ETV Bharat / state

ಬರ್ತ್ ಟ್ಯಾಕ್ಸೂ ಇಲ್ಲ, ಡೆತ್ ಟ್ಯಾಕ್ಸೂ ಇಲ್ಲ, ಪಿತ್ರೋಡಾ ಹೇಳಿಕೆಗೂ ಕಾಂಗ್ರೆಸ್‌ಗೂ ಸಂಬಂಧವಿಲ್ಲ: ಡಿಕೆಶಿ - D K Shivakumar - D K SHIVAKUMAR

ಪಿತ್ರಾರ್ಜಿತ ಆಸ್ತಿಯಲ್ಲಿ ಸರ್ಕಾರ ಪಾಲು ಪಡೆಯುವ ಕಾನೂನಿನ ಕುರಿತು ಇತ್ತೀಚೆಗೆ ಸ್ಯಾಮ್ ಪಿತ್ರೋಡಾ ಅವರ ಹೇಳಿಕೆ ಭಾರೀ ಚರ್ಚೆಗೀಡು ಮಾಡಿತ್ತು. ಈ ಕುರಿತಾಗಿ ಇಂದು ಡಿಸಿಎಂ ಡಿ.ಕೆ.ಶಿವಕುಮಾರ್ ಪ್ರತಿಕ್ರಿಯೆ ನೀಡಿದ್ದಾರೆ.

DCM DK Shivakumar spoke.
ಡಿಸಿಎಂ ಡಿ ಕೆ ಶಿವಕುಮಾರ್ ಮಾತನಾಡಿದರು.
author img

By ETV Bharat Karnataka Team

Published : Apr 25, 2024, 5:01 PM IST

ಡಿಸಿಎಂ ಡಿ ಕೆ ಶಿವಕುಮಾರ್ ಮಾಧ್ಯಮದವರೊಂದಿಗೆ ಮಾತನಾಡಿದರು.

ಬೆಂಗಳೂರು: ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬಂದರೆ ಡೆತ್ ಟ್ಯಾಕ್ಸ್ ಹಾಕಲ್ಲ, ಬರ್ತ್ ಟ್ಯಾಕ್ಸೂ ಹಾಕಲ್ಲ. ಸ್ಯಾಮ್ ಪಿತ್ರೋಡಾ ಅವರ ಹೇಳಿಕೆ ವೈಯಕ್ತಿಕ. ಅದಕ್ಕೂ ಕಾಂಗ್ರೆಸ್ ಪಕ್ಷಕ್ಕೂ ಸಂಬಂಧವಿಲ್ಲ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ತಿಳಿಸಿದರು.

ಸದಾಶಿವನಗರ ನಿವಾಸದಲ್ಲಿ ಇಂದು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಪಿತ್ರಾರ್ಜಿತ ಆಸ್ತಿಯಲ್ಲಿ ಶೇ.50 ಸರ್ಕಾರ ಪಡೆಯಬೇಕು ಎಂಬ ಪಿತ್ರೋಡಾ ಹೇಳಿಕೆ ಕುರಿತ ಪ್ರಶ್ನೆಗೆ, ಜೈರಾಮ್ ರಮೇಶ್ ಅವರು ನಮ್ಮ ಪಕ್ಷದ ಪರವಾಗಿ ಈಗಾಗಲೇ ಸ್ಪಷ್ಟನೆ ನೀಡಿದ್ದಾರೆ. ಯಾವುದೇ ಡೆತ್ ಟ್ಯಾಕ್ಸ್, ಬರ್ತ್ ಟ್ಯಾಕ್ಸ್ ಇಲ್ಲ. ಈ ದೇಶದ ಪರಂಪರೆ, ಪದ್ಧತಿ ಮುಂದುವರಿಯಲಿದೆ ಎಂದು ಹೇಳಿದರು.

ಯಾವುದೂ ಕೂಡ ನಮ್ಮ ಪಕ್ಷದಲ್ಲಿ ತೀರ್ಮಾನವಾಗಿಲ್ಲ. ಅದು ಸುಳ್ಳು. ಅದಕ್ಕೆ ನಾವು ಅವಕಾಶ ನೀಡುವುದಿಲ್ಲ. ನಮ್ಮ ದೇಶದ ರಾಜಕಾರಣದಲ್ಲಿ ತಂದೆ ಹಾಗೂ ಪೂರ್ವಜರ ಹೆಸರಿನಲ್ಲೇ ಚುನಾವಣೆ ಮಾಡುತ್ತಿರುವಾಗ ಅವರ ಆಸ್ತಿ ವರ್ಗಾವಣೆಗೆ ಅವಕಾಶ ನೀಡುತ್ತಾರಾ? ದೇಶದ ಸಂಪತ್ತನ್ನು ನಗದೀಕರಣ ಮಾಡಲು ಬಿಜೆಪಿ ಮುಂದಾಗಿದೆ ಎಂಬ ಮಾಧ್ಯಮ ವರದಿ ಓದಿದ್ದ ನೆನಪು ನನಗೆ. ನಮ್ಮ ಪ್ರಣಾಳಿಕೆಯಲ್ಲಿರುವ ಅಂಶಗಳು ಮಾತ್ರ ಪಕ್ಷದ ನಿಲುವು. ಅದರಿಂದ ಆಚೆಗಿನ ಅಂಶಗಳಿಗೂ ಪಕ್ಷಕ್ಕೂ ಸಂಬಂಧವಿಲ್ಲ. ಪಿತ್ರೋಡಾ ಅವರದು ವೈಯಕ್ತಿಕ ಅಭಿಪ್ರಾಯವೇ ಹೊರತು ಪಕ್ಷದ ಅಭಿಪ್ರಾಯ ಅಲ್ಲ. ಇಂತಹ ಚರ್ಚೆ ಪಕ್ಷದಲ್ಲಿ ಆಗಿಲ್ಲ. ಇಂತಹ ಹೇಳಿಕೆಗಳನ್ನು ನಾವು ಒಪ್ಪುವುದಿಲ್ಲ ಎಂದು ಸ್ಪಷ್ಟಪಡಿಸಿದರು.

ಪ್ರಧಾನಿ ಮೋದಿಯಿಂದ ಸುಳ್ಳು ಅಪಾದನೆ: ಪ್ರಧಾನಮಂತ್ರಿಗಳು ದೇಶದೆಲ್ಲೆಡೆ ಪ್ರಚಾರ ಮಾಡುತ್ತಾ ಕರ್ನಾಟಕ ಹಾಗೂ ಕಾಂಗ್ರೆಸ್ ಪಕ್ಷದ ಬಗ್ಗೆ ವಾಗ್ದಾಳಿ ಮಾಡುತ್ತಿರುವ ಬಗ್ಗೆ ಕೇಳಿದಾಗ, ಪ್ರಧಾನಮಂತ್ರಿಗಳು ಹತಾಶೆಯಲ್ಲಿ ಹೇಳಿಕೆ ನೀಡುತ್ತಿದ್ದಾರೆ. ತಮಿಳುನಾಡು, ಕೇರಳ, ಆಂಧ್ರ ಪ್ರದೇಶ ಹಾಗೂ ತೆಲಂಗಾಣದಲ್ಲಿ ಅವರ ಪಕ್ಷದ ನೆಲೆ ಇಲ್ಲ. ಹೀಗಾಗಿ ಆಂಧ್ರದಲ್ಲಿ ಟಿಡಿಪಿ ಜತೆ ಮೈತ್ರಿ ಮಾಡಿಕೊಂಡಿದ್ದಾರೆ. ಕರ್ನಾಟಕದಲ್ಲಿ ಅವರ ಸರ್ಕಾರ ಇಲ್ಲ. ಕರ್ನಾಟಕದಲ್ಲೂ ಅವರು ಎರಡಂಕಿ ಸ್ಥಾನ ಪಡೆಯಲ್ಲ. ಹೀಗಾಗಿ ಹತಾಶೆಯಿಂದ ಮಂಗಳಸೂತ್ರದ ಬಗ್ಗೆ ಮಾತನಾಡುತ್ತಿದ್ದಾರೆ.

ಚಿನ್ನದ ಬೆಲೆ ಏರಿಕೆ ವಿಚಾರ: ಮೋದಿ ಪ್ರಧಾನಿ ಆದಾಗ 28,000 ರೂಪಾಯಿ ಇದ್ದ ಒಂದು ಗ್ರಾಂ ಚಿನ್ನ ಈಗ 75,000 ಆಗಿದೆ. ನಮ್ಮ ಮಹಿಳೆಯರು ಮಂಗಳಸೂತ್ರ ಹಾಕಲಾಗದಂತೆ ಬಿಜೆಪಿಯವರು ಬೆಲೆ ಏರಿಕೆ ಮಾಡಿದ್ದಾರೆ ಎಂದರು.

ಪ್ರಿಯಾಂಕಾ ಗಾಂಧಿ ಅವರು ಬೆಂಗಳೂರಿನಲ್ಲಿ ನನ್ನ ತಾಯಿ ದೇಶಕ್ಕಾಗಿ ತನ್ನ ಮಾಂಗಲ್ಯಸೂತ್ರ ತ್ಯಾಗ ಮಾಡಿದ್ದಾರೆ ಎಂದು ನೋವಿನಿಂದ ಹೇಳಿದ್ದಾರೆ. ಇದನ್ನು ಮೋದಿ ಅರಿತುಕೊಳ್ಳಬೇಕು. ಅವರ ಸ್ಥಾನದ ಬಗ್ಗೆ ನಮಗೆ ಗೌರವವಿದೆ. ಜನ ಅವರಿಗೆ ಹತ್ತು ವರ್ಷಗಳ ಕಾಲ ಅವಕಾಶ ಮಾಡಿಕೊಟ್ಟಿದ್ದಾರೆ. ಜನ ಕೊಟ್ಟಿರುವ ಗೌರವವನ್ನು ಕಾಪಾಡಿಕೊಳ್ಳಬೇಕು. ಈ ರೀತಿ ದೇಶಕ್ಕೆ ಅಪಮಾನ ಮಾಡಬಾರದು ಎಂದು ಟೀಕಿಸಿದರು.

ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಎರಡಂಕಿ ಸ್ಥಾನ ಪಡೆಯಲಿದೆ. ಹೀಗಾಗಿ ಬಿಜೆಪಿಯವರು ಸುಳ್ಳಿನ ಕಾರ್ಖಾನೆ ಮೂಲಕ ಅಪಪ್ರಚಾರ ಮಾಡುತ್ತಿದ್ದಾರೆ. ಅವರಿಗೆ ನಮ್ಮ ಪ್ರಣಾಳಿಕೆ ಬಗ್ಗೆ ಗೊತ್ತಿಲ್ಲ ಎಂದು ಹೇಳಿದರು.

ಇದನ್ನೂಓದಿ:ಏ.27ಕ್ಕೆ ಬೆಳಗಾವಿ ಲೋಕಸಭೆ ಅಖಾಡಕ್ಕೆ ಮೋದಿ ಎಂಟ್ರಿ: ಜಿಲ್ಲೆಯಲ್ಲಿ ನಮೋ ವಾಸ್ತವ್ಯಕ್ಕೆ ಸಕಲ ಸಿದ್ಧತೆ - Modi will visit to Belgavi

ETV Bharat Logo

Copyright © 2025 Ushodaya Enterprises Pvt. Ltd., All Rights Reserved.