ETV Bharat / state

ಚನ್ನಪಟ್ಟಣ ಉಪ ಚುನಾವಣೆ: ಮುಹೂರ್ತಕ್ಕೂ ಮುನ್ನವೇ ರಾಜಕೀಯ ಚದುರಂಗದಾಟ - Channapatna By Election - CHANNAPATNA BY ELECTION

ರಾಮನಗರ ಜಿಲ್ಲೆಯ ಬೊಂಬೆನಗರಿ ಪ್ರಸಿದ್ಧಿಯ ಚನ್ನಪಟ್ಟಣದಲ್ಲಿ ಉಪ ಚುನಾವಣೆಯ ಬಿಸಿ ಏರುತ್ತಿದೆ. ಚುನಾವಣೆಗೆ ದಿನಾಂಕ ಘೋಷಣೆಗೆ ಮುನ್ನವೇ ರಾಜಕೀಯದ ಚದುರಂಗದಾಟ ಶುರುವಾಗಿದೆ. ಕೆಪಿಸಿಸಿ ಅಧ್ಯಕ್ಷ, ಡಿಸಿಎಂ ಡಿ.ಕೆ.ಶಿವಕುಮಾರ್ ಖುದ್ದು ಕ್ಷೇತ್ರದಲ್ಲಿ ಸಂಚಾರ ಮಾಡುತ್ತಿರುವುದು ತೀವ್ರ ಕುತೂಹಲ ಕೆರಳಿಸಿದೆ.

Channapatna assembly byelection
ಚನ್ನಪಟ್ಟಣ ಉಪಚುನಾವಣೆ (ETV Bharat)
author img

By ETV Bharat Karnataka Team

Published : Jun 20, 2024, 6:47 PM IST

ಬೆಂಗಳೂರು: ಹೆಚ್.ಡಿ.ಕುಮಾರಸ್ವಾಮಿ ರಾಜೀನಾಮೆಯಿಂದ ತೆರವಾದ ರಾಮನಗರ ಜಿಲ್ಲೆಯ ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಗೆ ರಾಜಕೀಯ ಲೆಕ್ಕಾಚಾರಗಳು ಆರಂಭವಾಗಿವೆ. ಹೆಚ್​​ಡಿಕೆ ಲೋಕಸಭೆ ಚುನಾವಣೆಯಲ್ಲಿ ಗೆದ್ದ ಬಳಿಕ ಚನ್ನಪಟ್ಟಣ ಕ್ಷೇತ್ರದ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಇದೀಗ ಈ ಕ್ಷೇತ್ರದ ಮೇಲೆ ಕಾಂಗ್ರೆಸ್ ಹಾಗೂ ಎನ್‌ಡಿಎ ಮೈತ್ರಿ ಪಕ್ಷಗಳಾದ ಬಿಜೆಪಿ ಹಾಗೂ ಜೆಡಿಎಸ್ ಕಣ್ಣಿಟ್ಟಿವೆ.

ಮುಖ್ಯವಾಗಿ, ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್​ ಸಂಸದರಾಗಿದ್ದ ಡಿ.ಕೆ.ಸುರೇಶ್ ಸೋಲು ಅನುಭವಿಸಿದ್ದಾರೆ. ಇದರ ಸೇಡು ತೀರಿಸಿಕೊಳ್ಳಬೇಕೆಂದು ಹಿರಿಯ ಸಹೋದರ, ಡಿಸಿಎಂ ಡಿ.ಕೆ.ಶಿವಕುಮಾರ್ ಪಣ ತೊಟ್ಟಿದ್ದಾರೆ. ಈ ನಿಟ್ಟಿನಲ್ಲಿ ಹೆಚ್​​ಡಿಕೆ ರಾಜೀನಾಮೆಯಿಂದ ತೆರವಾದ ಚನ್ನಪಟ್ಟಣಕ್ಕೆ ಉಪ ಚುನಾವಣೆ ಘೋಷಣೆಯಾಗುವ ಮುನ್ನವೇ ಅವರು ಶಸ್ತ್ರಾಭ್ಯಾಸಕ್ಕೆ ಇಳಿದಿದ್ದಾರೆ.

ಚನ್ನಪಟ್ಟಣ ಕ್ಷೇತ್ರದ ವಿವಿಧ ದೇವಾಲಯಗಳಿಗೆ ಭೇಟಿ ನೀಡುವ ನೆಪದಲ್ಲಿ ಡಿಕೆಶಿ ಜನರ ನಾಡಿಮಿಡಿತ ಅರಿಯುತ್ತಿದ್ದಾರೆ. ಉಪಚುನಾವಣೆಯಲ್ಲಿ ಯಾರನ್ನು ಸ್ಪರ್ಧೆಗಿಳಿಸಿದರೆ ಗೆಲುವು ಸಾಧ್ಯ ಎಂಬ ಬಗ್ಗೆ ಜನಾಭಿಪ್ರಾಯ ಕಲೆ ಹಾಕುತ್ತಿದ್ದಾರೆ. ಜೆಡಿಎಸ್‌‍ ಕೂಡ ಈ ಕ್ಷೇತ್ರವನ್ನು ಉಳಿಸಿಕೊಳ್ಳಲು ಕಾರ್ಯತಂತ್ರ ರೂಪಿಸುತ್ತಿದೆ. ಹೀಗಾಗಿ ಬಿಜೆಪಿ ಹಾಗೂ ಜೆಡಿಎಸ್‌‍ನಲ್ಲಿ ಈ ಕ್ಷೇತ್ರದಿಂದ ಸ್ಪರ್ಧೆಗಿಳಿಯಲು ಪೈಪೋಟಿ ಏರ್ಪಟ್ಟಿದೆ. ಆದರೆ, ಉಪ ಚುನಾವಣೆಗೆ ಯಾರಿಗೆ ಟಿಕೆಟ್‌ ಎಂಬ ಸುಳಿವನ್ನು ಯಾವ ಪಕ್ಷಗಳೂ ಬಿಟ್ಟುಕೊಟ್ಟಿಲ್ಲ.

ಇದನ್ನೂ ಓದಿ: 'ವಾಮಮಾರ್ಗದಿಂದ ಉಪಚುನಾವಣೆ ಗೆಲ್ಲಲು ಡಿ.ಕೆ.ಶಿವಕುಮಾರ್ ಹುನ್ನಾರ' - C P Yogeshwar

ಮಂಡ್ಯ ಲೋಕಸಭೆ ಕ್ಷೇತ್ರದಲ್ಲಿ ಗೆದ್ದು ಬೀಗಿರುವ ಕುಮಾರಸ್ವಾಮಿ, ಕೇಂದ್ರದಲ್ಲಿ ಮಂತ್ರಿ ಸ್ಥಾನವನ್ನೂ ಪಡೆದುಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ. ಆದರೆ, ಈ ಕ್ಷೇತ್ರದ ವ್ಯಾಪ್ತಿಯಲ್ಲಿ ಬರುವ ಚನ್ನಪಟ್ಟಣದಲ್ಲಿ ಕಾಂಗ್ರೆಸ್ ನಿರೀಕ್ಷೆಗೂ ಮೀರಿದ ಮತಗಳನ್ನು ಪಡೆದಿದೆ. ಇದು ಹೆಚ್​​ಡಿಕೆ ಹಾಗೂ ಬಿಜೆಪಿ ನಾಯಕ ಸಿ.ಪಿ.ಯೋಗೇಶ್ವರ್ ಅವರಿಗೆ ಹೊಸ ಸವಾಲನ್ನು ತಂದೊಡ್ಡಿದೆ. ಅಲ್ಲದೇ, ಮುಂಬರುವ ಉಪಚುನಾವಣೆಯಲ್ಲಿ ಸೋಲೊಪ್ಪಿಕೊಳ್ಳಲು ಹೆಚ್​​ಡಿಕೆ ಅವರಿಗೆ ಸಾಧ್ಯವಿಲ್ಲ.

ಇದರ ನಡುವೆ ಡಿಕೆಶಿ ಚನ್ನಪಟ್ಟಣದತ್ತ ತಮ್ಮ ದೃಷ್ಠಿ ನೆಟ್ಟಿದ್ದಾರೆ. ಚನ್ನಪಟ್ಟಣ ಈ ಹಿಂದೆ ಅವರ ಹಿಡಿತದಲ್ಲಿಯೇ ಇದ್ದ ಕ್ಷೇತ್ರ. ಹೀಗಾಗಿ ಉಪಚುನಾವಣೆಯನ್ನು ಗಂಭೀರವಾಗಿ ಪರಿಗಣಿಸಿದ್ದಾರೆ. ಬಿಜೆಪಿ- ಜೆಡಿಎಸ್‌ನ ಸ್ಥಳೀಯ ಮುಖಂಡರ ದೊಡ್ಡ ಪಟ್ಟಿ ಸಿದ್ಧಪಡಿಸಿ, ಹಂತಹಂತವಾಗಿ ಅವರನ್ನು ತಮ್ಮತ್ತ ಸೆಳೆಯಲು ಮುಂದಾಗಿದ್ದಾರೆ ಎಂದೇ ಹೇಳಲಾಗುತ್ತಿದೆ. ಡಿಕೆಶಿ ಕಾರ್ಯತಂತ್ರ ಯಶಕಂಡರೆ ಖಂಡಿತವಾಗಿಯೂ ಮೈತ್ರಿ ಅಭ್ಯರ್ಥಿಗೆ ಹಿನ್ನಡೆಯಾಗುವ ಸಾಧ್ಯತೆ ಇದೆ. ಆದರೆ, ಇದಕ್ಕೆ ಅವಕಾಶ ನೀಡದಂತೆ ಮೈತ್ರಿ ಪಕ್ಷಗಳ ನಾಯಕರಾದ ಹೆಚ್​ಡಿಕೆ ಮತ್ತು ಯೋಗೇಶ್ವರ್ ಹೆಣೆಯುವ ಚಕ್ರವ್ಯೂಹವನ್ನು ಡಿಕೆಶಿ ಭೇದಿಸಲೇಬೇಕಾಗುತ್ತದೆ.

ಮುಖ್ಯಮಂತ್ರಿ ಸ್ಥಾನದ ಮೇಲೆ ಕಣ್ಣಿಟ್ಟಿರುವ ಡಿ.ಕೆ.ಶಿವಕುಮಾರ್‌ಗೆ ಚನ್ನಪಟ್ಟಣ ಕ್ಷೇತ್ರ ಕಬ್ಬಿಣದ ಕಡಲೆಯಾಗಿದೆ. ಹಿಂದಿನ ವಿಧಾನಸಭೆ ಉಪಚುನಾವಣೆಗಳು ಆಡಳಿತ ಪಕ್ಷಕ್ಕೆ ಒಲಿದಿರುವ ಸಾಕಷ್ಟು ಉದಾಹರಣೆಗಳಿವೆ. ಕಾಂಗ್ರೆಸ್ ಸರ್ಕಾರ ಅಧಿಕಾರದಲ್ಲಿ ಇದ್ದರೂ ಚನ್ನಪಟ್ಟಣವನ್ನು ಅಷ್ಟು ಸುಲಭದಲ್ಲಿ ಕೈವಶ ಮಾಡಿಕೊಳ್ಳಲಾಗದು. ಇದರ ಅಂದಾಜು ಡಿಕೆಶಿ ಅವರಿಗೆ ಇರುವುದರಿಂದಲೇ ಚುನಾವಣೆ ಘೋಷಣೆಗೂ ಮುನ್ನವೇ ಮತಗಳ ಕ್ರೋಢೀಕರಣಕ್ಕೆ ಕೈ ಹಾಕಿದ್ದಾರೆ ಎನ್ನಲಾಗುತ್ತಿದೆ.

'ಕೈ' ಅಭ್ಯರ್ಥಿ ಯಾರು?: ಕ್ಷೇತ್ರದಲ್ಲಿ ಕಾಂಗ್ರೆಸ್‌‍ಗೆ ಅನುಕೂಲಕರವಾದ ವಾತಾವರಣ ಕಂಡುಬಂದು ವಿಶ್ವಾಸ ದೊರೆಯುವುದು ಖಾತ್ರಿಯಾದರೆ ಡಿ.ಕೆ.ಸುರೇಶ್‌ ಅವರನ್ನೇ ಉಪಚುನಾವಣೆಗೆ ಅಭ್ಯರ್ಥಿ ಮಾಡಲಾಗುತ್ತದೆ ಎಂಬ ಚರ್ಚೆ ನಡೆಯುತ್ತಿದೆ. ಆದರೆ, ತಾವು ಉಪಚುನಾವಣೆಯಲ್ಲಿ ಸ್ಪಧಿಸುವುದಿಲ್ಲ ಎಂದು ಸುರೇಶ್‌ ಸ್ಪಷ್ಟನೆ ನೀಡಿದ್ದಾರೆ. ಆದರೂ, ಡಿಕೆಶಿ ಕ್ಷೇತ್ರದ್ಯಂತ ಪ್ರವಾಸ ಕೈಗೊಂಡಿರುವುದು ರಾಜಕೀಯ ವಲಯದಲ್ಲಿ ತೀವ್ರ ಕುತೂಹಲ ಕೆರಳಿಸಿದೆ. ಆದರೆ, ಯಾರನ್ನು ಅಭ್ಯರ್ಥಿಯನ್ನಾಗಿಸಬೇಕು ಎಂಬ ಬಗ್ಗೆ ಇನ್ನೂ ತೀರ್ಮಾನ ಮಾಡಿಲ್ಲ. ಪಕ್ಷ ಹಾಗೂ ಮತದಾರರು ತಮ್ಮ ಸ್ಪರ್ಧೆ ಬಯಸಿದರೆ ವಿಧಿ ಇಲ್ಲ ಎಂದು ಮಾರ್ಮಿಕವಾಗಿ ನುಡಿದಿದ್ದಾರೆ.

ಮೈತ್ರಿ ಅಭ್ಯರ್ಥಿ ಯಾರು?: ಹೆಚ್​​ಡಿಕೆಯಿಂದ ತೆರವಾದ ಕ್ಷೇತ್ರಕ್ಕೆ ಜೆಡಿಎಸ್‌‍ ಯುವ ಘಟಕದ ಅಧ್ಯಕ್ಷ, ಪುತ್ರ ನಿಖಿಲ್‌ ಕುಮಾರಸ್ವಾಮಿ ಹೆಸರು ಮುಂಚೂಣಿಯಲ್ಲಿದೆ. ಚನ್ನಪಟ್ಟಣ ತಾಲೂಕು ಜೆಡಿಎಸ್‌‍ ಅಧ್ಯಕ್ಷ ಹಾಗೂ ರಾಜ್ಯ ಒಕ್ಕಲಿಗರ ಸಂಘದ ಪ್ರಧಾನ ಕಾರ್ಯದರ್ಶಿ ಎಚ್‌.ಸಿ.ಜಯಮುತ್ತು ಅವರಿಗೆ ಟಿಕೆಟ್‌ ನೀಡಬೇಕೆಂಬ ಒತ್ತಡವನ್ನು ಅಭಿಮಾನಿಗಳು ಕುಮಾರಸ್ವಾಮಿ ಮೇಲೆ ಹಾಕುತ್ತಿದ್ದಾರೆ.

ಮತ್ತೊಂದೆಡೆ, ಬಿಜೆಪಿ ನಾಯಕ ಸಿ.ಪಿ.ಯೋಗೇಶ್ವರ್‌ ಪ್ರಸ್ತುತ ವಿಧಾನಪರಿಷತ್‌ ಸದಸ್ಯರಾಗಿದ್ದು, ಉಪಚುನಾವಣೆಯಲ್ಲಿ ಸ್ಪರ್ಧೆಗಿಳಿಯುವ ಆಸಕ್ತಿ ಹೊಂದಿದ್ದಾರೆ. ಈಗಾಗಲೇ ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ ಹಾಗೂ ಕುಮಾರಸ್ವಾಮಿ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದ್ದಾರೆ. ಸದ್ಯಕ್ಕೆ ಚನ್ನಪಟ್ಟಣ ಉಪ ಚುನಾವಣೆಯ ಮೈತ್ರಿ ಅಭ್ಯರ್ಥಿ ಯಾರೆಂಬುದರ ಗುಟ್ಟು ಬಿಟ್ಟುಕೊಡದ ಹೆಚ್​ಡಿಕೆ, ಘೋಷಣೆಯಾದ ನಂತರ ಅಭ್ಯರ್ಥಿ ಆಯ್ಕೆ ಮಾಡುವುದಾಗಿ ತಿಳಿಸಿದ್ದಾರೆ.

ಇದನ್ನೂ ಓದಿ: ಚನ್ನಪಟ್ಟಣದ ಮತದಾರರು, ಪಕ್ಷ ಬಯಸಿದರೆ ಸ್ಪರ್ಧಿಸದೆ ವಿಧಿ ಇಲ್ಲ: ಡಿ.ಕೆ.ಶಿವಕುಮಾರ್

ETV Bharat Logo

Copyright © 2025 Ushodaya Enterprises Pvt. Ltd., All Rights Reserved.