ETV Bharat / state

ಕರ್ನಾಟಕ ಹೈಕೋರ್ಟ್ ಸಿಜೆ ಪಿಬಿ ವರಾಳೆ ಸುಪ್ರೀಂಕೋರ್ಟ್ ನ್ಯಾಯಮೂರ್ತಿಯಾಗಿ ಶಿಫಾರಸು - ಸುಪ್ರೀಂಕೋರ್ಟ್ ಕೊಲಿಜಿಯಂ

ಸುಪ್ರೀಂಕೋರ್ಟ್ ಮುಖ್ಯ ನ್ಯಾಯಮೂರ್ತಿ ಡಿ.ವೈ.ಚಂದ್ರಚೂಡ್ ಅವರ ಅಧ್ಯಕ್ಷತೆಯಲ್ಲಿ ಶುಕ್ರವಾರ ನಡೆದ ಸುಪ್ರೀಂಕೋರ್ಟ್ ಕೊಲಿಜಿಯಂನಲ್ಲಿ ಪ್ರಸನ್ನ ಬಾಲಚಂದ್ರ ವರಾಳೆ ಅವರನ್ನು ಸುಪ್ರೀಂಕೋರ್ಟ್ ನ್ಯಾಯಮೂರ್ತಿಗಳನ್ನಾಗಿ ನೇಮಕ ಮಾಡಲು ಕೇಂದ್ರಕ್ಕೆ ಶಿಫಾರಸು ಮಾಡಲು ನಿರ್ಧರಿಸಲಾಗಿದೆ.

Etv Bharat
Etv Bharat
author img

By ETV Bharat Karnataka Team

Published : Jan 19, 2024, 11:34 PM IST

ಬೆಂಗಳೂರು: ಕರ್ನಾಟಕ ಹೈಕೋರ್ಟ್‌ನ ಮುಖ್ಯನ್ಯಾಯಮೂರ್ತಿ ಪ್ರಸನ್ನ ಬಾಲಚಂದ್ರ ವರಾಳೆ ಅವರನ್ನು ಸುಪ್ರೀಂಕೋರ್ಟ್ ನ್ಯಾಯಮೂರ್ತಿಗಳನ್ನಾಗಿ ಹಾಗೂ ಹೈಕೋರ್ಟ್​​ನಲ್ಲಿ ಹಾಲಿ ಎರಡನೇ ಹಿರಿಯ ನ್ಯಾಯಮೂರ್ತಿಯಾಗಿ ಸೇವೆ ಸಲ್ಲಿಸುತ್ತಿರುವ ಪಿ.ಎಸ್.ದಿನೇಶ್ ಕುಮಾರ ಅವರನ್ನು ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿಯನ್ನಾಗಿ ನೇಮಕ ಮಾಡಲು ಸುಪ್ರೀಂಕೋರ್ಟ್ ಕೇಂದ್ರ ಸರ್ಕಾರಕ್ಕೆ ಶಿಫಾರಸು ಮಾಡಲು ನಿರ್ಧರಿಸಿದೆ.

ಸುಪ್ರೀಂಕೋರ್ಟ್ ಮುಖ್ಯ ನ್ಯಾಯಮೂರ್ತಿ ಡಿ.ವೈ.ಚಂದ್ರಚೂಡ್ ಅವರ ಅಧ್ಯಕ್ಷತೆಯಲ್ಲಿ ಶುಕ್ರವಾರ ನಡೆದ ಸುಪ್ರೀಂಕೋರ್ಟ್ ಕೊಲಿಜಿಯಂನಲ್ಲಿ ಈ ತೀರ್ಮಾನ ಕೈಗೊಂಡು, ಅದರಂತೆ ಕೇಂದ್ರ ಸರ್ಕಾರಕ್ಕೆ ಮುಂದಿನ ಆದೇಶಕ್ಕಾಗಿ ಶಿಫಾರಸು ಮಾಡಲಾಗಿದೆ. ಕೇಂದ್ರ ಕಾನೂನು ಸಚಿವಾಲಯ ಮುಂದಿನ ಪ್ರಕ್ರಿಯೆ ನಡೆಸಿ, ನೇಮಕ ಪ್ರಸ್ತಾವವನ್ನು ರಾಷ್ಟ್ರಪತಿಗೆ ಕಳುಹಿಸಲಿದೆ. ಅವರು ನೇಮಕದ ಅಧಿಕೃತ ಆದೇಶ ಹೊರಡಿಸಲಿದ್ದಾರೆ.

ಸುಪ್ರೀಂಕೋರ್ಟ್ ನ್ಯಾಯಮೂರ್ತಿ ಸಂಜಯ್ ಕಿಶನ್ ಕೌಲ್ ಅವರು ಕಳೆದ ಡಿ.25ರಂದು ನಿವೃತ್ತರಾಗಿದ್ದರು. ಆ ಖಾಲಿ ಇದ್ದ ಸ್ಥಾನಕ್ಕೆ ಹೈಕೋರ್ಟ್‌ಗಳಲ್ಲಿ ಮುಖ್ಯ ನ್ಯಾಯಮೂರ್ತಿಗಳಾಗಿ ಸೇವೆ ಸಲ್ಲಿಸುತ್ತಿರುವವರ ಸೇವಾ ಹಿರಿತನ, ಜೇಷ್ಠತೆ, ಲಿಂಗ, ಪ್ರದೇಶ, ಜಾತಿ ಪ್ರಾತಿನಿಧ್ಯಗಳನ್ನು ಪರಿಗಣಿಸಿ ವರಾಳೆ ಅವರಿಗೆ ಬಡ್ತಿ ನೀಡಲು ನಿರ್ಧರಿಸಲಾಗಿದೆ.

ಮೂಲತಃ ಬಾಂಬೆ ಹೈಕೋರ್ಟ್‌ ನ್ಯಾಯಮೂರ್ತಿಯಾಗಿದ್ದ ವರಾಳೆ ಅವರು ಅತ್ಯಂತ ಹಿರಿಯ ನ್ಯಾಯಮೂರ್ತಿಗಳು ಹಾಗೂ ಪರಿಶಿಷ್ಟ ಜಾತಿಗೆ ಸೇರಿದವರಾಗಿದ್ದಾರೆ. ಅವರು ಎಲ್ಲ ರೀತಿಯಲ್ಲೂ ಸುಪ್ರೀಂ ಕೋರ್ಟ್ ನ್ಯಾಯಮೂರ್ತಿಗಳಾಗಲು ಅರ್ಹರಾಗಿದ್ದಾರೆ. ಕಳೆದ ಒಂದು ವರ್ಷದಿಂದ ಅವರು ಕರ್ನಾಟಕ ಹೈಕೋರ್ಟ್‌ನ ಮುಖ್ಯ ನ್ಯಾಯಮೂರ್ತಿಯಾಗಿ ಕಾರ್ಯನಿರ್ವಹಿಸುತ್ತಿದ್ದಾರೆ ಎಂದು ಸುಪ್ರೀಂಕೋರ್ಟ್ ಕೊಲಿಜಿಯಂ ತಿಳಿಸಿದೆ.

ಅಲ್ಲದೆ, ಕರ್ನಾಟಕ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ ಹುದ್ದೆಗೆ ಕರ್ನಾಟಕದ ಹಿರಿಯ ನ್ಯಾಯಮೂರ್ತಿ ಪಿ.ಎಸ್. ದಿನೇಶ್ ಕುಮಾರ್‌ ಅವರ ನೇಮಕಕ್ಕೆ ಶಿಫಾರಸು ಮಾಡಲಾಗಿದೆ. ದಿನೇಶ್ ಕುಮಾರ್ ಅವರು ಇದೇ ಫೆ.24ಕ್ಕೆ ಸೇವೆಯಿಂದ ನಿವೃತ್ತರಾಗಲಿದ್ದಾರೆ. ಸಾಮಾನ್ಯವಾಗಿ ಬೇರೆ ಹೈಕೋರ್ಟ್‌ನ ನ್ಯಾಯಮೂರ್ತಿಗಳನ್ನು ಹೈಕೋರ್ಟ್‌ ಮುಖ್ಯ ನ್ಯಾಯಮೂರ್ತಿಯನ್ನಾಗಿ ಮತ್ತೊಂದು ರಾಜ್ಯದ ಹೈಕೋರ್ಟ್‌ನ ನ್ಯಾಯಮೂರ್ತಿಗಳನ್ನು ನೇಮಕ ಮಾಡುವುದು ವಾಡಿಕೆ. ಆದರೆ ದಿನೇಶ್ ಕುಮಾರ್ ಅವರ ನ್ಯಾಯಾಂಗ ಹಾಗೂ ಆಡಳಿತದ ಅನುಭವ, ದಕ್ಷತೆ, ಪ್ರಮಾಣಿಕತೆಯನ್ನು ಪರಿಗಣಿಸಿ ಅವರನ್ನು ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿಯನ್ನಾಗಿ ನೇಮಕ ಮಾಡಲಾಗುತ್ತಿದೆ ಎಂದು ಸುಪ್ರೀಂಕೋರ್ಟ್ ತಿಳಿಸಿದೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.