ETV Bharat / state

ಚಾಮುಂಡೇಶ್ವರಿ ಸನ್ನಿಧಿಯಲ್ಲಿ ಗುಣಮಟ್ಟದ ವ್ಯವಸ್ಥೆ ಕಲ್ಪಿಸದಿದ್ದರೆ ಮುಲಾಜಿಲ್ಲದೆ ಕ್ರಮ: ಸಿಎಂ ಎಚ್ಚರಿಕೆ - CM VISITS CHAMUNDI HILL

author img

By ETV Bharat Karnataka Team

Published : Sep 3, 2024, 1:39 PM IST

ವಾಹನ ನಿಲುಗಡೆಗೆ ಸುಸಜ್ಜಿತ ವ್ಯವಸ್ಥೆ ಸೇರಿದಂತೆ ಚಾಮುಂಡೇಶ್ವರಿ ತಾಯಿ ಸನ್ನಿಧಿಯಲ್ಲಿ ಗುಣಮಟ್ಟದ ವ್ಯವಸ್ಥೆ ಕಲ್ಪಿಸಬೇಕು. ಸಮಯಕ್ಕೆ ಸರಿಯಾಗಿ ಕೆಲಸ ಮಾಡದಿದ್ದರೆ ಸಂಬಂಧಪಟ್ಟವರ ಮೇಲೆ ನಾನು ಮುಲಾಜಿಲ್ಲದೆ ಕ್ರಮ ತೆಗೆದುಕೊಳ್ಳುತ್ತೇನೆ ಎಂದು ಸಿಎಂ ಸಿದ್ದರಾಮಯ್ಯ ಎಚ್ಚರಿಕೆ ನೀಡಿದರು.

CM Siddaramaiah's advice to provide quality facilities in Chamundi Hill
ಚಾಮುಂಡಿ ಸನ್ನಿಧಿಯಲ್ಲಿ ಸಿಎಂ ಸಿದ್ದರಾಮಯ್ಯ (ETV Bharat)

ಮೈಸೂರು: ಚಾಮುಂಡಿ ತಾಯಿ ಸನ್ನಿಧಿಯಲ್ಲಿ ಗುಣಮಟ್ಟದ ವ್ಯವಸ್ಥೆ ಕಲ್ಪಿಸದಿದ್ದರೆ ಸಂಬಂಧಪಟ್ಟವರ ಮೇಲೆ ಸೂಕ್ತ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಸಿಎಂ ಸಿದ್ದರಾಮಯ್ಯ ಖಡಕ್​ ಎಚ್ಚರಿಕೆ ನೀಡಿದರು.

ಇಂದು ಶ್ರೀ ಚಾಮುಂಡೇಶ್ವರಿ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರದ ಮೊದಲ ಸಭೆಯನ್ನು ತಾಯಿ ಸನ್ನಿಧಿಯಲ್ಲೇ ನಡೆಸಿ ಪ್ರಾಸ್ತಾವಿಕವಾಗಿ ಮಾತನಾಡಿದ ಅವರು, ಹಿಂದೆಯೂ ಸಮಿತಿ ಇತ್ತು. ಆದರೆ, ಪ್ರಾಧಿಕಾರ ರಚನೆಯಿಂದಾಗಿ ಅಭಿವೃದ್ಧಿಗೆ ಹೆಚ್ಚಿನ ಅಧಿಕಾರ ಮತ್ತು ಅವಕಾಶ ಒದಗಿದಂತಾಗಿದೆ ಎಂದರು.

ಇಲ್ಲಿಗೆ ಬರುವ ಭಕ್ತರಿಗೆ ಹೆಚ್ಚಿನ ಮತ್ತು ಉನ್ನತ ಮಟ್ಟದ ಆರೋಗ್ಯಕರ ಸವಲತ್ತು ಹಾಗೂ ಸೌಲಭ್ಯಗಳನ್ನು ಒದಗಿಸುವುದು ನಮ್ಮ ಗುರಿಯಾಗಿದೆ. ಶ್ರೀ ಕ್ಷೇತ್ರ ಹಾಗೂ ದೇವಸ್ಥಾನದ ಸಂಪ್ರದಾಯ ಮತ್ತು ಚರಿತ್ರೆ, ಘನತೆಯನ್ನು ಕಾಪಾಡುವ ಜೊತೆಗೆ ಉನ್ನತೀಕರಿಸಬೇಕು ಎಂದು ಸೂಚಿಸಿದರು.

ಪ್ರಾಧಿಕಾರ ವ್ಯವಸ್ಥಿತವಾಗಿ ನಡೆಯಬೇಕು. ಕಾಲ ಕಾಲಕ್ಕೆ ಸಭೆಗಳು ನಡೆದು ಹೆಚ್ಚಿನ ಶ್ರಮ ಶುಚಿತ್ವಕ್ಕೆ ಹಾಕಬೇಕು. ಕಸವನ್ನು ಆಗ್ಗಿಂದಾಗ್ಗೆ ತೆರವುಗೊಳಿಸಬೇಕು. ವಾಹನಗಳ ಸಂಖ್ಯೆಯೂ ಹೆಚ್ಚಾಗಿದೆ. ವಾಹನ ನಿಲುಗಡೆಗೆ ಇನ್ನಷ್ಟು ಸುಸಜ್ಜಿತ ವ್ಯವಸ್ಥೆ ಕಲ್ಪಿಸಬೇಕಿದೆ. ಶ್ರೀ ಕ್ಷೇತ್ರದ ಅಭಿವೃದ್ಧಿಗೆ ಹಣಕ್ಕೆ ತೊಂದರೆ ಇಲ್ಲ. ಕೇಳಿದಷ್ಟು ಹಣವನ್ನು ಕೇಳಿದಾಗಲೆಲ್ಲ ಒದಗಿಸಲಾಗುತ್ತಿದ್ದರೂ ಕೆಲಸಗಳು ಮಾತ್ರ ನಿರೀಕ್ಷಿತ ವೇಗದಲ್ಲಿ ನಡೆಯುತ್ತಿಲ್ಲ. ಇದನ್ನು ನಾನು ಸಹಿಸಲ್ಲ. ಸಮಯಕ್ಕೆ ಸರಿಯಾಗಿ ಕೆಲಸ ಮಾಡದಿದ್ದರೆ ನಾನು ಮುಲಾಜಿಲ್ಲದೆ ಕ್ರಮ ತೆಗೆದುಕೊಳ್ಳುತ್ತೇನೆ ಎಂದರು.

ಚಾಮುಂಡಿ ಸನ್ನಿಧಿಯಲ್ಲೇ ಶ್ರೀ ಚಾಮುಂಡೇಶ್ವರಿ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರದ ಮೊದಲ ಸಭೆ ನಡೆಸಿದ ಸಿಎಂ ಸಿದ್ದರಾಮಯ್ಯ. (ETV Bharat)

ಚಾಮುಂಡಿ ದೇವಿ ಬಗ್ಗೆ ಕೋಟ್ಯಂತರ ಮಂದಿಗೆ ಅಪಾರ ಭಕ್ತಿ, ಶ್ರದ್ಧೆ, ನಂಬಿಕೆ ಇದೆ. ದೇಶದ ಮೂಲೆ ಮೂಲೆಗಳಿಂದ ಭಕ್ತರು ಬರುತ್ತಾರೆ. ಇವರೆಲ್ಲರಿಗೂ ಅಗತ್ಯ ಸವಲತ್ತುಗಳನ್ನು ಒದಗಿಸಬೇಕು. ಸನ್ನಿಧಿಯಲ್ಲಿ ಗುಣಮಟ್ಟದ ವ್ಯವಸ್ಥೆ ಕಲ್ಪಿಸದಿದ್ದರೆ ಸಂಬಂಧಪಟ್ಟವರ ಮೇಲೆ ಸೂಕ್ತ ಕ್ರಮ ಕೈಗೊಳ್ಳುವುದು ಖಚಿತ ಎಂದು ಎಚ್ಚರಿಸಿದರು.

ಕೊಪ್ಪಳ ಹುಲಿಗೆಮ್ಮ ದೇವಸ್ಥಾನ ಮತ್ತು ಘಾಟಿ ಸುಬ್ರಮಣ್ಯ ದೇವಸ್ಥಾನಗಳ ಹೆಚ್ಚಿನ ಅಭಿವೃದ್ಧಿಗಾಗಿ ಪ್ರಾಧಿಕಾರ ರಚನೆ ಬಗ್ಗೆಯೂ ಹೆಚ್ಚಿನ ಬೇಡಿಕೆ ಇದೆ. ಈ ಬಗ್ಗೆಯೂ ಮುಂದುವರೆಯುವ ಅಗತ್ಯವಿದೆ ಇದೆ ಎಂದು ಸಿಎಂ ಇದೇ ಹೇಳಿದರು.

ಜಿಲ್ಲಾ ಉಸ್ತುವಾರಿ ಸಚಿವ ಹೆಚ್.ಸಿ. ಮಹದೇವಪ್ಪ, ಪ್ರವಾಸೋದ್ಯಮ ಸಚಿವ ಹೆಚ್. ಕೆ. ಪಾಟೀಲ್, ಪಶು ಸಂಗೋಪನಾ ಸಚಿವ ಕೆ.ವೆಂಕಟೇಶ್, ಮುಜರಾಯಿ ಸಚಿವ ರಾಮಲಿಂಗಾರೆಡ್ಡಿ, ಶಾಸಕರಾದ ಯತೀಂದ್ರ ಸಿದ್ದರಾಮಯ್ಯ, ರವಿಶಂಕರ್, ಡಾ.ತಿಮ್ಮಯ್ಯ, ಹರೀಶ್ ಗೌಡ, ಜಿ.ಟಿ. ದೇವೇಗೌಡ, ವಿವೇಕಾನಂದ ಸೇರಿ ಹಲವು ಗಣ್ಯರು ಉಪಸ್ಥಿತರಿದ್ದರು.

ಇದನ್ನೂ ಓದಿ: ಆತುರದ ಹೇಳಿಕೆ: ಸಿದ್ದರಾಮಯ್ಯ ಕ್ಷಮೆಯಾಚಿಸಿದ ಪ್ರತಿಪಕ್ಷ ಉಪ ನಾಯಕ ಬೆಲ್ಲದ್ - ARVIND BELLAD APOLOGY LETTER

ETV Bharat Logo

Copyright © 2024 Ushodaya Enterprises Pvt. Ltd., All Rights Reserved.