ಮಂಗಳೂರು : ದಕ್ಷಿಣ ಭಾರತ ಪ್ರತ್ಯೇಕ ರಾಷ್ಟ್ರ ಆಗಬೇಕು ಎಂದು ಹೇಳಿಕೆ ನೀಡಿರುವ ಸಂಸದ, ಕಾಂಗ್ರೆಸ್ ಮುಖಂಡ ಹಾಗೂ ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಸಹೋದರ ಡಿ ಕೆ ಸುರೇಶ್ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಬಿಜೆಪಿ ರಾಜ್ಯ ವಕ್ತಾರ ವಿಕಾಸ್ ಪುತ್ತೂರು ಮಂಗಳೂರಿನ ಎರಡನೇ ಜೆಎಂಎಫ್ಸಿ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದಾರೆ.
ನ್ಯಾಯಾಲಯಕ್ಕೆ ದೂರು ನೀಡಿದ ಬಿಜೆಪಿ ಮುಖಂಡ ವಿಕಾಸ್ ಬಳಿಕ ಸೂಕ್ತ ಕ್ರಮಕ್ಕೆ ಆಗ್ರಹಿಸಿದ್ದಾರೆ. ಮಂಗಳೂರು ಉತ್ತರ ಪೊಲೀಸ್ ಠಾಣೆ, ಮಂಗಳೂರು ಕಮಿಷನರ್ ಹಾಗೂ ನ್ಯಾಯಾಲಯಕ್ಕೆ ದೂರು ಸಲ್ಲಿಸಿತು. ಡಿ ಕೆ ಸುರೇಶ್ ಅವರು ಸಂಸದರಾದರೂ ಭಾರತ ವಿಭಜಿಸುವ, ಕುಮ್ಮಕ್ಕು ನೀಡುವ ಹೇಳಿಕೆ ನೀಡಿದ್ದಾರೆ. ಸುರೇಶ್ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಅವರು ಮನವಿಯಲ್ಲಿ ತಿಳಿಸಿದ್ದಾರೆ. ಫೆಬ್ರವರಿ 7ನೇ ತಾರೀಖಿನಂದು ದೂರಿನ ವಿಚಾರಣೆ ಇರುವುದಾಗಿ ವಿಕಾಸ್ ತಿಳಿಸಿದ್ದಾರೆ.
ದೂರು ನೀಡಿದ ಬಳಿಕ ಮಾತನಾಡಿದ ವಿಕಾಸ್ ಪಿ, ಕಾಂಗ್ರೆಸ್ ಸಂಸದ ಡಿ. ಕೆ ಸುರೇಶ್ ದೇಶ ವಿರೋಧಿ ಹೇಳಿಕೆ ನೀಡಿದ್ದಾರೆ. ಅವರು ಸಂಸದರಾಗಿದ್ದರೂ ಭಾರತವನ್ನು ವಿಭಜಿಸಲು ಷಡ್ಯಂತ್ರ ಮಾಡಿದ್ದಾರೆ. ಅವರ ವಿರುದ್ಧ ಅಗತ್ಯ ಕ್ರಮ ಕೈಗೊಳ್ಳುವಂತೆ ಮಂಗಳೂರು ನಗರ ಪೊಲೀಸ್ ಕಮಿಷನರ್ ಹಾಗೂ ನ್ಯಾಯಾಲಯಕ್ಕೆ ಮನವಿ ಮಾಡಿದ್ದೇನೆ. ಅಲ್ಲದೇ ಕಾಂಗ್ರೆಸ್ ಸಂಸದನ ವಿರುದ್ಧ ಎಫ್ಐಆರ್ ದಾಖಲಿಸಿ ತನಿಖೆ ನಡೆಸಲು ಮಂಗಳೂರು ಉತ್ತರ ಪೊಲೀಸ್ ಠಾಣೆಯ ಠಾಣಾಧಿಕಾರಿಯವರಿಗೆ ಆದೇಶಿಸುವಂತೆ ನ್ಯಾಯಾಲಯಕ್ಕೆ ಮನವಿ ಮಾಡಿರುವುದಾಗಿ ತಿಳಿಸಿದ್ದಾರೆ.
ಇದನ್ನೂ ಓದಿ : ದೇಶ ವಿಭಜನೆಯ ಬಗ್ಗೆ ಡಿಕೆಶಿ ಹೇಳಿಕೆ: ಮತದ ಆಸೆಗೆ ದೇಶ ಬೇರ್ಪಡಿಸುವ ಹೇಳಿಕೆ ನೀಡಿದ್ದಾರೆ: ಬೆಲ್ಲದ ಆರೋಪ