ETV Bharat / state

ಅಪರಾಧಿಗಳಿಗೆ ಭಯ, ಜನಸಾಮಾನ್ಯರಿಗೆ ಭಯಮುಕ್ತ ವಾತಾವರಣ ನಿರ್ಮಿಸಿ: ಪೊಲೀಸರಿಗೆ ಸಿಎಂ‌ ಸೂಚನೆ - CM INAUGURATES NEW POLICE STATION

ಜನರ ಆಸ್ತಿಪಾಸ್ತಿ, ಮಾನ-ಪ್ರಾಣ ರಕ್ಷಿಸಿ ನೆಮ್ಮದಿಯ ಬದುಕಿಗೆ ಸುರಕ್ಷಿತ ವಾತಾವರಣ ಸೃಷ್ಟಿಸುವ ಜವಾಬ್ದಾರಿ ಪೊಲೀಸ್ ಇಲಾಖೆಯ ಮೇಲಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.

CM Siddramaiah says creat fearfree enviornment to common people
ಸಿಎಂ ಸಿದ್ದರಾಮಯ್ಯ (ETV Bharat)
author img

By ETV Bharat Karnataka Team

Published : 18 hours ago

ಬೆಂಗಳೂರು: ಅಪರಾಧಿಗಳಲ್ಲಿ ಭಯದ ವಾತಾವರಣ, ಜನ ಸಾಮಾನ್ಯರಲ್ಲಿ ಭಯಮುಕ್ತ ವಾತಾವರಣ ನಿರ್ಮಿಸಿ ಎಂದು ಪೊಲೀಸ್ ಅಧಿಕಾರಿಗಳು ಮತ್ತು ಸಿಬ್ಬಂದಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ ನೀಡಿದರು. ನಗರದಲ್ಲಿ ನೂತನವಾಗಿ ನಿರ್ಮಿಸಿರುವ ಚಾಮರಾಜಪೇಟೆ, ಕಬ್ಬನ್ ಪಾರ್ಕ್ ಮತ್ತು ಹೈಗ್ರೌಂಡ್ಸ್ ಪೊಲೀಸ್ ಠಾಣೆ, ಕಚೇರಿಗಳನ್ನು ಉದ್ಘಾಟಿಸಿದ ಬಳಿಕ ಪುಲಕೇಶಿ ನಗರದಲ್ಲಿ ನೂತನವಾಗಿ ನಿರ್ಮಿಸಿರುವ ಪೊಲೀಸ್ ವಸತಿ ಸಮುಚ್ಛಯಗಳ ಲೋಕಾರ್ಪಣೆ ಬಳಿಕ ಅವರು ಮಾತನಾಡಿದರು.

ರಾಜ್ಯದ ಜನಸಂಖ್ಯೆ 7 ಕೋಟಿ ದಾಟುತ್ತಿದೆ. ಜನರ ಆಸ್ತಿಪಾಸ್ತಿ, ಮಾನ-ಪ್ರಾಣ ರಕ್ಷಿಸುವ ಮೂಲಕ ಅವರ ನೆಮ್ಮದಿಯ ಬದುಕಿಗೆ ಸುರಕ್ಷಿತ ವಾತಾವರಣ ಸೃಷ್ಟಿಸುವ ಜವಾಬ್ದಾರಿ ಪೊಲೀಸ್ ಇಲಾಖೆಯ ಮೇಲಿದೆ. ಇದಕ್ಕಾಗಿ ಪೊಲೀಸ್ ಇಲಾಖೆ ಅಗತ್ಯವಾದ ಸವಲತ್ತು ಮತ್ತು ನೂತನ ಠಾಣೆಗಳನ್ನು ಒದಗಿಸಲು ಸರ್ಕಾರ ಸದಾ ಸಿದ್ಧವಿದೆ. ರಾಜ್ಯದಲ್ಲಿ ಅಪರಾಧ ಪ್ರಕರಣಗಳ ಪ್ರಮಾಣ ಕಡಿಮೆಯಾಗುತ್ತಿರುವುದು ನೆಮ್ಮದಿಯ ಸಂಗತಿ. ಆದರೆ, ಪೊಲೀಸರು ಚಾಪೆ ಕೆಳಗೆ ತೂರಿದರೆ ಅಪರಾಧಿಗಳು ರಂಗೋಲಿ ಕೆಳಗೆ ತೂರಿ ಕಾನೂನಿನಿಂದ ತಪ್ಪಿಸಿಕೊಳ್ಳುವ ಅವಕಾಶ ಸಿಗಬಾರದು. ಜನರಿಗೆ ಉದ್ಯೋಗ ಇಲ್ಲದಿರುವುದು, ಬದುಕಿಗೆ ಅವಕಾಶ ಇಲ್ಲದಿರುವಾಗ ಅಪರಾಧ ಜಗತ್ತಿನ ಕಡೆಗೆ ಆಕರ್ಷಿತರಾಗುತ್ತಾರೆ. ಶಾಂತಿ ಸುವ್ಯವಸ್ಥೆಯಿದ್ದಾಗ ಆ ರಾಜ್ಯದ ಅಭಿವೃದ್ಧಿಯ ವೇಗವೂ ಹೆಚ್ಚುತ್ತದೆ. ಹೀಗಾಗಿ ಜನಸ್ನೇಹಿ ಪೊಲೀಸ್ ವ್ಯವಸ್ಥೆಯನ್ನು ರೂಪಿಸಿ, ಠಾಣೆಗಳಿಗೆ ಬರುವವರನ್ನು ಉತ್ತಮ ರೀತಿಯಲ್ಲಿ ನಡೆಸಿಕೊಳ್ಳಬೇಕು ಎಂದು ಸಿಎಂ ಹೇಳಿದರು.

CM Siddramaiah says creat fearfree enviornment to common people
ಸಿಎಂ ಸಿದ್ದರಾಮಯ್ಯ (ETV Bharat)

ರಿಯಲ್ ಎಸ್ಟೇಟ್ ಮಾಫಿಯಾ ಜೊತೆ ಕೈ ಜೋಡಿಸಿದರೆ ಸಹಿಸಲ್ಲ : ಪೊಲೀಸರು ಯಾವುದೇ ಕಾರಣಕ್ಕೂ ರಿಯಲ್ ಎಸ್ಟೇಟ್‌ ಮಾಫಿಯಾ ಜೊತೆ ಕೈ ಜೋಡಿಸಬಾರದು. ಅಂಥಹ ಕೆಲಸ ಮಾಡಿದರೆ ಸರ್ಕಾರ ಸಹಿಸುವುದಿಲ್ಲ. ಪೊಲೀಸ್ ಇಲಾಖೆಯಲ್ಲಿ ಕಾನ್ಸ್‌ಟೇಬಲ್‌ಗಳು, ಎಸ್ಐಗಳು, ಇನ್ಸ್‌ಪೆಕ್ಟರ್​​ಗಳ ಮೇಲೆ ಹೆಚ್ಚಿನ ಕೆಲಸದ ಒತ್ತಡವಿರುತ್ತದೆ. ಅವರ ಯೋಗಕ್ಷೇಮ ಕೂಡ ನಮ್ಮ ಜವಾಬ್ದಾರಿ. ಪೊಲೀಸ್ ಸಿಬ್ಬಂದಿಯ ಗೃಹ ಯೋಜನೆಯನ್ನು ಸರ್ಕಾರ ಮುಂದುವರೆಸುತ್ತದೆ ಎಂದು ಇದೇ ಸಂದರ್ಭದಲ್ಲಿ ಮುಖ್ಯಮಂತ್ರಿ ಭರವಸೆ ನೀಡಿದರು.

ಇದನ್ನೂ ಓದಿ:'ಹುಟ್ಟೂರಿನಲ್ಲಿ ನಾನು ಓದಿದ ಕಿರಿಯ ಪ್ರಾಥಮಿಕ ಶಾಲೆಗೆ ಪುನರ್ವಸತಿ ಪ್ಯಾಕೇಜ್​ನ ಅರ್ಧ ಹಣ ನೀಡಲಿ': ಮುಖ್ಯವಾಹಿನಿಗೆ ಬರಲು ಸಿದ್ಧರಾದ ನಕ್ಸಲರು

ETV Bharat Logo

Copyright © 2025 Ushodaya Enterprises Pvt. Ltd., All Rights Reserved.