ETV Bharat / state

ಸಚಿವ ದಿನೇಶ್ ಗಂಡೂರಾವ್ ಕುಟುಂಬದ ಬಗ್ಗೆ ಹೇಳಿಕೆ; ಯತ್ನಾಳ್ ವಿರುದ್ಧ ಮುಖ್ಯ ಚುನಾವಣಾಧಿಕಾರಿಗೆ ಕಾಂಗ್ರೆಸ್​ ದೂರು - Congress - CONGRESS

ಸಚಿವ ದಿನೇಶ್ ಗುಂಡೂರಾವ್ ಮತ್ತು ಅವರ ಕುಟುಂಬದವರ ವಿರುದ್ಧ ವಿವಾದಿತ ಹೇಳಿಕೆ ನೀಡಿದ ಬಿಜೆಪಿ ಶಾಸಕ ಬಸನಗೌಡ ಪಾಟೀಲ್​ ಯತ್ನಾಳ್ ವಿರುದ್ಧ ರಾಜ್ಯ ಮುಖ್ಯ ಚುನಾವಣಾಧಿಕಾರಿಗೆ ಕಾಂಗ್ರೆಸ್ ದೂರು ನೀಡಿದೆ.

Congress complaint against MLA Yatnal to Chief Electoral Officer
ಯತ್ನಾಳ್ ವಿರುದ್ಧ ಮುಖ್ಯ ಚುನಾವಣಾಧಿಕಾರಿಗೆ ಕಾಂಗ್ರೆಸ್​ ದೂರು
author img

By ETV Bharat Karnataka Team

Published : Apr 6, 2024, 8:51 PM IST

ಬೆಂಗಳೂರು: ಸಚಿವ ದಿನೇಶ್ ಗುಂಡೂರಾವ್ ಮತ್ತು ಅವರ ಕುಟುಂಬದವರನ್ನು ದೇಶವಿರೋಧಿಗಳು ಎಂದು ನಿಂದಿಸಿರುವ ಶಾಸಕ ಬಸನಗೌಡ ಪಾಟೀಲ್​ ಯತ್ನಾಳ್ ವಿರುದ್ಧ ಗಾಂಧಿನಗರ ಬ್ಲಾಕ್ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಸರವಣನ್ ಅವರು ಕರ್ನಾಟಕ ಮುಖ್ಯ ಚುನಾವಣಾಧಿಕಾರಿಗೆ ದೂರು ನೀಡಿದ್ದಾರೆ.

ಏ.6ರಂದು ಮಾಧ್ಯಮಗಳಿಗೆ ನೀಡಿರುವ ಪ್ರತಿಕ್ರಿಯೆಲ್ಲಿ ಶಾಸಕ ಬಸನಗೌಡ ಪಾಟೀಲ್​ ಯತ್ನಾಳ್ ಅವರು,''ರಾಮೇಶ್ವರಂ ಕೆಫೆ ಸ್ಫೋಟ ಪ್ರಕರಣದಲ್ಲಿ ವಿಚಾರಣೆಗೊಳಪಟ್ಟ ಬಿಜೆಪಿಯ ಕಾರ್ಯಕರ್ತನ ಪರವಾಗಿ ಸಮರ್ಥನೆ ಮಾಡುವ ಸಂಬಂಧ ಗಾಂಧಿನಗರ ವಿಧಾನಸಭಾ ಕ್ಷೇತ್ರದ ಶಾಸಕ ಹಾಗೂ ಸಚಿವ ದಿನೇಶ್ ಗುಂಡೂರಾವ್ ಅವರ ಮನೇಲಿ ಅರ್ಧ ಪಾಕಿಸ್ತಾನವಿದೆ. ದೇಶವಿರೋಧಿ ಹೇಳಿಕೆ ನೀಡುವುದು ಅವರ ಚಟವಾಗಿದೆ'' ಎಂದು ಹೇಳಿದ್ದಾರೆ. ಈ ಮೂಲಕ ಹಾಗೂ ಅವರ ಇಡೀ ಕುಟುಂಬವನ್ನು ಅವಹೇಳನ ಮಾಡಿ ನಿಂದಿಸಿ ಧಾರ್ಮಿಕ ಭಾವನೆಗಳಿಗೆ ಧಕ್ಕೆ ತಂದಿರುತ್ತಾರೆ ಎಂದು ಸರವಣನ್ ತಮ್ಮ‌ ದೂರಿನಲ್ಲಿ ಉಲ್ಲೇಖಿಸಿದ್ದಾರೆ.

ಚುನಾವಣೆಯ ಸಂದರ್ಭದಲ್ಲಿ ಕೋಮು ಸೌಹಾರ್ದತೆ ಹಾಳು ಮಾಡುವ ದುರುದ್ದೇಶದಿಂದ ದಿನೇಶ್ ಗುಂಡೂರಾವ್ ಅವರ ಕುಟುಂಬದ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿರುವ ಬಸನಗೌಡ ಪಾಟೀಲ್ ಯತ್ನಾಳ್ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕೆಂದು ಅವರು ಕೋರಿದ್ದಾರೆ.

ಅಲ್ಲದೇ, ಇದೇ ರಾಮೇಶ್ವರಂ ಕೆಫೆ ಸ್ಫೋಟದ ವಿಷಯವಾಗಿ ಈ ಹಿಂದೆ ಗುಂಡೂರಾವ್ ವಿರುದ್ಧ ಕಿಡಿಕಾರಿದ್ದ ಬಿಜೆಪಿ, ''ಸಚಿವ ದಿನೇಶ್ ಗುಂಡೂರಾವ್ ಅನಾರೋಗ್ಯಕ್ಕೆ ಒಳಗಾಗಿ ಮಾನಸಿಕ ಅಸ್ವಸ್ಥರಾಗಿದ್ದಾರೆ. ಕಾಂಗ್ರೆಸ್‌ ಐಟಿ ಸೆಲ್‌ ಹರಡುವ ಸುಳ್ಳು ಸುದ್ದಿಯನ್ನೇ ಸತ್ಯ ಎಂದು ಬಿಂಬಿಸಲು ಹೊರಟಿದ್ದಾರೆ. ನೀವು ಆರೋಗ್ಯ ಸಚಿವರೋ ಅಥವಾ ಸುಳ್ಳು ಹೇಳುವ ಸಚಿವರೋ?. ಸಾಕ್ಷಿ ವಿಚಾರಣೆ, ಆರೋಪಿ ವಿಚಾರಣೆ ತಿಳಿಯದಷ್ಟು ಮೂರ್ಖರು ಸಚಿವ ಸ್ಥಾನದಲ್ಲಿ ಕೂತಿರುವುದು ದುರಂತ. ಕೂಡಲೇ ರಾಜ್ಯದ ಜನರ ಮುಂದೆ ಕ್ಷಮೆ ಕೇಳಿ ಮಾನ ಉಳಿಸಿಕೊಳ್ಳಿ'' ಎಂದು ಟೀಕಿಸಿತ್ತು.

ಇದನ್ನೂ ಓದಿ: ಆರೋಗ್ಯ ಸಚಿವರು ಅನಾರೋಗ್ಯಕ್ಕೆ ಒಳಗಾಗಿ ಮಾನಸಿಕ ಅಸ್ವಸ್ಥರಾಗಿದ್ದಾರೆ: ದಿನೇಶ್ ಗುಂಡೂರಾವ್ ಟೀಕಿಸಿದ ಬಿಜೆಪಿ

ETV Bharat Logo

Copyright © 2025 Ushodaya Enterprises Pvt. Ltd., All Rights Reserved.