ETV Bharat / state

ಸಿ ಟಿ ರವಿ ಕೀಳುಭಾಷೆ ಬಳಸಿದ್ದನ್ನು ಸ್ಥಳದಲ್ಲಿದ್ದವರು ಕೇಳಿಸಿಕೊಂಡಿದ್ದಾರೆ: ಸಿಎಂ ಸಿದ್ದರಾಮಯ್ಯ - MLC CT RAVI ARRESTED

ವಿಧಾನ ಪರಿಷತ್​ ಸದಸ್ಯ ಸಿ ಟಿ ರವಿ ಬಂಧನ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ ಮಂಡ್ಯದಲ್ಲಿ ಪ್ರತಿಕ್ರಿಯೆ ನೀಡಿದ್ದಾರೆ.

CM REACTION ON CT RAVI ARRESTED
ಸಿಎಂ ಸಿದ್ದರಾಮಯ್ಯ (ETV Bharat)
author img

By ETV Bharat Karnataka Team

Published : Dec 20, 2024, 2:32 PM IST

Updated : Dec 20, 2024, 2:42 PM IST

ಮಂಡ್ಯ: ಸಾಮಾನ್ಯವಾಗಿ ಯಾವ ಹೆಣ್ಣುಮಕ್ಕಳು ಇಂತಹ ಆರೋಪಗಳ ಬಗ್ಗೆ ಸುಳ್ಳು ದೂರು ಕೊಡಲು ಸಾಧ್ಯವಿಲ್ಲ. ಅವಾಚ್ಯ ಪದ ಬಳಕೆ ಆರೋಪ ಸುಳ್ಳಾಗಿದ್ದರೆ ಸಿ ಟಿ ರವಿ ಅವರ ಬಂಧನ ಏಕಾಯಿತು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ.

ಸಿ ಟಿ ರವಿ ಬಂಧನ ಖಂಡಿಸಿ ಇಂದು ಬಿಜೆಪಿ ನಡೆಸುತ್ತಿರುವ ಪ್ರತಿಭಟನೆ ಬಗ್ಗೆ ಮಾಧ್ಯಮದವರ ಪ್ರಶ್ನೆಗೆ ನಗರದಲ್ಲಿಂದು ಪ್ರತಿಕ್ರಿಯೆ ನೀಡಿದ ಅವರು, ಹೆಣ್ಣುಮಕ್ಕಳಿಗೆ ಇಷ್ಟು ಕೆಟ್ಟ ಭಾಷೆಯಲ್ಲಿ ಅವಹೇಳನಕಾರಿಯಾಗಿ ಮಾತನಾಡಿರುವುದನ್ನು ಬಿಜೆಪಿಯವರು ಬೆಂಬಲಿಸುತ್ತಿದ್ದಾರೆ. ಸಿ ಟಿ ರವಿ ಕೀಳುಭಾಷೆ ಬಳಸಿದ್ದನ್ನು ಸ್ಥಳದಲ್ಲಿದ್ದವರು ಕೇಳಿಸಿಕೊಂಡಿದ್ದಾರೆ. ಅಷ್ಟು ಕೆಟ್ಟ ಮಾತು ಆಡಿರುವುದಕ್ಕೆ ಸಾಕ್ಷಿಯಾಗಿ ಆಡಿಯೋ ಮತ್ತು ವಿಡಿಯೋ ಇದೆ ಅಂತಲೂ ಹೇಳಿದ್ದಾರೆ. ಆದರೆ, ನಾನು ಅದನ್ನು ಈವರೆಗೂ ನೋಡಿಲ್ಲ. ರವಿ ಹೇಳಿದ್ದು ಸುಳ್ಳಾದರೆ, ಅವರ ಬಂಧನವೇಕಾಯಿತು? ಸಾಮಾನ್ಯವಾಗಿ ಇಂತಹ ಆರೋಪಗಳ ಬಗ್ಗೆ ಹೆಣ್ಣುಮಕ್ಕಳು ಸುಳ್ಳು ದೂರು ಕೊಡುವುದಿಲ್ಲ. ಸಿ ಟಿ ರವಿ ಅವಾಚ್ಯ ಪದ ಏಕೆ ಬಳಸಿದರೆಂದು ನನಗೆ ತಿಳಿದಿಲ್ಲ. ಇದೊಂದು ಕ್ರಿಮಿನಲ್ ಅಪರಾಧ ಎಂದರು.

ಪದ ಬಳಕೆಯಾಗಿರುವುದು ಸತ್ಯ: ಸಭಾಪತಿ ಬಸವರಾಜ ಹೊರಟ್ಟಿಯವರು, ಸಿ ಟಿ ರವಿ ಅವರು ಪ್ರೆಸ್ಟ್ರೇಷನ್ (ಹತಾಶ) ಎಂಬ ಪದ ಬಳಸಿದ್ದಾರೆಂದು ತಿಳಿಸಿರುವ ಬಗ್ಗೆ ಮಾಧ್ಯಮದವರಿಗೆ ಪ್ರತಿಕ್ರಿಯೆ ನೀಡಿದ ಮುಖ್ಯಮಂತ್ರಿ, ಸಿ ಟಿ ರವಿ ತಾನು ‘ಪ್ರೆಸ್ಟ್ರೇಷನ್’ ಪದ ಬಳಸಿರುವುದಾಗಿ ತಿಳಿಸಿದ್ದಾರೆ. ಇದು after thought ಮಾತು. ಈಗ ಆ ರೀತಿ ಹೇಳುತ್ತಿದ್ದಾರೆ. ಆದರೆ ಅವಾಚ್ಯ ಪದ ಬಳಸಿರುವುದು ನಿಜವಾಗಿರುವುದಕ್ಕೇ ಸಚಿವರು ದೂರು ನೀಡಿದ್ದಾರೆ ಎಂದರು.

ರವಿ ಆಡಿದ ಕೆಟ್ಟ ಮಾತನ್ನು ಕೇಳಿರುವುದಾಗಿ ಇತರ ಸದಸ್ಯರೂ ಹೇಳಿದ್ದಾರೆ. ಸಭಾಪತಿಯವರು ಪೀಠದಿಂದ ಹೊರನಡೆದ ನಂತರ ನಡೆದಿರುವ ಘಟನೆ ಬಗ್ಗೆ ಆಡಿಯೋ ಮತ್ತು ವಿಡಿಯೋ ಇದೆ ಎಂದೂ ಹಲವರು ಹೇಳುತ್ತಿದ್ದು, ಪದ ಬಳಕೆಯಾಗಿರುವುದು ಸತ್ಯ ಎಂದರು.

ಕಾನೂನಿನ ಕ್ರಮ ಜರುಗಿಸಲೇಬೇಕಾಗುತ್ತದೆ: ಸಿಟಿ ರವಿ ತನಗೆ ಜೀವ ಬೆದರಿಕೆಯಿದ್ದು, ಅದಕ್ಕೆ ಸರ್ಕಾರವೇ ಹೊಣೆ ಎಂದು ಹೇಳಿರುವ ಬಗ್ಗೆ ಪತ್ರಕರ್ತರ ಪ್ರಶ್ನೆಗೆ ಉತ್ತರಿಸಿದ ಸಿಎಂ, ಎಫ್​ಐಆರ್​ ದಾಖಲಾದ ಮೇಲೆ ಪೊಲೀಸರು ತನಿಖೆ ನಡೆಸಲೇಬೇಕಾಗುತ್ತದೆ. ಕಾನೂನಿನ ಕ್ರಮ ಮಾಡಲೇಬೇಕಾಗುತ್ತದೆ. ಸಿ ಟಿ ರವಿ ವಿರುದ್ಧ ಆಕ್ರೋಶಗೊಂಡಿದ್ದ ಜನರು ಬೆಳಗಾವಿಯಲ್ಲಿದ್ದ ಕಾರಣದಿಂದ ಅವರನ್ನು ರಕ್ಷಿಸಲು ಖಾನಾಪುರಕ್ಕೆ ಕರೆತರಲಾಗಿತ್ತು ಎಂದರು.

ಮಂಡ್ಯ ಅಪ್ಪಟ ಕನ್ನಡದ ನೆಲ: ಮಂಡ್ಯದಲ್ಲಿ ನಡೆಯುತ್ತಿರುವ 87ನೇ ಅಖಿಲ ಭಾರತ ಸಾಹಿತ್ಯ ಸಮ್ಮೆಳನದ ಉದ್ಘಾಟನಾ ಸಮಾರಂಭದಲ್ಲಿ ಭಾಗವಹಿಸಲು ಆಗಮಿಸಿದ್ದೇನೆ. ಅಪ್ಪಟ ಕನ್ನಡ ನೆಲ ಮಂಡ್ಯ. ಮಂಡ್ಯಕ್ಕೆ ಬರುವ ಪರಭಾಷಿಕರು ಸಹ ಕನ್ನಡವನ್ನು ಕಲಿಯುತ್ತಾರೆ. ಕನ್ನಡ ನಾಡಿನ ಭಾಷೆ, ರಾಜ್ಯಭಾಷೆ ಆಗಿದೆ ಎಂದರು.

ಇದನ್ನೂ ಓದಿ: ಲಕ್ಷ್ಮೀ ಹೆಬ್ಬಾಳ್ಕರ್​ ವಿರುದ್ಧ ಅವಾಚ್ಯ ಪದ ಬಳಕೆ ಮಾಡಿದ ಯಾವುದೇ ರೆಕಾರ್ಡ್ ಲಭ್ಯವಾಗಿಲ್ಲ: ಸಭಾಪತಿ ಹೊರಟ್ಟಿ - CT RAVI AND LAXMI HEBBALKAR ROW

Last Updated : Dec 20, 2024, 2:42 PM IST
ETV Bharat Logo

Copyright © 2025 Ushodaya Enterprises Pvt. Ltd., All Rights Reserved.