ETV Bharat / state

ಮಂಗಳೂರಲ್ಲಿ ಕಾಂಗ್ರೆಸ್ ನಾಯಕ ಐವನ್ ಡಿಸೋಜಾ ಮನೆ ಮೇಲೆ ಕಲ್ಲು ತೂರಾಟ - Ivan DSouza house attacked - IVAN DSOUZA HOUSE ATTACKED

ವಿಧಾನಪರಿಷತ್ ಸದಸ್ಯ ಐವನ್​ ಡಿಸೋಜಾ ಅವರ ಮನೆ ಮೇಲೆ ಕಲ್ಲು ತೂರಾಟ ನಡೆದಿದೆ. ದುಷ್ಕರ್ಮಿಗಳು ಈ ಕೃತ್ಯ ಎಸಗಿದ್ದಾರೆ.

ಮಂಗಳೂರಿನಲ್ಲಿ ಕಾಂಗ್ರೆಸ್ ನಾಯಕ ಐವನ್ ಡಿಸೋಜಾರ ಮನೆಗೆ ಕಲ್ಲು ತೂರಾಟ
ಮಂಗಳೂರಿನಲ್ಲಿ ಕಾಂಗ್ರೆಸ್ ನಾಯಕ ಐವನ್ ಡಿಸೋಜಾರ ಮನೆಗೆ ಕಲ್ಲು ತೂರಾಟ (ETV Bharat)
author img

By ETV Bharat Karnataka Team

Published : Aug 22, 2024, 9:09 AM IST

Updated : Aug 22, 2024, 9:19 AM IST

ಮಂಗಳೂರಲ್ಲಿ ಕಾಂಗ್ರೆಸ್ ನಾಯಕ ಐವನ್ ಡಿಸೋಜಾ ಮನೆ ಮೇಲೆ ಕಲ್ಲು ತೂರಾಟ (ETV Bharat)

ಮಂಗಳೂರು: ಕಾಂಗ್ರೆಸ್ ನಾಯಕ, ವಿಧಾನಪರಿಷತ್ ಸದಸ್ಯ ಐವನ್​ ಡಿಸೋಜಾ ಅವರ ಮನೆ ಮೇಲೆ ದುಷ್ಕರ್ಮಿಗಳು ಬುಧವಾರ ರಾತ್ರಿ ಕಲ್ಲು ತೂರಾಟ ನಡೆಸಿದ್ದಾರೆ.

ಇತ್ತೀಚೆಗೆ ರಾಜ್ಯಪಾಲರು ಮುಖ್ಯಮಂತ್ರಿಗಳ ವಿರುದ್ದ ಪ್ರಾಸಿಕ್ಯೂಷನ್​ಗೆ ಅನುಮತಿ ನೀಡಿದ್ದನ್ನು ಖಂಡಿಸಿ ಕಾಂಗ್ರೆಸ್ನಿಂದ ನಡೆದ​ ಪ್ರತಿಭಟನೆಯಲ್ಲಿ ಐವನ್ ಡಿಸೋಜ ರಾಜ್ಯಪಾಲರಿಗೆ ಬಾಂಗ್ಲಾ ಪ್ರಧಾನಿಗಾದ ಪರಿಸ್ಥಿತಿ ಬರಬಹುದು ಎಂಬ ಹೇಳಿಕೆ ನೀಡಿದ್ದರು. ಇದು ಭಾರಿ ಆಕ್ರೋಶಕ್ಕೆ ಕಾರಣವಾಗಿದ್ದು, ಬಿಜೆಪಿ ಕಾರ್ಯಕರ್ತರು ಅವರ ವಿರುದ್ಧ ಕ್ರಮಕ್ಕೆ ಒತ್ತಾಯಿಸಿ ದೂರು ನೀಡಿದ್ದರು. ಇದರ ಮಧ್ಯೆ ಈ ಘಟನೆ ನಡೆದಿದೆ.

ಬುಧವಾರ ರಾತ್ರಿ ಸುಮಾರು 11 ಗಂಟೆಗೆ ಘಟನೆ ನಡೆದಿದೆ. ಈ ಸಂದರ್ಭ ಐವನ್ ಡಿಸೋಜಾ ಅವರು ಮನೆಯಲ್ಲಿರದೆ ಬೆಂಗಳೂರಿನಲ್ಲಿ ಪಕ್ಷದ ಮೀಟಿಂಗ್​ಗೆ ಹೋಗಿದ್ದರು. ಸುಮಾರು 5 ರಿಂದ 6 ಜನರ ತಂಡ ರಾತ್ರಿ 11ರ ಸುಮಾರಿಗೆ ನಗರದ ವೆಲೆನ್ಸಿಯದಲ್ಲಿರುವ ಐವನ್ ಡಿಸೋಜಾ ಅವರ ಮನೆ ಮೇಲೆ ಕಲ್ಲು ತೂರಾಟ ನಡೆಸಿ ಘೋಷಣೆಗಳನ್ನು ಕೂಗಿ ಬಳಿಕ ಪರಾರಿಯಾಗಿದೆ.

ಸ್ಥಳಕ್ಕೆ ಹಿರಿಯ ಪೊಲೀಸ್ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಕಲ್ಲು ತೂರಾಟದಿಂದ ಯಾವುದೇ ಹಾನಿಯಾಗಿಲ್ಲ ಎಂದು ತಿಳಿದು ಬಂದಿದೆ. ಈ ಬಗ್ಗೆ ಈಟಿವಿ ಭಾರತ ಜೊತೆಗೆ ಮಾತನಾಡಿದ ಮಂಗಳೂರು ನಗರ ಪೊಲೀಸ್ ಕಮಿಷನರ್ ಅನುಪಮ್​ ಅಗರವಾಲ್​​, "ರಾತ್ರಿ ಹೆಲ್ಮೆಟ್ ಹಾಕಿ ಬಂದವರು ಐವನ್ ಡಿಸೋಜ ಅವರ ಮನೆಗೆ ಕಲ್ಲು ಬಿಸಾಡಿದ್ದಾರೆ. ಆರೋಪಿಗಳನ್ನು ಬಂಧಿಸುವ ಕಾರ್ಯ ನಡೆಯುತ್ತಿದೆ" ಎಂದು ತಿಳಿಸಿದರು.

ಇದನ್ನೂ ಓದಿ: ಸಿಎಂ ವಿರುದ್ಧ ನೀಡಿರುವ ಪ್ರಾಸಿಕ್ಯೂಷನ್ ಅನುಮತಿ ವಿರೋಧಿಸಿ ಪಂಜಿನ ಮೆರವಣಿಗೆ

Last Updated : Aug 22, 2024, 9:19 AM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.