ಬೆಂಗಳೂರು: ಕರ್ನಾಟಕ ಪರೀಕ್ಷಾ ಪ್ರಾಧಿಕಾರ (ಕೆಇಎ) ಏಪ್ರಿಲ್ 18 ಮತ್ತು 19ರಂದು ನಡೆಸಲು ಉದ್ದೇಶಿಸಿರುವ 2024ನೇ ಸಾಲಿನ ಸಾಮಾನ್ಯ ಪ್ರವೇಶ ಪರೀಕ್ಷೆಯ (ಸಿಇಟಿ) ಪ್ರವೇಶ ಪತ್ರವನ್ನು ಇಂದು ಬಿಡುಗಡೆಗೊಳಿಸಿದೆ.
ಕೆಇಎ ವೆಬ್ಸೈಟ್ನಲ್ಲಿ (http://kea.nic.in) ಯುಜಿಸಿಇಟಿ-24 ಲಿಂಕ್ ಮೇಲೆ ಕ್ಲಿಕ್ ಮಾಡಿ, ಅರ್ಜಿ ಸಂಖ್ಯೆ, ಹೆಸರು ಮತ್ತು ಜನ್ಮ ದಿನಾಂಕ ನಮೂದಿಸುವುದರ ಮೂಲಕ ಅಭ್ಯರ್ಥಿಗಳು ಪ್ರವೇಶ ಪತ್ರವನ್ನು ಡೌನ್‌ಲೋಡ್ ಮಾಡಿಕೊಳ್ಳಬಹುದು ಎಂದು ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕಿ ಎಸ್.ರಮ್ಯಾ ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.
ಎಂಜಿನಿಯರಿಂಗ್ ಸೇರಿದಂತೆ ಕೆಇಎ ನಡೆಸುವ ವಿವಿಧ ವೃತ್ತಿಪರ ಕೋರ್ಸ್ಗಳ ಪ್ರವೇಶ ಪರೀಕ್ಷೆಯನ್ನು 3.28 ಲಕ್ಷ ಅಭ್ಯರ್ಥಿಗಳು ತೆಗೆದುಕೊಂಡಿದ್ದಾರೆ. ಏ.20ರಂದು ನಡೆಯುವ ಕನ್ನಡ ಭಾಷಾ ಪರೀಕ್ಷೆಗೂ ಇದೇ ಪ್ರವೇಶ ಪತ್ರ ಅನ್ವಯವಾಗುತ್ತದೆ ಎಂದು ಮಾಹಿತಿ ನೀಡಿದ್ದಾರೆ.
ಇದನ್ನೂ ಓದಿ: ಸಿಇಟಿಗೆ ಅರ್ಜಿ ಸಲ್ಲಿಸಲು ಮತ್ತೊಂದು ಅವಕಾಶ ಕಲ್ಪಿಸಿದ ಕರ್ನಾಟಕ ಪರೀಕ್ಷಾ ಪ್ರಾಧಿಕಾರ