ETV Bharat / state

ಸುದ್ದಿಗೋಷ್ಠಿಯಲ್ಲಿ ಮಾತನಾಡುತ್ತಿದ್ದಾಗಲೇ ಹೃದಯಾಘಾತ; ಕಾಂಗ್ರೆಸ್ ಮುಖಂಡ ಸಾವು - Heart Attack - HEART ATTACK

ಕಾಂಗ್ರೆಸ್​ ಪಕ್ಷದಲ್ಲಿ ಗುರುತಿಸಿಕೊಂಡಿದ್ದ ಕೋಲಾರ ಮೂಲದ ಸಿ.ಕೆ.ರವಿಚಂದ್ರನ್​ ಇಂದು ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್​ಗೆ ಅನುಮತಿ ನೀಡಿರುವುದನ್ನು ವಿರೋಧಿಸಿ ಮಾತನಾಡುತ್ತಿದ್ದಾಗ ಹೃದಯಾಘಾತವಾಗಿ ಕುಸಿದುಬಿದ್ದರು.

Congress Leader falling down in Press Meet
ಸುದ್ದಿಗೋಷ್ಠಿಯಲ್ಲಿ ಕುಸಿದು ಬೀಳುತ್ತಿರುವ ಕಾಂಗ್ರೆಸ್​ ಮುಖಂಡ (ETV Bharat)
author img

By ETV Bharat Karnataka Team

Published : Aug 19, 2024, 5:36 PM IST

Updated : Aug 19, 2024, 5:56 PM IST

ಬೆಂಗಳೂರು: ನಗರದ ಪ್ರೆಸ್​ಕ್ಲಬ್​ನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡುತ್ತಿರುವಾಗಲೇ ಕಾಂಗ್ರೆಸ್ ಮುಖಂಡರೊಬ್ಬರು ಏಕಾಏಕಿ ಹೃದಯಾಘಾತವಾಗಿ ಕುಸಿದುಬಿದ್ದು ಸಾವನ್ನಪ್ಪಿರುವ ಘಟನೆ ಇಂದು ನಡೆದಿದೆ‌. ಸಿ.ಕೆ.ರವಿಚಂದ್ರನ್ ಸಾವನ್ನಪ್ಪಿದ ವ್ಯಕ್ತಿ.

ಕೋಲಾರ ಮೂಲದ ರವಿಚಂದ್ರನ್ ಆರ್.ಆರ್.ನಗರದ ಚನ್ನಸಂದ್ರದಲ್ಲಿ ನೆಲೆಸಿದ್ದರು. ಖಾಸಗಿ ಶಾಲೆ ನಡೆಸುತ್ತಿದ್ದ ಇವರು ಕಾಂಗ್ರೆಸ್​ ಪಕ್ಷದಲ್ಲಿ ಗುರುತಿಸಿಕೊಂಡಿದ್ದರು. ಕಾಂಗ್ರೆಸ್ ಪ್ರಚಾರ ಸಮಿತಿ ಸದಸ್ಯರಾಗಿದ್ದರು.

ಮುಡಾ ಹಗರಣ ಸಂಬಂಧ ರಾಜ್ಯಪಾಲರು ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್​ಗೆ ಅನುಮತಿ ನೀಡಿರುವುದನ್ನು ವಿರೋಧಿಸಿ ಪ್ರೆಸ್​ಕ್ಲಬ್​ನಲ್ಲಿ ರಾಜ್ಯ ಹಿಂದುಳಿದ ವರ್ಗಗಳ ಹಾಗೂ ಅಲ್ಪಸಂಖ್ಯಾತರ ಸಂಘ ಸುದ್ದಿಗೋಷ್ಠಿ ಹಮ್ಮಿಕೊಂಡಿತ್ತು. ಸುದ್ದಿಗೋಷ್ಠಿಯಲ್ಲಿ ಜನಪರ ಹೋರಾಟ ಹಾಗೂ ಕಾಂಗ್ರೆಸ್ ಪಕ್ಷದ ಪ್ರತಿನಿಧಿಯಾಗಿ ಸಿ.ಕೆ.ರವಿಚಂದ್ರನ್ ಭಾಗಿಯಾಗಿದ್ದರು. ಪ್ರಾಸಿಕ್ಯೂಷನ್ ಅನುಮತಿ ವಿರೋಧಿಸಿ ಮಾತನಾಡುತ್ತಿರುವಾಗಲೇ ಏಕಾಏಕಿ ಹೃದಯಾಘಾತವಾಗಿದೆ.

ಕೂಡಲೇ ಕನ್ನಿಂಗ್ ಹ್ಯಾಮ್ ರಸ್ತೆಯಲ್ಲಿರುವ ಫೋರ್ಟಿಸ್ ಆಸ್ಪತ್ರೆಗೆ ದಾಖಲಿಸುವಷ್ಟರಲ್ಲಿ ಸಾವನ್ನಪ್ಪಿದ್ದಾರೆ ಎಂದು ಹೈಗ್ರೌಂಡ್ಸ್ ಠಾಣೆ ಪೊಲೀಸರು ತಿಳಿಸಿದ್ದಾರೆ.

ಸಿಎಂ ಸಂತಾಪ: ರಾಜ್ಯಪಾಲರು ಪ್ರಾಸಿಕ್ಯೂಷನ್​ಗೆ ಆದೇಶ ನೀಡಿರುವುದನ್ನು ವಿರೋಧಿಸಿ ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳು ಮತ್ತು ಅಲ್ಪ ಸಂಖ್ಯಾತರ ಸಂಘದ ವತಿಯಿಂದ ಬೆಂಗಳೂರು ಪ್ರೆಸ್ ಕ್ಲಬ್​ನಲ್ಲಿ‌ ಸುದ್ದಿಗೋಷ್ಠಿ ನಡೆಸುತ್ತಿದ್ದ ವೇಳೆ ಸಂಘದ ಸದಸ್ಯ, ನಮ್ಮ ಪಕ್ಷದ ಕಾರ್ಯಕರ್ತ ಸಿ.ಕೆ.ರವಿಚಂದ್ರನ್ ಹೃದಯಾಘಾತದಿಂದ ನಿಧನರಾದ ಸುದ್ದಿ ತಿಳಿಯಿತು.

ಸಂವಿಧಾನ, ಪ್ರಜಾಪ್ರಭುತ್ವದ ಉಳಿವಿನ ಈ ಹೋರಾಟದಲ್ಲಿ ನಮ್ಮ ಜೊತೆಯಾಗಿದ್ದ ರವಿಚಂದ್ರನ್ ಅವರ ನಿಧನ ಅತೀವು ನೋವುಂಟು ಮಾಡಿದೆ. ಮೃತರ ಆತ್ಮಕ್ಕೆ ಚಿರಶಾಂತಿ ಸಿಗಲಿ ಎಂದು ಪ್ರಾರ್ಥಿಸುತ್ತೇನೆ. ಅವರ ದುಃಖತಪ್ತ ಕುಟುಂಬಸ್ಥರು ಮತ್ತು ಬಂಧುಬಳಗದ ಜೊತೆ ನಾನಿದ್ದೇನೆ ಎಂದು ಸಿಎಂ ಸಿದ್ದರಾಮಯ್ಯ ತಮ್ಮ ಎಕ್ಸ್​ ಖಾತೆಯಲ್ಲಿ ಸಂತಾಪ ಸೂಚಿಸಿದ್ದಾರೆ.

ಇದನ್ನೂ ಓದಿ: ರಾಜ್ಯಪಾಲರ ವಿರುದ್ಧ ಕಾಂಗ್ರೆಸ್ ಆಕ್ರೋಶ: ಟೈರ್​ಗೆ ಬೆಂಕಿ ಹಚ್ಚಿ ಪ್ರತಿಭಟನೆ - Congress Protest

Last Updated : Aug 19, 2024, 5:56 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.