ETV Bharat / state

ಜೆಡಿಎಸ್, ದೇವೇಗೌಡರನ್ನು​ ದೇಶ ಗುರುತಿಸುವಂತೆ ಮಾಡಿದ್ದು ಕಾಂಗ್ರೆಸ್​: ಸಂಸದ ಡಿ.ಕೆ.ಸುರೇಶ್​ ತಿರುಗೇಟು

author img

By ETV Bharat Karnataka Team

Published : Mar 20, 2024, 3:16 PM IST

Updated : Mar 20, 2024, 3:57 PM IST

ಕಾಂಗ್ರೆಸ್​ ವಿರುದ್ಧ ಹೆಚ್​ ಡಿ ಕುಮಾರಸ್ವಾಮಿ ಹೇಳಿಕೆಗೆ ಸಂಸದ ಡಿ ಕೆ ಸುರೇಶ್​ ಅವರು ಮಾಧ್ಯಮಗಳ ಮುಂದೆ ತಿರುಗೇಟು ನೀಡಿದ್ದಾರೆ.

MP D K Suresh
ಸಂಸದ ಡಿ ಕೆ ಸುರೇಶ್​

ಬೆಂಗಳೂರು: "ನಾವು ಜೆಡಿಎಸ್ ನಾಯಕರನ್ನು ಪ್ರಧಾನಮಂತ್ರಿ, ಮುಖ್ಯಮಂತ್ರಿಯನ್ನಾಗಿ ಮಾಡಿದ್ದೇವೆ. ಆ ಮೂಲಕ ದೇಶ ಹಾಗೂ ರಾಜ್ಯದ ಜನರ ನೆನಪಿನಲ್ಲಿ ಅವರು ಉಳಿಯುವಂತೆ ಮಾಡಿದ್ದೇವೆ" ಎಂದು ಸಂಸದ ಡಿ.ಕೆ. ಸುರೇಶ್ ತಿರುಗೇಟು ನೀಡಿದ್ದಾರೆ.

ಸದಾಶಿವನಗರ ನಿವಾಸದ ಬಳಿ ಇಂದು ಮಾಧ್ಯಮದವರ, ಕಾಂಗ್ರೆಸ್​​ನಂತೆ ಬಿಜೆಪಿಯವರು ಕುತ್ತಿಗೆ ಕೊಯ್ಯುವ ಕೆಲಸ ಮಾಡಿಲ್ಲ ಎಂಬ ಕುಮಾರಸ್ವಾಮಿ ಅವರ ಆರೋಪದ ಬಗ್ಗೆ ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿ, "ಜೆಡಿಎಸ್ ಅವರನ್ನು ಈ ದೇಶದ ಪ್ರಧಾನಿ, ರಾಜ್ಯದ ಸಿಎಂ ಮಾಡಿದ್ದೇವೆ. ಈ ದೇಶ ಗುರುತಿಸುವಂತಹ ಕೆಲಸಗಳನ್ನು ಕಾಂಗ್ರೆಸ್ ಪಕ್ಷ ಮಾಡಿದೆ. ಕಾಂಗ್ರೆಸ್ ಪ್ರಧಾನಿ ಮಾಡದೇ ಹೋಗಿದ್ದರೆ ಅವರನ್ನು ಈ ದೇಶ ನೆನಪಿಸಿಕೊಳ್ಳುತ್ತಿರಲಿಲ್ಲ. ರಾಜ್ಯದ ಮೂವತ್ತು ಸಿಎಂಗಳಲ್ಲಿ ಕುಮಾರಸ್ವಾಮಿ ಅವರು ಒಬ್ಬರಾಗುತ್ತಿರಲಿಲ್ಲ" ಎಂದು ತಿರುಗೇಟು ನೀಡಿದರು.

ಆಸ್ಪತ್ರೆಯಿಂದ ಬಂದ ನಂತರ ಬಲಿಷ್ಠವಾಗಿ ಪ್ರಚಾರ ಮಾಡುತ್ತೇನೆ ಎನ್ನುವ ಕುಮಾರಸ್ವಾಮಿ ಅವರ ಹೇಳಿಕೆ ಬಗ್ಗೆ ಪ್ರತಿಕ್ರಿಯಿಸಿ, "ಕುಮಾರಸ್ವಾಮಿ ಅವರ ಪ್ರಶ್ನೆಗಳಿಗೆ ನಾನು ಉತ್ತರ ನೀಡಲು ಹೋಗುವುದಿಲ್ಲ. ಆರೋಗ್ಯ ಸರಿ ಇಲ್ಲ ಎಂದು ಆಸ್ಪತ್ರೆ ಸೇರಿರುವ ಅವರು ಆದಷ್ಟು ಬೇಗ ಗುಣಮುಖರಾಗಲಿ ಎಂದು ದೇವರಲ್ಲಿ ಪ್ರಾರ್ಥನೆ ಮಾಡುತ್ತೇನೆ. ರಾಜಕಾರಣದಲ್ಲಿ ಎದುರಾಳಿಗಳು ಬಲಿಷ್ಟವಾಗಿದ್ದಷ್ಟು ಚೆನ್ನಾಗಿ ಕೆಲಸ ಮಾಡಲು ಸಾಧ್ಯ. ಅದಕ್ಕೆ ಅವರು ಮೊದಲು ಗುಣಮುಖರಾಗಲಿ" ಎಂದು ಹೇಳಿದರು.

ದೇವೇಗೌಡರು ಈ ಹಿಂದೆ ಆಡಿದ್ದ ಮಾತುಗಳನ್ನು ಜನರಿಗೆ ತೋರಿಸಿ: ಬಿಜೆಪಿ - ಜೆಡಿಎಸ್ ಮೈತ್ರಿಯಲ್ಲಿ ಬಿರುಕು ಕಾಣಿಸಿಕೊಂಡಂತೆ ಇದೆಯಲ್ಲ ಎಂದು ಕೇಳಿದಾಗ, "ಜಾತ್ಯತೀತ ತತ್ವಗಳ ಬಗ್ಗೆ ನಾನು ಮಾತನಾಡಿದರೆ ಪ್ರಚಾರ ಆಗುವುದಿಲ್ಲ. ನಿಮಗೆ ಬೇಕಾದ ಹೇಳಿಕೆಗಳನ್ನು ನಾನು ಕೊಡಲು ಆಗುವುದಿಲ್ಲ. ಮಾಜಿ ಪ್ರಧಾನಿಗಳು ಹಿಂದೆ ಹೇಳಿದ್ದ, 'ಮುಂದಿನ ಜನ್ಮದಲ್ಲಿ ಮುಸ್ಲಿಮನಾಗಿ ಹುಟ್ಟುತ್ತೇನೆ', 'ಮೋದಿ ಗೆದ್ದರೆ ದೇಶ ಬಿಟ್ಟು ಹೋಗುತ್ತೇನೆ', 'ರಾಜ್ಯಕ್ಕೆ ರಾಷ್ಟ್ರೀಯ ಪಕ್ಷಗಳ ಅವಶ್ಯಕತೆಯಿಲ್ಲ, ಪ್ರಾದೇಶಿಕ ಪಕ್ಷಗಳ ಅವಶ್ಯಕತೆ ಇದೆ' - ಎಂಬೆಲ್ಲಾ ಹೇಳಿಕೆಗಳನ್ನು ಜನರಿಗೆ ತೋರಿಸಿ. ನಾನು ಮಾಡಿರುವ ಕೆಲಸಗಳಿಗೆ ನನ್ನ ಕ್ಷೇತ್ರದ ಜನತೆಯ ಬಳಿ ಕೂಲಿ ಕೇಳುತ್ತಿದ್ದೇನೆ. ಮಾಧ್ಯಮದವರು ನನಗೆ ಕೂಲಿ ಕೊಡಿಸುತ್ತೀರಾ ಎನ್ನುವ ಭಾವನೆ ಇದೆ" ಎಂದು ಹೇಳಿದರು.

ಮಂಡ್ಯದಿಂದ ಕುಮಾರಸ್ವಾಮಿ ಸ್ಪರ್ಧೆಗೆ ಇಳಿಯುತ್ತಾರೆ ಎಂದಾಗ "ನಮ್ಮ ಅಭ್ಯರ್ಥಿ ಬಲಿಷ್ಠವಾಗಿದ್ದಾರೆ, ಗೆಲ್ಲುತ್ತಾರೆ. ನಾವು ಕೊಟ್ಟಿರುವ ಐದು ಗ್ಯಾರಂಟಿಗಳು, ಮುಂದಿನ ಐದು ವರ್ಷದಲ್ಲಿ ಈ ರಾಜ್ಯದ ಅಭಿವೃದ್ದಿಗೆ ನಾವು ಕೈಗೊಂಡಿರುವ ಕೆಲಸಗಳನ್ನು ಇಟ್ಟುಕೊಂಡು ಚುನಾವಣೆ ಎದುರಿಸುತ್ತಿದ್ದೇವೆ" ಎಂದರು.

ಹನುಮಾನ್ ಚಾಲೀಸಾ ವಿವಾದದ ಬಗ್ಗೆ ಪ್ರತಿಕ್ರಿಯಿಸಿ "ಮಾಧ್ಯಮದವರು ಪ್ರಚಾರ ನೀಡುತ್ತಾರೆ ಎಂದು ಭಾವಿಸಿ ಬಿಜೆಪಿಯವರು ಹೀಗೆ ಮಾಡುತ್ತಿದ್ದಾರೆ. ಸಣ್ಣ ವಿಚಾರಗಳನ್ನು ಅನವಶ್ಯಕವಾಗಿ ದೊಡ್ಡದು ಮಾಡುವ ಪ್ರವೃತ್ತಿಯನ್ನು ಬಿಜೆಪಿಗೆ ಯಾರೂ ಹೇಳಿಕೊಡಬೇಕಾಗಿಲ್ಲ" ಎಂದು ವ್ಯಂಗ್ಯವಾಡಿದರು.

ಹಳೇ ಮೈಸೂರು ಭಾಗದಲ್ಲಿ ಜೆಡಿಎಸ್- ಬಿಜೆಪಿ ನಾಯಕರು ಕಾಂಗ್ರೆಸ್ ಸೇರುವ ಸಾಧ್ಯತೆ ಬಗ್ಗೆ ಪ್ರತಿಕ್ರಿಯಿಸಿ "ನಾನು ಕ್ಷೇತ್ರದ ಕೆಲಸದಲ್ಲಿ ನಿರತನಾಗಿದ್ದು, ಈ ಬಗ್ಗೆ ನಮ್ಮ ಪಕ್ಷದ ವರಿಷ್ಠರನ್ನು ಕೇಳಬೇಕು. ಈಗ ನಾನು ಏನನ್ನೂ ಹೇಳುವುದಿಲ್ಲ. ನಾನು ಗ್ರೌಂಡ್​ನಲ್ಲಿ ಇದ್ದೇನೆ. ನೀವು ಮೇಲೆ ಇದ್ದೀರಿ. ಈ ಬಗ್ಗೆ ನನಗೆ ಗೊತ್ತಿಲ್ಲ. ಎಲ್ಲವೂ ಪಕ್ಷದ ಹೈಕಮಾಂಡ್ ನಿರ್ಧಾರ" ಮಾಡಲಿದೆ ಎಂದರು.

ಕೇಂದ್ರ ಸರ್ಕಾರವನ್ನು ಪ್ರಶ್ನಿಸಲಿ: ತಮಿಳುನಾಡಿನ ಕೃಷ್ಣಗಿರಿ ಸೇರಿದಂತೆ ಇತರೆಡೆಯಿಂದ ಬಂದು ಬಾಂಬ್ ಇಡುತ್ತಾರೆ ಎನ್ನುವ ಶೋಭಾ ಕರಂದ್ಲಾಜೆ ಅವರ ಹೇಳಿಕೆ ಬಗ್ಗೆ ಪ್ರತಿಕ್ರಿಯಿಸಿ "ಉನ್ನತ ತನಿಖಾ ಸಂಸ್ಥೆಗಳು ಕೇಂದ್ರ ಸರ್ಕಾರದ ಬಳಿ ಇವೆ. ಭಯೋತ್ಪಾದಕರು ಎಲ್ಲೆಲ್ಲಿ ಇದ್ದಾರೆ ಎನ್ನುವುದು ಅವರಿಗೆ ಗೊತ್ತಿದೆ. ಕಾಂಗ್ರೆಸ್ ಪಕ್ಷದ ಮೇಲೆ ಆರೋಪ ಮಾಡುವುದು ಬಿಟ್ಟು ಕೇಂದ್ರ ಸರ್ಕಾರದ ಬಳಿ ಪ್ರಶ್ನೆ ಮಾಡಲಿ. ಕೃಷ್ಣಗಿರಿಯಿಂದ ಬರುತ್ತಾರೆ ಎನ್ನುವುದು ಅವರಿಗೆ ತಿಳಿದಿದೆ ಎಂದರೆ ಬೇಕಂತಲೇ ಎಲ್ಲವನ್ನು ಮುಚ್ಚಿಡುತ್ತಿದ್ದಾರೆ ಎಂದರ್ಥವಲ್ಲವೇ? ಈ ವಿಚಾರದಲ್ಲೂ ರಾಜಕಾರಣಕ್ಕೆ ಮುಂದಾಗಿದ್ದಾರೆ" ಎಂದು ಹೇಳಿದರು.

ಇದನ್ನೂ ಓದಿ: ಕಾಂಗ್ರೆಸ್ ಕಾರ್ಯಕಾರಿ ಸಮಿತಿ, ಚುನಾವಣಾ ಸಮಿತಿಯ ಸರಣಿ ಸಭೆ; ಇಂದು ಕರ್ನಾಟಕದ ಅಭ್ಯರ್ಥಿಗಳ 2ನೇ ಪಟ್ಟಿ ಬಿಡುಗಡೆ ಸಾಧ್ಯತೆ

Last Updated : Mar 20, 2024, 3:57 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.