ETV Bharat / state

ಪೊಲೀಸ್ ಕರ್ತವ್ಯಕ್ಕೆ ಅಡ್ಡಿ ಪ್ರಕರಣ: ಪುನೀತ್ ಕೆರೆಹಳ್ಳಿಗೆ ಷರತ್ತುಬದ್ಧ ಜಾಮೀನು ಮಂಜೂರು - Puneeth Kerehalli get bail - PUNEETH KEREHALLI GET BAIL

ಪೊಲೀಸರ ಕರ್ತವ್ಯಕ್ಕೆ ಅಡ್ಡಿ ಆರೋಪದಲ್ಲಿ ಅರೆಸ್ಟ್‌ ಅಗಿದ್ದ ಪುನೀತ್‌ ಕೆರೆಹಳ್ಳಿಗೆ ಬೆಂಗಳೂರು ನಗರದ 5ನೇ ಎಸಿಎಂಎಂ ನ್ಯಾಯಾಲಯ ಷರತ್ತುಬದ್ಧ ಜಾಮೀನು ಮಂಜೂರು ಮಾಡಿದೆ.

ಪುನೀತ್ ಕೆರೆಹಳ್ಳಿಗೆ ಷರತ್ತುಬದ್ಧ ಜಾಮೀನು ಮಂಜೂರು
ಪುನೀತ್ ಕೆರೆಹಳ್ಳಿಗೆ ಷರತ್ತುಬದ್ಧ ಜಾಮೀನು ಮಂಜೂರು (ETV Bharat)
author img

By ETV Bharat Karnataka Team

Published : Jul 30, 2024, 6:39 PM IST

ಬೆಂಗಳೂರು: ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರೋಪದಡಿ ಬಂಧನಕ್ಕೊಳಗಾಗಿದ್ದ ಹಿಂದೂ ಸಂಘಟನೆ ಮುಖಂಡ ಪುನೀತ್ ಕೆರೆಹಳ್ಳಿಗೆ ನಗರದ 5ನೇ ಎಸಿಎಂಎಂ ನ್ಯಾಯಾಲಯ ಷರತ್ತುಬದ್ಧ ಜಾಮೀನು ಮಂಜೂರು ಮಾಡಿದೆ. ಜೈಪುರದಿಂದ ಬೆಂಗಳೂರಿಗೆ ಆಮದಾಗುತ್ತಿದ್ದ ಕುರಿ ಮಾಂಸದಲ್ಲಿ ನಾಯಿ ಮಾಂಸ ಮಿಶ್ರಿತವಾಗಿದೆ ಎಂದು ಆರೋಪಿಸಿದ್ದ ಪುನೀತ್ ಕೆರೆಹಳ್ಳಿ ನೇತೃತ್ವದ ರಾಷ್ಟ್ರ ರಕ್ಷಣಾ ಪಡೆ ಸಂಘಟನೆಯ ಸದಸ್ಯರು ಜುಲೈ 26ರಂದು ಮೆಜೆಸ್ಟಿಕ್ ರೈಲ್ವೆ ನಿಲ್ದಾಣಕ್ಕೆ ಬಂದಿಳಿದ ಮಾಂಸದ ಬಾಕ್ಸ್​ಗಳನ್ನು ತಡೆದು ಪ್ರತಿಭಟಿಸಿದ್ದರು.

ಈ ವೇಳೆ ಪರಿಸ್ಥಿತಿ ನಿಯಂತ್ರಣಕ್ಕೆ ಯತ್ನಿಸಿದ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರೋಪದಡಿ ಪುನೀತ್ ಕೆರೆಹಳ್ಳಿಯನ್ನು ಕಾಟನ್ ಪೇಟೆ ಠಾಣಾ ಪೊಲೀಸರು ಬಂಧಿಸಿದ್ದರು. ಸದ್ಯ ಪುನಿತ್ ಕೆರೆಹಳ್ಳಿಯಗೆ ಜಾಮೀನು ನೀಡಿರುವ ನ್ಯಾಯಾಲಯ ಪ್ರತಿ ತಿಂಗಳ ಮೊದಲ ಭಾನುವಾರ ಠಾಣೆಗೆ ಹಾಜರಾಗಿ ಸಹಿ ಹಾಕಬೇಕು, ವಿದೇಶ ಪ್ರಯಾಣ ಮಾಡಬಾರದು ಎಂಬ ಷರತ್ತುಗಳನ್ನ ವಿಧಿಸಿದೆ.

ಇದನ್ನೂ ಓದಿ: ಪೊಲೀಸರ ಕರ್ತವ್ಯಕ್ಕೆ ಅಡ್ಡಿ ಆರೋಪ; ಪುನೀತ್ ಕೆರೆಹಳ್ಳಿ ಬಂಧನ - Puneet Kerehalli Arrest

ETV Bharat Logo

Copyright © 2025 Ushodaya Enterprises Pvt. Ltd., All Rights Reserved.