ETV Bharat / state

ರಾಯಚೂರಿಗೆ ಏಮ್ಸ್‌ ಮಂಜೂರು ಮಾಡುವಂತೆ ನಿರ್ಮಲಾ ಸೀತಾರಾಮನ್​ಗೆ ಸಿಎಂ ಪತ್ರ - ಬೆಂಗಳೂರು

ರಾಯಚೂರಿಗೆ ಏಮ್ಸ್ ಮಂಜೂರು ಮಾಡುವಂತೆ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರಿಗೆ ಸಿಎಂ ಸಿದ್ದರಾಮಯ್ಯ ಪತ್ರ ಬರೆದಿದ್ದಾರೆ.

cm-worte-letter-to-nirmala-sitharaman-to-grant-aiims-to-raichur
ರಾಯಚೂರಿಗೆ ಏಮ್ಸ್‌ ಮಂಜೂರು ಮಾಡುವಂತೆ ನಿರ್ಮಲಾ ಸೀತಾರಾಮನ್​ಗೆ ಸಿಎಂ ಪತ್ರ
author img

By ETV Bharat Karnataka Team

Published : Jan 30, 2024, 5:16 PM IST

ಬೆಂಗಳೂರು: 2024-25ನೇ ಸಾಲಿನ ಕೇಂದ್ರ ಆಯವ್ಯಯದಲ್ಲಿ ರಾಯಚೂರಿಗೆ ಏಮ್ಸ್ (AIIMS) ಮಂಜೂರು ಮಾಡುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರಿಗೆ ಪತ್ರ ಬರೆದಿದ್ದಾರೆ. ಜನವರಿ 25 ರಂದು ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವ ಎನ್ ಎಸ್ ಬೋಸರಾಜು ಅವರು, ಮುಖ್ಯಮಂತ್ರಿಗಳಿಗೆ ಪತ್ರದ ಮೂಲಕ ಮನವಿ ಮಾಡಿಕೊಂಡಿದ್ದರು.

ರಾಯಚೂರು ನಗರದಲ್ಲಿ ಆಲ್​ ಇಂಡಿಯಾ ಇನ್​ಸ್ಟಿಟ್ಯೂಟ್​ ಆಫ್​ ಮೆಡಿಕಲ್ ಸೈನ್ಸ್ (AIIMS) ಸ್ಥಾಪನೆ ಮಾಡಲು ಜಿಲ್ಲೆಯ ಜನರ ಮನವಿಯ ಮೇರೆಗೆ ಈಗಾಗಲೇ ನಮ್ಮ ಪ್ರಣಾಳಿಕೆಯಲ್ಲಿ ಘೋಷಣೆ ಮಾಡಲಾಗಿದೆ. ರಾಯಚೂರು ನಗರದಲ್ಲಿ ವಿವಿಧ ಸಂಘ ಸಂಸ್ಥೆಗಳಿಂದ ಹಾಗೂ ಹೋರಾಟ ಸಮಿತಿಯಿಂದ ಕಳೆದ 625 ದಿನಗಳಿಂದ ಸರಣಿ ಸತ್ಯಾಗ್ರಹ ಮುಂದುವರೆದಿದೆ. ರಾಯಚೂರು ಜಿಲ್ಲೆಯನ್ನು ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷೆ ಜಿಲ್ಲೆ ಎಂದು (Aspiration District) ಘೋಷಣೆ ಮಾಡಿದೆ. ಹಾಗೂ ಸಂವಿಧಾನದ 371 (ಜೆ) ವಿಧಿಯ ಅನ್ವಯ ವಿಶೇಷ ಸ್ಥಾನಮಾನವನ್ನೂ ಕೂಡಾ ನೀಡಲಾಗಿದೆ.

ಹಿಂದುಳಿದ ಜಿಲ್ಲೆಯಾಗಿರುವ ರಾಯಚೂರಿನಲ್ಲಿ ಏಮ್ಸ್‌ (AIIMS) ಸ್ಥಾಪಿಸುವ ಮೂಲಕ ಆರೋಗ್ಯ, ಉದ್ಯೋಗ, ವೈದ್ಯಕೀಯ ಶಿಕ್ಷಣದ ಬಲವರ್ಧನೆಗಾಗಿ ಹಾಗೂ ಹಿಂದುಳಿದ ಹಣೆಪಟ್ಟಿ ಕಳಚುವ ಹಿನ್ನೆಲೆಯಲ್ಲಿ ಏಮ್ಸ್‌ ಮಂಜೂರು ಮಾಡಬೇಕಾಗಿದೆ. ಈಗಾಗಲೇ ತಾವು 17-06-2023 ಮತ್ತು 07-09-2023 ರಂದು ಕೇಂದ್ರ ಸರ್ಕಾರದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರಿಗೆ ರಾಯಚೂರು ನಗರದಲ್ಲಿ ಏಮ್ಸ್‌ (AIIMS) ಸ್ಥಾಪನೆ ಮಾಡಲು ಪತ್ರವನ್ನು ಬರೆದಿದ್ದೀರಿ. ಕೇಂದ್ರ ಸರ್ಕಾರದ 2024 - 25ನೇ ಸಾಲಿನ ಆಯವ್ಯಯಕ್ಕೂ ಮುನ್ನ ಕೇಂದ್ರ ಸರ್ಕಾರದ ವಿತ್ತ ಸಚಿವರಿಗೆ ಈ ಬಗ್ಗೆ ಇನ್ನೊಮ್ಮೆ ಗಮನ ಸೆಳೆಯುವಂತೆ ತಮ್ಮ ಪತ್ರದಲ್ಲಿ ಮನವಿ ಮಾಡಿಕೊಂಡಿದ್ದರು.

ಇದಕ್ಕೆ ಸಕಾರಾತ್ಮಕವಾಗಿ ಸ್ಪಂದಿಸಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಜನವರಿ 29, 2024 ರಂದು ಕೇಂದ್ರ ವಿತ್ತ ಸಚಿವರಾದ ನಿರ್ಮಲಾ ಸೀತಾರಾಮನ್ ಅವರಿಗೆ ಪತ್ರವನ್ನು ಬರೆದು ರಾಯಚೂರಿಗೆ ಏಮ್ಸ್ ಮಂಜೂರು ಮಾಡುವಂತೆ ಕೋರಿದ್ದಾರೆ.

ರಾಜ್ಯ ಸರ್ಕಾರದಿಂದ ಬೃಹತ್ ಆರೋಗ್ಯ ಮೇಳ(ಚಾಮರಾಜನಗರ): ರಾಜ್ಯ ಸರ್ಕಾರದಿಂದ ಮೊದಲ ಬಾರಿಗೆ ಸೋಮವಾರ ಕೊಳ್ಳೇಗಾಲದ ಎಂಜಿಎಸ್​ವಿ ಕಾಲೇಜು ಮೈದಾನದಲ್ಲಿ ಬೃಹತ್ ಆರೋಗ್ಯ ಶಿಬಿರ ನಡೆದಿತ್ತು. ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ವತಿಯಿಂದ ನಡೆದ ಬೃಹತ್ ಆರೋಗ್ಯ ಮೇಳದಲ್ಲಿ 7 ಸಾವಿರಕ್ಕೂ ಅಧಿಕ ರೋಗಿಗಳನ್ನು ತಪಾಸಣೆ ಮಾಡಲಾಯಿತು.

ಇದನ್ನೂ ಓದಿ: ಶ್ರೀರಾಮಚಂದ್ರ ಎಲ್ಲಾ ಜಾತಿ, ಧರ್ಮವನ್ನು ಸಮಾನವಾಗಿ ಕಾಣುತ್ತಿದ್ದರು: ಸಿಎಂ ಸಿದ್ದರಾಮಯ್ಯ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.