ETV Bharat / state

ತುಮಕೂರು: ಮಾಧುಸ್ವಾಮಿ ಭೇಟಿಯಾಗಿ ಮಾತುಕತೆ ನಡೆಸಿದ ಕಾಂಗ್ರೆಸ್‌ ಅಭ್ಯರ್ಥಿ ಮುದ್ದಹನುಮೇಗೌಡ - Muddahanumegowda - MUDDAHANUMEGOWDA

ಮಾಜಿ ಸಚಿವ ಹಾಗು ಬಿಜೆಪಿ ಮುಖಂಡ ಜೆ.ಸಿ.ಮಾಧುಸ್ವಾಮಿ ಮನೆಗೆ ಕಾಂಗ್ರೆಸ್ ಅಭ್ಯರ್ಥಿ ಮುದ್ದಹನುಮೇಗೌಡ ಇಂದು ಭೇಟಿ ನೀಡಿ ಮಾತುಕತೆ ನಡೆಸಿದ್ದಾರೆ.

ಜೆ.ಸಿ ಮಾಧುಸ್ವಾಮಿ
ಜೆ.ಸಿ ಮಾಧುಸ್ವಾಮಿ
author img

By ETV Bharat Karnataka Team

Published : Apr 7, 2024, 3:23 PM IST

ತುಮಕೂರು: ಮಾಜಿ ಸಚಿವ ಜೆ.ಸಿ.ಮಾಧುಸ್ವಾಮಿ ಅವರ ಮನೆಗೆ ತುಮಕೂರು ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಮುದ್ದಹನುಮೇಗೌಡ ಇಂದು ಭೇಟಿ ನೀಡಿ ಮಾತುಕತೆ ನಡೆಸಿದ್ದು, ಜಿಲ್ಲೆಯ ರಾಜಕೀಯ ವಲಯದಲ್ಲಿ ಚರ್ಚೆಗೆ ಗ್ರಾಸವಾಗಿದೆ.

ತುಮಕೂರು ಕ್ಷೇತ್ರಕ್ಕೆ ಬಿಜೆಪಿ ಅಭ್ಯರ್ಥಿಯಾಗಿ ವಿ.ಸೋಮಣ್ಣ ಹೆಸರನ್ನು ಹೈಕಮಾಂಡ್ ಘೋಷಣೆ ಮಾಡಿದ ಕ್ಷಣದಿಂದಲೂ ಮಾಧುಸ್ವಾಮಿ ಅಸಮಾಧಾನ ವ್ಯಕ್ತಪಡಿಸಿದ್ದರು. ತನಗೇ ಟಿಕೆಟ್ ನೀಡಬೇಕೆಂದು ಪಟ್ಟು ಹಿಡಿದಿದ್ದರು. ಅನೇಕ ಬಾರಿ ಬಿಜೆಪಿ ಹಿರಿಯ ಮುಖಂಡರು ಮತ್ತು ಸೋಮಣ್ಣ ಕೂಡ ಮಾಧುಸ್ವಾಮಿ ಮನೆಗೆ ತೆರಳಿ ಅಸಮಾಧಾನ ಶಮನ ಮಾಡುವ ಪ್ರಯತ್ನ ನಡೆಸಿದ್ದರು. ಆದರೆ ಇದ್ಯಾವುದಕ್ಕೂ ತಣ್ಣಗಾಗದ ಮಾಧುಸ್ವಾಮಿ ತಟಸ್ಥ ನಿಲುವು ವ್ಯಕ್ತಪಡಿಸಿದ್ದರು.

ಇತ್ತೀಚೆಗೆ ಸೋಮಣ್ಣ ಅವರು ಚಿಕ್ಕನಾಯಕನಹಳ್ಳಿ ಜೆಡಿಎಸ್ ಶಾಸಕ ಸುರೇಶ್ ಬಾಬು ಅವರನ್ನು ಭೇಟಿಯಾಗಿ ಬೆಂಬಲ ನೀಡುವಂತೆ ಕೇಳಿದ್ದರು. ಅನೇಕ ಸಭೆಗಳನ್ನೂ ಕೂಡ ಜೆಡಿಎಸ್ ಮುಖಂಡರೊಂದಿಗೆ ನಡೆಸಿದ್ದರು. ಹೀಗಿದ್ದರೂ ಕೂಡ ಮಾಧುಸ್ವಾಮಿ ಅವರು ಸೋಮಣ್ಣಗೆ ಬೆಂಬಲ ವ್ಯಕ್ತಪಡಿಸುವ ಬಗ್ಗೆ ಯಾವುದೇ ರೀತಿಯ ಮಾತುಗಳನ್ನು ಆಡಿರಲಿಲ್ಲ. ಇದರ ಬೆನ್ನಲ್ಲೇ ಮುದ್ದಹನುಮೇಗೌಡ ಇಂದು ಮಾಧುಸ್ವಾಮಿ ಮನೆಗೆ ತೆರಳಿ ಹೂಗುಚ್ಛ ನೀಡಿ ಮಾತುಕತೆ ನಡೆಸಿದ್ದಾರೆ.

ಇದನ್ನೂ ಓದಿ: ಮೋದಿ ಜನಪ್ರಿಯತೆ ಕಾಂಗ್ರೆಸ್ ನಿದ್ದೆಗೆಡಿಸಿದೆ, ಈಶ್ವರಪ್ಪನವರು ನಮ್ಮೊಂದಿಗೆ ಕೈ ಜೋಡಿಸಲಿ: ಬಿ.ವೈ.ವಿಜಯೇಂದ್ರ - B Y Vijayendra

ETV Bharat Logo

Copyright © 2025 Ushodaya Enterprises Pvt. Ltd., All Rights Reserved.