ETV Bharat / state

ಸಂವಿಧಾನ ಬದಲಾವಣೆಗೆ ಮುಂದಾದರೆ ಪರಿಸ್ಥಿತಿ ನೆಟ್ಟಗಿರಲ್ಲ, ಬಿಜೆಪಿಗೆ ಎಚ್ಚರಿಸಿದ: ಸಿಎಂ - Siddaramayya

author img

By ETV Bharat Karnataka Team

Published : Apr 3, 2024, 6:05 AM IST

ಬಿಜೆಪಿ ನಮ್ಮ ಸಂವಿಧಾನ ಬದಲಾವಣೆಯ ಅಜೆಂಡಾ ಇಟ್ಟುಕೊಂಡಿದೆ. ಸಂವಿಧಾನ ಬದಲಾವಣೆಗೆ ಮುಂದಾದರೆ ಪರಿಸ್ಥಿತಿ ನೆಟ್ಟಗಿರಲ್ಲ ಎಂದು ಬಿಜೆಪಿಗೆ ನೇರವಾಗಿ ಸಿಎಂ ಸಿದ್ದರಾಮಯ್ಯ ಆಕ್ರೋಶ ಹೊರಹಾಕಿದ್ದಾರೆ.

ಸಿಎಂ ಸಿದ್ದರಾಮಯ್ಯ
ಸಿಎಂ ಸಿದ್ದರಾಮಯ್ಯ
ನಮ್ಮ ಸಂವಿಧಾನ ಬದಲಾವಣೆಗೆ ಮುಂದಾದರೆ ಪರಿಸ್ಥಿತಿ ನೆಟ್ಟಗಿರಲ್ಲ

ಮೈಸೂರು : ನಮ್ಮ ಸಂವಿಧಾನ ಬದಲಾವಣೆಗೆ ಮುಂದಾದರೆ ಪರಿಸ್ಥಿತಿ ನೆಟ್ಟಗಿರಲ್ಲ. ನಮ್ಮ ಸಂವಿಧಾನದ ಸ್ವರೂಪ ಬದಲಾಯಿಸಿ ದೇಶದ ದುಡಿಯುವ ವರ್ಗಗಳಿಗೆ ವಂಚಿಸಿದರೆ ದೇಶದ ಪರಿಸ್ಥಿತಿ ಬಿಗಡಾಯಿಸುತ್ತದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಬಿಜೆಪಿಗೆ ನೇರ ಎಚ್ಚರಿಕೆ ನೀಡಿದರು.

ಮಂಗಳವಾರ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ 45 ಕ್ಕೂ ಹೆಚ್ಚು ಮಂದಿ ಹೋಬಳಿ ಮಟ್ಟದ ಮುಖಂಡರುಗಳನ್ನು ಹಾಗೂ ಮಾಜಿ ಕೇಂದ್ರ ಸಚಿವ ಶ್ರೀನಿವಾಸ್ ಪ್ರಸಾದ್ ಅವರ ಆತ್ಮೀಯರು ಮತ್ತು ಸಂಬಂಧಿಗಳನ್ನು ಕಾಂಗ್ರೆಸ್ ಪಕ್ಷಕ್ಕೆ ಬರಮಾಡಿಕೊಂಡ ಬಳಿಕ ಸಿಎಂ ಮಾತನಾಡಿದರು. ನಾನು ಮುಖ್ಯಮಂತ್ರಿ ಆಗಿರುವುದಕ್ಕೆ, ನರೇಂದ್ರ ಮೋದಿ ಪ್ರಧಾನಮಂತ್ರಿ ಆಗಿರುವುದಕ್ಕೆ ಸಂವಿಧಾನ ಕಾರಣ ಎಂದು ಸಿದ್ದರಾಮಯ್ಯ ಪ್ರತಿಪಾದಿಸಿದರು.

ಬಿಜೆಪಿ ನಮ್ಮ ಈ ಸಂವಿಧಾನ ಬದಲಾವಣೆಯ ಅಜೆಂಡಾ ಇಟ್ಟುಕೊಂಡಿದೆ. ಈ ಸಂವಿಧಾನ ಬದಲಾದರೆ ದೇಶದ ದಲಿತರು, ಶೂದ್ರರು, ಮಹಿಳೆಯರು ಮತ್ತು ಶ್ರಮಿಕ ವರ್ಗಗಳಿಗೆ ಉಳಿಗಾಲವಿಲ್ಲ. ಆದ್ದರಿಂದ ನಾವೆಲ್ಲ ಉಳಿಯಬೇಕಾದರೆ ಸಂವಿಧಾನ ಉಳಿಯಬೇಕು. ಸಂವಿಧಾನ ಉಳಿಯಬೇಕು ಎಂದರೆ ಬಿಜೆಪಿ ಸೋಲಬೇಕು ಎನ್ನುವ ಪಣ ತೊಡಬೇಕು. ಮೋದಿ ಅವರ ಅವಧಿಯಲ್ಲಿ ಇಡೀ ದೇಶದಲ್ಲಿ ಸ್ಕಾಲರ್ ಶಿಪ್​​ಗೆ ಯಾವ ಗತಿ ಆಯ್ತು ಅಂತ ನೋಡಿದ್ದೀರಲ್ಲಾ? ಮತ್ತೇಕೆ ಬಿಜೆಪಿ ಕಡೆ ಮುಖ ಮಾಡಬೇಕು ಎಂದು ಪ್ರಶ್ನಿಸಿದರು.

ಶೂದ್ರರಿಗೆ ಬಿಜೆಪಿ- ಆರ್​ಎಸ್​ಎಸ್​ ನ ಗರ್ಭಗುಡಿಯೊಳಗೆ ಪ್ರವೇಶವೇ ಇಲ್ಲ : ಶೂದ್ರರಿಗೆ ಬಿಜೆಪಿ ಮತ್ತು ಆರ್​ಎಸ್​ಎಸ್​ ನ ಗರ್ಭಗುಡಿಯೊಳಗೆ ಪ್ರವೇಶವೇ ಇಲ್ಲ. ಶೂದ್ರರು, ದಲಿತರನ್ನು ಕೇವಲ ಬಳಸಿಕೊಳ್ಳುತ್ತಾರೆ. ಆದರೆ, RSSನ ಒಳಗೆ ಪ್ರವೇಶ ಕೊಡುವುದಿಲ್ಲ. ಆದ್ದರಿಂದ ಆರ್​ಎಸ್​ಎಸ್​ ಕಡೆಗೆ ತಲೆ ಕೂಡ ಹಾಕಬೇಡಿ. ದಲಿತರು, ಶೂದ್ರರು, ಹಿಂದುಳಿದವರ ವಿರೋಧಿಯಾದ ಬಿಜೆಪಿ ಮತ್ತು ಆರ್​ಎಸ್​ಎಸ್ ಮೀಸಲಾತಿಯನ್ನೂ ವಿರೋಧಿಸುತ್ತದೆ.

ಮಂಡಲ್ ವರದಿ ವೇಳೆ ಶೂದ್ರರು ಸಾವಿಗೆ ಕಾರಣರಾದವರು, ನಮ್ಮವರು ಬೆಂಕಿ ಹಚ್ಚಿಕೊಂಡು ಸಾಯುವಂತೆ ಮಾಡಿದವರು ಇವರೇ ತಾನೇ? ನಮ್ಮ ಶತ್ರುಗಳ ಜತೆಗೆ ಈ ದೇಶದ ಶೂದ್ರರು, ದಲಿತರು, ಹಿಂದುಳಿದವರು ಏಕೆ ಹೋಗಬೇಕು. ಡಾ.ಬಾಬಾ ಸಾಹೇಬ್ ಅಂಬೇಡ್ಕರ್ ಅವರು ನಾನು ಹಿಂದೂವಾಗಿ ಸಾಯುವುದಿಲ್ಲ ಎಂದು ಹೇಳಿ ಬೌದ್ದ ಧರ್ಮಕ್ಕೆ ಹೋಗಿದ್ದಕ್ಕೆ ಮುಖ್ಯ ಕಾರಣ ಜಾತಿ ಅಸಮಾನತೆ, ಮತ್ತು ಸಾಮಾಜಿಕ ಅಸಮಾನತೆಯೇ ಕಾರಣ ಎಂದರು.

ರಾಷ್ಟ್ರಮಟ್ಟದಲ್ಲೂ ನಮ್ಮ ಕಾರ್ಯಕ್ರಮ ಜಾರಿ : ಕೇಂದ್ರದಲ್ಲಿ ಈ ಬಾರಿ ಬಿಜೆಪಿ ಅಧಿಕಾರಕ್ಕೆ ಬರುವ ಸಾಧ್ಯತೆಗಳು ಕಡಿಮೆ ಇದೆ. ನಾವು ಅಧಿಕಾರಕ್ಕೆ ಬಂದರೆ ನಾವು ರಾಜ್ಯದಲ್ಲಿ ತಂದಿರುವ ದಲಿತ ಮತ್ತು ಹಿಂದುಳಿದ ವರ್ಗಗಳ ಪರವಾದ ಕಾನೂನುಗಳನ್ನು ರಾಷ್ಟ್ರಮಟ್ಟದಲ್ಲೂ ಜಾರಿಗೆ ತರಲಾಗುವುದು. ಈ ಬಗ್ಗೆ ರಾಹುಲ್ ಗಾಂಧಿ ಅವರ ಜತೆಗೂ ಮಾತನಾಡಿ ಪ್ರಣಾಳಿಕೆಯಲ್ಲಿ ಸೇರಿಸಲು ಹೇಳಿದ್ದೇನೆ ಎಂದು ಸಿದ್ದರಾಮಯ್ಯ ಭರವಸೆ ನೀಡಿದರು.

ಕಾಂಗ್ರೆಸ್​ ಅಭ್ಯರ್ಥಿ ಗೆಲ್ಲಲಿದ್ದಾರೆ : 1977ರ ಬಳಿಕ ಮೈಸೂರು - ಕೊಡಗು ಲೋಕಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ನಿಂದ ಒಕ್ಕಲಿಗರೊಬ್ಬರು ಗೆಲ್ಲಲಿದ್ದಾರೆ. ಇಡೀ ರಾಜ್ಯದಲ್ಲಿ ಕಾಂಗ್ರೆಸ್ ಪರವಾದ ಒಲವು ಇದೆ. ನರೇಂದ್ರ ಮೋದಿ ಅಲೆ ದುರ್ಬೀನು ಹಾಕಿ ಹುಡುಕಿದರೂ ಕಾಣುತ್ತಿಲ್ಲ ಎಂದು ಚಾಮುಂಡೇಶ್ವರಿ ವಿಧಾನಸಭಾ ಕ್ಷೇತ್ರದ ಕಾರ್ಯಕರ್ತರು ಮತ್ತು ಮುಖಂಡರ ಸಭೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಭವಿಷ್ಯ ನುಡಿದರು.

ಇದನ್ನೂ ಓದಿ : ಗೀತಾ ಶಿವರಾಜ್ ಕುಮಾರ್ ಗೆಲುವು ಸಮೀಪಿಸುತ್ತಿದೆ: ಆಯನೂರು ಮಂಜುನಾಥ್ - Ayanur Manjunath

ETV Bharat Logo

Copyright © 2024 Ushodaya Enterprises Pvt. Ltd., All Rights Reserved.