ETV Bharat / state

ಲೋಕಸಭಾ ಚುನಾವಣೆ: ಬಿಜೆಪಿ-ಜೆಡಿಎಸ್ ಮೈತ್ರಿಗೆ ಸೆಡ್ಡು ಹೊಡೆಯಲು ಸಜ್ಜಾಗಿರುವ ಕಾಂಗ್ರೆಸ್

ಕಳೆದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಬಹುಮತ ಪಡೆದು ಅಧಿಕಾರಕ್ಕೆ ಬಂದಿರುವ ಕಾಂಗ್ರೆಸ್​ಗೆ ಈ ಬಾರಿಯ ಲೋಕಸಭಾ ಎಲೆಕ್ಷನ್​ ಪ್ರತಿಷ್ಠೆಯ ಪ್ರಶ್ನೆಯಾಗಿದೆ. ಒಂದೆಡೆ ಕಾಂಗ್ರೆಸ್​ ಕಟ್ಟಿಹಾಕಲು ಜೆಡಿಎಸ್​-ಬಿಜೆಪಿ ಮೈತ್ರಿ ಮಾಡಿಕೊಂಡಿದ್ದರೆ, ಉಭಯ ಪಕ್ಷಗಳನ್ನು ಮಣಿಸಲು ಕಾಂಗ್ರೆಸ್​ ಸಹ ತನ್ನದೇ ರಾಜಕೀಯ ತಂತ್ರಗಾರಿಕೆಯಿಂದ ಸಮರಕ್ಕೆ ಸಿದ್ಧವಾಗಿದೆ.

ಬಿಜೆಪಿ-ಜೆಡಿಎಸ್ ಮೈತ್ರಿಗೆ ಸೆಡ್ಡು ಹೊಡೆಯಲು ಸಜ್ಜಾಗಿರುವ ಕಾಂಗ್ರೆಸ್..!

author img

By ETV Bharat Karnataka Team

Published : Mar 6, 2024, 3:56 PM IST

Updated : Mar 6, 2024, 5:38 PM IST

ಬೆಂಗಳೂರು: ಬಿಜೆಪಿ-ಜೆಡಿಎಸ್ ಮೈತ್ರಿಗೆ ಸೆಡ್ಡು ಹೊಡೆಯಲು ಸಜ್ಜಾಗಿರುವ ಕಾಂಗ್ರೆಸ್, ಲೋಕಸಭಾ ಚುನಾವಣೆಯಲ್ಲಿ ಹೆಚ್ಚು ಸ್ಥಾನ ಗೆಲ್ಲಲು ಪ್ರಭಾವಿ ರಾಜಕೀಯ ಕುಟುಂಬಗಳ ಮೊರೆ ಹೋಗಿದೆ. ಕರ್ನಾಟಕದ 28 ಲೋಕಸಭಾ ಕ್ಷೇತ್ರಗಳ ಪೈಕಿ 15 ಕ್ಷೇತ್ರಗಳಿಗೆ ಇದೇ ಮಾರ್ಚ್ 10 ರೊಳಗೆ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಲು ಸಜ್ಜಾಗಿದೆ.

15 ಕ್ಷೇತ್ರಗಳ ಪೈಕಿ ಏಕೈಕ ಅಭ್ಯರ್ಥಿ ಹೆಸರನ್ನು ಕೆಪಿಸಿಸಿ, ಎಐಸಿಸಿಗೆ ಕಳುಹಿಸಿದ್ದು, ಇದಕ್ಕೆ ಹಸಿರು ನಿಶಾನೆ ಸಿಕ್ಕಿ ಪಟ್ಟಿ ಹೊರಬೀಳಲಿದೆ ಎಂದು ಪಕ್ಷದ ಉನ್ನತ ಮೂಲಗಳು ತಿಳಿಸಿವೆ. ಕಡೇ ಗಳಿಗೆಯಲ್ಲಿ ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರಕ್ಕೆ ಕುಸುಮಾ ಜೊತೆಗೆ ರಾಜ್ಯಸಭಾ ಚುನಾವಣೆಯಲ್ಲಿ ಅಡ್ಡ ಮತದಾನ ಮಾಡಿದ ಬಿಜೆಪಿ ಶಾಸಕ ಎಸ್.ಟಿ ಸೋಮಶೇಖರ್ ಹೆಸರು ಮುನ್ನೆಲೆಗೆ ಬಂದಿದೆ.

ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಮಾಜಿ ಮುಖ್ಯಮಂತ್ರಿ, ದಿವಂಗತ ಬಂಗಾರಪ್ಪ, ಸಚಿವರಾದ ಡಾ. ಎಚ್.ಸಿ. ಮಹದೇವಪ್ಪ, ಲಕ್ಷ್ಮೀ ಹೆಬ್ಬಾಳ್ಕರ್, ಕಾಶೆಪ್ಪನವರ್ ಸೇರಿದಂತೆ ಪ್ರಮುಖ ರಾಜಕೀಯ ಕುಟುಂಬಕ್ಕೆ ಸೇರಿದವರಿಗೆ ಮೊದಲ ಪಟ್ಟಿಯಲ್ಲಿ ಪ್ರಾತಿನಿಧ್ಯ ದೊರೆತಿದೆ. ಮೊದಲ ಪಟ್ಟಿಯಲ್ಲೇ ಶಿವಕುಮಾರ್ ಸಹೋದರ ಹಾಲಿ ಸಂಸದ ಡಿ.ಕೆ. ಸುರೇಶ್ ಬೆಂಗಳೂರು ಗ್ರಾಮಾಂತರ, ಚಾಮರಾಜನಗರ ಮೀಸಲು ಕ್ಷೇತ್ರದಿಂದ ಮಹದೇವಪ್ಪ ಪುತ್ರ ಸುನೀಲ್ ಬೋಸ್, ಬಾಗಲಕೋಟೆಯಿಂದ ಶಾಸಕ ವಿಜಯಾನಂದ ಕಾಶೆಪ್ಪನವರ್ ಅವರ ಪತ್ನಿ ವೀಣಾ ಕಾಶೆಪ್ಪನವರ್, ಲಕ್ಷ್ಮೀ ಹೆಬ್ಬಾಳ್ಕರ್ ಪುತ್ರ ಮೃಣಾಲ್ ಅವರನ್ನು ಬೆಳಗಾವಿಯಿಂದ ಕಣಕ್ಕಿಳಿಸಲು ಕೆಪಿಸಿಸಿ, ಎಐಸಿಸಿಗೆ ಶಿಫಾರಸು ಮಾಡಿದೆ ಎಂದು ಗೊತ್ತಾಗಿದೆ.

ಉಳಿದಂತೆ ಮೊದಲ ಪಟ್ಟಿಯಲ್ಲೇ ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದಿಂದ ಎಂ ಲಕ್ಷ್ಮಣ್, ಮಂಡ್ಯ ಲೋಕಸಭಾ ಕ್ಷೇತ್ರದಿಂದ ಸ್ಟಾರ್ ಚಂದ್ರು. ಬಂಗಾರಪ್ಪ ಅವರ ಪುತ್ರಿ ಹಾಗೂ ಸಚಿವ ಮಧುಬಂಗಾರಪ್ಪ ಅವರ ಸಹೋದರಿ ಗೀತಾ ಶಿವರಾಜ್‌ಕುಮಾರ್ ಶಿವಮೊಗ್ಗ ಕ್ಷೇತ್ರದಿಂದ ಕಾಂಗ್ರೆಸ್ ಅಭ್ಯರ್ಥಿಗಳಾಗಿ ಕಣಕ್ಕಿಳಿಯಲಿದ್ದಾರೆ ಎಂಬ ಮಾತುಗಳು ಕೇಳಿ ಬರುತ್ತಿವೆ. ತುಮಕೂರು ಲೋಕಸಭಾ ಕ್ಷೇತ್ರದಿಂದ ಹಿರಿಯ ನಾಯಕ ಎಸ್.ಪಿ. ಮುದ್ದಹನುಮೇಗೌಡ, ಬೆಂಗಳೂರು ಸೆಂಟ್ರಲ್ ಕ್ಷೇತ್ರದಿಂದ ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ನಸೀರ್ ಅಹ್ಮದ್ ಮೊದಲ ಪಟ್ಟಿಯಲ್ಲಿ ಸ್ಥಾನ ಪಡೆದಿದ್ದಾರೆ.

ಬಳ್ಳಾರಿ ಮೀಸಲು ಲೋಕಸಭಾ ಕ್ಷೇತ್ರದಿಂದ ವಿ.ಎಸ್. ಉಗ್ರಪ್ಪ, ಚಿತ್ರದುರ್ಗ ಮೀಸಲು ಲೋಕಸಭಾ ಕ್ಷೇತ್ರದಿಂದ ಮಾಜಿ ಸಂಸದ ಚಂದ್ರಪ್ಪ, ಬೀದರ್ ಲೋಕಸಭಾ ಕ್ಷೇತ್ರದಿಂದ ರಾಜಶೇಖರ ಪಾಟೀಲ್, ದಾವಣಗೆರೆಯಿಂದ ವಿನಯ್, ಕೊಪ್ಪಳದಿಂದ ರಾಘವೇಂದ್ರ ಹಿಟ್ನಾಳ್ ಅವರು ಕಣಕ್ಕಿಳಿಯಲಿದ್ದಾರೆ ಎಂದು ಹೇಳಲಾಗುತ್ತಿದೆ.

ಗ್ಯಾರಂಟಿ ಯೋಜನೆಗಳನ್ನೇ ಮುಂದಿಟ್ಟುಕೊಂಡು ಈ ಬಾರಿಯ ಚುನಾವಣೆಯಲ್ಲಿ ಕನಿಷ್ಠ 20 ಕ್ಷೇತ್ರಗಳಲ್ಲಿ ಗೆಲುವು ಸಾಧಿಸಬೇಕೆಂದಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಇದಕ್ಕಾಗಿ ಭಾರೀ ಕಸರತ್ತು ನಡೆಸಿದ್ದಾರೆ. ಚುನಾವಣಾ ಪೂರ್ವ ಸಮೀಕ್ಷೆ, ಜಿಲ್ಲಾ ಉಸ್ತುವಾರಿ ಸಚಿವರ ತಂಡ ನೀಡಿರುವ ವರದಿ, ಎಲ್ಲವನ್ನು ಆಧರಿಸಿ 15 ಕ್ಷೇತ್ರಗಳ ಅಭ್ಯರ್ಥಿಗಳ ಪಟ್ಟಿ ಸಿದ್ಧಪಡಿಸಿ ಶಿಫಾರಸು ಮಾಡಲಾಗಿದೆ. ಉಳಿದ 13 ಕ್ಷೇತ್ರಗಳಿಗೂ ಅಭ್ಯರ್ಥಿಗಳ ಆಯ್ಕೆ ಪ್ರಕ್ರಿಯೆ ನಡೆದಿದೆ.

ಲೋಕಸಭಾ ಚುನಾವಣೆಗೆ ಕಣಕ್ಕಿಳಿಯಲು ಪಕ್ಷದ ಕೆಲವು ಮುಖಂಡರುಗಳೇ ಆಸಕ್ತಿ ತೋರದ ಕಾರಣ ಕೆಲವು ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಹುಡುಕುವುದೇ ರಾಜ್ಯ ಮುಖಂಡರಿಗೆ ಕಷ್ಟವಾಗಿದೆ. ಈ ಕಾರಣಕ್ಕಾಗಿ ಪ್ರಭಾವಿ ರಾಜಕಾರಣಿಗಳ ಕುಟುಂಬ, ಉದ್ದಿಮೆ ಮತ್ತು ಗುತ್ತಿಗೆದಾರರು ಹಾಗೂ ಬಿಜೆಪಿಯಿಂದ ಕೆಲವು ಮುಖಂಡರನ್ನು ಸೆಳೆದು ಟಿಕೆಟ್ ನೀಡಲು ಪಕ್ಷ ಮುಂದಾಗಿದೆ ಎಂದು ಹೇಳಲಾಗ್ತಿದೆ.

ವಾರದಲ್ಲಿ ಅಭ್ಯರ್ಥಿಗಳ ಪಟ್ಟಿ ಫೈನಲ್: ಲೋಕಸಭಾ ಚುನಾವಣಾ ತಯಾರಿ ವಿಚಾರಕ್ಕೆ ಸಂಬಂಧಿಸಿದಂತೆ ನಾಳೆ ನನಗೆ ಗೊತ್ತಿರುವಹಾಗೆ ಕೇಂದ್ರ ಎಲೆಕ್ಷನ್ ಕಮಿಟಿ ಸಭೆ ಇದೆ. ಮುಖ್ಯಮಂತ್ರಿಗಳು ಹಾಗೂ ಕೆಪಿಸಿಸಿ ಅಧ್ಯಕ್ಷರು ಸಭೆಗೆ ಹೋಗುತ್ತಾರೆ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ಅವರು ಬೆಂಗಳೂರಿನಲ್ಲಿ ಹೇಳಿದ್ದಾರೆ. ಸ್ಕ್ರೀನಿಂಗ್ ಕಮಿಟಿ ಸಭೆ ನಡೆಯಲಿದೆ. ಕೇಂದ್ರ ಕಮಿಟಿ ಸಭೆಯಲ್ಲಿ ತೀರ್ಮಾನ ಆಗಲಿದೆ. ವಾರದಲ್ಲಿ ಅಭ್ಯರ್ಥಿಗಳ ಪಟ್ಟಿ ಫೈನಲ್ ಆಗಲಿದೆ. ಯಾರಿಗೆ ಟಿಕೆಟ್ ಅಂತ ಅಧ್ಯಕ್ಷರು ಹೇಳ್ತಾರೆ. ಎಲ್ಲಾ ಜಿಲ್ಲಾ ಮಂತ್ರಿಗಳಿಗೆ ಜವಾಬ್ದಾರಿ ನೀಡಲಾಗಿದೆ. ಗೆಲ್ಲಿಸಿಕೊಂಡು ಬರಲು ಹೈಕಮಾಂಡ್ ಸೂಚನೆ ನೀಡಿದೆ ಎಂದಿದ್ದಾರೆ.

ಗೆಲ್ಲುವುದೇ ಮಾನದಂಡ: ಕುಟುಂಬದವರಿಗೆ ಟಿಕೆಟ್ ಅನ್ನೋದು ಬರೋದಿಲ್ಲ. ಗೆಲ್ಲುವುದೇ ಮಾನದಂಡ, ಗೆಲ್ಲಿಸುವುದು ಮುಖಂಡರ ಜವಾಬ್ದಾರಿ. ಕೆಪಿಸಿಸಿಯಿಂದ ಎಲ್ಲಾ ಕ್ಷೇತ್ರಗಳ ಅಭಿಪ್ರಾಯ ಸಂಗ್ರಹ ಮಾಡಲಾಗಿದೆ. ಎಲ್ಲವನ್ನೂ ಪರಿಗಣಿಸಿ ಆಯ್ಕೆ ಮಾಡಲಿದ್ದಾರೆ ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ: 2028ರೊಳಗೆ ಭಾರತ ವಿಶ್ವದ 3ನೇ ಬಲಿಷ್ಠ ರಾಷ್ಟ್ರ: ಬೆಳಗಾವಿಯಲ್ಲಿ ಜೆ.ಪಿ.ನಡ್ಡಾ ಹೇಳಿಕೆ

Last Updated : Mar 6, 2024, 5:38 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.