ETV Bharat / state

ನಮ್ಮ ಮೆಟ್ರೋ ಪ್ರಯಾಣಿಕರ ಸಂಖ್ಯೆಯಲ್ಲಿ ಭಾರಿ ಏರಿಕೆ; ಐಟಿ ಕಂಪನಿಗಳಿರುವ ಮಾರ್ಗದಲ್ಲಿ ದಿನಕ್ಕೆ 8 ಲಕ್ಷ ಜನರ ಸಂಚಾರ - Bengaluru Metro

ನಮ್ಮ ಮೆಟ್ರೋದಲ್ಲಿ ಸಂಚರಿಸುವವರ ಪ್ರಯಾಣಿಕರ ಸಂಖ್ಯೆಯಲ್ಲಿ ಹೆಚ್ಚಳವಾಗಿದೆ. ಐಟಿ ಕಂಪನಿಗಳು ವರ್ಕ್ ಫ್ರಾಂ ಹೋಮ್ ರದ್ದು ಮಾಡಿದ ಬಳಿಕ ಮೆಟ್ರೋಗಳಲ್ಲಿ ಜನದಟ್ಟಣೆ ಹೆಚ್ಚಾಗಿ ಕಂಡು ಬರುತ್ತಿದೆ.

ನಮ್ಮ ಮೆಟ್ರೋ
ನಮ್ಮ ಮೆಟ್ರೋ (ಸಂಗ್ರಹ ಚಿತ್ರ (IANS))
author img

By ETV Bharat Karnataka Team

Published : Jul 16, 2024, 5:40 PM IST

ಬೆಂಗಳೂರು: ಬಹುಪಾಲು ಐಟಿ ಕಂಪನಿಗಳು ಮನೆಯಿಂದಲೇ ಕಾರ್ಯ ನಿರ್ವಹಿಸುವ ವ್ಯವಸ್ಥೆಯನ್ನು (Work From Home) ರದ್ದು ಮಾಡಿದ ಬೆನ್ನಲ್ಲೇ ಮೆಟ್ರೋದಲ್ಲಿ ಸಂಚಾರ ನಡೆಸುವವರ ಸಂಖ್ಯೆ ಹೆಚ್ಚಾಗಿದೆ. ಇದರಿಂದ ಏಕಾಏಕಿ ಜನದಟ್ಟಣೆ ಉಂಟಾಗುತ್ತಿದೆ.

ಕಳೆದ ವರ್ಷ ನಮ್ಮ ಮೆಟ್ರೋ ಕಾಡುಗೋಡಿ ಮಾರ್ಗವನ್ನು ಸಂಪೂರ್ಣವಾಗಿ ಸಂಚಾರಕ್ಕೆ ತೆರೆದ ಬಳಿಕ ಜನದಟ್ಟಣೆ ಹೆಚ್ಚಾಗಿತ್ತು. ಆದರೆ ಈಗ ಜನ ದಟ್ಟಣೆ, ರೈಲಿಗಾಗಿ ಕಾಯುವಿಕೆ, ಪರದಾಟಗಳು ಹೆಚ್ಚಾಗಿ ಕಂಡು ಬರುತ್ತಿದೆ. ನೇರಳೆ ಮಾರ್ಗ ಐಟಿ ಕಾರಿಡಾರ್‌ಗೆ ಸಂಪರ್ಕಿಸಿದ ಮೊದಲ ಲೇನ್ ಆಗಿರುವುದರಿಂದ ಸಾರ್ವಜನಿಕರು ಸೇರಿದಂತೆ ಐಟಿ ಉದ್ಯೋಗಿಗಳು ಈ ಮಾರ್ಗವನ್ನು ಹೆಚ್ಚಾಗಿ ಬಳಸುತ್ತಿದ್ದಾರೆ.

ಬಹುತೇಕ ಐಟಿ ಕಂಪನಿಗಳು ವರ್ಕ್ ಫ್ರಂ ಹೋಮ್ ಪದ್ಧತಿಯನ್ನು ರದ್ದುಗೊಳಿಸಿ ಕಚೇರಿಗೆ ಆಗಮಿಸಿ ಕೆಲಸ ಮಾಡಬೇಕು ಎಂದು ಕಡ್ಡಾಯಗೊಳಿಸಿರುವ ಬೆನ್ನಲ್ಲೇ ನಮ್ಮ ಮೆಟ್ರೋ ಪ್ರಯಾಣಿಕರ ಸಂಖ್ಯೆಯಲ್ಲಿ ಧಿಡೀರ್ ಹೆಚ್ಚಳವಾಗಿದೆ. ಇನ್ನು ವರ್ಷದ ಹಿಂದೆ ಪ್ರಾರಂಭಿಸಲಾದ ಬೆಂಗಳೂರಿನ ಪಶ್ಚಿಮ ಭಾಗದ ಚಲ್ಲಘಟ್ಟ ಮತ್ತು ಪೂರ್ವ ಭಾಗದ ಕಾಡುಗೋಡಿ ವಿಸ್ತೃತ ನೇರಳೆ ಮೆಟ್ರೋ ರೈಲುಗಳಲ್ಲಿ ಪ್ರಯಾಣಿಕರ ಸಂಖ್ಯೆ ಹೆಚ್ಚಾಗಿ ಈಗಂತೂ ಪ್ರತಿ ರೈಲಿನ ಬೋಗಿಗಳಲ್ಲಿಯೂ ಜನರು ತುಂಬಿ ತುಳುಕುತ್ತಿದ್ದಾರೆ.

ನಮ್ಮ ಮೆಟ್ರೋ ಅಧಿಕಾರಿಗಳು ಈ ಕುರಿತು ಮಾತನಾಡಿ, ಐಟಿ ಕಂಪನಿಗಳು ಹೆಚ್ಚಿರುವ ಮಾರ್ಗದಲ್ಲಿ ಪ್ರಯಾಣಿಕರ ಸಂಖ್ಯೆ ದಿನವೊಂದಕ್ಕೆ 8 ಲಕ್ಷವನ್ನೂ ಮೀರಿದೆ. ಐಟಿ ಕಂಪನಿಗಳಲ್ಲಿ ಕಚೇರಿಗೆ ಆಗಮಿಸಿ ಕೆಲಸ ನಿರ್ವಹಿಸಬೇಕು ಎಂದು ಕಡ್ಡಾಯಗೊಳಿಸಿರುವುರಿಂದ ರೈಲುಗಳಲ್ಲಿ ಪ್ರಯಾಣಿಕರ ಸಂಖ್ಯೆಯಲ್ಲಿ ಹೆಚ್ಚಳವಾಗಿದೆ. ಸಮಸ್ಯೆ ಬಗೆಹರಿಸಲು ಸಾಧ್ಯವಿರುವ ಎಲ್ಲ ಪ್ರಯತ್ನಗಳನ್ನೂ ಮಾಡುತ್ತಿದ್ದೇವೆ. ಸದ್ಯ ನಾಡಪ್ರಭು ಕೆಂಪೇಗೌಡ ಮೆಜೆಸ್ಟಿಕ್ ಇಂಟರ್ ಚೇಂಜ್ ನಿಲ್ದಾಣದಿಂದ ವೈಟ್ ಫೀಲ್ಡ್ ಕಡೆ ಸಾಗುವ ಮೆಟ್ರೋ ನಿಲ್ದಾಣದ ಕಡೆಗೆ ಲೂಪ್ ಸೇವೆಯನ್ನು ಆರಂಭಿಸಲಾಗಿದೆ ಎಂದು ತಿಳಿಸಿದ್ದಾರೆ.

ಇದನ್ನೂ ಓದಿ: ನಮ್ಮ ಮೆಟ್ರೋ ಪ್ರಯಾಣಿಕರ ಅನುಕೂಲಕ್ಕಾಗಿ ಬಿಎಂಟಿಸಿಯಿಂದ ಹೊಸ ಫೀಡರ್ ಬಸ್ ಸೇವೆ - BMTC Feeder Bus Service

ETV Bharat Logo

Copyright © 2024 Ushodaya Enterprises Pvt. Ltd., All Rights Reserved.