ETV Bharat / state

ಬರ ಪರಿಹಾರ ಬಿಡುಗಡೆಗೆ ಕೇಂದ್ರಕ್ಕೆ ನಿರ್ದೇಶನ ನೀಡಿ: ಚುನಾವಣಾ ಆಯೋಗಕ್ಕೆ ಕಾಂಗ್ರೆಸ್ ನಿಯೋಗದ ಮನವಿ ಪತ್ರ - drought relief - DROUGHT RELIEF

ಬರ ಪರಿಹಾರ ಬಿಡುಗಡೆಗೆ ಕೇಂದ್ರಕ್ಕೆ ನಿರ್ದೇಶನ ನೀಡುವಂತೆ ಕೋರಿ ಚುನಾವಣೆ ಆಯೋಗಕ್ಕೆ ಕಾಂಗ್ರೆಸ್ ನಿಯೋಗ ಮನವಿ ಪತ್ರ ಸಲ್ಲಿಸಿತು.

ವಿಎಸ್ ಉಗ್ರಪ್ಪ ನೇತೃತ್ವದ ನಿಯೋಗ
ವಿಎಸ್ ಉಗ್ರಪ್ಪ ನೇತೃತ್ವದ ನಿಯೋಗ
author img

By ETV Bharat Karnataka Team

Published : Apr 9, 2024, 8:10 PM IST

ಬೆಂಗಳೂರು: ಕರ್ನಾಟಕಕ್ಕೆ ಬರ ಪರಿಹಾರ ಬಿಡುಗಡೆ ಮಾಡುವಂತೆ ಕೇಂದ್ರ ಸರ್ಕಾರಕ್ಕೆ ನಿರ್ದೇಶನ ನೀಡುವಂತೆ ಡಿಕೆ ಶಿವಕುಮಾರ್ ಮನವಿ ಪತ್ರವನ್ನು ಕೆಪಿಸಿಸಿ ನಿಯೋಗ ಚುನಾವಣಾ ಆಯೋಗಕ್ಕೆ ಸಲ್ಲಿಸಿದೆ. ವಿಎಸ್ ಉಗ್ರಪ್ಪ ನೇತೃತ್ವದ ನಿಯೋಗ ಕರ್ನಾಟಕ ಮುಖ್ಯ ಚುನಾವಣಾಧಿಕಾರಿಯನ್ನು ಭೇಟಿಯಾಗಿ ಮನವಿ ಪತ್ರ ಸಲ್ಲಿಸಿತು.

ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಬರೆದ ಮನವಿ ಪತ್ರವನ್ನು ನಿಯೋಗ ಮುಖ್ಯ ಚುನಾವಣಾಧಿಕಾರಿಗೆ ಸಲ್ಲಿಸಿದರು. ಪತ್ರದಲ್ಲಿ ರಾಜ್ಯದ 224 ತಾಲೂಕುಗಳು ತೀವ್ರ ಬರಗಾಲ ಎದುರಿಸುತ್ತಿದೆ. 48 ಲಕ್ಷ ಹೆಕ್ಟೇರ್ ಬೆಳೆ ನಷ್ಟವಾಗಿದ್ದು, ಸುಮಾರು 37,000 ಕೋಟಿ ರೂ.‌ನಷ್ಟು ಹಾನಿಯಾಗಿದೆ. ಎನ್​ಡಿಆರ್​ಎಫ್​ ಪ್ರಕಾರ ಕನಿಷ್ಠ 4663 ಕೋಟಿ ರೂ. ಬೆಳೆ ಹಾನಿ ಪರಿಹಾರ ಅಗತ್ಯ ಇದೆ. ಈ ಸಂಬಂಧ ನವೆಂಬರ್​ನಲ್ಲಿ ಕೇಂದ್ರ ಸರ್ಕಾರಕ್ಕೆ ಬರ ನಷ್ಟದ ಮೆಮೊರಂಡಂ ಸಲ್ಲಿಸಲಾಗಿದೆ. ಆದರೆ, ಕೇಂದ್ರ ಸರ್ಕಾರ ಪರಿಹಾರ ಬಿಡುಗಡೆ ಮಾಡಿಲ್ಲ ಎಂದು ತಿಳಿಸಿದ್ದಾರೆ.

ರಾಜ್ಯ ಸರ್ಕಾರ ಬರ ಪರಿಹಾರ ಬಿಡುಗಡೆಗಾಗಿ ಕೇಂದ್ರಕ್ಕೆ ನಿರ್ದೇಶನ ನೀಡುವಂತೆ ಕೋರಿ ಸುಪ್ರೀಂಕೋರ್ಟ್ ಮೊರೆ ಹೋಗಿದೆ. ಬರ ಪರಿಹಾರ ಬಿಡುಗಡೆ ಸಂಬಂಧ ಕೇಂದ್ರ ಸರ್ಕಾರ ಮಲತಾಯಿ ದೋರಣೆ ತೋರುತ್ತಿದೆ. ಉದ್ದೇಶಪೂರ್ವಕವಾಗಿ ಕೇಂದ್ರ ಸರ್ಕಾರ ಪರಿಹಾರ ಬಿಡುಗಡೆಗೆ ವಿಳಂಬ ಮಾಡುತ್ತಿದೆ. ಈ ಸಂಬಂಧ ಪ್ರಧಾನಿ ಮೋದಿ, ಅಮಿತ್ ಶಾ ಆಧಾರ ರಹಿತ ಆರೋಪ ಮಾಡುತ್ತಿದ್ದಾರೆ ಎಂದು ದೂರಿದ್ದಾರೆ.

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಏ.6ಕ್ಕೆ ತಮ್ಮ ಹೇಳಿಕೆಯಲ್ಲಿ ಮಾರ್ಚ್ 28ಕ್ಕೆ ಚುನಾವಣಾ ಆಯೋಗಕ್ಕೆ ಪತ್ರ ಬರೆದು ಬರ ಪರಿಹಾರ ಮಂಜೂರಾತಿಗಾಗಿನ ಉನ್ನತ ಮಟ್ಟದ ಸಭೆ ಕರೆಯಲು ಅನುಮತಿ ನೀಡುವಂತೆ ಕೋರಲಾಗಿದೆ ಎಂದು ತಿಳಿಸಿದ್ದಾರೆ. ಚುನಾವಣಾ ಆಯೋಗ ಅನುಮತಿ ನೀಡದ ಕಾರಣ ವಿಳಂಬವಾಗಿದೆ ಎಂದು ಅವರೇ ಒಪ್ಪಿಕೊಂಡಿದ್ದಾರೆ ಎಂದು ವಿವರಿಸಿದ್ದಾರೆ.

ಚುನಾವಣಾ ನೀತಿ ಸಂಹಿತೆ ಬರ ಪರಿಹಾರ ಬಿಡುಗಡೆಗೆ ಯಾವುದೇ ಅಡ್ಡಿಯಾಗುವುದಿಲ್ಲವಾದರೂ ಕೇಂದ್ರ ಸರ್ಕಾರ ಉನ್ನತ ಮಟ್ಟದ ಸಮಿತಿ ಸಭೆ ನಡೆಸಲು ಚುನಾವಣಾ ಆಯೋಗದ ಅನುಮತಿ ಬೇಕು ಎಂದು ತಪ್ಪಾಗಿ ವಾದಿಸುತ್ತಿದೆ. ಹೀಗಾಗಿ ಉನ್ನತ ಮಟ್ಟದ ಸಮಿತಿ ಸಭೆ ನಡೆಸಲು ಅನುಮತಿ ನೀಡುವುದು ಅಗತ್ಯ ಇದೆ. ರಾಜ್ಯದ ರೈತರ ಹಿತದೃಷ್ಟಿಯಿಂದ ಚುನಾವಣಾ ಆಯೋಗ ಬರ ಪರಿಹಾರ ಸಂಬಂಧ ಉನ್ನತ ಮಟ್ಟದ ಸಮಿತಿ ಸಭೆ ಕರೆಯುವಂತೆ ಕೇಂದ್ರ ಸರ್ಕಾರಕ್ಕೆ ನಿರ್ದೇಶನ ನೀಡಬೇಕು ಎಂದು ಮನವಿ ಪತ್ರದಲ್ಲಿ ಕೋರಿದ್ದಾರೆ.

ಇದನ್ನೂ ಓದಿ: ಬರ ಪರಿಹಾರ ವಿಚಾರವಾಗಿ ಸುಪ್ರೀಂ ಕೋರ್ಟ್​ಗೆ ತಪ್ಪು‌ ಮಾಹಿತಿ ನೀಡಿ ದಾರಿ ತಪ್ಪಿಸುವ ಯತ್ನ: ಸಿದ್ದರಾಮಯ್ಯ - Siddaramaiah

ETV Bharat Logo

Copyright © 2025 Ushodaya Enterprises Pvt. Ltd., All Rights Reserved.