ETV Bharat / state

ಕೊಬ್ಬರಿ ಖರೀದಿಗೆ ರೈತರ ನೋಂದಣಿ ಪ್ರಕ್ರಿಯೆ ಒಂದು ವಾರ ಸ್ಥಗಿತ: ಸಚಿವ ಶಿವಾನಂದ ಪಾಟೀಲ್ - ಕೊಬ್ಬರಿ ಖರೀದಿ ನೋಂದಣಿ

ಕೊಬ್ಬರಿ ಖರೀದಿ ನೋಂದಣಿಯಲ್ಲಿ ಅವ್ಯವಹಾರ ಸಂಬಂಧಿಸಿದಂತೆ ಜೆಡಿಎಸ್‍ನ ಹೆಚ್.ಡಿ.ರೇವಣ್ಣ ಸೇರಿದಂತೆ ಬಹುತೇಕ ಶಾಸಕರು ಪ್ರಸ್ತಾಪಿಸಿದ ಪ್ರಶ್ನೆಗಳಿಗೆ ಕೃಷಿ ಮಾರುಕಟ್ಟೆ ಸಚಿವ ಶಿವಾನಂದ ಪಾಟೀಲ್ ವಿಧಾನಸಭೆ ಸದನದಲ್ಲಿ ಉತ್ತರಿಸಿದರು.

Minister Sivananda Patil spoke in the Assembly.
ವಿಧಾನಸಭೆಯಲ್ಲಿ ಸಚಿವ ಶಿವಾನಂದ ಪಾಟೀಲ್ ಮಾತನಾಡಿದರು.
author img

By ETV Bharat Karnataka Team

Published : Feb 14, 2024, 4:29 PM IST

Updated : Feb 14, 2024, 7:30 PM IST

ಸಚಿವ ಶಿವಾನಂದ ಪಾಟೀಲ್ ವಿಧಾನಸಭೆ ಸದನದೊಳಗೆ ಮಾತನಾಡಿದರು.

ಬೆಂಗಳೂರು: ಕೊಬ್ಬರಿ ಖರೀದಿಗೆ ರೈತರ ನೋಂದಣಿಯಲ್ಲಿ ಅವ್ಯವಹಾರ ನಡೆದಿರುವ ಕಾರಣಕ್ಕೆ ತಾತ್ಕಾಲಿಕವಾಗಿ ಒಂದು ವಾರ ಖರೀದಿ ಪ್ರಕ್ರಿಯೆಯನ್ನು ಸ್ಥಗಿತಗೊಳಿಸಲಾಗಿದೆ ಎಂದು ಕೃಷಿ ಮಾರುಕಟ್ಟೆ ಸಚಿವ ಶಿವಾನಂದ ಪಾಟೀಲ್ ತಿಳಿಸಿದ್ದಾರೆ.

ವಿಧಾನಸಭೆಯಲ್ಲಿ ಇಂದು ಜೆಡಿಎಸ್‍ನ ಹೆಚ್.ಡಿ.ರೇವಣ್ಣ ಸೇರಿದಂತೆ ಬಹುತೇಕ ಶಾಸಕರು ಪಕ್ಷಾತೀತವಾಗಿ ಪ್ರಸ್ತಾಪಿಸಿದ ಸಾರ್ವಜನಿಕ ಮಹತ್ವದ ವಿಚಾರಕ್ಕೆ ಉತ್ತರಿಸಿದ ಸಚಿವರು, ರೈತರ ನೋಂದಣಿ ಪ್ರಕ್ರಿಯೆಯಲ್ಲಿ ಮೇಲ್ನೋಟಕ್ಕೆ ಲೋಪಗಳು ಕಂಡುಬರುತ್ತಿವೆ. ಇಲಾಖೆಯಿಂದ ಖರೀದಿಸಲಾಗಿದ್ದ ಕಂಪ್ಯೂಟರ್ ಬದಲಿಗೆ ಅಧಿಕಾರಿಗಳು ಮತ್ತು ಹೊರಗುತ್ತಿಗೆ ಸಿಬ್ಬಂದಿ, ತಾವೇ ಬೇರೆ ಕಂಪ್ಯೂಟರ್ ಖರೀದಿಸಿ ಅದನ್ನು ರೈತರ ಮನೆ ಬಾಗಿಲಿಗೆ ತೆಗೆದುಕೊಂಡು ಹೋಗಿ ನೋಂದಣಿ ಮಾಡಿಸಿದ್ದಾರೆ. ಬೇರೆ ಜಿಲ್ಲೆಯಿಂದ 3,500 ರೈತರನ್ನು ಹಾಸನದಲ್ಲಿ ನೋಂದಣಿ ಮಾಡಲಾಗಿದೆ. ಹೀಗಾಗಿ ಖರೀದಿ ಪ್ರಕ್ರಿಯೆಯನ್ನು ಸ್ಥಗಿತಗೊಳಿಸಿ 9 ಮಂದಿ ಅಧಿಕಾರಿಗಳ ವಿರುದ್ಧ ತನಿಖೆಗೆ ಆದೇಶಿಸಲಾಗಿದೆ. ಕ್ರಿಮಿನಲ್ ಮೊಕದ್ದಮೆ ಕೂಡ ದಾಖಲಿಸಲಾಗುತ್ತಿದೆ. ನೋಂದಣಿ ಪ್ರಕ್ರಿಯೆ ಪರಿಷ್ಕರಣೆ ಒಳಪಡಿಸಲಾಗುತ್ತಿದ್ದು, ಅಲ್ಲಿಯವರೆಗೆ ತಾತ್ಕಾಲಿಕವಾಗಿ ಖರೀದಿ ಪ್ರಕ್ರಿಯೆಯನ್ನು ಸ್ಥಗಿತಗೊಳಿಸಲಾಗುತ್ತಿದೆ ಎಂದು ತಿಳಿಸಿದರು.

ಈ ಮೊದಲು ಕೇಂದ್ರ ಸರ್ಕಾರ 7 ತಿಂಗಳವರೆಗೆ ಕೊಬ್ಬರಿ ಖರೀದಿಗೆ ಅವಕಾಶ ನೀಡಿತ್ತು. ಪ್ರಸ್ತುತ 3 ತಿಂಗಳಿನಂತೆ ಎರಡು ಅವಧಿ ಖರೀದಿಗೆ ಅವಕಾಶ ನೀಡಲಾಗಿದೆ. ಕಳೆದ ಬಾರಿ ಖರೀದಿಯಲ್ಲಿ ನಫೆಡ್ 200 ಕೋಟಿ ರೂ. ನಷ್ಟ ಅನುಭವಿಸಿದ್ದರಿಂದ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದರು.

ಉಂಡೆ ಕೊಬ್ಬರಿಯನ್ನು ಶೇ.25ರಷ್ಟು ಖರೀದಿಸಲು ಅವಕಾಶವಿದೆ. ಆ ಪ್ರಮಾಣವನ್ನು ಶೇ.50ಕ್ಕೆ ಹೆಚ್ಚಿಸಬೇಕು ಎಂದು ಮನವಿ ಸಲ್ಲಿಸಲಾಗಿದೆ. ಹಾಗೆಯೇ ಹೋಳಾಗಿರುವ ವಿಲ್ಲಿಂಗ್ ಕೊಬ್ಬರಿಯನ್ನು ಖರೀದಿಸಲು ಅನುಮತಿ ನೀಡುವಂತೆ ಕೇಂದ್ರ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದೆ ಎಂದು ಹೇಳಿದರು.

ನೋಂದಣಿ ಪ್ರಕ್ರಿಯೆಯಲ್ಲಿನ ಲೋಪವನ್ನು ಸರಿಪಡಿಸುವವರೆಗೂ ಸಹಕರಿಸುವಂತೆ ಸಚಿವರು ಮನವಿ ಮಾಡಿದರು. ಈ ಕುರಿತು ಮುಂದುವರೆದ ಚರ್ಚೆಯಲ್ಲಿ ಶಾಸಕ ಸುರೇಶ್ ಗೌಡ, ಜನವರಿಯಿಂದ ಖರೀದಿ ಆರಂಭವಾಗಬೇಕಿತ್ತು. ಫೆ.1ರಿಂದ ಖರೀದಿಸುವುದಾಗಿ ನಫೇಡ್ ತಿಳಿಸಿತ್ತು. ಅದನ್ನು ನಂಬಿ ರೈತರು ಕೊಬ್ಬರಿಯನ್ನು ಸುಲಿದು ಇಟ್ಟುಕೊಂಡಿದ್ದಾರೆ‌. ಈಗ ಮತ್ತೆ ಒಂದು ವಾರ ಮುಂದೂಡಿದರೆ ರೈತರಿಗೆ ನಷ್ಟವಾಗುತ್ತದೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಕೇಂದ್ರ ಕೃಷಿ ಸಚಿವೆ ಶೋಭಾ ಕರಂದ್ಲಾಜೆ ರೈತರು ಬೆಳೆದ ಪೂರ್ತಿ ಕೊಬ್ಬರಿಯನ್ನು ಖರೀದಿಸುವುದಾಗಿ ಹೇಳಿದ್ದಾರೆ. ಅದರಂತೆ ಸರ್ಕಾರ ನಡೆದುಕೊಳ್ಳಬೇಕೆಂದು ಒತ್ತಾಯಿಸಿದರು. ತಿಪಟೂರು ಕ್ಷೇತ್ರದ ಷಡಕ್ಷರಿ ಮಾತನಾಡಿ, 8 ದಿನದ ವಿಳಂಬದಿಂದ ಹೆಚ್ಚೇನೂ ಹಾನಿಯಾಗುವುದಿಲ್ಲ. ನೋಂದಣಿ ಪ್ರಕ್ರಿಯೆಯಲ್ಲಿ ವಿಳಂಬವಾಗಿದೆ. ಪರಿಷ್ಕರಣೆ ಬದಲಾಗಿ ರದ್ದು ಮಾಡಿ ಕೊಬ್ಬರಿ ಖರೀದಿ ಮತ್ತು ನೋಂದಣಿಯನ್ನು ಏಕಕಾಲಕ್ಕೆ ಆರಂಭಿಸಿ ಎಂದು ಆಗ್ರಹಿಸಿದರು.

ಅರಸೀಕೆರೆ ಕ್ಷೇತ್ರದ ಶಿವಲಿಂಗೇಗೌಡ ಮಾತನಾಡಿ, ಎಂಟು ದಿನ ವಿಳಂಬ ಮಾಡುವುದು ಅನಗತ್ಯ. ತಡವಾದರೆ ಕೊಬ್ಬರಿ ಗುಣಮಟ್ಟ ಕುಂದುತ್ತದೆ. ಸಚಿವರು ಕೊಬ್ಬರಿ ಬೆಳೆಯುವ ಜಿಲ್ಲೆಗಳ ಶಾಸಕರ ಜೊತೆ ಪ್ರತ್ಯೇಕ ಸಭೆ ನಡೆಸಿದರೆ ಸಮಸ್ಯೆ ಬಗೆಹರಿಸಲು ವಿವರವಾದ ಚರ್ಚೆ ನಡೆಸಬಹುದು ಎಂದರು.
ತುರುವೇಕೆರೆಯ ಎಂ.ಟಿ.ಕೃಷ್ಣಪ್ಪ ಮತ್ತು ಪ್ರತಿಪಕ್ಷದ ಉಪನಾಯಕ ಅರವಿಂದ್ ಬೆಲ್ಲದ್ ಈ ಕುರಿತ ಚರ್ಚೆಯಲ್ಲಿ ಪಾಲ್ಗೊಂಡರು.

ಇದನ್ನೂ ಓದಿ: ಬೆಂಬಲ ಬೆಲೆ ಯೋಜನೆಯಡಿ ಕೊಬ್ಬರಿ ಖರೀದಿಸಲು ಪಕ್ಷಭೇದ ಮರೆತು ಶಾಸಕರ ಒತ್ತಾಯ

Last Updated : Feb 14, 2024, 7:30 PM IST
ETV Bharat Logo

Copyright © 2025 Ushodaya Enterprises Pvt. Ltd., All Rights Reserved.