ETV Bharat / state

ಸುಳ್ಳು, ಭ್ರಷ್ಟಾಚಾರ ಕಾಂಗ್ರೆಸ್​ನ ಗಂಗೋತ್ರಿ: ಬೊಮ್ಮಾಯಿ

ರಾಜ್ಯ ಸರ್ಕಾರದ ವಿರುದ್ಧ ಮಾಜಿ ಸಿಎಂ ಬಸವರಾಜ್ ಬೊಮ್ಮಾಯಿ ತೀವ್ರ ವಾಗ್ದಾಳಿ ನಡೆಸಿದರು.

Former CM Basavaraja Bommai  ಮಾಜಿ ಸಿಎಂ ಬಸವರಾಜ್ ಬೊಮ್ಮಾಯಿ  ಹುಬ್ಬಳ್ಳಿ  Hubballi
ಸುಳ್ಳು, ಭ್ರಷ್ಟಾಚಾರ ಕಾಂಗ್ರೆಸ್​ನ ಗಂಗೋತ್ರಿ: ಮಾಜಿ ಸಿಎಂ ಬಸವರಾಜ್ ಬೊಮ್ಮಾಯಿ
author img

By ETV Bharat Karnataka Team

Published : Feb 25, 2024, 2:34 PM IST

ಮಾಜಿ ಸಿಎಂ ಬಸವರಾಜ್ ಬೊಮ್ಮಾಯಿ ಪ್ರತಿಕ್ರಿಯೆ

ಹುಬ್ಬಳ್ಳಿ: ''ಸುಳ್ಳು ಮತ್ತು ಭ್ರಷ್ಟಾಚಾರ ಕಾಂಗ್ರೆಸ್‌ನ ಗಂಗೋತ್ರಿಯಾಗಿದೆ'' ಎಂದು ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಕಿಡಿಕಾರಿದ್ದಾರೆ.

ನಗರದಲ್ಲಿ ಇಂದು (ಭಾನುವಾರ) ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ''ಮಹದಾಯಿ ಯೋಜನೆಗೆ ಹಿನ್ನೆಡೆಯಾಗಿದ್ದರೆ, ಅದಕ್ಕೆ ನೇರವಾದ ಕಾಂಗ್ರೆಸ್ ಪಕ್ಷವೇ ಕಾರಣ. ಈ ಹಿಂದೆ ಮೊಟ್ಟ ಮೊದಲ ಟ್ರಿಬ್ಯೂನಲ್ ಹೋಗುವ ಅವಶ್ಯಕತೆ ಇರಲಿಲ್ಲ. ಮನಮೋಹನ್ ಸಿಂಗ್ ಪ್ರಧಾನಿಗಳಿದ್ದಾಗ ಟ್ರಿಬ್ಯೂನಲ್ ಮಾಡಿದ್ದು ಕಾಂಗ್ರೆಸ್ ಪಕ್ಷ. ಅದರಿಂದ 8ರಿಂದ 10 ವರ್ಷ ವಿಳಂಬವಾಯಿತು. ಅತ್ಯಂತ ದೊಡ್ಡ ತಪ್ಪು ಮಾಡಿದ್ದು ಕಾಂಗ್ರೆಸ್ ಪಕ್ಷ'' ಎಂದು ಆರೋಪಿಸಿದರು.

''ಟ್ರಿಬ್ಯೂನಲ್​ನಲ್ಲಿ ಬರೆದು ಕೊಟ್ಟು ಮಹದಾಯಿಯಿಂದ ಮಲಪ್ರಭಾ ಇಂಟರ್ ಲಿಂಕಿಂಗ್ ಜೋಡಣೆಗೆ ಕಾಂಗ್ರೆಸ್​ನವರು ಗೋಡೆ ಕಟ್ಟಿದ್ದರು. ನೀರಾವರಿ ಯೋಜನೆಗೆ ಗೋಡೆಕಟ್ಟಿದ ಅಪಖ್ಯಾತಿ ಇದ್ದರೆ ಅದು ಕಾಂಗ್ರೆಸ್ ಪಕ್ಷಕ್ಕೆ ಇದೆ. ನಾವು ಕೆನಾಲ್ ಮಾಡಿದ್ರೆ ಇವರು ಗೋಡೆ ಕಟ್ಟಿದರು'' ಎಂದು ಆಕ್ರೋಶ ವ್ಯಕ್ತಪಡಿಸಿದರು.

''ಗೋವಾದಲ್ಲಿ ಕಾಂಗ್ರೆಸ್ ಪಕ್ಷ ಇದ್ದಾಗ ಸಂಪೂರ್ಣವಾಗಿ ವಿರೋಧ ಮಾಡುತ್ತಾ ಬಂದ್ರು. ನಮ್ಮ ಸರ್ಕಾರ ಗೋವಾದಲ್ಲಿದ್ದರು ಯೋಜನೆಯ ಡಿಪಿಆರ್ ಅನುಮೋದನೆ ಕೊಟ್ಟಿದ್ದು ಬಿಜೆಪಿ, ಇವರ ಕೈಯಲ್ಲಿ ಅಧಿಕಾರ ಇದ್ದಾಗ ಡಿಪಿಆರ್ ಅನುಮೋದನೆ ಮಾಡಿಸಲು ಆಗಿರಲಿಲ್ಲ. ಇದೀಗ ಪರಿಸರ ಇಲಾಖೆಯಲ್ಲಿ ಡಿಪಿಆರ್​ ಅನುಮೋದನೆ ಬಾಕಿಯಿದೆ. ಅಲ್ಲಿ ದಾಖಲೆಗಳನ್ನು ಕೇಳಿದ್ದಾರೆ. ನಾವು ಒತ್ತಡ ತ‌ಂದು ಪರಿಸರ ಇಲಾಖೆಯಿಂದ ಅನುಮೋದನೆ ಕೊಡಿಸುತ್ತೇವೆ'' ಎಂದು ಬೊಮ್ಮಾಯಿ ಹೇಳಿದರು.

''ಇದೀಗ ಕಾಂಗ್ರೆಸ್ ಸರ್ಕಾರ ಪರಿಸರ ಇಲಾಖೆಯ ಅನುಮೋದನೆ ಪಡೆಯದೇ ಟೆಂಡರ್ ಮಾಡುವ ಕೆಲಸ ಮಾಡಿದೆ. ಇದರಿಂದ ಕೆಲಸ ಮಾಡಲು ಸಾಧ್ಯವೇ? ಹಾಗಾಗಿ ಗೋವಾ ಸರ್ಕಾರವು ಕೋರ್ಟ್​ಗೆ ಹೋಗಿದೆ'' ಎಂದು ತಿಳಿಸಿದರು.

''ಕಾಂಗ್ರೆಸ್ ಸರ್ಕಾರ ನೀರಿನ ವಿಚಾರದಲ್ಲಿ ಕೋರ್ಟ್​ನಲ್ಲಿ ಸಮರ್ಥವಾಗಿ ವಾದ ಮಾಡಬೇಕು. ಕೃಷ್ಣ, ಮಹದಾಯಿ, ಮೇಕೆದಾಟು ವಿಚಾರದಲ್ಲಿ ನಿರ್ಲಕ್ಷ್ಯ ತೋರಿದೆ. ಈ ಹಿಂದೆ ಕೃಷ್ಣ ಯೋಜನೆಗೆ 2010 ಡಿಸೆಂಬರ್ ಟ್ರಿಬ್ಯೂನಲ್ ಆದೇಶ ಬಂದಿದೆ. ಆದ್ರೆ, ಕಾಂಗ್ರೆಸ್ ಒಂದು ವಿರೋಧ ಅರ್ಜಿ ಸಹ ಕೋರ್ಟ್​ಗೆ ಹಾಕಲಿಲ್ಲ'' ಎಂದು ಹರಿಹಾಯ್ದರು.

ಪ್ರಹ್ಲಾದ್ ಜೋಶಿ, ಬಸವರಾಜ ಬೊಮ್ಮಾಯಿ ರಾಜ್ಯದ ಜನತೆಗೆ ಸುಳ್ಳು ಹೇಳಿ ಜನರ ದಾರಿ ತಪ್ಪಿಸುತ್ತಾರೆಂಬ ಟೀಕೆಗೆ ಉತ್ತರಿಸಿದ ಅವರು, ''ಯಾರು ಸುಳ್ಳು ಹೇಳುತ್ತಾರೆ, ಸತ್ಯ ಹೇಳುತ್ತಾರೆ ಎಂಬುದು ಜನರಿಗೆ ಗೊತ್ತಿದೆ. ಕಾಂಗ್ರೆಸ್​ನವರು ಸತ್ಯ ಹರಿಶ್ಚಂದ್ರರಾ?'' ಎಂದು ಗರಂ ಆದರು.

ಇದನ್ನೂ ಓದಿ: ಧಾರವಾಡ: ಇಬ್ಬರು ಮಕ್ಕಳ ಕೊಂದು ತಾಯಿ ಆತ್ಮಹತ್ಯೆ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.