ETV Bharat / state

ರೇವ್ ಪಾರ್ಟಿ ಪ್ರಕರಣ: ತನಿಖೆ ನಡೆಸಿದ ಸಿಸಿಬಿ ಪೊಲೀಸರ ವಿರುದ್ಧ ದೂರು - Complaint against CCB police - COMPLAINT AGAINST CCB POLICE

ಬೆಂಗಳೂರು ನಗರದ ಹೊರವಲಯದಲ್ಲಿ ನಡೆದ ರೇವ್ ಪಾರ್ಟಿ ಪ್ರಕರಣದ ತನಿಖೆ ನಡೆಸಿದ ಸಿಸಿಬಿ ಪೊಲೀಸರ ವಿರುದ್ಧ ಮಾನವ ಹಕ್ಕುಗಳ ಆಯೋಗಕ್ಕೆ ದೂರು ಸಲ್ಲಿಕೆಯಾಗಿದೆ.

ಪಾರ್ಟಿ ಸಾಂದರ್ಭಿಕ ಫೋಟೋ.
ಪಾರ್ಟಿ ಸಾಂದರ್ಭಿಕ ಫೋಟೋ. (ETV Bharat)
author img

By ETV Bharat Karnataka Team

Published : Oct 4, 2024, 11:38 AM IST

ಬೆಂಗಳೂರು: ನಗರದ ಹೊರವಲಯದಲ್ಲಿ ರೇವ್​​ ಪಾರ್ಟಿ ಮಾಡಿದ ಪ್ರಕರಣದ ತನಿಖೆ ನಡೆಸಿದ ಸಿಸಿಬಿ ಅಧಿಕಾರಿಗಳ ವಿರುದ್ಧವೇ ಆರೋಪ ಕೇಳಿ ಬಂದಿದ್ದು ಲೋಕಾಯುಕ್ತ ಹಾಗೂ ರಾಜ್ಯ ಮಾನವ ಹಕ್ಕುಗಳ ಆಯೋಗಕ್ಕೆ ದೂರು ಸಲ್ಲಿಕೆಯಾಗಿದೆ. ಪಾರ್ಟಿಯಲ್ಲಿ ಭಾಗಿಯಾದವರಿಂದ ಸುಲಿಗೆ ಮತ್ತಿತರ ಗಂಭೀರ ಆರೋಪಗಳು ಕೇಳಿ ಬಂದಿದ್ದು, ಆರ್.ಟಿ.ಐ ಕಾರ್ಯಕರ್ತ ವಿಜಯ್​ ಡೆನ್ನಿಸ್​ ಎನ್ನುವವರು ದೂರು ಸಲ್ಲಿಸಿದ್ದಾರೆ.

ಆರೋಪವೇನು.?: ರೇವ್​ ಪಾರ್ಟಿ ನಡೆಸುತ್ತಿದ್ದ ಆರೋಪದಡಿ ನಗರದ ಹೊರವಲಯದ ಫಾರ್ಮ್​ ಹೌಸ್​ನ ಮೇಲೆ ಮೇ 19 ರಂದು ದಾಳಿ ನಡೆಸಿದ್ದ ಸಿಸಿಬಿ ಪೊಲೀಸರು ಕಾನೂನು ಪ್ರಕ್ರಿಯೆಗಳನ್ನು ಮಾಡದೇ ಸುಲಿಗೆಗೆ ಮುಂದಾಗಿದ್ದಾರೆ. ಪಾರ್ಟಿಯಲ್ಲಿ ಭಾಗಿಯಾಗಿದ್ದವರಿಗೆ ಪ್ರಕರಣ ದಾಖಲಿಸುವುದಾಗಿ ಬೆದರಿಸಿ ತಲಾ 10 ಲಕ್ಷ ರೂ. ಬೇಡಿಕೆಯಿಟ್ಟಿದ್ದಾರೆ. ಪಾರ್ಟಿಯಲ್ಲಿ ಭಾಗಿಯಾದ್ದ ವ್ಯಕ್ತಿಯೊಬ್ಬರು ಮಾದಕ ಸೇವನೆ ಮಾಡಿರುವುದರ ಕುರಿತ ವೈದ್ಯಕೀಯ ಪರೀಕ್ಷೆ ವರದಿ ಪಾಸಿಟೀವ್ ಬಂದಿರುವುದಾಗಿ ಬೆದರಿಸಲಾಗಿದೆ. ಹಾಗೂ ಅವರ ವಾಹನವನ್ನು ಬಿಡುಗಡೆ ಮಾಡಲು 4.2 ಲಕ್ಷ ರೂ. ಹಣಕ್ಕೆ ಬೇಡಿಕೆ ಇಡಲಾಗಿದೆ. ಪೊಲೀಸರು ತಮಗೆ ಅನುಕೂಲವಾಗುವಂತೆ ವೈದ್ಯಕೀಯ ಪರೀಕ್ಷೆಯನ್ನು ಖಾಸಗಿ ಆಸ್ಪತ್ರೆಯಲ್ಲಿ ಮಾಡಿಸಿದ್ದಾರೆ ಎಂದು ಆರೋಪಿಸಲಾಗಿದೆ.

ತನಿಖಾಧಿಕಾರಿಗಳ ವಿರುದ್ಧ ದೂರಿನ ಕುರಿತು ಪ್ರತಿಕ್ರಿಯಿಸಿರುವ ಬೆಂಗಳೂರು ನಗರ ಪೊಲೀಸ್​ ಆಯುಕ್ತ ಬಿ. ದಯಾನಂದ್​, "ಪ್ರಕರಣದ ಪಾರದರ್ಶಕ ತನಿಖೆ ನಡೆಸಿ ಚಾರ್ಜ್ ಶೀಟ್ ಸಲ್ಲಿಸಲಾಗಿದೆ. ತನಿಖಾಧಿಕಾರಿಗಳ ವಿರುದ್ಧ ದೂರು ನೀಡಿರುವುದರ ಕುರಿತು ಯಾವುದೇ ಮಾಹಿತಿಯಿಲ್ಲ'' ಎಂದಿದ್ದಾರೆ.

ಇದನ್ನೂ ಓದಿ: ಮೈಸೂರು ಹೊರವಲಯದಲ್ಲಿ ರೇವ್ ಪಾರ್ಟಿ?; ತಡರಾತ್ರಿ ಪೊಲೀಸರ ದಾಳಿ, ಯುವಕ-ಯುವತಿಯರು ವಶಕ್ಕೆ - Mysuru Police Raid

ETV Bharat Logo

Copyright © 2024 Ushodaya Enterprises Pvt. Ltd., All Rights Reserved.