ಬೆಂಗಳೂರು: ರಾಜ್ಯಕ್ಕೆ ನೀಡಬೇಕಾದ ಅನುದಾನದಲ್ಲಿ ತಾರತಮ್ಯ ಮಾಡಲಾಗುತ್ತಿದೆ ಆರೋಪಿಸಿ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರ ಬೆಂಗಳೂರು ಕಚೇರಿಗೆ ಮಸಿ ಬಳಿದು ಕಾಂಗ್ರೆಸ್ ಹಾಗೂ ಎನ್ಎಸ್ಯುಐ ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸಿದರು.
ರಾಜ್ಯಕ್ಕೆ ತೆರಿಗೆ ಅನ್ಯಾಯ ಖಂಡಿಸಿ ಕಾಂಗ್ರೆಸ್ ಕಾರ್ಯಕರ್ತರು, ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ನಾಮಫಲಕಕ್ಕೆ ಮಸಿ ಬಳಿದರು. ಬೆಂಗಳೂರಿನ ಮಿಲ್ಲರ್ಸ್ ರಸ್ತೆಯಲ್ಲಿರುವ ಸಚಿವರ ಕಚೇರಿ ಮುಂದೆ ಧರಣಿ ನಡೆಸಿದರು. ಕರ್ನಾಟಕಕ್ಕೆ ಬರಬೇಕಾದ ತೆರಿಗೆ ಹಣವನ್ನು ನಮಗೆ ಕೊಡಿ, ನಮ್ಮ ತೆರಿಗೆ ನಮ್ಮ ಹಕ್ಕು, ಕರ್ನಾಟಕದ ಸಂಪತ್ತನ್ನು ಲೂಟಿ ಮಾಡುತ್ತಿರುವ ಕೇಂದ್ರ ಸರ್ಕಾರಕ್ಕೆ ಧಿಕ್ಕಾರ ಎಂಬ ಪೋಸ್ಟರ್ ಹಿಡಿದ ಕಾರ್ಯಕರ್ತರು, ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ವಿರುದ್ಧ ಧಿಕ್ಕಾರ ಕೂಗಿದರು.
ಇದನ್ನೂ ಓದಿ: ತೆರಿಗೆದಾರರ ಹಣ ಬಳಸಿಕೊಂಡು ಕಾಂಗ್ರೆಸ್ ಸುಳ್ಳು ಹೇಳುತ್ತಿದೆ: ಪ್ರಹ್ಲಾದ್ ಜೋಶಿ
ಮಸಿ ಬಳಿದ ಹಿನ್ನೆಲೆಯಲ್ಲಿ ಕಾರ್ಯಕರ್ತರನ್ನು ವಿಧಾನಸೌಧ ಠಾಣೆ ಪೊಲೀಸರು ವಶಕ್ಕೆ ಪಡೆದರು. ಸೂರಜ್, ಲಕ್ಷ್ಯ ರಾಜ್, ನಿಶ್ಚಯ್ ಗೌಡ, ನರೇಶ್ ಹಾಗೂ ಕಾರ್ತಿಕ್ ಎಂಬುವರನ್ನು ವಶಕ್ಕೆ ಪಡೆಯಲಾಗಿದೆ.
ಇದನ್ನೂ ಓದಿ: ಅನುದಾನ ಬಿಡುಗಡೆಯಲ್ಲಿ ತಾರತಮ್ಯ ಮಾಡಿಲ್ಲ: ನಿರ್ಮಲಾ ಸೀತಾರಾಮನ್