ETV Bharat / state

ಗ್ರೇಟರ್ ಬೆಂಗಳೂರು ಆಡಳಿತ ವಿಧೇಯಕದ ಸಮಗ್ರ ಚರ್ಚೆಗೆ ಸದನ ಸಮಿತಿ ರಚನೆ: ಡಿಸಿಎಂ ಡಿ.ಕೆ.ಶಿವಕುಮಾರ್ - DCM D K Shivakumar - DCM D K SHIVAKUMAR

ಗ್ರೇಟರ್ ಬೆಂಗಳೂರು ಆಡಳಿತ ವಿಧೇಯಕದ ಬಗ್ಗೆ ಸಮಗ್ರ ಚರ್ಚೆಯಾಗಬೇಕಿದ್ದು, ವಿಧಾನಸಭೆ ಮತ್ತು ವಿಧಾನಪರಿಷತ್​ನ ಸದಸ್ಯರನ್ನೊಳಗೊಂಡ ಸದನ ಸಮಿತಿ ರಚಿಸುವಂತೆ ಪ್ರತಿಪಕ್ಷ ನಾಯಕ ಆರ್​. ಅಶೋಕ್​ ಸಲಹೆ ನೀಡಿದರು.

DCM D K Shivakumr
ಡಿಸಿಎಂ ಡಿ ಕೆ ಶಿವಕುಮಾರ್​ (ETV Bharat)
author img

By ETV Bharat Karnataka Team

Published : Jul 25, 2024, 7:13 PM IST

ಬೆಂಗಳೂರು: ಬೆಂಗಳೂರಿಗೆ ಹೊಸ ರೂಪ ನೀಡುವ 2024ನೇ ಸಾಲಿನ ಗ್ರೇಟರ್ ಬೆಂಗಳೂರು ಆಡಳಿತ ವಿಧೇಯಕದ ಕುರಿತು ಸಮಗ್ರವಾಗಿ ಚರ್ಚಿಸಲು ಸದನ ಸಮಿತಿ ರಚನೆ ಮಾಡುವುದಾಗಿ ಡಿಸಿಎಂ ಡಿ.ಕೆ.ಶಿವಕುಮಾರ್ ವಿಧಾನಸಭೆಯಲ್ಲಿ ತಿಳಿಸಿದರು.

ಶಾಸನ ರಚನಾ ಕಲಾಪದಲ್ಲಿ ವಿಧೇಯಕವನ್ನು ಪರ್ಯಾಲೋಚನೆಗಾಗಿ ಮಂಡಿಸಿದ ಡಿಸಿಎಂ ಶಿವಕುಮಾರ್, "ಬೆಂಗಳೂರಿಗೆ ಹೊಸ ರೂಪ ನೀಡುವ ಗ್ರೇಟರ್ ಬೆಂಗಳೂರು ಆಡಳಿತ ವಿಧೇಯಕ ಇದಾಗಿದೆ. ಬೆಂಗಳೂರಿನ ಜನಸಂಖ್ಯೆ 1 ಕೋಟಿ 40 ಲಕ್ಷದಷ್ಟಿದೆ. ದೊಡ್ಡ ಸಮಸ್ಯೆಗಳಿವೆ. ಆಡಳಿತದಲ್ಲಿ ಸುಧಾರಣೆ ತರಬೇಕು. ನಾಗರಿಕರಿಗೆ ಹೆಚ್ಚು ಸೌಲಭ್ಯ ಕಲ್ಪಿಸಬೇಕು. ಆಡಳಿತ ನಿಯಂತ್ರಣ ನೀಡಬೇಕು, ಆರ್ಥಿಕ ಶಕ್ತಿ ತುಂಬಬೇಕು. ಇದು ಮಹತ್ವದ ವಿಧೇಯಕವಾಗಿದ್ದು, ಒಪ್ಪಿಗೆ ನೀಡಬೇಕು" ಎಂದು ಕೋರಿದರು.

ಈ ಸಂದರ್ಭದಲ್ಲಿ ಮಾತನಾಡಿದ ಪ್ರತಿಪಕ್ಷದ ನಾಯಕ ಆರ್. ಅಶೋಕ್ ಅವರು, "ವಿಧೇಯಕವನ್ನು ಬಾಕಿ ಉಳಿಸಬೇಕು. ಇದರ ಬಗ್ಗೆ ಸಮಗ್ರ ಚರ್ಚೆಯಾಗಬೇಕಾಗಿದ್ದು, ವಿಧಾನಸಭೆ ಮತ್ತು ವಿಧಾನಪರಿಷತ್​ನ ಸದಸ್ಯರನ್ನೊಳಗೊಂಡ ಸದನ ಸಮಿತಿ ರಚಿಸಬೇಕು" ಎಂದು ಸಲಹೆ ನೀಡಿದರು.

ಇದಕ್ಕೆ ಪೂರಕವಾಗಿ ಮಾತನಾಡಿದ ಬಿಜೆಪಿ ಶಾಸಕ ಎಸ್.ಟಿ.ಸೋಮಶೇಖರ್, "ಇದೊಂದು ಐತಿಹಾಸಿಕವಾದ ವಿಧೇಯಕ. ಈ ವಿಧೇಯಕದ ಕುರಿತು ಸಮಗ್ರ ಚರ್ಚೆಯಾಗಬೇಕು. ಬೆಂಗಳೂರು ಪ್ರತಿನಿಧಿಸುವ ವಿಧಾನಸಭೆ, ವಿಧಾನಪರಿಷತ್ ಸದಸ್ಯರನ್ನೊಳಗೊಂಡ ಸದನ ಸಮಿತಿ ರಚನೆ ಮಾಡಬೇಕು" ಎಂದು ಆಗ್ರಹಿಸಿದರು.

ಮತ್ತೆ ಮಾತನಾಡಿದ ಡಿಕೆಶಿ ಡಿಕೆಶಿ, "ವಿಧೇಯಕದ ಬಗ್ಗೆ ವಿಸ್ತೃತವಾದ ಚರ್ಚೆಯಾಗಬೇಕೆಂದು ಆಲೋಚನೆ ಇದೆ. ಬೆಂಗಳೂರಿನ ಸಚಿವರಾದ ರಾಮಲಿಂಗಾರೆಡ್ಡಿ, ಕೆ.ಜೆ.ಜಾರ್ಜ್, ಕೃಷ್ಣಬೈರೇಗೌಡ ಸೇರಿದಂತೆ ಹಲವರು ಸಾಕಷ್ಟು ಚರ್ಚೆಯಾಗಬೇಕು ಎಂದು ಹೇಳಿದ್ದಾರೆ. ಈ ಬಗ್ಗೆ ವ್ಯಾಪಕವಾದ ಚರ್ಚೆಯಾಗಲಿ. ನಾವು ಆತುರ ಮಾಡುವುದಿಲ್ಲ. ಹೀಗಾಗಿ ಸದನ ಸಮಿತಿ ರಚನೆ ಮಾಡಲು ಒಪ್ಪಿಗೆ ಇದೆ" ಎಂದು ಹೇಳಿದರು.

ಆಗ ಸ್ಪೀಕರ್ ಯು.ಟಿ.ಖಾದರ್ ಅವರು, "ಈ ವಿಧೇಯಕವನ್ನು ಬಾಕಿ ಉಳಿಸಿಕೊಳ್ಳೋಣ" ಎಂದು ಹೇಳಿ ಮುಂದಿನ ಕಲಾಪ ನಡೆಸಿದರು.

ಇದನ್ನೂ ಓದಿ: ಪ್ರತಿಪಕ್ಷಗಳಿಂದ ಮುಂದುವರಿದ ಮುಡಾ ಗದ್ದಲ; ಒಂದು ದಿನ ಮೊದಲೇ ವಿಧಾನಸಭೆ ಅಧಿವೇಶನ ಮೊಟಕು - Assembly adjourned sine die

ETV Bharat Logo

Copyright © 2025 Ushodaya Enterprises Pvt. Ltd., All Rights Reserved.