ETV Bharat / state

ಕಾಂಗ್ರೆಸ್‌ ಹೈಕಮಾಂಡ್‌, ರಾಜ್ಯದ ಎಲ್ಲ ಶಾಸಕರು ಸಿಎಂ ಬೆನ್ನಿಗೆ ಇದ್ದೇವೆ: ಸಚಿವರ ಬೆಂಬಲ - MUDA Case

ಕಾಂಗ್ರೆಸ್‌ ಹೈಕಮಾಂಡ್‌ ಹಾಗೂ ರಾಜ್ಯದ ಎಲ್ಲ ಶಾಸಕರು ಸಿಎಂ ಬೆನ್ನಿಗೆ ಇದ್ದೇವೆ. ಅವರು ರಾಜೀನಾಮೆ ಕೊಡುವ ಪ್ರಶ್ನೆಯೇ ಇಲ್ಲ ಎಂದು ಗೃಹ ಸಚಿವ ಡಾ. ಜಿ.ಪರಮೇಶ್ವರ್ ಆದಿಯಾಗಿ ಕಾಂಗ್ರೆಸ್​ ಸಚಿವರು ಮುಖ್ಯಮಂತ್ರಿ ಸಿದ್ದರಾಮಯ್ಯನವರ ಬೆಂಬಲಕ್ಕೆ ನಿಂತಿದ್ದಾರೆ.

MUDA CASE
ಸಿಎಂಗೆ ಸಚಿವರ ಬೆಂಬಲ (ETV Bharat)
author img

By ETV Bharat Karnataka Team

Published : Sep 25, 2024, 7:53 PM IST

ಬೆಂಗಳೂರು: ಮುಡಾ‌ ಪ್ರಕರಣದಲ್ಲಿ ಮುಖ್ಯಮಂತ್ರಿಯವರ ಪಾತ್ರ ಏನೂ ಇಲ್ಲ. ಮುಂದಿನ ನ್ಯಾಯಾಂಗ ಹೋರಾಟ ಮಾಡಲು ಅವಕಾಶ ಇರುವುದರಿಂದ ಮುಖ್ಯಮಂತ್ರಿಯವರು ರಾಜೀನಾಮೆ ನೀಡುವ ಅವಶ್ಯಕತೆ ಇಲ್ಲ ಗೃಹ ಸಚಿವ ಡಾ. ಜಿ. ಪರಮೇಶ್ವರ್, ವಸತಿ ಹಾಗೂ ಅಲ್ಪಸಂಖ್ಯಾತರ ಕಲ್ಯಾಣ ಸಚಿವ ಜಮೀರ್ ಅಹಮದ್ ಖಾನ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್​, ಕೃಷಿ ಸಚಿವ ಎನ್. ಚಲುವರಾಯಸ್ವಾಮಿ ಸೇರಿದಂತೆ ಹಲವರು ಮುಖ್ಯಮಂತ್ರಿ ಸಿದ್ದರಾಮಯ್ಯನವರ ಬೆಂಬಲಕ್ಕೆ ನಿಂತಿದ್ದಾರೆ.

ಸದಾಶಿವನಗರದ ತಮ್ಮ ನಿವಾಸದ ಬಳಿ ಇಂದು ಮಾಧ್ಯಮದವರೊಂದಿಗೆ ಮಾತನಾಡಿದ ಗೃಹ ಸಚಿವ ಡಾ. ಜಿ. ಪರಮೇಶ್ವರ್, ಮುಖ್ಯಮಂತ್ರಿ ಯಾವುದೇ ಕಡತಕ್ಕೆ ರುಜು ಹಾಕಿಲ್ಲ. ಅಧಿಕಾರ ದುರ್ಬಳಕೆ ಆಗಿಲ್ಲ ಎಂದು ನ್ಯಾಯಕ್ಕಾಗಿ ಹೈಕೋರ್ಟ್‌ಗೆ ಹೋಗಿದ್ದೆವು. ಅದಕ್ಕೆ ವಿರುದ್ಧವಾದ ತೀರ್ಪು ಬಂದಿದೆ. ತೀರ್ಪನ್ನು ಗೌರವಿಸುತ್ತೇವೆ. ಮುಂದಿ‌ನ ನ್ಯಾಯಾಂಗ ಹೋರಾಟದ ಬಗ್ಗೆ ಮುಖ್ಯಮಂತ್ರಿ ಈಗಾಗಲೇ ಸ್ಪಷ್ಟಪಡಿಸಿದ್ದಾರೆ ಎಂದರು.

ಬೆಂಗಳೂರಿನ ತಮ್ಮ ನಿವಾಸದಲ್ಲಿ ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಸಚಿವ ಸತೀಶ್ ಜಾರಕಿಹೊಳಿ‌, ಕೋರ್ಟ್ ತೀರ್ಪು ಕೊಟ್ಟಿದೆ. ಅದನ್ನು ಪಾಲನೆ ಮಾಡಬೇಕು ಅಷ್ಟೆ. ತನಿಖೆ ಆದ ತಕ್ಷಣ ಆರೋಪ ಸಾಬೀತಾಗಿದೆ ಎಂದಲ್ಲ. ಲೋಕಾಯುಕ್ತ ತನಿಖೆ ಮಾಡಬೇಕು. ತಪ್ಪಾ, ಒಪ್ಪಾ ಎಂದು ತೀರ್ಮಾನ ಮಾಡಲು ಮೂರು ನಾಲ್ಕು ತಿಂಗಳು ಬೇಕು. ನೈತಿಕತೆ ಪ್ರಶ್ನೆ ಎಲ್ಲಿದೆ? ಕೇಸ್ ಇರುವವರು ಮಂತ್ರಿಗಳಾಗಿ ಮುಂದುವರೆದಿದ್ದಾರೆ. ಸಿಎಂ ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ಚುನಾವಣೆ ಆಗಿದೆ. ಎಲ್ಲರೂ ಅವರ ಜೊತೆಗೆ ಇದ್ದಾರೆ. ಸಿದ್ದರಾಮಯ್ಯ ಅವರು ಸಿಎಂ ಆಗಿ ಮುಂದುವರೆಯುತ್ತಾರೆ. ಈಗ ಅವರೇ ಸಿಎಂ ಆಗಿ ಮುಂದುವರೆಯುತ್ತಾರೆ. ರಾಜಕೀಯದಲ್ಲಿ ಎಷ್ಟು ಗಟ್ಟಿಯಾಗಿರುತ್ತಾರೋ ಅಷ್ಟು ಉಳಿಯುತ್ತಾರೆ. ಗಟ್ಟಿ ಇಲ್ಲ ಅಂದರೆ ಗಾಳಿಯಲ್ಲಿ ತೂರಿ ಹೋಗ್ತಾರೆ. ಕೇಜ್ರಿವಾಲ್ ಮಾಡೆಲ್ 2 ಆಗಬಹುದು. ಕೇಂದ್ರದ‌ 25 ಸಚಿವರ ಮೇಲೆ ಕೇಸ್​ಗಳಿವೆ. ಅವರೆಲ್ಲ ಮಂತ್ರಿಗಳಾಗಿ ಮುಂದುವರೆದಿಲ್ಲವೇ? ಎಂದು ಪ್ರಶ್ನಿಸಿದರು.

ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ಹೈಕೋರ್ಟ್ ಹಾಗೂ ಜನಪ್ರತಿನಿಧಿಗಳ ನ್ಯಾಯಾಲಯ ತೀರ್ಪು ಹಿನ್ನೆಲೆ ಸಿಎಂ ರಾಜೀನಾಮೆ ಕೊಡುವ ಪ್ರೆಶ್ನೆಯೇ ಇಲ್ಲ ಎಂದು ಸಚಿವ ಜಮೀರ್ ಅಹಮದ್ ಖಾನ್ ತಿಳಿಸಿದ್ದಾರೆ. ವಿಧಾನಸೌಧದಲ್ಲಿ ಇಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಲೋಕಾಯುಕ್ತ ತನಿಖೆಗೆ ಅದೇಶಿಸಲಾಗಿದೆ. ತನಿಖೆ ನಡೆಯಲಿ, ನಂತರ ಸತ್ಯ ತಿಳಿಯಲಿದೆ. ಸಿದ್ದರಾಮಯ್ಯ ಅವರದು ಇದರಲ್ಲಿ ಏನೂ ಪಾತ್ರ ಇಲ್ಲ ಎಂದು ಹೇಳಿದ್ದಾರೆ. ಹೈಕೋರ್ಟ್​ನಲ್ಲೂ ವಿಚಾರಣೆಗೆ ಅನುಮತಿ ಕೊಟ್ಟಿಲ್ಲ. ಜನಪ್ರತಿನಿಧಿಗಳ ನ್ಯಾಯಾಲಯದಲ್ಲಿ ತನಿಖೆಗೆ ಆದೇಶ ಬಂದಿದೆ. ನಾವು ತನಿಖೆ ಎದುರಿಸಲು ಸಿದ್ಧ. ಹೈಕಮಾಂಡ್ ಸಿದ್ದರಾಮಯ್ಯ ಅವರ ಜತೆ ಇದೆ. ಶಾಸಕರು, ಸಚಿವರು ಅವರ ಜತೆ ಇದ್ದೇವೆ. ರಾಜೀನಾಮೆ ಕೊಡಬೇಡಿ ಎಂದು ನಾವೆಲ್ಲರೂ ಹೇಳಿದ್ದೇವೆ. ಕೆ ಸಿ ವೇಣುಗೋಪಾಲ್, ರಣದೀಪ್ ಸಿಂಗ್ ಸುರ್ಜೆವಾಲಾ ಸಹ ಸಿದ್ದರಾಮಯ್ಯ ರಾಜೀನಾಮೆ ಅಗತ್ಯ ಇಲ್ಲ ಎಂದಿದ್ದಾರೆ. ಕಾನೂನಾತ್ಮಕ ಹೋರಾಟ ಮಾಡಲಿದ್ದಾರೆ ಎಂದು ಹೇಳಿದ್ದಾರೆ. ಅವರನ್ನು ಐದು ವರ್ಷ ಯಾರೂ ಅಲುಗಾಡಿಸಲು ಸಾಧ್ಯವಿಲ್ಲ. ಮುಡಾ ಪ್ರಕರಣ ಸಂಪೂರ್ಣ ರಾಜಕೀಯ ಪ್ರೇರಿತ ಎಂದು ಆರೋಪಿಸಿದರು.

ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ರಾಜಕೀಯ ಪಿತೂರಿ ನಡೆಸಲಾಗಿದೆ. ಇದೊಂದು ರಾಜಕೀಯ ಸಂಚು ಅಂತ ಎಲ್ಲರಿಗೂ ಗೊತ್ತಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್​ ಹೇಳಿದರು. ಕಾವೇರಿ ನಿವಾಸದಲ್ಲಿ ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿಯಾದ ಬಳಿಕ ಮಾಧ್ಯಮದವರ ಪ್ರಶ್ನೆಗೆ ಉತ್ತರಿಸಿದ ಅವರು, ಕೋರ್ಟ್ ತೀರ್ಪು ಬಂದಿದೆ, ನಮ್ಮ ಮುಂದೆ ಬೇರೆ ಬೇರೆ ಆಯ್ಕೆಗಳಿವೆ. ಮುಂದಿನ ಕಾನೂನು ಹೋರಾಟದ ಬಗ್ಗೆ ಚರ್ಚೆ ಮಾಡ್ತೀವಿ ಎಂದರು.

ಸಿಎಂ ಸಿದ್ದರಾಮಯ್ಯ ರಾಜೀನಾಮೆಗೆ ಒತ್ತಾಯಿಸಿ ವಿಪಕ್ಷಗಳ ಪ್ರತಿಭಟನೆ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿದ ಸಚಿವರು, ಮೊದಲು ವಿಪಕ್ಷದವರಿಗೆ ಹೇಳಿ, ಅವರ ಪಕ್ಷದಲ್ಲಿ ಎಷ್ಟು ಜನರ ಮೇಲೆ FIR ಇದೆ. ಎಷ್ಟು ಜನರು ಜಾಮೀನಿನ ಮೇಲೆ ಹೊರಗಿದ್ದಾರೆ ಅಂತ ಮೊದಲು ತಿಳಿದುಕೊಳ್ಳಲಿ ಎಂದು ತಿರುಗೇಟು ನೀಡಿದರು. ‌

ಮತ್ತೊಂದೆಡೆ ಮಂಡ್ಯದಲ್ಲಿ ಮಾತನಾಡಿದ ಸಚಿವ ಎನ್. ಚಲುವರಾಯಸ್ವಾಮಿ, ಸಿಎಂ ಸಿದ್ದರಾಮಯ್ಯ ತಪ್ಪು ಮಾಡಿಲ್ಲ, ರಾಜೀನಾಮೆ ಕೊಡುವ ಪ್ರಶ್ನೆ ಇಲ್ಲ. ನಿನ್ನೆ ಹೈಕೋರ್ಟ್ ತೀರ್ಪು ಬಂದಿದೆ. 17ಎ ಪ್ರಕಾರ ತನಿಖೆಗೆ ಆದೇಶಿಸಿ, ಸೆ. 218ರಡಿ ಪ್ರಾಸಿಕ್ಯೂಷನ್ ಕೈಬಿಟ್ಟಿದ್ದಾರೆ. ತನಿಖೆ ಮಾಡಲು ಹೊರಟಿದ್ದಾರೆ. ಜನಪ್ರತಿನಿಧಿಗಳ ಕೋರ್ಟ್ ಕೂಡ ತನಿಖೆಗೆ ಆದೇಶ ಮಾಡಿದೆ. ಲೀಗಲ್ ಆಗಿ ಏನು ತೀರ್ಮಾನ ಮಾಡಬೇಕೋ ಅದು ಆಗುತ್ತೆ. ಸುಪ್ರೀಂ ಕೋರ್ಟ್​ಗೆ ಹೋಗುವುದರ ಬಗ್ಗೆ ಇನ್ನೂ ನಿರ್ಧರಿಸಿಲ್ಲ. ಆದರೆ, ನಾವು ಕಾನೂನು ರೀತಿಯ ಹೋರಾಟ ಮುಂದುವರೆಸುತ್ತೇವೆ. ಸಿದ್ದರಾಮಯ್ಯನವರ ರಾಜೀನಾಮೆ ಕೇಳುವ ನೈತಿಕ ಹಕ್ಕು ಬಿಜೆಪಿ-ಜೆಡಿಎಸ್​ಗೆ ಇಲ್ಲ. ಸದ್ಯ ಎರಡೂ ಪಕ್ಷಗಳು ಸೇರಿ ರೆಕ್ಕೆ ಪುಕ್ಕ ಬಂದಂಗೆ ಆಡುತ್ತಿವೆ, ಆಡಲಿ. ಒಂದು ದಿನ ಅವರಿಗೆ ಪಶ್ಚಾತ್ತಾಪ ಪಡುವ ಸಮಯ ಬರುತ್ತೆ. ಇದು ರಾಜಕೀಯ ವಿಷಯ. ನಮ್ಮ ಸರ್ಕಾರ ಇನ್ನೂ ನಾಲ್ಕು ವರ್ಷ ಇರುತ್ತೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಇದನ್ನೂ ಓದಿ: ನ್ಯಾಯಯುತ, ನಿಷ್ಪಕ್ಷಪಾತ ತನಿಖೆಗಾಗಿ ಸಿದ್ದರಾಮಯ್ಯ ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಬೇಕು: ವಿಜಯೇಂದ್ರ ಆಗ್ರಹ - MUDA Scam

ETV Bharat Logo

Copyright © 2024 Ushodaya Enterprises Pvt. Ltd., All Rights Reserved.