ETV Bharat / state

ಡಿ.5ರಂದು ಕಾಂಗ್ರೆಸ್ ನೇತೃತ್ವದಲ್ಲೇ ಹಾಸನದಲ್ಲಿ ಸಮಾವೇಶ: ಡಿಸಿಎಂ ಡಿ.ಕೆ.ಶಿವಕುಮಾರ್ - DCM D K SHIVAKUMAR

ಕಾಂಗ್ರೆಸ್​ ನೇತೃತ್ವದಲ್ಲೇ ಹಾಸನದಲ್ಲಿ ಸಮಾವೇಶ ನಡೆಯಲಿದೆ. ಪಕ್ಷದ ಎಲ್ಲಾ ನಾಯಕರಿಗೂ ಆಹ್ವಾನ ನೀಡಲಾಗುವುದು ಎಂದು ಡಿಸಿಎಂ ಡಿ.ಕೆ.ಶಿವಕುಮಾರ್​ ತಿಳಿಸಿದರು.

DCM D.K. Shivakumar
ಡಿಸಿಎಂ ಡಿ.ಕೆ.ಶಿವಕುಮಾರ್​ (ETV Bharat)
author img

By ETV Bharat Karnataka Team

Published : Dec 1, 2024, 5:27 PM IST

Updated : Dec 1, 2024, 6:37 PM IST

ಬೆಂಗಳೂರು: "ಕಾಂಗ್ರೆಸ್ ನೇತೃತ್ವದಲ್ಲೇ ಡಿ.5ರಂದು ಹಾಸನದಲ್ಲಿ ಸಮಾವೇಶ ನಡೆಯಲಿದೆ. ಈ ಕಾರ್ಯಕ್ರಮದ ಸಂಪೂರ್ಣ ಜವಾಬ್ದಾರಿಯನ್ನು ನನ್ನ ನೇತೃತ್ವದಲ್ಲಿಯೇ ಪಕ್ಷ ವಹಿಸಿಕೊಳ್ಳಲಿದೆ" ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಸ್ಪಷ್ಟಪಡಿಸಿದ್ದಾರೆ.

ಕೆಪಿಸಿಸಿ ಕಚೇರಿಯಲ್ಲಿಂದು ಸಮಾವೇಶದ ಪೂರ್ವಭಾವಿ ಸಭೆ ನಡೆಸಿದ ಬಳಿಕ ಮಾತನಾಡಿದ ಅವರು, "ಪಕ್ಷದ ಅನೇಕ ನಾಯಕರು, ಮುಖಂಡರು ಹಾಸನದಲ್ಲಿ ಸಮಾವೇಶ ಮಾಡಲು ತಿಳಿಸಿದ್ದಾರೆ. ನಮ್ಮ ಪಕ್ಷದ ವತಿಯಿಂದ ಸಚಿವರುಗಳು, ಜಿಲ್ಲಾ ಮಂತ್ರಿಗಳು ಸಮಾವೇಶದ ತಯಾರಿ ಮಾಡಿಕೊಳ್ಳುತ್ತಿದ್ದಾರೆ. ಈ ಸಮಾವೇಶಕ್ಕೆ ಅನೇಕ ಸಂಘಟನೆಗಳು ಸಮುದಾಯಗಳು ಬೆಂಬಲ ಸೂಚಿಸಿವೆ. ಇವರ ಬೆಂಬಲವನ್ನೂ ನಾವು ಸ್ವೀಕರಿಸುತ್ತೇವೆ" ಎಂದರು.

ಡಿಸಿಎಂ ಡಿ.ಕೆ.ಶಿವಕುಮಾರ್​ (ETV Bharat)

"ನಾನು ನಾಲ್ಕು ದಿನಗಳ ಕಾಲ ದೆಹಲಿ ಪ್ರವಾಸದಲ್ಲಿದ್ದೆ. ಮುಖ್ಯಮಂತ್ರಿಗಳು ಕೂಡ ದೆಹಲಿ ಪ್ರವಾಸದಲ್ಲಿದ್ದರು. ದೇಶದಲ್ಲಾಗುತ್ತಿರುವ ವಿದ್ಯಮಾನ ಹಾಗೂ ಸಂವಿಧಾನ ರಕ್ಷಣೆಗೆ ಕಾರ್ಯಕ್ರಮ ರೂಪಿಸಲು ಎಐಸಿಸಿ ನಾಯಕರು ಮಾರ್ಗದರ್ಶನ ನೀಡಿದ್ದಾರೆ. ಈ ಹಿನ್ನೆಲೆಯಲ್ಲಿ ಹಾಸನದಲ್ಲಿ ಸಮಾವೇಶ ಮಾಡುತ್ತಿದ್ದೇವೆ. ನಾಲ್ಕು ಜಿಲ್ಲೆಗಳ ನಾಯಕರು ಹಾಗೂ ಪದಾಧಿಕಾರಿಗಳ ಜೊತೆ ಇದರ ಪೂರ್ವಭಾವಿ ಸಭೆಯನ್ನು ಕೆಪಿಸಿಸಿ ಕಚೇರಿಯಲ್ಲಿ ನಡೆಸಲಾಗಿದೆ. ಸಮಾವೇಶಕ್ಕೆ ಪಕ್ಷದ ಎಲ್ಲಾ ನಾಯಕರಿಗೂ ಆಹ್ವಾನ ನೀಡಲಾಗುವುದು" ಎಂದು ತಿಳಿಸಿದರು.

"ಸಮಾನತೆ, ಸಂವಿಧಾನದ ಬಗ್ಗೆ ಗೌರವ ಹೊಂದಿರುವವರು, ಸ್ವಾಭಿಮಾನಿಗಳಿಗೆ ಸಮಾವೇಶದಲ್ಲಿ ಭಾಗವಹಿಸುವಂತೆ ಮನವಿ ಮಾಡುತ್ತೇನೆ. ಸದ್ಯದಲ್ಲೇ ನಾನು ಹಾಗೂ ಕೆಪಿಸಿಸಿ ತಂಡ ಸಮಾವೇಶ ನಡೆಯುವ ಸ್ಥಳಕ್ಕೆ ಭೇಟಿ ನೀಡಿ ತಯಾರಿಯನ್ನು ಪರಿಶೀಲಿಸಿ ಅಗತ್ಯ ಮಾರ್ಗದರ್ಶನ ನೀಡಲಾಗುವುದು. ಜನರ ಕಲ್ಯಾಣ, ಸಂವಿಧಾನ ರಕ್ಷಣೆ, ಸ್ವಾಭಿಮಾನ ರಕ್ಷಣೆ, ಸರ್ಕಾರದ ವಿರುದ್ಧ ಮಾಡುತ್ತಿರುವ ಸುಳ್ಳು ಆರೋಪಗಳ ಬಗ್ಗೆ ಜನರಲ್ಲಿ ಅರಿವು ಮೂಡಿಸುವ ಉದ್ದೇಶದಿಂದ ಈ ಸಮಾವೇಶ ಮಾಡಲಾಗುತ್ತಿದೆ. ಸರ್ಕಾರದ ವಿರುದ್ಧ ನಡೆಯುತ್ತಿರುವ ಅಪಪ್ರಚಾರಕ್ಕೆ ಜನ ಈಗಾಗಲೇ ತೀರ್ಪು ಕೊಟ್ಟಿದ್ದಾರೆ. ಎಐಸಿಸಿ ನಾಯಕರ ನಿರ್ದೇಶನದಂತೆ ಮುಂದಿನ ಎರಡು ತಿಂಗಳ ಕಾಲ ಒಂದಲ್ಲಾ ಒಂದು ರೀತಿ ಎಲ್ಲಾ ಜಿಲ್ಲೆಗಳಲ್ಲಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುವುದು" ಎಂದರು.

ಈಗಿನಿಂದಲೇ ಪಕ್ಷ ಸಂಘಟನೆ: "ಮೂರು ಕ್ಷೇತ್ರಗಳ ಉಪಚುನಾವಣೆಯಲ್ಲಿನ ಯಶಸ್ಸು ಮುಂದುವರೆಸಿಕೊಂಡು ಹೋಗಲು ಪಕ್ಷ ಸಂಘಟನೆ ಮಾಡಲಾಗುವುದು. ಚುನಾವಣೆ ಬಂದಾಗ ಸಿದ್ಧತೆ ಮಾಡಿಕೊಳ್ಳುವುದಲ್ಲ. ಚುನಾವಣೆ ಮುಗಿದ ಮರು ದಿನದಿಂದಲೇ ಮುಂದಿನ ಚುನಾವಣೆಗೆ ಸಿದ್ಧತೆ ಮಾಡಿಕೊಳ್ಳಬೇಕು. ಕಾಂಗ್ರೆಸ್ ಸರ್ಕಾರದ ಸಾಧನೆಗಳನ್ನು ಪ್ರತಿ ವಿಭಾಗವಾರು ತಲುಪಿಸಲು ಪಕ್ಷವು ತೀರ್ಮಾನ ಮಾಡಿದೆ. ಎಲ್ಲಿ ಕಳೆದುಕೊಂಡಿದ್ದೇವೆಯೋ ಅಲ್ಲಿಯೇ ಅದನ್ನು ಹುಡುಕಬೇಕು ಎನ್ನುವುದು ನಮ್ಮ ತತ್ವ. ಹಾಸನದಲ್ಲಿ ಒಂದು ವಿಧಾನಸಭಾ ಕ್ಷೇತ್ರವನ್ನು ಗೆದ್ದಿದ್ದೆವು. ಆದರೆ ಲೋಕಸಭೆಯಲ್ಲಿ ಜನ ಶಕ್ತಿ ತುಂಬಿದರು. ಮೈಸೂರು, ಚಾಮರಾಜನಗರ, ಮಂಡ್ಯದಲ್ಲಿ ಅತ್ಯಂತ ಹೆಚ್ಚು ವಿಧಾನಸಭಾ ಕ್ಷೇತ್ರಗಳನ್ನು ಗೆದ್ದಿದ್ದೇವೆ. ಒಂದಷ್ಟು ಕಡೆ ಲೋಕಸಭೆಯಲ್ಲಿ ಸೋತಿದ್ದೇವೆ" ಎಂದರು.

"ಶೀಘ್ರದಲ್ಲಿಯೇ ಸಂಡೂರು, ಶಿಗ್ಗಾವಿಯಲ್ಲಿ ಮತದಾರರರಿಗೆ ಕೃತಜ್ಞತಾ ಸಮಾವೇಶವನ್ನು ಆಯೋಜಿಸುವ ಕುರಿತು ಮುಖ್ಯಮಂತ್ರಿಗಳ ಬಳಿ ಚರ್ಚೆ ಮಾಡಲಾಗಿದೆ. ವಿಧಾನಸಭಾ ಅಧಿವೇಶನ ನಡೆಯುವ ಮಧ್ಯದಲ್ಲಿಯೇ ಭಾನುವಾರದಂದು ಚನ್ನಪಟ್ಟಣದಲ್ಲಿ ಅಭಿನಂದನಾ ಸಮಾವೇಶ ಆಯೋಜಿಸುವಂತೆ ಸುರೇಶ್ ಹಾಗೂ ಯೋಗೇಶ್ವರ್ ಅವರಿಗೆ ಸೂಚಿಸಿದ್ದೇವೆ" ಎಂದು ತಿಳಿಸಿದರು.

"ಪಕ್ಷದ ಅಧ್ಯಕ್ಷನಾಗಿ ನಾನು ಹೇಳುತ್ತಿದ್ದೇನೆ. ಸಿದ್ದರಾಮಯ್ಯ ಅವರು ಕಾಂಗ್ರೆಸ್ ಸರ್ಕಾರದ ಮುಖ್ಯಮಂತ್ರಿಗಳೇ ಹೊರತು ಮೈತ್ರಿ ಪಕ್ಷದ ಸಿಎಂ ಅಲ್ಲ. ಇಲ್ಲಿ ಒಂದೇ ಪಕ್ಷ, ಒಂದೇ ಚಿಹ್ನೆ ಇದೆ. ಕೆಲವರ ವೈಯಕ್ತಿಕ ಅಭಿಪ್ರಾಯವೇ ಬೇರೆ. ಈ ವಿಚಾರವಾಗಿ ಎಐಸಿಸಿ ಅಧ್ಯಕ್ಷರು, ಮುಖ್ಯಮಂತ್ರಿಗಳು, ಎಐಸಿಸಿ ಪ್ರಧಾನ ಕಾರ್ಯದರ್ಶಿಗಳ ಜತೆ ಚರ್ಚೆ ಮಾಡಿದ್ದೇವೆ" ಎಂದು ತಿಳಿಸಿದರು.

ಕೆಲ ಸಚಿವರು ಮೈಸೂರು ಜಿಲ್ಲಾಧ್ಯಕ್ಷರ ಜತೆ ಪ್ರತ್ಯೇಕ ಸಭೆ ಮಾಡುತ್ತಿರುವ ಬಗ್ಗೆ ಪ್ರತಿಕ್ರಿಯಿಸಿ, "ಕೊನೆಯ ಘಳಿಗೆಯಲ್ಲಿ ಈ ಸಭೆ ತೀರ್ಮಾನ ಮಾಡಲಾಗಿದೆ. ನಿನ್ನೆ ದೆಹಲಿಯಿಂದ ಆಗಮಿಸಿ ಮಹಾತ್ಮಾ ಗಾಂಧೀಜಿ ಅವರ ಕಾರ್ಯಕ್ರಮದ ಸಭೆ ಮಾಡಿದ್ದೇನೆ. ನಮ್ಮ ಬಳಿ ಅನುಮತಿ ಪಡೆದೆ ಆ ನಾಯಕರು ಮೈಸೂರಿನಲ್ಲಿ ಸಭೆ ಮಾಡುತ್ತಿದ್ದಾರೆ. ನೀವುಗಳು ನಿಮ್ಮ ಮಾಧ್ಯಮ ಸಂಸ್ಥೆಗಳಿಗಿಂತ ಹೇಗೆ ದೊಡ್ಡವರಲ್ಲವೋ, ಹಾಗೆ ನಾವುಗಳು ಪಕ್ಷಕ್ಕಿಂತ ದೊಡ್ಡವರಲ್ಲ. ಎಲ್ಲರಿಗಿಂತ ಪಕ್ಷ ದೊಡ್ಡದು ಎಂದು ಎಲ್ಲರಿಗೂ ಗೊತ್ತಿದೆ" ಎಂದು ತಿಳಿಸಿದರು.

ಯಾವುದೇ ಸ್ಥಾನ ಖಾಲಿ ಇಲ್ಲ: "ನಾನು ಕೆಪಿಸಿಸಿ ಅಧ್ಯಕ್ಷ ಹಾಗೂ ಡಿಸಿಎಂ ಹೊರತು, ಮುಖ್ಯಮಂತ್ರಿಯಲ್ಲ. ಸದ್ಯಕ್ಕೆ ಸಂಪುಟ ಪುನಾರಚನೆ ಬಗ್ಗೆ ಚರ್ಚೆ ಇಲ್ಲ. ಅದರ ಅವಶ್ಯಕತೆಯೂ ಇಲ್ಲ. ಸದ್ಯದಲ್ಲೇ ಅಧಿವೇಶನವಿದೆ. ಒಂದು ಸಚಿವ ಸ್ಥಾನ ಮಾತ್ರ ಬಾಕಿ ಇದೆ. ಈ ಬಗ್ಗೆ ಸಿಎಂ ಉತ್ತರ ನೀಡಿದ್ದಾರೆ. ಬೇರೆ ಯಾವುದೇ ಸ್ಥಾನ ಖಾಲಿ ಇಲ್ಲ" ಎಂದು ತಿಳಿಸಿದರು.

ಸ್ವಾಮೀಜಿಗಳ ಫೋನ್ ಟ್ಯಾಪಿಂಗ್ ಬಗ್ಗೆ ಅಶೋಕ್ ಏಕೆ ಮಾತನಾಡುತ್ತಿಲ್ಲ?: "ಸ್ವಾಮೀಜಿ ಮೇಲೆ ಕೇಸ್ ದಾಖಲಿಸಿದರೆ ಉಗ್ರ ಹೋರಾಟ ಮಾಡುವುದಾಗಿ ಅಶೋಕ ಹೇಳಿದ್ದಾರೆ. ಜೆಡಿಎಸ್ ಸರ್ಕಾರ ಬಾಲಗಂಗಾಧರನಾಥ ಸ್ವಾಮೀಜಿ ಮೇಲೆ ಪ್ರಕರಣ ದಾಖಲಿಸಿದಾಗ ಆರ್.ಅಶೋಕ್, ಬಿಜೆಪಿ ನಾಯಕರು ಎಲ್ಲಿ ಹೋಗಿದ್ದರು? ಕುಮಾರಸ್ವಾಮಿ ಅವರ ಸರ್ಕಾರದಲ್ಲಿ ನಿರ್ಮಲಾನಂದ ಸ್ವಾಮೀಜಿ ಅವರ ಫೋನ್ ಟ್ಯಾಪಿಂಗ್ ಮಾಡಿದಾಗ ಏಕೆ ಮಾತನಾಡಲಿಲ್ಲ? ಈ ಬಗ್ಗೆ ಸಿಬಿಐ ವರದಿ ಇದೆ. ಇದರ ಬಗ್ಗೆ ಗೊತ್ತಿದೆಯೇ? ಅದರ ಬಗ್ಗೆ ಅವರು ಯಾಕೆ ಮಾತನಾಡುತ್ತಿಲ್ಲ. ಸುಮ್ಮನೆ ಒಣ ರಾಜಕಾರಣ ಮಾಡುವುದನ್ನು ನಿಲ್ಲಿಸಲಿ" ಎಂದು ಟಾಂಗ್ ಕೊಟ್ಟರು.

ಇದನ್ನೂ ಓದಿ: ರಾಜ್ಯದ ಜನರಿಗೆ ಕೃತಜ್ಞತೆ ಸಲ್ಲಿಸಲು ಹಾಸನದಲ್ಲಿ ಸಮಾವೇಶ: ಸಿಎಂ ಸಿದ್ದರಾಮಯ್ಯ

Last Updated : Dec 1, 2024, 6:37 PM IST
ETV Bharat Logo

Copyright © 2025 Ushodaya Enterprises Pvt. Ltd., All Rights Reserved.