ETV Bharat / state

ಬೆಳಗಾವಿಯಲ್ಲಿ ಕಾಂಗ್ರೆಸ್ ಕಾರ್ಯಕಾರಿಣಿ ಸಭೆ ಆರಂಭ: ಖರ್ಗೆ, ರಾಹುಲ್, ಸಿದ್ದರಾಮಯ್ಯ ಸೇರಿ 200ಕ್ಕೂ ಹೆಚ್ಚು ನಾಯಕರು ಭಾಗಿ - BELAGAVI CWC

ಬೆಳಗಾವಿಯ ವೀರಸೌಧದಲ್ಲಿ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ನೇತೃತ್ವದಲ್ಲಿ ರಾಷ್ಟ್ರೀಯ ಕಾಂಗ್ರೆಸ್ ಕಾರ್ಯಕಾರಿಣಿ ಸಭೆ ನಡೆಯುತ್ತಿದ್ದು, ಲೋಕಸಭೆ ವಿಪಕ್ಷ ನಾಯಕ ರಾಹುಲ್ ಗಾಂಧಿ, ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆಶಿ ಸೇರಿದಂತೆ ರಾಷ್ಟ್ರೀಯ ನಾಯಕರು ಭಾಗಿಯಾಗಿದ್ದಾರೆ.

ಬೆಳಗಾವಿಯಲ್ಲಿ ಕಾಂಗ್ರೆಸ್ ಕಾರ್ಯಕಾರಿಣಿ ಸಭೆ
ಬೆಳಗಾವಿಯಲ್ಲಿ ಕಾಂಗ್ರೆಸ್ ಕಾರ್ಯಕಾರಿಣಿ ಸಭೆ (ETV Bharat)
author img

By ETV Bharat Karnataka Team

Published : 13 hours ago

ಬೆಳಗಾವಿ: ಮಹಾತ್ಮ ಗಾಂಧೀಜಿ ಅಧ್ಯಕ್ಷತೆಯಲ್ಲಿ 1924ರಲ್ಲಿ ನಡೆದ ಕಾಂಗ್ರೆಸ್ ಅಧಿವೇಶನದ ಶತಮಾನೋತ್ಸವ ಹಿನ್ನೆಲೆ ಬೆಳಗಾವಿಗೆ ಕಾಂಗ್ರೆಸ್ ಪಕ್ಷದ ಘಟಾನುಘಟಿ ನಾಯಕರ ದಂಡೇ ಆಗಮಿಸಿದೆ. ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ನೇತೃತ್ವದಲ್ಲಿ ರಾಷ್ಟ್ರೀಯ ಕಾಂಗ್ರೆಸ್ ಪಕ್ಷದ ಕಾರ್ಯಕಾರಿಣಿ ಸಭೆ ಆರಂಭವಾಗಿದ್ದು, 200ಕ್ಕೂ ಅಧಿಕ ಕಾಂಗ್ರೆಸ್ ರಾಷ್ಟ್ರೀಯ ನಾಯಕರು ಭಾಗವಹಿಸಿದ್ದಾರೆ. ಸಂಜೆ 7 ಗಂಟೆವರೆಗೆ ಸಭೆ ನಡೆಯಲಿದೆ. ಆದರೆ, ಕಾಂಗ್ರೆಸ್ ಅಧಿನಾಯಕಿ ಸೋನಿಯಾ ಗಾಂಧಿ, ಸಂಸದೆ ಪ್ರಿಯಾಂಕಾ ಗಾಂಧಿ ಗೈರಾಗಿದ್ದಾರೆ.

ವೀರಸೌಧಕ್ಕೆ 100 ಮೀಟರ್ ನಡೆದುಕೊಂಡೆ ಆಗಮಿಸಿದ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಲೋಕಸಭೆ ವಿಪಕ್ಷ ನಾಯಕ‌ ರಾಹುಲ್ ಗಾಂಧಿ ಸೇರಿ ಇನ್ನಿತರ ನಾಯಕರನ್ನು ಸೇವಾ ದಳದ ಕಾರ್ಯಕರ್ತರು ಪಥಸಂಚಲನದ ಮೂಲಕ ಅದ್ಧೂರಿಯಾಗಿ ಸ್ವಾಗತಿಸಿದರು. ಈ ವೇಳೆ ಭಾರತ್ ಮಾತಾಕೀ ಜೈ ಘೋಷಣೆ ಮೊಳಗಿತು. ಜೊತೆಗೆ ಕೈಯಲ್ಲಿ ಎಲ್ಲ ನಾಯಕರು ನವಸತ್ಯಾಗ್ರಹ ಎಂಬ ಬರಹದ ಗಾಂಧೀಜಿ ಭಾವಚಿತ್ರ ಹಿಡಿದು ನಡೆದುಕೊಂಡೇ ಸೌಧ ಪ್ರವೇಶಿಸಿದರು.

ಬೆಳಗಾವಿಯಲ್ಲಿ ಕಾಂಗ್ರೆಸ್ ಕಾರ್ಯಕಾರಿಣಿ ಸಭೆ
ಬೆಳಗಾವಿಯಲ್ಲಿ ಕಾಂಗ್ರೆಸ್ ಕಾರ್ಯಕಾರಿಣಿ ಸಭೆ (ETV Bharat)

ಬಳಿಕ ವೀರಸೌಧ ಆವರಣದಲ್ಲಿ ಕಾಂಗ್ರೆಸ್ ಧ್ವಜಾರೋಹಣವನ್ನು ಮಲ್ಲಿಕಾರ್ಜುನ ಖರ್ಗೆ ನೆರವೇರಿಸಿದರು. ನಂತರ ಖರ್ಗೆ, ರಾಹುಲ್, ಸಿಎಂ ಸಿದ್ದರಾಮಯ್ಯ ಅವರು ಒಂದೊಂದು ಗಿಡ ನೆಟ್ಟು ಗಾಂಧೀಜಿ ಪ್ರತಿಮೆಗೆ ಎಲ್ಲ ನಾಯಕರು ನಮನ ಸಲ್ಲಿಸಿದರು.

ಸಿಡಬ್ಯುಸಿಯ ಎಲ್ಲ ಸದಸ್ಯರಿಗೆ ಮೈಸೂರು ರೇಷ್ಮೆ ಶಾಲು, ಬೆಳಗಾವಿ ಕುಂದಾ, ಗೋಕಾಕ್​ ಕರದಂಟು, ಮೈಸೂರು ಸ್ಯಾಂಡಲ್ ಸೋಪ್, ಲೆದರ್ ಬ್ಯಾಗ್, ಗಾಂಧೀಜಿ ಅವರ 'ನನ್ನ ಕನಸಿನ ಭಾರತ' ಪುಸ್ತಕವನ್ನು ನೆನಪಿನ ಕಾಣಿಕೆಯಾಗಿ ಉಪ‌ ಮುಖ್ಯಮಂತ್ರಿ ಡಿ. ಕೆ. ಶಿವಕುಮಾರ್ ವಿತರಿಸಿದರು.

ಬೆಳಗಾವಿಯಲ್ಲಿ ಕಾಂಗ್ರೆಸ್ ಕಾರ್ಯಕಾರಿಣಿ ಸಭೆ ಆರಂಭ; 200ಕ್ಕೂ ಹೆಚ್ಚು ನಾಯಕರು ಭಾಗಿ
ಬೆಳಗಾವಿಯಲ್ಲಿ ಕಾಂಗ್ರೆಸ್ ಕಾರ್ಯಕಾರಿಣಿ ಸಭೆ ಆರಂಭ; 200ಕ್ಕೂ ಹೆಚ್ಚು ನಾಯಕರು ಭಾಗಿ (ETV Bharat)

ನಗರದ ವೀರಸೌಧದಲ್ಲಿ ನಡೆಯುತ್ತಿರುವ ಸಭೆಯಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್, ಎಐಸಿಸಿ ಉಸ್ತುವಾರಿಗಳಾದ ರಣದೀಪ್ ಸಿಂಗ್ ಸುರ್ಜೇವಾಲಾ, ಕೆ.ಸಿ. ವೇಣುಗೋಪಾಲ ಸೇರಿದಂತೆ ಹಲವು ಕಾಂಗ್ರೆಸ್ ನಾಯಕರು ಸಭೆಯಲ್ಲಿ ಪಾಲ್ಗೊಂಡಿದ್ದಾರೆ.

ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಅವರ ಅಧ್ಯಕ್ಷತೆಯಲ್ಲಿ ಬೆಳಗಾವಿಯಲ್ಲಿ 1924ರಲ್ಲಿ ನಡೆದ ಐತಿಹಾಸಿಕ ಕಾಂಗ್ರೆಸ್ ಅಧಿವೇಶನಕ್ಕೆ ನೂರು ವರ್ಷಗಳು ಗತಿಸಿದ ಹಿನ್ನೆಲೆಯಲ್ಲಿ ಕಾಂಗ್ರೆಸ್ ಪಕ್ಷ ಈ ಕಾರ್ಯಕ್ರಮವನ್ನು ಐತಿಹಾಸಿಕವಾಗಿ ಆಚರಿಸುತ್ತಿದೆ. ಈ ನಿಟ್ಟಿನಲ್ಲಿ ರಾಷ್ಟ್ರ ಮಟ್ಟದ ಇಂದಿನ ಕಾರ್ಯಕಾರಿಣಿಯಲ್ಲಿ ಪಕ್ಷದ ಮುಂದಿನ ಕಾರ್ಯತಂತ್ರಗಳು ಸೇರಿದಂತೆ ಹಲವು ಪ್ರಮುಖ ನಿರ್ಣಯಗಳನ್ನು ಕೈಗೊಳ್ಳಲಿದ್ದಾರೆ.

ಇದನ್ನೂ ಓದಿ: ರಾಹುಲ್​, ಮಲ್ಲಿಕಾರ್ಜುನ ಖರ್ಗೆ ಬೆಳಗಾವಿಗೆ ಆಗಮನ: ಸೆಲ್ಫಿಗೆ ಮುಗಿಬಿದ್ದ ಜನರು

ಇದನ್ನೂ ಓದಿ: ಕಾಂಗ್ರೆಸ್ ಅಧಿವೇಶನ ನಿಮಿತ್ತ ಕುಂದಾನಗರಿ ಸುತ್ತ-ಮುತ್ತ ಲೈಟಿಂಗ್ಸ್: ಶತಮಾನದ ಬೆಳಕಿಗೆ ಏನಂತಾರೆ ಬೆಳಗಾವಿ ಜನ?

ETV Bharat Logo

Copyright © 2024 Ushodaya Enterprises Pvt. Ltd., All Rights Reserved.