ETV Bharat / state

ಪರಿಷತ್ ಚುನಾವಣೆ ಹಣಾಹಣಿ: ಈಗಾಗಲೇ ಘೋಷಿತವಾಗಿರುವ ಕೈ ಅಭ್ಯರ್ಥಿಗಳಿಂದ ಬಿರುಸಿನ ಪ್ರಚಾರ - Karnataka MLC Election

ರಾಜ್ಯದಲ್ಲಿ ಎರಡು ಹಂತಗಳ ಲೋಕಸಭೆ ಚುನಾವಣೆ ಮುಗಿದ ಬೆನ್ನಲ್ಲೇ ಇದೀಗ ರಾಜ್ಯದಲ್ಲಿ ಆರು ವಿಧಾನ ಪರಿಷತ್ ಚುನಾವಣೆಯ ಹಣಾಹಣಿ ಆರಂಭವಾಗಿದೆ.

congress-candidates-are-campaigning-for-karnataka-mlc-election
congress-candidates-are-campaigning-for-karnataka-mlc-election (File Photo)
author img

By ETV Bharat Karnataka Team

Published : May 11, 2024, 2:26 PM IST

ಬೆಂಗಳೂರು: ರಾಜ್ಯದಲ್ಲಿ ಲೋಕಸಭೆ ಚುನಾವಣೆ ಮುಗಿಯುತ್ತಿದ್ದಂತೆ ಪರಿಷತ್ ಚುನಾವಣೆ ಕಾವು ಪಡೆದಿದೆ. ನಾಮಪತ್ರ ಸಲ್ಲಿಕೆ ಪ್ರಕ್ರಿಯೆ ಆರಂಭವಾಗಿದ್ದು, ಕಾಂಗ್ರೆಸ್ ಈಗಾಗಲೇ ತನ್ನ ಆರು ಅಭ್ಯರ್ಥಿಗಳನ್ನು ಘೋಷಿಸಿದೆ. ಆರೂ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳು ಬಿರುಸಿನ ಪ್ರಚಾರ ನಡೆಸಿದ್ದಾರೆ.

ಜೂನ್​ 3ರಂದು ಈಶಾನ್ಯ ಪದವೀಧರ, ನೈಋತ್ಯ ಪದವೀಧರ ಮತ್ತು ಬೆಂಗಳೂರು ಪದವೀಧರ ಕ್ಷೇತ್ರಕ್ಕೆ ಹಾಗೂ ಆಗ್ನೇಯ ಶಿಕ್ಷಕರ, ನೈಋತ್ಯ ಶಿಕ್ಷಕರ ಮತ್ತು ದಕ್ಷಿಣ ಶಿಕ್ಷಕರ ಕ್ಷೇತ್ರಕ್ಕೆ ಚುನಾವಣೆ ನಡೆಯಲಿದೆ. ಮೇ 10ರಿಂದ ನಾಮಪತ್ರ ಸಲ್ಲಿಕೆ ಪ್ರಕ್ರಿಯೆ ಆರಂಭವಾಗಿದ್ದು, ನಾಮಪತ್ರ ಸಲ್ಲಿಕೆಗೆ ಕೊನೆಯ ದಿನ ಮೇ 16 ಆಗಿದೆ. ನಾಮಪತ್ರ ಪರಿಶೀಲನೆ ಮೇ 17ಕ್ಕೆ ನಡೆಯಲಿದೆ. ಮೇ 20 ನಾಮಪತ್ರ ವಾಪಸ್ ಪಡೆಯಲು ಕೊನೆಯ ದಿನವಾಗಿದೆ. ಜೂನ್ 3ರಂದು ಬೆಳಗ್ಗೆ 8 ರಿಂದ ಸಂಜೆ 4ರ ವರೆಗೆ ಮತದಾನ ನಡೆಯಲಿದೆ. ಜೂನ್ 6ರಂದು ಮತ ಎಣಿಕೆ ನಡೆಯಲಿದೆ.

ಆರೂ ಕ್ಷೇತ್ರಗಳಲ್ಲಿ ಕೈ ಅಭ್ಯರ್ಥಿಗಳಿಂದ ಪ್ರಚಾರ: ಕಾಂಗ್ರೆಸ್ ಪಕ್ಷ ಮೇಲ್ಮನೆ ಚುನಾವಣೆಯನ್ನು ಗಂಭೀರವಾಗಿ ತೆಗೆದುಕೊಂಡಿದೆ. ಕಳೆದ ವರ್ಷ ಅಕ್ಟೋಬರ್ ತಿಂಗಳಲ್ಲೇ ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ. ವೇಣುಗೋಪಾಲ್ ಐವರು ಕೈ ಅಭ್ಯರ್ಥಿಗಳ ಹೆಸರನ್ನು ಪ್ರಕಟಿಸಿದ್ದರು. ಅದರಂತೆ ಕಾಂಗ್ರೆಸ್ ನಿಂದ ಈಶಾನ್ಯ ಪದವೀಧರ ಕ್ಷೇತ್ರದಿಂದ ಡಾ. ಚಂದ್ರಶೇಖರ್‌ ಪಾಟೀಲ್‌, ನೈಋತ್ಯ ಪದವೀಧರ ಕ್ಷೇತ್ರದಿಂದ ಆಯನೂರು ಮಂಜುನಾಥ, ಬೆಂಗಳೂರು ಪದವೀಧರ ಕ್ಷೇತ್ರದಿಂದ ರಾಮೋಜಿಗೌಡ, ಆಗ್ನೇಯ ಶಿಕ್ಷಕ ಕ್ಷೇತ್ರದಿಂದ ಕೆ. ಬಿ. ಶ್ರೀನಿವಾಸ್‌, ನೈಋತ್ಯ ಶಿಕ್ಷಕ ಕ್ಷೇತ್ರದಿಂದ ಕೆ.ಕೆ.ಮಂಜುನಾಥ್‌ ಹೆಸರು ಘೋಷಿಸಲಾಗಿದೆ. ಇನ್ನು ಮೈಸೂರು, ಮಂಡ್ಯ, ಹಾಸನ, ಚಾಮರಾಜನಗರ ಲೋಕಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಹಬ್ಬಿರುವ ದಕ್ಷಿಣ ಶಿಕ್ಷಕರ ಕ್ಷೇತ್ರಕ್ಕೆ ಇತ್ತೀಚೆಗೆ ಕಾಂಗ್ರೆಸ್ ಸೇರಿರುವ ಮರಿತಿಬ್ಬೇಗೌಡ ಅಭ್ಯರ್ಥಿಯಾಗಿರಲಿದ್ದಾರೆ. ಹೀಗಾಗಿ ಕೈ ಅಭ್ಯರ್ಥಿಗಳು ಈಗಾಗಲೇ ಕ್ಷೇತ್ರಗಳಲ್ಲಿ ಬಿರುಸಿನ ಪ್ರಚಾರವನ್ನು ಆರಂಭಿಸಿ, ಬಿಜೆಪಿ-ಜೆಡಿಎಸ್ ನಿಂದ ಒಂದು ಹೆಜ್ಜೆ ಮುಂದಿದ್ದಾರೆ.

ಕೈ ಅಭ್ಯರ್ಥಿಯಾಗಿ ಆಯನೂರು: ನೈಋತ್ಯ ಪದವೀಧರ ಕ್ಷೇತ್ರದಿಂದ ಆಯನೂರು ಮಂಜುನಾಥ ಕಣದಲ್ಲಿದ್ದಾರೆ. ಕಳೆದ ವಿಧಾನಸಭೆ ಚುನಾವಣೆ ವೇಳೆ ಶಿವಮೊಗ್ಗ ನಗರ ಕ್ಷೇತ್ರದಿಂದ ಟಿಕೆಟ್‌ ಸಿಗದ ಕಾರಣ ಆಯನೂರು ಮಂಜುನಾಥ್ ಪರಿಷತ್‌ ಸ್ಥಾನಕ್ಕೆ ರಾಜೀನಾಮೆ ನೀಡಿ ಜೆಡಿಎಸ್ ಸೇರಿ ಸ್ಪರ್ಧಿಸಿ ಸೋಲು ಕಂಡಿದ್ದರು. ನಂತರ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆ ಆಗಿದ್ದರು. ಆಯನೂರು ಮಂಜುನಾಥ್ ರಾಜೀನಾಮೆ ಕೊಟ್ಟ ಕಾರಣ ತೆರವಾಗಿದ್ದ ಸ್ಥಾನಕ್ಕೆ ಈಗ ಚುನಾವಣೆ ಘೋಷಿಸಲಾಗಿದೆ. ಆಯನೂರು 2018ರಿಂದ ನೈರುತ್ಯ ಪದವೀಧರ ಕ್ಷೇತ್ರವನ್ನು ಪ್ರತಿನಿಧಿಸುತ್ತಿದ್ದಾರೆ. ಈಗಾಗಲೇ ಕ್ಷೇತ್ರದಲ್ಲಿ ಅವರು ಪ್ರಚಾರ ಕಾರ್ಯದಲ್ಲಿ ಬ್ಯುಸಿಯಾಗಿದ್ದಾರೆ.

ರಾಮೋಜಿಗೌಡ ಮತ್ತೆ ಅದೃಷ್ಟ ಪರೀಕ್ಷೆ: ಕಾಂಗ್ರೆಸ್ ನ ಹಿರಿಯ ಮುಖಂಡ ರಾಮೋಜಿಗೌಡ ಇದೀಗ ಬೆಂಗಳೂರು ಪದವೀಧರ ಕ್ಷೇತ್ರದಿಂದ ಮೂರನೇ ಬಾರಿಗೆ ಅದೃಷ್ಟ ಪರೀಕ್ಷೆಗೆ ಇಳಿದಿದ್ದಾರೆ. 2012 ಮತ್ತು 2018ರ ಚುನಾವಣೆಗಳಲ್ಲಿ ಅವರು ಸೋಲು ಕಂಡಿದ್ದರು. ಬೆಂಗಳೂರು ನಗರ ಜಿಲ್ಲಾ ಶಿಕ್ಷಕರ ಸಂಘದ ಸಂಸ್ಥಾಪಕ ಅಧ್ಯಕ್ಷರಾಗಿರುವ ಕಾಂಗ್ರೆಸ್ ಹಿರಿಯ ಮುಖಂಡ ಡಾ. ರಾಮೋಜಿ ಗೌಡರವರು ಹಲವಾರು ವರ್ಷಗಳಿಂದ ಶಿಕ್ಷಕರು ಹಾಗೂ ಪದವೀಧರರ ನಾಯಕರಾಗಿ ಗುರುತಿಸಿಕೊಂಡವರು. ಈಗಾಗಲೇ ಅವರು ಪ್ರಚಾರ ಕಾರ್ಯದಲ್ಲಿ ಸಕ್ರಿಯರಾಗಿದ್ದಾರೆ.

ನೈಋತ್ಯ ಶಿಕ್ಷಕರ ಕ್ಷೇತ್ರದಿಂದ ಕೆ.ಕೆ. ಮಂಜುನಾಥ್: ದಕ್ಷಿಣ ಕನ್ನಡ, ಉಡುಪಿ, ಕೊಡಗು ಜಿಲ್ಲೆ ಸೇರಿದಂತೆ ನೈಋತ್ಯ ಶಿಕ್ಷಕರ ಕ್ಷೇತ್ರದಿಂದ ಕಾಂಗ್ರೆಸ್‌ ಕೊಡಗು ಜಿಲ್ಲೆಯ ಕೆ.ಕೆ. ಮಂಜುನಾಥ್‌ರನ್ನು ಕಣಕ್ಕಿಳಿಸಿದೆ. ಈ ಹಿಂದೆ ಶಿಕ್ಷಕರ ಸಂಘದ ಅಧ್ಯಕ್ಷರಾಗಿದ್ದ ಅವರು, ಸ್ವತಂತ್ರ ಅಭ್ಯರ್ಥಿಯಾಗಿಯೂ ಸ್ಪರ್ಧಿಸಿ ಅತ್ಯಂತ ಕಡಿಮೆ ಮತಗಳ ಅಂತರದಲ್ಲಿ ಸೋಲು ಕಂಡಿದ್ದರು. ಇವರು ಕೂಡ ಚುನಾವಣಾ ಪ್ರಚಾರ ಕಾರ್ಯದಲ್ಲಿ ತೊಡಗಿದ್ದಾರೆ.

ಆಗ್ನೇಯ ಶಿಕ್ಷಕರ ಕ್ಷೇತ್ರದಿಂದ ಶ್ರೀನಿವಾಸ್ ಕಣಕ್ಕೆ: ಹಿರಿಯೂರು ಮಾಜಿ ಶಾಸಕಿ ಕೆ.ಪೂರ್ಣಿಮಾ ಅವರ ಪತಿ ಹಾಗೂ ರಾಜ್ಯ ಗೊಲ್ಲರ ಸಂಘದ ಅಧ್ಯಕ್ಷ ಡಿ.ಟಿ. ಶ್ರೀನಿವಾಸ್ ಹೆಸರನ್ನು ಕಾಂಗ್ರೆಸ್​ 8 ತಿಂಗಳ ಹಿಂದೆ ಘೋಷಿಸಿತ್ತು. 2020ರ ಅಕ್ಟೋಬರ್‌ನಲ್ಲಿ ನಡೆದ ಆಗ್ನೇಯ ಪದವೀಧರ ಕ್ಷೇತ್ರಕ್ಕೆ ಡಿ.ಟಿ.ಶ್ರೀನಿವಾಸ್‌ ಬಿಜೆಪಿ ಟಿಕೆಟ್ ಆಕಾಂಕ್ಷಿಯಾಗಿದ್ದರು. ಆದರೆ ಟಿಕೆಟ್ ಕೈತಪ್ಪಿದ್ದರಿಂದ ಅಸಮಾಧಾನಗೊಂಡು ಬಂಡಾಯ ಅಭ್ಯರ್ಥಿಯಾಗಿ ಕಣಕ್ಕೆ ಇಳಿದಿದ್ದರು. ಇದೇ ಕಾರಣಕ್ಕೆ ಅವರನ್ನು ಬಿಜೆಪಿಯಿಂದ ಉಚ್ಛಾಟಿಸಲಾಗಿತ್ತು. ಕಳೆದ ವರ್ಷ ಕಾಂಗ್ರೆಸ್ ಸೇರ್ಪಡೆಯಾಗಿದ್ದು, ಕಾಂಗ್ರೆಸ್​ ಟಿಕೆಟ್​ ಪಡೆದಿದ್ದಾರೆ.

ಚಂದ್ರಶೇಖರ್ ಪಾಟೀಲ್ ಮತ್ತೆ ಕೈ ಅಭ್ಯರ್ಥಿ: ಈಶಾನ್ಯ ಪದವೀಧರ ಕ್ಷೇತ್ರದಿಂದ ಡಾ. ಚಂದ್ರಶೇಖರ್‌ ಪಾಟೀಲ್‌ ಅವರನ್ನು ಮತ್ತೆ ಕಾಂಗ್ರೆಸ್ ಕಣಕ್ಕಿಳಿಸಿದೆ. ಹಾಲಿ ಕ್ಷೇತ್ರವನ್ನು ಪ್ರತಿನಿಧಿಸುತ್ತಿರುವ ಚಂದ್ರಶೇಖರ್ ಪಾಟೀಲ್ ಮತ್ತೆ ಅದೃಷ್ಟ ಪರೀಕ್ಷೆಗೆ ಇಳಿದಿದ್ದಾರೆ. ಕಳೆದ ಬಾರಿ ಡಾ. ಚಂದ್ರಶೇಖರ ಪಾಟೀಲ್‌ ಬಿಜೆಪಿಯ ಶ್ರೀನಿವಾಸ ಅವರನ್ನು 321 ಮತಗಳ ಅಂತರದಿಂದ ಸೋಲಿಸಿದ್ದರು. ಕ್ಷೇತ್ರ ಅಸ್ತಿತ್ವಕ್ಕೆ ಬಂದ ಬಳಿಕ ನಡೆದ ಐದು ಚುನಾವಣೆಗಳಲ್ಲಿ ಬಿಜೆಪಿ ಇದನ್ನು ತನ್ನ ಭದ್ರಕೋಟೆಯಾಗಿಸಿತು. ಮೊದಲ ಬಾರಿಗೆ ಈ ಕ್ಷೇತ್ರದಲ್ಲಿ ಚಂದ್ರಶೇಖರ್ ಗೆದ್ದು ಕೈ ವಶಕ್ಕೆ ನೀಡಿದ್ದರು. ಇದೀಗ ಮತ್ತೆ ಅದೃಷ್ಟ ಪರೀಕ್ಷೆಗೆ ಇಳಿದಿದ್ದಾರೆ.

ದಕ್ಷಿಣ ಶಿಕ್ಷಕರ ಕ್ಷೇತ್ರಕ್ಕೆ ಮರಿತಿಬ್ಬೇಗೌಡ: ದಕ್ಷಿಣ ಶಿಕ್ಷಕರ ಕ್ಷೇತ್ರಕ್ಕೆ ಕೈ ಅಭ್ಯರ್ಥಿಯಾಗಿ ಮರಿತಿಬ್ಬೇಗೌಡರ ಹೆಸರು ಫೈನಲ್ ಆಗಿದೆ. ಕಳೆದ ಬಾರಿ ಜೆಡಿಎಸ್‌ನಿಂದ ವಿಧಾನ ಪರಿಷತ್ ಸದಸ್ಯರಾಗಿ ಆಯ್ಕೆಯಾಗಿದ್ದ ಮರಿತಿಬ್ಬೇಗೌಡ ಅವರು ಈ ಬಾರಿ ಕಾಂಗ್ರೆಸ್ ನಿಂದ ಮತ್ತೆ ಸ್ಪರ್ಧೆ ಮಾಡುತ್ತಿದ್ದಾರೆ. ಇತ್ತೀಚೆಗೆ ಜೆಡಿಎಸ್​​ನಿಂದ ಮುನಿಸಿಕೊಂಡಿದ್ದ ಅವರು, ಅವಧಿಗೂ ಮುನ್ನವೇ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಗೊಂಡಿದ್ದರು. ಕಳೆದ 24 ವರ್ಷಗಳಿಂದ ಎಂಎಲ್​ಸಿಯಾಗಿ ಮರಿತಿಬ್ಬೇಗೌಡ ಚುನಾಯಿತರಾಗುತ್ತಿದ್ದಾರೆ. ಇದೀಗ ಕಾಂಗ್ರೆಸ್ ನಿಂದ ತಮ್ಮ ಅದೃಷ್ಟ ಪರೀಕ್ಷೆಗೆ ಇಳಿದಿದ್ದಾರೆ.

ಇದನ್ನೂ ಓದಿ: ರಾಜ್ಯದಲ್ಲಿ ಜೆಡಿಎಸ್-ಬಿಜೆಪಿ ಮೈತ್ರಿ ಮುಂದುವರೆಯುತ್ತೆ: ಬಿ ಎಸ್​ ಯಡಿಯೂರಪ್ಪ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.