ETV Bharat / state

ಚನ್ನಪಟ್ಟಣ: ಸಿಎಂ, ಡಿಸಿಎಂ ಸಮ್ಮುಖದಲ್ಲಿ ಇಂದು ಸಿ.ಪಿ.ಯೋಗೇಶ್ವರ್ ನಾಮಪತ್ರ ಸಲ್ಲಿಕೆ

ಚನ್ನಪಟ್ಟಣ ಉಪಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಯಾಗಿ ಸಿ.ಪಿ.ಯೋಗೇಶ್ವರ್ ಇಂದು ನಾಮಪತ್ರ ಸಲ್ಲಿಕೆ ಮಾಡುತ್ತಿದ್ದಾರೆ.

ಸಿ.ಪಿ.ಯೋಗೇಶ್ವರ್
ಸಿ.ಪಿ.ಯೋಗೇಶ್ವರ್ (ETV Bharat)
author img

By ETV Bharat Karnataka Team

Published : 2 hours ago

ರಾಮನಗರ: ಬೊಂಬೆನಗರಿ ಚನ್ನಪಟ್ಟಣ ವಿಧಾನಸಭೆ ಉಪಚುನಾವಣೆ ಕಣ ರಂಗೇರುತ್ತಿದೆ. ವಿಧಾನಪರಿಷತ್‌ ಸ್ಥಾನಕ್ಕೆ ರಾಜೀನಾಮೆ ನೀಡಿ ಬಿಜೆಪಿ ವಿರುದ್ಧ ಬಂಡಾಯವೆದ್ದು ಕಾಂಗ್ರೆಸ್ ಸೇರಿರುವ ಮಾಜಿ ಸಚಿವ ಸಿ.ಪಿ.ಯೋಗೇಶ್ವರ್‌ ಅವರಿಗೆ ಟಿಕೆಟ್ ಘೋಷಣೆಯಾಗಿದೆ. ಕಾಂಗ್ರೆಸ್ ಅಭ್ಯರ್ಥಿಯಾಗಿ ಯೋಗೇಶ್ವರ್ ಇಂದು ನಾಮಪತ್ರ ಸಲ್ಲಿಸಿ, ಶಕ್ತಿ ಪ್ರದರ್ಶನ ಮಾಡಲಿದ್ದಾರೆ.

ಇಂದ ಸಿಪಿವೈ ನಾಮಪತ್ರ ಸಲ್ಲಿಕೆ: ಇಂದು ಬೆಳಗ್ಗೆ 11ಗಂಟೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ, ಕೆಪಿಸಿಸಿ ಅಧ್ಯಕ್ಷರಾದ ಡಿ.ಕೆ. ಶಿವಕುಮಾರ್ ಸಮ್ಮುಖದಲ್ಲಿ ಅಧಿಕೃತ ಕಾಂಗ್ರೆಸ್ ಪಕ್ಷದಿಂದ ಅಭ್ಯರ್ಥಿಯಾಗಿ ಸಿ.ಪಿ.ಯೋಗೇಶ್ವರ್ ನಾಮಪತ್ರ ಸಲ್ಲಿಕೆ ಮಾಡಲಿದ್ದಾರೆ ಎಂದು ರಾಮನಗರ ಜಿಲ್ಲಾ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಗಂಗಾಧರ್ ತಿಳಿಸಿದ್ದಾರೆ.

ಈ ಸಂದರ್ಭದಲ್ಲಿ ರಾಮನಗರ ಜಿಲ್ಲಾ ಉಸ್ತುವಾರಿ ಸಚಿವರಾದ ರಾಮಲಿಂಗ ರೆಡ್ಡಿ, ಮಾಜಿ ಸಂಸದ ಡಿ.ಕೆ.ಸುರೇಶ್ ಹಾಗೂ ಸಚಿವರಾದ ಜಮೀರ್ ಅಹ್ಮದ್ ಖಾನ್, ಚೆಲುವರಾಯಸ್ವಾಮಿ, ಹಾಗೂ ಸರ್ಕಾರದ ಇನ್ನೂ ಹಲವಾರು ಸಚಿವರು, ಶಾಸಕರು, ವಿಧಾನಪರಿಷತ್ ಸದಸ್ಯರು, ನಿಗಮ ಮಂಡಳಿ ಅಧ್ಯಕ್ಷರು, ರಾಜ್ಯ ಮಟ್ಟದ ಅನೇಕ ನಾಯಕರು, ಮಾಜಿ ಸಚಿವರು ಮಾಜಿ ಶಾಸಕರು ಭಾಗವಹಿಸುತ್ತಿದ್ದಾರೆ. ತಾಲೂಕು ಕಾಂಗ್ರೆಸ್​ನ ಎಲ್ಲ ಮುಖಂಡರು, ಪದಾಧಿಕಾರಿಗಳು, ಕಾರ್ಯಕರ್ತರು, ಮತದಾರ ಬಂಧುಗಳು ಹೆಚ್ಚಿನ ಸಂಖ್ಯೆಯಲ್ಲಿ ಬಂದು ಭಾಗವಹಿಸಲಿದ್ದಾರೆ ಎಂದು ತಿಳಿಸಿದ್ದಾರೆ.

ಮತ್ತೊಂದೆಡೆ ನಾಮಪತ್ರ ಸಲ್ಲಿಸುವ ಸಂದರ್ಭದಲ್ಲಿ ಸಾವಿರಾರು ಕಾರ್ಯಕರ್ತರು ಆಗಮಿಸುವ ನಿರೀಕ್ಷೆ ಇದೆ. ಹಳೆ ಬೆಂಗಳೂರು ಮೈಸೂರು ಹೆದ್ದಾರಿಯ ಸ್ಪನ್ ಸೀಲ್ಕ್ ಮಿಲ್​ನಿಂದ ಮೆರವಣಿಗೆ ಮೂಲಕ ತಾಲೂಕು ಕಚೇರಿಗೆ ಆಗಮಿಸಿ ಚುನಾವಣಾಧಿಕಾರಿಗೆ ಸಿ.ಪಿ.ಯೋಗೇಶ್ವರ್ ನಾಮಪತ್ರ ಸಲ್ಲಿಕೆ ಮಾಡಲಿದ್ದಾರೆ.

ಮತ್ತೊಂದು ರಣಕಣವಾಗಲಿರುವ ಚನ್ನಪಟ್ಟಣ ಉಪಚುನಾವಣೆ: ಚನ್ನಪಟ್ಟಣ ವಿಧಾನಸಭಾ ಉಪಚುನಾವಣೆ ಹೈವೋಲ್ಟೇಜ್ ಕಣವಾಗುತ್ತಿದೆ. ಇತ್ತ ಎನ್​ಡಿಎ ಕೂಡ ಕಾಂಗ್ರೆಸ್ ಅಭ್ಯರ್ಥಿ ಸಿ‌. ಪಿ.ಯೋಗೇಶ್ವರ್ ಸೋಲಿಸಲು ರಣತಂತ್ರ ರೂಪಿಸಲು ಸ್ಥಳೀಯ ಅಭ್ಯರ್ಥಿ ತಾಲೂಕು ಜೆಡಿಎಸ್ ಅಧ್ಯಕ್ಷ ಜಯಮುತ್ತು ಅಥವಾ ಅಚ್ಚರಿ ಅಭ್ಯರ್ಥಿಯೊಬ್ಬರನ್ನು ಕಣಕ್ಕಿಳಿಸಲಿದ್ದಾರೆಯೇ ಕಾದು ನೋಡಬೇಕಿದೆ.

ನವೆಂಬರ್ 13 ರಂದು ಉಪಚುನಾವಣೆಗೆ ಮತದಾನ ನಡೆಯಲಿದ್ದು, ನ.23ರಂದು ಫಲಿತಾಂಶ ಹೊರಬರಲಿದೆ.

ಇದನ್ನೂ ಓದಿ: ಉಪಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಘೋಷಣೆ: ಕೈ ಹಿಡಿದ ಯೋಗೇಶ್ವರ್​ಗೆ ಚನ್ನಪಟ್ಟಣ ಟಿಕೆಟ್, ಶಿಗ್ಗಾಂವಿ ಸಸ್ಪೆನ್ಸ್

ETV Bharat Logo

Copyright © 2024 Ushodaya Enterprises Pvt. Ltd., All Rights Reserved.