ಬೆಂಗಳೂರು: ಸಿಎಂ ಸಿದ್ದರಾಮಯ್ಯ ಅವರು ತವರು ಜಿಲ್ಲೆಯಾದ ಮೈಸೂರಿಗೆ ಬಜೆಟ್ನಲ್ಲಿ ಭರ್ಜರಿ ಗಿಫ್ಟ್ ನೀಡಿದ್ದಾರೆ. ನಗರದಲ್ಲಿರುವ 40 ಹಾಸಿಗೆ ಸಾಮರ್ಥ್ಯದ Nephro-Urology ಆಸ್ಪತ್ರೆಯನ್ನು 100 ಹಾಸಿಗೆಗೆ ಉನ್ನತೀಕರಿಸಲಾಗಿದೆ. ಕೆ.ಆರ್ ಆಸ್ಪತ್ರೆ ಆವರಣದಲ್ಲಿ 75 ಕೋಟಿ ವೆಚ್ಚದಲ್ಲಿ ಸುಸಜ್ಜಿತ ಹೊರ ರೋಗಿ ವಿಭಾಗದ ಕಟ್ಟಡ ನಿರ್ಮಾಣ ಮಾಡಲಾಗುತ್ತದೆ ಎಂದು ಘೋಷಿಸಿದ್ದಾರೆ.
ಜೊತೆಗೆ 56 ಕೋಟಿ ರೂಪಾಯಿ ವೆಚ್ಚದಲ್ಲಿ ಮೈಸೂರಿನ ಮಹಾರಾಣಿ ಮಹಿಳಾ ವಿಜ್ಞಾನ ಕಾಲೇಜು ಕಟ್ಟಡ, 116 ಕೋಟಿ ರೂ ವೆಚ್ಚದಲ್ಲಿ ಮಹಾರಾಣಿ ಕಲಾ ಮತ್ತು ವಾಣಿಜ್ಯ ಕಾಲೇಜು ಹಾಸ್ಟೆಲ್ ನಿರ್ಮಾಣಕ್ಕೆ ಅನುದಾನ ಮೀಸಲಿಟ್ಟಿದ್ದಾರೆ.
ಇದನ್ನೂ ಓದಿ: ಸಿಎಂ ಸಿದ್ದರಾಮಯ್ಯರಿಂದ ಆದಾಯ ಕೊರತೆಯ ಬಜೆಟ್ ಮಂಡನೆ: 1,05,246 ಕೋಟಿ ರೂ. ಸಾಲದ ಮೊರೆ