ETV Bharat / state

ಮೈಸೂರು: ಸ್ನೇಹಮಯಿ ಕೃಷ್ಣರನ್ನು ಬಂಧಿಸುವಂತೆ ಜಿಲ್ಲಾ ಕಾಂಗ್ರೆಸ್ ದೂರು

ಸಿಎಂ ಸಿದ್ದರಾಮಯ್ಯ ಕುಟುಂಬದ ವಿರುದ್ಧ ಸುಳ್ಳು ಸುದ್ದಿ ಹರಡುತ್ತಿರುವ ಸ್ನೇಹಮಯಿ ಕೃಷ್ಣ ಅವರನ್ನು ಬಂಧಿಸುವಂತೆ ಮೈಸೂರು ಜಿಲ್ಲಾ ಕಾಂಗ್ರೆಸ್‌ ಮುಖಂಡರು ಪೊಲೀಸರಿಗೆ ದೂರು ನೀಡಿದ್ದಾರೆ.

ಜಿಲ್ಲಾ ಕಾಂಗ್ರೆಸ್​ನಿಂದ ದೂರು
ಜಿಲ್ಲಾ ಕಾಂಗ್ರೆಸ್​ನಿಂದ ದೂರು (ETV Bharat)
author img

By ETV Bharat Karnataka Team

Published : Nov 12, 2024, 11:42 AM IST

ಮೈಸೂರು: ಮುಡಾ ಪ್ರಕರಣದಲ್ಲಿ ಸಿಎಂ ಸಿದ್ದರಾಮಯ್ಯ ಕುಟುಂಬದ ವಿರುದ್ಧ ಸುಳ್ಳು ಸುದ್ದಿಗಳನ್ನು ಹರಡುತ್ತಿರುವ ಸಾಮಾಜಿಕ ಹೋರಾಟಗಾರ ಸ್ನೇಹಮಯಿ ಕೃಷ್ಣ ಅವರನ್ನು ಬಂಧಿಸುವಂತೆ ಮೈಸೂರು ಜಿಲ್ಲಾ ಕಾಂಗ್ರೆಸ್ ಮುಖಂಡರು ಮಂಗಳವಾರ ದೇವರಾಜ ಪೊಲೀಸ್​ ಠಾಣೆಗೆ ದೂರು ನೀಡಿದರು.

ಸ್ನೇಹಮಯಿ ಕೃಷ್ಣ ಅವರು ಮುಡಾ ಪ್ರಕರಣದಲ್ಲಿ ಮುಖ್ಯಮಂತ್ರಿ ಕುಟುಂಬ ಹಾಗೂ ಮುಖ್ಯಮಂತ್ರಿಗಳ ವಿರುದ್ಧ ವ್ಯವಸ್ಥಿತವಾಗಿ ಸಾಮಾಜಿಕ ಜಾಲತಾಣಗಳು ಹಾಗೂ ಮಾಧ್ಯಮಗಳಲ್ಲಿ ಸುಳ್ಳು ಸುದ್ದಿಗಳನ್ನು ಹರಡುತ್ತಿದ್ದಾರೆ. ಈ ಕೂಡಲೇ ಅವರನ್ನು ಬಂಧಿಸಬೇಕು ಹಾಗೂ ಸಿಎಂ‌ ಪತ್ನಿ ಶ್ರೀಮತಿ ಪಾರ್ವತಿ ಸಿದ್ದರಾಮಯ್ಯ ನಿವೇಶನ ನೋಂದಣಿ ಮುದ್ರಾಂಕ ಶುಲ್ಕವನ್ನು ಮುಡಾದ ವಿಶೇಷ ತಹಶೀಲ್ದಾರ್ ಪಾವತಿಸಿದ್ದಾರೆ ಎಂದು ಅಪಪ್ರಚಾರ ಮಾಡುತ್ತಿದ್ದಾರೆ. ಆದರೆ, ಅವರ ನಿವೇಶನಕ್ಕೆ ಅವರೇ 550 ರೂಪಾಯಿ ಶುಲ್ಕ ಪಾವತಿಸಿದ್ದಾರೆ‌. ಅದರೂ, ಈ ವಿಚಾರದಲ್ಲಿ ಸ್ನೇಹಮಯಿ ಕೃಷ್ಣ ಸಿಎಂ ಹಾಗೂ ಕುಟುಂಬದ ವಿರುದ್ಧ ಅಪಪ್ರಚಾರ ಮಾಡುತ್ತಿದ್ದಾರೆ ಎಂದು ದೂರಿನಲ್ಲಿ ತಿಳಿಸಿದ್ದಾರೆ.

ಕೆಪಿಸಿಸಿ ಮಾಧ್ಯಮ ವಕ್ತಾರ ಎಂ.ಲಕ್ಷ್ಮಣ್ (ETV Bharat)

ಕೆಪಿಸಿಸಿ ಮಾಧ್ಯಮ ವಕ್ತಾರ ಎಂ.ಲಕ್ಷ್ಮಣ್ ಮಾತನಾಡಿ, ಕೂಡಲೇ ಸ್ನೇಹಮಯಿ ಕೃಷ್ಣರನ್ನು ಬಂಧಿಸಿ ವಿಚಾರಣೆಗೆ ಒಳಪಡಿಸಬೇಕೆಂದು ಇದೇ ವೇಳೆ ಆಗ್ರಹಿಸಿದರು.

ಇದನ್ನೂ ಓದಿ: ಮುಡಾ ಸಾಮಾನ್ಯ‌ ಸಭೆಯಲ್ಲಿ ಆದ ನಿರ್ಣಯಗಳು ಏನು?: ಸಭೆ ನಂತರ ಶಾಸಕರು ಹೇಳಿದ್ದೇನು?

ETV Bharat Logo

Copyright © 2024 Ushodaya Enterprises Pvt. Ltd., All Rights Reserved.