ETV Bharat / state

ಪ್ರಧಾನಿ ಮೋದಿ ವಿರುದ್ಧ ಚುನಾವಣಾ ಆಯೋಗಕ್ಕೆ ಕಾಂಗ್ರೆಸ್ ನಿಯೋಗ ದೂರು - Congress Complaint Against Modi - CONGRESS COMPLAINT AGAINST MODI

ಒಬಿಸಿ ಕೋಟಾದಲ್ಲಿ ಮುಸ್ಲಿಮರನ್ನು ಸೇರಿಸುವ ವಿಚಾರವಾಗಿ ಪ್ರಧಾನಿ ಮೋದಿ ಕಾಂಗ್ರೆಸ್‌ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದರು.

Prime Minister Narendra Modi
ಪ್ರಧಾನಿ ನರೇಂದ್ರ ಮೋದಿ
author img

By ETV Bharat Karnataka Team

Published : Apr 25, 2024, 10:29 PM IST

ಬೆಂಗಳೂರು: ಒಬಿಸಿ ಕೋಟಾಕ್ಕೆ ಮುಸ್ಲಿಮರನ್ನು ಸೇರಿಸುವ ಮೂಲಕ ಕರ್ನಾಟಕದಲ್ಲಿ ಹಿಂದುಳಿದ ವರ್ಗಕ್ಕಿದ್ದ ದೊಡ್ಡ ಪಾಲನ್ನು ಕಿತ್ತುಕೊಳ್ಳಲಾಗಿದೆ. ಈ ವಿಧಾನವನ್ನು ದೇಶದಾದ್ಯಂತ ಜಾರಿಗೆ ತರಲು ಕಾಂಗ್ರೆಸ್​ ಯೋಜಿಸುತ್ತಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಆರೋಪಿಸಿದ್ದರು. ಇದರ ವಿರುದ್ಧ ಕಾಂಗ್ರೆಸ್ ನಿಯೋಗ ಇಂದು ಚುನಾವಣಾ ಆಯೋಗಕ್ಕೆ ದೂರು ನೀಡಿದೆ. ಮಾಜಿ ಸಂಸದ ವಿ.ಎಸ್.ಉಗ್ರಪ್ಪ ನೇತೃತ್ವದಲ್ಲಿ ಮೋದಿ ವಿರುದ್ದ ಆಯೋಗಕ್ಕೆ ದೂರು ಸಲ್ಲಿಸಲಾಗಿದೆ.

ಬಳಿಕ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ಉಗ್ರಪ್ಪ, ನರೇಂದ್ರ ಮೋದಿ ಮಾನಸಿಕ ಸ್ಥಿಮಿತ ಕಳೆದುಕೊಂಡಿದ್ದಾರೆ. ರಾಜಸ್ಥಾನದ ಚುನಾವಣಾ ರ್ಯಾಲಿಯಲ್ಲಿ ಭಾಗಿಯಾಗಿದ್ದಾಗ ಈ ರೀತಿ ಮಾತನಾಡಿದ್ದಾರೆ. ದೇಶದ ಆಸ್ತಿ ಸರ್ವೇ ಮಾಡುತ್ತಾರೆ ಎಂದು ಮಾತನಾಡಿದ್ದಾರೆ. ಸಾವನ್ನಪ್ಪಿದ ಮೇಲೆ ಅವರ ಆಸ್ತಿಗಳನ್ನು ಹಂಚಿಕೆ ಮಾಡುತ್ತಾರೆ ಎಂದು ಹೇಳಿದ್ದಾರೆ. ದಲಿತರ ಮೀಸಲಾತಿಯನ್ನು ಕಡಿತ ಮಾಡಿ ಮುಸ್ಲಿಮರಿಗೆ ಕೊಡುತ್ತಾರೆ ಎಂದು ಆರೋಪಿಸಿದ್ದಾರೆ. ಸಂವಿಧಾನ ಆಧಾರದ ಮೇಲೆ ನಾವು ಮೀಸಲಾತಿ ಕೊಟ್ಟಿದ್ದೇವೆ. ಸಂವಿಧಾನದ ವಿರುದ್ಧ ನಾವು ಯಾವುದು ಮಾಡಿಲ್ಲ. ಯಾರ ಆಸ್ತಿಯನ್ನೂ ಸರ್ವೇ ಮಾಡಲು ನಾವು ಪ್ರಣಾಳಿಕೆಯಲ್ಲಿ ಹೇಳಿಲ್ಲ. ಈ ಹಿನ್ನೆಲೆಯಲ್ಲಿ ಮೋದಿ ವಿರುದ್ಧ ಕ್ರಿಮಿನಲ್ ಮೊಕದ್ದಮೆ ದಾಖಲು ಮಾಡಿಕೊಳ್ಳಬೇಕು. ಅಲ್ಲದೇ ಅವರನ್ನು ಚುನಾವಣಾ ಪ್ರಚಾರದಿಂದ ಕೈ ಬಿಡಬೇಕು ಎಂದು ಒತ್ತಾಯಿಸಿದರು.

ಲೋಕಸಭಾ ಚುನಾವಣಾ ಪ್ರಚಾರದ ವೇಳೆ ಪ್ರಧಾನಿ ಮೋದಿ ಮಾತನಾಡಿ, ಕಾಂಗ್ರೆಸ್‌ನವರು ನಿಮ್ಮ ಆಸ್ತಿ, ಸಂಪತ್ತು, ಚಿನ್ನವನ್ನು ಕಸಿದುಕೊಳ್ಳುತ್ತಾರೆ ಎಂದು ಹೇಳಿದ್ದರು. ಇದರ ಬೆನ್ನಲ್ಲೇ ಮತ್ತೊಂದು ಬಾಣ ಬಿಟ್ಟ ಅವರು ಎಸ್‌ಸಿ-ಎಸ್‌ಟಿ, ಒಬಿಸಿ ಕೋಟಾದಲ್ಲಿರುವ ಮೀಸಲಾತಿಯನ್ನು ಕದ್ದು ಧರ್ಮ ಆಧಾರದಲ್ಲಿ ನೀಡುತ್ತಾರೆಂದು ಇದಕ್ಕೆ ಕರ್ನಾಟಕವನ್ನೇ ಉದಾಹರಣೆಯಾಗಿ ಕೊಟ್ಟಿದ್ದರು.

ಒಬಿಸಿ ಮೀಸಲಾತಿಯಡಿ ಎಲ್ಲ ಮುಸ್ಲಿಂ ಜಾತಿಗಳನ್ನು ಸೇರಿಸುವ ಮೂಲಕ ಹಿಂಬಾಗಿಲಿನಲ್ಲಿ ಕರ್ನಾಟಕದಲ್ಲಿ ಧರ್ಮದ ಆಧಾರದ ಮೇಲೆ ಮೀಸಲಾತಿ ನೀಡಲು ಕಾಂಗ್ರೆಸ್ ಮುಂದಾಗಿದೆ. ನಿಮ್ಮ ಭವಿಷ್ಯದ ಪೀಳಿಗೆಯನ್ನು ಸಂಪೂರ್ಣವಾಗಿ ನಾಶಪಡಿಸಲು ಕಾಂಗ್ರೆಸ್ ಹುನ್ನಾರ ನಡೆಸುತ್ತಿದೆ ಎಂದು ಗಂಭೀರ ಆರೋಪ ಮಾಡಿದ್ದರು.

ಇದನ್ನೂಓದಿ: ನಾಳೆ ವಿಜಯಪುರದಲ್ಲಿ ರಾಹುಲ್ ಗಾಂಧಿ, ಸಿಎಂ ಸಿದ್ದರಾಮಯ್ಯ ಮತ ಪ್ರಚಾರ - Rahul Gandhi

ETV Bharat Logo

Copyright © 2024 Ushodaya Enterprises Pvt. Ltd., All Rights Reserved.