ETV Bharat / state

ಸಿಎಂ ವಿರುದ್ಧ ಪ್ರಾಸಿಕ್ಯೂಷನ್​ಗೆ ಅನುಮತಿ: ರಾಜ್ಯಾದ್ಯಂತ ಕಾಂಗ್ರೆಸ್​, ಅಹಿಂದ ಸಂಘಟನೆಗಳ ಪ್ರತಿಭಟನೆ - CONGRESS PROTEST - CONGRESS PROTEST

ಮುಡಾ ಹಗರಣ ಆರೋಪ ಪ್ರಕರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್​ಗೆ ಅನುಮತಿ ನೀಡಿದ್ದನ್ನು ಖಂಡಿಸಿ ಕಾಂಗ್ರೆಸ್​ ಕಾರ್ಯಕರ್ತರು ಹಾಗೂ ಅಹಿಂದ ಸಂಘಟನೆಗಳು ರಾಜ್ಯಾದ್ಯಂತ ಪ್ರತಿಭಟನೆ ನಡೆಸಿವೆ. ಮುನ್ನೆಚ್ಚರಿಕೆ ಕ್ರಮವಾಗಿ ಬಿಗಿ ಪೊಲೀಸ್ ಬಂದೋಬಸ್ತ್ ಮಾಡಲಾಗಿದೆ.

PROSECUTION AGAINST CM
ರಾಜ್ಯಾದ್ಯಂತ ಕಾಂಗ್ರೆಸ್​, ಅಹಿಂದ ಸಂಘಟನೆಗಳ ಪ್ರತಿಭಟನೆ (ETV Bharat)
author img

By ETV Bharat Karnataka Team

Published : Aug 17, 2024, 4:23 PM IST

Updated : Aug 17, 2024, 7:44 PM IST

ಬೆಂಗಳೂರು: ಮುಡಾ ಹಗರಣ ಆರೋಪ ಪ್ರಕರಣದಲ್ಲಿ ತನಿಖೆಗೆ ರಾಜ್ಯಪಾಲರು ಪೂರ್ವಾನುಮತಿ ನೀಡಿದ ಬೆನ್ನಲ್ಲೇ ಕಾಂಗ್ರೆಸ್ ಕಾರ್ಯಕರ್ತರು, ಅಹಿಂದ ಸಂಘಟನೆಗಳು ಬೀದಿಗಿಳಿದಿದ್ದಾರೆ. ರಾಜ್ಯಪಾಲರ ವಿರುದ್ಧ ಪ್ರತಿಭಟನೆ ನಡೆಸಿದ್ದಾರೆ. ಮೈಸೂರು, ಬೆಂಗಳೂರು ಸೇರಿದಂತೆ ರಾಜ್ಯಾದ್ಯಂತ ಹಲವು ಭಾಗಗಳಲ್ಲಿ ದಿಢೀರ್ ಪ್ರತಿಭಟನೆಗೆ ಮುಂದಾಗಿವೆ.

ದೇಶದ ರಾಜಕೀಯ ಇತಿಹಾಸದಲ್ಲೇ ರಾಜ್ಯಪಾಲರು ಪ್ರಾಮಾಣಿಕ ಮುಖ್ಯಮಂತ್ರಿ ಹಾಗೂ ನಿರಪರಾಧಿಯನ್ನ ಅಪರಾಧಿ ಸ್ಥಾನದಲ್ಲಿ ನಿಲ್ಲಿಸುವ ಕುತಂತ್ರಕ್ಕೆ ತಲೆಬಾಗಿ ಅನುಮತಿ ನೀಡಿರುವುದು ಅತ್ಯಂತ ದುರದೃಷ್ಟಕರ. ಅವರ ಹೆಸರಿಗೆ ಕಳಂಕ ತರಲು ಸಿದ್ದರಾಮಯ್ಯನವರನ್ನು ಈ ಪ್ರಕರಣದಲ್ಲಿ ಸಿಲುಕಿಸಲು ರಾಜಭವನ ದುರ್ಬಳಕೆ ಮಾಡಿಕೊಂಡಿದೆ ಎಂದರು.

ಬೆಂಗಳೂರಿನಲ್ಲಿ ನಡೆದ ಪ್ರತಿಭಟನೆ
ಬೆಂಗಳೂರಿನಲ್ಲಿ ನಡೆದ ಪ್ರತಿಭಟನೆ (ETV Bharat)

ಬಿಜೆಪಿ, ಪ್ರಧಾನಿ ಮೋದಿ, ಅಮಿತ್ ಶಾ ವಿರುದ್ಧ ಧಿಕ್ಕಾರ ಕೂಗಿ ತಮ್ಮ ಆಕ್ರೋಶ ಹೊರಹಾಕಿದ ಕಾಂಗ್ರೆಸ್​, ಯಾವುದೇ ಪ್ರಕರಣದಲ್ಲೂ ಹಾಗೂ ಹಗರಣದಲ್ಲಿ ಇಲ್ಲಿಯವರೆಗೂ ಭಾಗಿಯಾಗದೇ ಪ್ರಾಮಾಣಿಕವಾಗಿ ಆಡಳಿತ ನಡೆಸಿರುವ ಸಿದ್ದರಾಮಯ್ಯನವರನ್ನು ಕಳಂಕಿತರನ್ನಾಗಿ ಮಾಡಲು ಕೇಂದ್ರ ಸರ್ಕಾರ ಬಿಜೆಪಿ ಪಕ್ಷ ನಡೆಸಿರುವ ಕುತಂತ್ರ ರಾಜ್ಯಪಾಲರ ಮೂಲಕ ಇಂದು ಬಹಿರಂಗವಾಗಿದೆ. ರಾಜ್ಯಪಾಲರು ಬಿಜೆಪಿಯ ಅನೇಕ ಹಿಂದಿನ ಮಂತ್ರಿಗಳ ವಿರುದ್ಧ ತನಿಖೆಗೆ ಅನುಮತಿ ನೀಡಿಲ್ಲ ಹಾಗೂ ಹೆಚ್ ಡಿ ಕುಮಾರಸ್ವಾಮಿ ವಿರುದ್ಧ ತನಿಖೆಗೆ ಅನುಮತಿ ನೀಡಿಲ್ಲ. ಉದ್ದೇಶ ಪೂರ್ವಕವಾಗಿ ಬಿಜೆಪಿ ಜನತಾದಳದ ನಾಯಕರ ಒತ್ತಾಯದ ಮೇರೆಗೆ ಕಾಂಗ್ರೆಸ್ ಸರ್ಕಾರವನ್ನು ಅಸ್ಥಿರಗೊಳಿಸುವ ಒಂದು ಅಂಶದ ಕಾರ್ಯಕ್ರಮವನ್ನು ರಾಜ್ಯಪಾಲರು ಹಮ್ಮಿಕೊಂಡಿರುವುದು ಇಂದು ಜಗಜ್ಜಾಹಿರವಾಗಿದೆ ಎಂದು ದೂರಿದರು.

ಬೆಂಗಳೂರಿನ ರಾಜಭವನದ ಎದುರು ಕಾರ್ಯಕರ್ತರು ಆಗಮಿಸಿ ಪ್ರತಿಭಟನೆ ನಡೆಸಿದರೆ, ಅಹಿಂದ ಸಂಘಟನೆಗಳ ಮುಖಂಡರು, ಮೈಸೂರಿನ‌ ನ್ಯಾಯಾಲಯದ ಮುಂಭಾಗ ಇರುವ ಮಹಾತ್ಮ ಗಾಂಧಿ ಪುತ್ಥಳಿ ಮುಂಭಾಗ ಪ್ರತಿಭಟನೆ ನಡೆಸಿ ತಮ್ಮ ಆಕ್ರೋಶ ವ್ಯಕ್ತಪಡಿಸಿದರು. ರಾಜ್ಯಪಾಲರು ಬಿಜೆಪಿ ಏಜೆಂಟ್ ರೀತಿಯಲ್ಲಿ ನಡೆದುಕೊಳ್ಳುತ್ತಿದ್ದಾರೆ. ಗೋ ಬ್ಯಾಕ್ ಗೋ ಬ್ಯಾಕ್ ಎಂದು ರಾಜ್ಯಪಾಲರ ವಿರುದ್ಧ ವಿವಿಧ ಘೋಷಣೆಗಳನ್ನು ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ಪ್ರತಿಭಟನಾಕಾರರು ಶರ್ಟ್ ಬಿಚ್ಚಿ ರಾಜ್ಯಪಾಲರ ವಿರುದ್ಧ ಧಿಕ್ಕಾರ ಕೂಗಿದರು. ವೇಳೆ ಪೊಲೀಸರ ಮತ್ತು ಪ್ರತಿಭಟನಾಕಾರರ ನಡುವೆ ಮಾತಿನ ಚಕಮಕಿ ನಡೆಯಿತು. ಬಿಜೆಪಿ ಕಚೇರಿಗೆ ಮುತ್ತಿಗೆ ಯತ್ನಿಸಿದವರನ್ನು ಮಾರ್ಗಮಧ್ಯೆ ಪೊಲೀಸರು ತಡೆದರು.

ಚಿಕ್ಕಮಗಳೂರಿನಲ್ಲಿ ನಡೆದ ಪ್ರತಿಭಟನೆ
ಚಿಕ್ಕಮಗಳೂರಿನಲ್ಲಿ ನಡೆದ ಪ್ರತಿಭಟನೆ (ETV Bharat)

ಚಿಕ್ಕಮಗಳೂರು ಜಿಲ್ಲೆಯಲ್ಲಿ ಪ್ರತಿಭಟನೆ: ಸಿಎಂ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್​ಗೆ ಅನುಮತಿ ನೀಡಿದ ಹಿನ್ನೆಲೆ, ಚಿಕ್ಕಮಗಳೂರು ಜಿಲ್ಲೆಯ ವಿವಿಧ ಭಾಗದಲ್ಲಿ ಕಾಂಗ್ರೆಸ್ ಮುಖಂಡರು ಹಾಗೂ ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ಜಿಲ್ಲೆಯ ತರೀಕೆರೆ ಪಟ್ಟಣದಲ್ಲಿ ಪ್ರತಿಭಟನೆ ನಡೆಸಿದ ಕೈ ಮುಖಂಡರು, ರಾಜ್ಯಪಾಲರು ಹಾಗೂ ಬಿಜೆಪಿ ಘೋಷಣೆ ಕೂಗಿ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ಟೈರ್​ಗೆ ಬೆಂಕಿ ಹಾಕಿ ಅಸಮಾಧಾನ ಹೊರಹಾಕಿದರು.

ದಾವಣಗೆರೆಯಲ್ಲಿ ನಡೆದ ಪ್ರತಿಭಟನೆ
ದಾವಣಗೆರೆಯಲ್ಲಿ ನಡೆದ ಪ್ರತಿಭಟನೆ (ETV Bharat)

ದಾವಣಗೆರೆಯಲ್ಲೂ ಪ್ರತಿಭಟನೆ: ಸಿಎಂ‌ ವಿರುದ್ಧ ರಾಜ್ಯಪಾಲರ ನಡೆ ಖಂಡಿಸಿ ದಾವಣಗೆರೆಯಲ್ಲಿಯೂ ಅಹಿಂದ ಒಕ್ಕೂಟ ಪ್ರತಿಭಟನೆ ನಡೆಸಿತು. ಕರ್ನಾಟಕ ಶೋಷಿತ ಹಿಂದುಳಿದ ಸಮುದಾಯಗಳ ಮಹಾ ಒಕ್ಕೂಟ, ಕರ್ನಾಟಕ ರಾಜ್ಯ ಹಿಂದುಳಿದ ಜಾತಿಗಳ ಒಕ್ಕೂಟದಿಂದ ವಿವಿಧ ಸಮಾಜದ ನೂರಾರು ಮುಖಂಡರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.

ನಗರದ ಜಯದೇವ ವೃತ್ತದಿಂದ ಪ್ರತಿಭಟನೆ ಮೆರವಣಿಗೆ ಆರಂಭವಾಗಿ ಗಾಂಧಿ ವೃತ್ತಕ್ಕೆ ತಲುಪಿ, ಮಾನವ ಸರಪಳಿ ಮಾಡಿ ರಾಜ್ಯಪಾಲರ ವಿರುದ್ಧ ಆಕ್ರೋಶ ವ್ಯಕ್ತಪಡಿಸಲಾಯಿತು. ರಾಜ್ಯಪಾಲರು ಹಾಗೂ ರಾಜ್ಯ ಬಿಜೆಪಿ-ಜೆಡಿಎಸ್ ವಿರುದ್ಧ ಆಕ್ರೋಶ‌ ಹೊರಹಾಕಲಾಯಿತು.‌ ಟೈರ್​ಗೆ ಬೆಂಕಿ ಹಚ್ಚಲು ಮುಂದಾದಾಗ ಪ್ರತಿಭಟನಾಕಾರರ ಮತ್ತು ಪೊಲೀಸರ ನಡುವೆ ಹೈಡ್ರಾಮಾ ಕೂಡ ನಡೆಯಿತು. ಕೊನೆಗೂ ಪೆಟ್ರೋಲ್ ನೆಲಕ್ಕೆ ಸುರಿದು ಬೆಂಕಿ ಹಚ್ಚಿದರು. ಮಾನವ ಸರಪಳಿ ಮಾಡಿದ್ದರಿಂದ ಕೆಲ ಕಾಲ ಟ್ರಾಫಿಕ್ ಜಾಮ್‌ ಉಂಟಾಗಿತ್ತು.

ಧಾರವಾಡದಲ್ಲಿ ನಡೆದ ಪ್ರತಿಭಟನೆ
ಧಾರವಾಡದಲ್ಲಿ ನಡೆದ ಪ್ರತಿಭಟನೆ (ETV Bharat)

ಧಾರವಾಡದಲ್ಲೂ ಪ್ರತಿಭಟನೆ: ಪ್ರಾಸಿಕ್ಯೂಷನ್​ಗೆ ಅನುಮತಿ ನೀಡಿರುವುದನ್ನು ಖಂಡಿಸಿ ಧಾರವಾಡದಲ್ಲಿಯೂ ಕಾಂಗ್ರೆಸ್ ಪಕ್ಷದ ವತಿಯಿಂದ ಪ್ರತಿಭಟನೆ ನಡೆಸಲಾಯಿತು. ರಾಜ್ಯಪಾಲರ ನಡೆ ಖಂಡಿಸಿ ಪ್ರತಿಭಟನೆ ಮಾಡಿದ ಕಾಂಗ್ರೆಸ್ ಕಾರ್ಯಕರ್ತರು, ಧಾರವಾಡ ಜಿಲ್ಲಾಧಿಕಾರಿ ಕಚೇರಿ ಎದುರು ಬಿಜೆಪಿ ವಿರುದ್ಧ ಘೋಷಣೆ ಕೂಗಿ ಆಕ್ರೋಶ ಹೊರಹಾಕಿದರು. ರಾಜ್ಯಪಾಲರು ಬಿಜೆಪಿ ಹೈಕಮಾಂಡ್ ಕೈಗೊಂಬೆಯಂತೆ ನಡೆಯುತಿದ್ದಾರೆ. ರಾಷ್ಟ್ರಪತಿ ರಾಜ್ಯಪಾರಲನ್ನು ವಜಾ ಮಾಡುವಂತೆ ಕಾಂಗ್ರೆಸ್ ಕಾರ್ಯಕರ್ತರ‌ ಒತ್ತಾಯಿಸಿದರು.

ಶಿವಮೊಗ್ಗದಲ್ಲಿ ನಡೆದ ಪ್ರತಿಭಟನೆ
ಶಿವಮೊಗ್ಗದಲ್ಲಿ ನಡೆದ ಪ್ರತಿಭಟನೆ (ETV Bharat)

ಶಿವಮೊಗ್ಗದಲ್ಲೂ ಆಕ್ರೋಶ: ಪ್ರಾಸಿಕ್ಯೂಷನ್ ಖಂಡಿಸಿ ಜಿಲ್ಲಾ ಕಾಂಗ್ರೆಸ್ ವತಿಯಿಂದ ನಗರದ ಟಿ.ಸೀನಪ್ಪ ಶೆಟ್ಟಿ ವೃತ್ತದಲ್ಲಿ ಪ್ರತಿಭಟನೆ ನಡೆಸಲಾಯಿತು. ಪ್ರತಿಭಟನೆ ವೇಳೆ ಬಿಜೆಪಿ ವಿರುದ್ಧ ಘೋಷಣೆ ಕೂಗಿದ ಕಾಂಗ್ರೆಸ್​ ಕಾರ್ಯಕರ್ತರು, ವೃತ್ತದಲ್ಲಿ ಮಾನವ ಸರಳಿ ರಚಿಸಿ ಟೈರ್​ಗೆ ಬೆಂಕಿ ಹಾಕಿ ರಾಜ್ಯಪಾಲರ ವಿರುದ್ಧ ಘೋಷಣೆ ಕೂಗಿ ಆಕ್ರೋಶ ಹೊರಹಾಕಿದರು.

ಷಡ್ಯಂತ್ರ: ಮಂಡ್ಯದಲ್ಲಿ ಕಾಂಗ್ರೆಸ್​ನಿಂದ ಬೃಹತ್ ಪ್ರತಿಭಟನೆ ನಡೆಸಲಾಯಿತು. ವಿಶ್ವೇಶ್ವರಯ್ಯ ಪ್ರತಿಮೆ ಬಳಿ ನಡೆದ ಪ್ರತಿಭಟನೆಯಲ್ಲಿ ಗೋ ಬ್ಯಾಕ್ ಚಳುವಳಿ ಮೂಲಕ ಕೇಂದ್ರ ಸರ್ಕಾರ ಹಾಗೂ ರಾಜ್ಯಪಾಲರ ವಿರುದ್ಧ ಆಕ್ರೋಶ ವ್ಯಕ್ತಪಡಿಸಲಾಯಿತು. ರಾಜ್ಯಪಾಲರು ಬಿಜೆಪಿ ಏಜೆಂಟ್ ರೀತಿ ವರ್ತಿಸುತ್ತಿದ್ದಾರೆ. ಷಡ್ಯಂತ್ರ ಮಾಡಿ ಸಿಎಂ ವಿರುದ್ಧ ಪ್ರಾಸಿಕ್ಯೂಷನ್​ಗೆ ಅನುಮತಿ ನೀಡಿದ್ದಾರೆ. ಇದು ಕಾಂಗ್ರೆಸ್ ಅಸ್ಥಿರಗೊಳಿಸುವ ಯತ್ನ. ಯಾವುದೇ ಕಾರಣಕ್ಕೂ ಸಿಎಂ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ ನೀಡಬಾರದು ಎಂದು ಆಗ್ರಹಿಸಿದರು.

ಪ್ರಾಸಿಕ್ಯೂಷನ್​ಗೆ ಅನುಮತಿ ನೀಡಿದ್ದನ್ನು ಖಂಡಿಸಿ ಕಾಂಗ್ರೆಸ್ ಕಾರ್ಯಕರ್ತರು ಹುಬ್ಬಳ್ಳಿಯಲ್ಲೂ ಪ್ರತಿಭಟನೆ ನಡೆಸಿದರು. ನಗರದ ಸಂಗೊಳ್ಳಿ ರಾಯಣ್ಣ ವೃತ್ತದಲ್ಲಿ ಶಾಸಕರಾದ ಪ್ರಸಾದ ಅಬ್ಬಯ್ಯ, ಎನ್ ಎಚ್ ಕೋನರೆಡ್ಡಿ ನೇತೃತ್ವದಲ್ಲಿ ಪ್ರತಿಭಟನೆ ನಡೆಸಿದ ಕಾರ್ಯಕರ್ತರು, ರಾಜ್ಯಪಾಲರ ವಿರುದ್ಧ ಘೋಷಣೆ ಕೂಗಿ, ಟೈರ್ ಬೆಂಕಿ ಹಚ್ಚಿ ಆಕ್ರೋಶ ವ್ಯಕ್ತಪಡಿಸಿದರು.

ಇದನ್ನೂ ಓದಿ: ಪ್ರಾಷಿಕ್ಯೂಷನ್​ಗೆ ಅನುಮತಿ: ಪಾದಯಾತ್ರೆಯ ಫಲವೆಂದ ಬಿಜೆಪಿ ನಾಯಕರು, ಸಿಎಂ ರಾಜೀನಾಮೆಗೆ ಆಗ್ರಹ - prosecution against cm siddaramaiah

Last Updated : Aug 17, 2024, 7:44 PM IST
ETV Bharat Logo

Copyright © 2025 Ushodaya Enterprises Pvt. Ltd., All Rights Reserved.