ETV Bharat / state

ಮೊರಾರ್ಜಿ ವಸತಿ ಶಾಲೆಗೆ ಸಿಎಂ ದಿಢೀರ್ ಭೇಟಿ: ಮಕ್ಕಳಿಗೆ  ’ಮೇಷ್ಟ್ರು’ರಾಮಯ್ಯ  ವ್ಯಾಕರಣ ಪಾಠ - CM surprise visit to School

author img

By ETV Bharat Karnataka Team

Published : Jul 5, 2024, 6:47 PM IST

Updated : Jul 5, 2024, 7:03 PM IST

ಚಾಮರಾಜಪೇಟೆಯ ಮೊರಾರ್ಜಿ ದೇಸಾಯಿ ವಸತಿ ಶಾಲೆಗೆ ಸಿಎಂ ಸಿದ್ದರಾಮಯ್ಯ ದಿಢೀರ್​ ಭೇಟಿ ನೀಡಿ ಮಕ್ಕಳಿಗೆ ವ್ಯಾಕರಣ ಪಾಠ ಮಾಡಿದರು.

ಮೊರಾರ್ಜಿ ದೇಸಾಯಿ ವಸತಿ ಶಾಲೆಗೆ ಸಿಎಂ ದಿಢೀರ್ ಭೇಟಿ
ಮೊರಾರ್ಜಿ ದೇಸಾಯಿ ವಸತಿ ಶಾಲೆಗೆ ಸಿಎಂ ದಿಢೀರ್ ಭೇಟಿ (ETV Bharat)

ಬೆಂಗಳೂರು: ಚಾಮರಾಜಪೇಟೆಯ ಮೊರಾರ್ಜಿ ದೇಸಾಯಿ ವಸತಿ ಶಾಲೆಗೆ ದಿಢೀರ್​ ಭೇಟಿ ನೀಡಿದ ಮುಖ್ಯಮಂತ್ರಿ, ಮಕ್ಕಳಿಗೆ ವ್ಯಾಕರಣ ಪಾಠ ಮಾಡಿದರು.

ವಿಧಾನಸೌಧದಲ್ಲಿ ಅಧಿಕಾರಿಗಳ ಜೊತೆ SCSP/TSP ಸಭೆಯ ಬಳಿಕ ನೇರವಾಗಿ ಸಿಎಂ ಚಾಮರಾಜಪೇಟೆಯ ಮೊರಾರ್ಜಿ ದೇಸಾಯಿ ವಸತಿ ಶಾಲೆಗೆ ದಿಢೀರ್ ಭೇಟಿ ನೀಡಿ ಪರಿಶೀಲನೆ ನಡೆಸಿದರು‌. ಮೊದಲಿಗೆ 10ನೇ ತರಗತಿಗೆ ಸಿಎಂ ಭೇಟಿ ನೀಡಿ, ವಿದ್ಯಾರ್ಥಿಗಳೊಂದಿಗೆ ಸಮಾಲೋಚನೆ ನಡೆಸಿದರು. ಪಠ್ಯ, ಬಾತ್​ರೂಂ ಕಿಟ್​ಗಳ ಸಮರ್ಪಕ ವಿತರಣೆ ಆಗುತ್ತಿದೆಯಾ ಎಂಬ ಪ್ರಶ್ನೆಗೆ ವಿದ್ಯಾರ್ಥಿಗಳು ಆಗುತ್ತಿದೆ ಎಂದು ಉತ್ತರಿಸಿದರು. ಜತೆಗೆ ಊಟದ ವ್ಯವಸ್ಥೆ ಬಗ್ಗೆ ವಿದ್ಯಾರ್ಥಿಗಳಿಂದ ಕೇಳಿ ತಿಳಿದರು.

ಕಳೆದ ಬಾರಿ SSLCಯಲ್ಲಿ ಎಲ್ಲರೂ ಡಿಸ್ಟಿಂಕ್ಷನ್​, ಒಬ್ಬ ವಿದ್ಯಾರ್ಥಿನಿ ಮಾತ್ರ ದ್ವಿತೀಯ ಸ್ಥಾನ ಬಂದದ್ದಾಗಿ ಶಿಕ್ಷಕರು ವಿವರಣೆ ನೀಡಿದರು. ನಮ್ಮ ಆರೋಗ್ಯ ತಪಾಸಣೆಗೆ ನಿಯಮಿತವಾಗಿ ವೈದ್ಯರು ಬರುತ್ತಿದ್ದಾರೆ ಎಂದು ಸಿಎಂಗೆ ವಿದ್ಯಾರ್ಥಿಗಳು ತಿಳಿಸಿದರು. ಈ ವೇಳೆ, ಸಮಾಜ ಕಲ್ಯಾಣ ಸಚಿವ ಹೆಚ್.ಸಿ. ಮಹದೇವಪ್ಪ, ಪರಿಷತ್ ಸದಸ್ಯ ಪ್ರಕಾಶ್ ರಾಥೋಡ್ ಸೇರಿ ಇತರರು ಉಪಸ್ಥಿತರಿದ್ದರು.‌

'ಸಿಎಂ' ರಿಂದ ವ್ಯಾಕರಣ ಪಾಠ: ಸಂಧಿ ಎಂದರೇನು? ಸಂಧಿಗಳಲ್ಲಿ ಎಷ್ಟು ವಿಧ? ಕನ್ನಡ ಅಕ್ಷರ ಮಾಲೆಯಲ್ಲಿ ಎಷ್ಟು ಅಕ್ಷರಗಳಿವೆ? ಅವಲ್ಲಿ ಯೋಗವಾಹಗಳು ಎಷ್ಟು? ಸ್ವರ ಎಂದರೇನು? ವ್ಯಂಜನಗಳು ಎಂದರೇನು? ಎಷ್ಟಿವೆ? ವರ್ಗೀಯ, ಅವರ್ಗೀಯ ವ್ಯಂಜನಗಳು ಎಷ್ಟಿವೆ? ಅಲ್ಪಪ್ರಾಣ, ಮಹಾಪ್ರಾಣ ಎಂದರೇನು? ಅಲ್ಪ ಪ್ರಾಣಕ್ಕೆ ಉದಾಹರಣೆ ಹೇಳಿ ಎನ್ನುವ ಪ್ರಶ್ನೆಗಳನ್ನು ಮಕ್ಕಳಿಗೆ ಕೇಳಿದ ಸಿಎಂ ಮಕ್ಕಳ ಉತ್ತರಗಳನ್ನು ತಿದ್ದಿ ಹೇಳಿದರು.

ಮೊರಾರ್ಜಿ ದೇಸಾಯಿ ಶಾಲೆಗಳನ್ನು ರಾಜ್ಯದಲ್ಲಿ ಯಾರು, ಯಾವಾಗ ಆರಂಭಿಸಿದರು ಎಂಬ ಸಿಎಂ ಪ್ರಶ್ನೆಗೆ ನೀವೇ ಆರಂಭಿಸಿದ್ದು ಎಂದು ಮಕ್ಕಳು ಉತ್ತರಿಸಿದರು. ನಂತರ ಮಕ್ಕಳಿಗೆ ಬಸವಣ್ಣನವರ ಮಹತ್ವ ತಿಳಿಸಿದ ಸಿಎಂ, ಬಸವಣ್ಣನವರು ಸಾಮಾಜಿಕ ಕ್ರಾಂತಿ ಮಾಡಿದ್ದು ಏಕೆ ಎಂದು ಕೇಳಿದರು. ಮನುಷ್ಯರ ನಡುವಿನ ತಾರತಮ್ಯ, ಜಾತಿ ವ್ಯವಸ್ಥೆ ವಿರೋಧಿಸಿ ಸಾಮಾಜಿಕ ಕ್ರಾಂತಿ ನಡೆಸಿದ ಬಸವಣ್ಣನವರು ಎಂದು ಸಿಎಂ ಮಕ್ಕಳಿಗೆ ತಿಳಿ ಹೇಳಿದರು.

ಇದನ್ನೂ ಓದಿ: ಸ್ಪರ್ಧಾತ್ಮಕ ಪರೀಕ್ಷೆ ಸಿದ್ದತೆ; ಎಸ್​ಸಿ/ಎಸ್​ಟಿ ವಿದ್ಯಾರ್ಥಿಗಳಿಗೆ ತಿಂಗಳಿಗೆ 15 ಸಾವಿರ ರೂ. ನೀಡಲು ತೀರ್ಮಾನ: ಸಿಎಂ ಘೋಷಣೆ - Rs 15000 Per Month to Student

Last Updated : Jul 5, 2024, 7:03 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.