತು ಶಾಸಕಾಂಗ ಸಭೆ ಕರೆದ ಸಿಎಂ ಸಿದ್ದರಾಮಯ್ಯ - Congress Legislative Party Meeting

ETV Bharat Logo

Copyright © 2025 Ushodaya Enterprises Pvt. Ltd., All Rights Reserved.