ETV Bharat / state

ಆಡಳಿತಾತ್ಮಕವಾಗಿ ಬೆಳಗಾವಿ ನಗರ ಪೊಲೀಸ್ ಇಲಾಖೆಯಲ್ಲಿ ಸುಧಾರಣೆ ತರುವೆ: ಯಡಾ ಮಾರ್ಟಿನ್ ಮಾರ್ಬನ್ಯಾಂಗ್ - Police Commissioner Yada Martin

ಬೆಳಗಾವಿ ನಗರ ಪೊಲೀಸ್ ಇಲಾಖೆಯಲ್ಲಿ ಆಡಳಿತಾತ್ಮಕವಾಗಿ ಸುಧಾರಣೆ ತರುವುದಕ್ಕೆ ಸಾರ್ವಜನಿಕರ ಸಹಕಾರ ಬೇಕಾಗಿದೆ ಎಂದು ಕಮಿಷನರ್​ ಯಡಾ ಮಾರ್ಟಿನ್ ಮಾರ್ಬನ್ಯಾಂಗ್ ಹೇಳಿದರು.

ಯಡಾ ಮಾರ್ಟಿನ್ ಮಾರ್ಬನ್ಯಾಂಗ್
ಯಡಾ ಮಾರ್ಟಿನ್ ಮಾರ್ಬನ್ಯಾಂಗ್
author img

By ETV Bharat Karnataka Team

Published : Mar 19, 2024, 6:15 PM IST

ಬೆಳಗಾವಿ ನಗರ ಪೊಲೀಸ್ ಇಲಾಖೆಯಲ್ಲಿ ಆಡಳಿತಾತ್ಮಕವಾಗಿ ಸುಧಾರಣೆ

ಬೆಳಗಾವಿ : ನಗರ ಪೊಲೀಸ್ ಇಲಾಖೆಯ ಮೇಲಾಧಿಕಾರಿಗಳು ಉತ್ತಮ ಸೇವೆ ಸಲ್ಲಿಸುತ್ತಿದ್ದು, ಕೆಳಮಟ್ಟದಲ್ಲಿಯೂ ಪೊಲೀಸ್ ಆಡಳಿತ ವ್ಯವಸ್ಥೆ ಸುಧಾರಣೆ ಆಗಬೇಕಿದೆ ಎಂದು ನೂತನ ನಗರ ಪೊಲೀಸ್ ಆಯುಕ್ತ ಯಡಾ ಮಾರ್ಟಿನ್ ಮಾರ್ಬನ್ಯಾಂಗ್ ತಿಳಿಸಿದರು.

ಸೋಮವಾರ ಬೆಳಗಾವಿ ನಗರ ಪೊಲೀಸ್ ಆಯುಕ್ತರಾಗಿ ಅಧಿಕಾರ ಸ್ವೀಕರಿಸಿದ ಬಳಿಕ ಇಂದು ತಮ್ಮ ಕಚೇರಿಯಲ್ಲಿ ಸುದ್ದಿಗಾರರ ಜೊತೆಗೆ ಮಾತನಾಡಿದ ಅವರು, ಬೆಳಗಾವಿ ಬಗ್ಗೆ ತಿಳಿದುಕೊಂಡಿದ್ದೇನೆ. ಚಳಿಗಾಲದ ಅಧಿವೇಶನದಲ್ಲಿ ಇಲ್ಲಿ ಕೆಲಸ ಮಾಡಿದ ಅನುಭವ ಇದೆ. ಆಡಳಿತಾತ್ಮಕವಾಗಿ ನಗರ ಪೊಲೀಸ್ ಇಲಾಖೆಯಲ್ಲಿ ಸುಧಾರಣೆ ತರಲು ಪ್ರಯತ್ನಿಸುತ್ತೇನೆ ಎಂದರು.

ನಗರದಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡುವ ಜೊತೆಗೆ ಸಂಚಾರ ಸಮಸ್ಯೆ ಬಗೆ ಹರಿಸಲು ಪ್ರಯತ್ನಿಸುವೆ. ಇದಕ್ಕೆ ಸಾರ್ವಜನಿಕರ ಸಹಕಾರದ ಅವಶ್ಯಕತೆಯಿದೆ. ಅಪರಾಧ ಪ್ರಕರಣಗಳಿಗೆ ಕಡಿವಾಣ ಹಾಕಲು ಪೊಲೀಸ್ ಇಲಾಖೆ ಮತ್ತಷ್ಟು ಚುರುಕಾಗಿ ಕೆಲಸ ಮಾಡಲು ಪ್ರಯತ್ನಿಸುತ್ತೇನೆ. ನಿನ್ನೆಯಷ್ಟೇ ನಾನು ಅಧಿಕಾರ ಸ್ವೀಕರಿಸಿದ್ದೇನೆ. ನಮ್ಮ ಸಿಬ್ಬಂದಿಗಳೊಂದಿಗೆ ಸಭೆ‌ ನಡೆಸಿ ಮಾರ್ಗದರ್ಶನ ಪಡೆದಿದ್ದೇನೆ. ಬೆಳಗಾವಿ ನಗರದಲ್ಲಿ ಇಬ್ಬರು ಡಿಸಿಪಿಗಳು ಉತ್ತಮವಾಗಿ ಕೆಲಸ ಮಾಡುತ್ತಿದ್ದಾರೆ. ನಮ್ಮ ಕಡೆಯಿಂದ ಅಷ್ಟೇ ಆದರೆ ಕಾನೂನು ಮತ್ತು ಸುವ್ಯವಸ್ಥೆ ಕಾಪಾಡಲು ಆಗೋದಿಲ್ಲ. ಅದಕ್ಕೆ ಎಲ್ಲ ನಾಗರಿಕರ ಸಹಕಾರವೂ ಬೇಕು ಎಂದು ಮನವಿ ಮಾಡಿದರು.

ಸಾರ್ವಜನಿಕರ ಸಮಸ್ಯೆಗಳನ್ನು ಬಗೆಹರಿಸಲು ವಿಳಂಬ ಮಾಡುವ ಮತ್ತು ತಪ್ಪು ಎಸಗುವ ಅಧಿಕಾರಿಗಳ ವಿರುದ್ಧ ಮುಲ್ಲಾಜಿಲ್ಲದೇ ಕ್ರಮ ಕೈಗೊಳ್ಳಲಾಗುವುದು. ಸಂಚಾರ ಸಮಸ್ಯೆಯ ಬಗ್ಗೆಯೂ ಸಂಚಾರ ಡಿಸಿಪಿ ಅವರೊಂದಿಗೆ ಸಭೆ ಮಾಡಿದ್ದು, ಶೀಘ್ರವೇ ಸಮಸ್ಯೆ ಬಗೆಹರಿಸಲಾಗುವುದು ಎಂದು ಯಡಾ ಮಾರ್ಟಿನ್​ ಭರವಸೆ ನೀಡಿದರು. ಈ ವೇಳೆ ಡಿಸಿಪಿ ರೋಹನ್ ಜಗದೀಶ್, ಎಸಿಪಿ ಸದಾಶಿವ ಕಟ್ಟಿಮನಿ ಉಪಸ್ಥಿತರಿದ್ದರು.

ಇದನ್ನೂ ಓದಿ : ದಾಖಲೆ ಇಲ್ಲದೇ ಹಣ ಸಾಗಣೆ: ಸುಳ್ಳದ ರೋಡ್ ಕ್ರಾಸ್ ಚೆಕ್​ಪೋಸ್ಟ್​ನಲ್ಲಿ₹ 3,82,000 ವಶಕ್ಕೆ

ETV Bharat Logo

Copyright © 2025 Ushodaya Enterprises Pvt. Ltd., All Rights Reserved.