ETV Bharat / state

ಬೆಂಗಳೂರಿಗೆ ಆಗಮಿಸಿದ ರಾಹುಲ್ ಗಾಂಧಿ, ಏರ್​ಪೋರ್ಟ್​ನಲ್ಲಿ ಸ್ವಾಗತಿಸಿದ ಸಿಎಂ ಸಿದ್ದರಾಮಯ್ಯ - Rahul Gandhi - RAHUL GANDHI

ರಾಹುಲ್ ಗಾಂಧಿ ಇಂದು ರಾತ್ರಿ ಬೆಂಗಳೂರಿಗೆ ಆಗಮಿಸಿದರು. ಈ ವೇಳೆ ಅವರನ್ನು ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ.ಶಿವಕುಮಾರ್ ಸ್ವಾಗತಿಸಿದ್ದಾರೆ.

congress leader Rahul Gandhi
ಬೆಂಗಳೂರಿಗೆ ಆಗಮಿಸಿದ ರಾಹುಲ್ ಗಾಂಧಿ (ETV Bharat)
author img

By ETV Bharat Karnataka Team

Published : Jun 11, 2024, 11:03 PM IST

ದೇವನಹಳ್ಳಿ: ಕಾಂಗ್ರೆಸ್ ಪಕ್ಷದ ಮುಖಂಡರಾದ ರಾಹುಲ್ ಗಾಂಧಿ ಇಂದು ರಾತ್ರಿ ಬೆಂಗಳೂರಿಗೆ ಆಗಮಿಸಿದರು. ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಂದಿಳಿದ ಅವರನ್ನು ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ.ಶಿವಕುಮಾರ್, ಸಚಿವರಾದ ಕೆ.ಹೆಚ್.ಮುನಿಯಪ್ಪ ಸ್ವಾಗತಿಸಿದರು.

ಜೂನ್ 7ರಂದು ಕೋರ್ಟ್ ವಿಚಾರಣೆಗಾಗಿ ಬೆಂಗಳೂರಿಗೆ ಆಗಮಿಸಿದ ರಾಹುಲ್ ಗಾಂಧಿ ಮತ್ತೆ ಅವರು ಬೆಂಗಳೂರಿಗೆ ಭೇಟಿ ನೀಡಿದ್ದಾರೆ. ನಾಳೆ ಕೇರಳ ಪ್ರವಾಸದಲ್ಲಿರುವ ಹಿನ್ನೆಲೆಯಲ್ಲಿ ಬೆಂಗಳೂರಿಗೆ ಆಗಮಿಸಿದ್ದಾರೆ. ರಾಜ್ಯ ರಾಜಕೀಯ ವಿಚಾರಕ್ಕೆ ಸಂಬಂಧಿಸಿದಂತೆ ಮತ್ತು ಕೆಪಿಸಿಸಿ ಅಧ್ಯಕ್ಷ ಸ್ಥಾನದ ವಿಚಾರಕ್ಕೆ ಸಂಬಂಧಿಸಿದಂತೆ ರಾಜ್ಯ ನಾಯಕರ ಜೊತೆ ಚರ್ಚಿಸಲು ಅವರು ಬೆಂಗಳೂರಿಗೆ ಬಂದಿರುವ ಸಾಧ್ಯತೆ ಇದೆ.

ಕೇರಳದ ವಯನಾಡ್ ಲೋಕಸಭಾ ಕ್ಷೇತ್ರದಿಂದ ಗೆಲುವು ಸಾಧಿಸಿರುವ ರಾಹುಲ್ ಗಾಂಧಿ ಮತ ನೀಡಿದ ಜನರಿಗೆ ಕೃತಜ್ಞತೆ ಸಲ್ಲಿಸುವ ಕಾರಣಕ್ಕೆ ಅವರು ಕೇರಳಕ್ಕೆ ಭೇಟಿ ನೀಡಲಿದ್ದಾರೆ. ಕೇರಳದಲ್ಲಿ ಕಾಂಗ್ರೆಸ್ ಪಕ್ಷ ಉತ್ತಮ ಸಾಧನೆ ಮಾಡಿದ್ದು, 14 ಲೋಕಸಭಾ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಗೆಲುವು ಸಾಧಿಸಿದೆ. ಪಕ್ಷದ ಗೆಲುವಿಗೆ ದುಡಿದ ಕಾರ್ಯಕರ್ತರು ಮತ್ತು ಮುಖಂಡರಿಗೆ ಅಭಿನಂದನೆ ಸಲ್ಲಿಸುವ ಕಾರಣಕ್ಕೆ ಅವರು ಕೇರಳಕ್ಕೆ ಭೇಟಿ ನೀಡುತ್ತಿದ್ದಾರೆ.

ಇದನ್ನೂ ಓದಿ: ಲೋಕಸಭೆ ಚುನಾವಣೆ ಸೋಲಿನ ಪರಾಮರ್ಶೆಗೆ ಮುಂದಾದ ರಾಜ್ಯ ಕಾಂಗ್ರೆಸ್; ಸೋಲಿನ ವರದಿ ನೀಡಲು ಸಜ್ಜಾದ ಕೈ ನಾಯಕರು! - Congress Review of Defeat

ETV Bharat Logo

Copyright © 2025 Ushodaya Enterprises Pvt. Ltd., All Rights Reserved.