ETV Bharat / state

ಉಪಚುನಾವಣೆಯಲ್ಲಿ ಕಾಂಗ್ರೆಸ್ ಮೂರೂ ಕಡೆ ಗೆಲ್ಲಲಿದೆ: ಸಿಎಂ ವಿಶ್ವಾಸ

ಆಡಳಿತ ಹಾಗೂ ಪ್ರತಿಪಕ್ಷಗಳ ನಡುವೆ ಪೈಪೋಟಿಗೆ ಕಾರಣವಾಗಿದ್ದ ಚನ್ನಪಟ್ಟಣ, ಶಿಗ್ಗಾಂವಿ, ಸಂಡೂರು ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆ ಮುಕ್ತಾಯವಾಗಿದ್ದು, ಕಾಂಗ್ರೆಸ್​ ಪಕ್ಷವೇ ಗೆಲ್ಲಲಿದೆ ಎಂದು ಸಿಎಂ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಮುಖ್ಯಮಂತ್ರಿ ಸಿದ್ದರಾಮಯ್ಯ
ಮುಖ್ಯಮಂತ್ರಿ ಸಿದ್ದರಾಮಯ್ಯ (ETV Bharat)
author img

By ETV Bharat Karnataka Team

Published : 10 hours ago

ಬೆಂಗಳೂರು: ಉಪಚುನಾವಣೆಯಲ್ಲಿ ನಾವು ಮೂರೂ ಕಡೆ ಗೆಲ್ಲಲಿದ್ದೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ವಿಶ್ವಾಸ ವ್ಯಕ್ತಪಡಿಸಿದರು.

ಆಪರೇಶನ್ ಕಮಲದ ಬಗ್ಗೆ ಮುಖ್ಯಮಂತ್ರಿಗಳು ದಾಖಲಾತಿಗಳಿದ್ದರೆ ತನಿಖೆ ಮಾಡಿಸಬೇಕೆಂದು ರಾಜ್ಯ ಬಿಜೆಪಿ ಅಧ್ಯಕ್ಷ ವಿಜಯೇಂದ್ರ ನೀಡಿರುವ ಹೇಳಿಕೆಗೆ ಪ್ರತಿಕ್ರಿಯಿಸುತ್ತಾ, ವಿಜಯೇಂದ್ರ ಮೊನ್ನೆ ಮೊನ್ನೆ ಬಂದಿದ್ದಾರೆ. ಈ ಬಗ್ಗೆ ನಾನು ಉತ್ತರ ನೀಡುವುದಿಲ್ಲ ಎಂದರು.

ಮುಖ್ಯಮಂತ್ರಿ ಸಿದ್ದರಾಮಯ್ಯ (ETV Bharat)

ಇಂದು ವಿಧಾನಸೌಧದ ಪೂರ್ವ ದಿಕ್ಕಿನ ಬಳಿ ಮಾಜಿ ಪ್ರಧಾನ ಮಂತ್ರಿ ದಿ.ಪಂಡಿತ್ ಜವಾಹರ್‌ಲಾಲ್ ನೆಹರೂ ಅವರ 135ನೇ ವರ್ಷದ ಜನ್ಮ ದಿನಾಚರಣೆ ಅಂಗವಾಗಿ ಅವರ ಪ್ರತಿಮೆ ಬಳಿ ಭಾವಚಿತ್ರಕ್ಕೆ ಮಾಲಾರ್ಪಣೆ ಮಾಡಿದರು.

ನೆಹರು ಜನ್ಮದಿನವನ್ನು ಮಕ್ಕಳ ದಿನಾಚರಣೆಯಾಗಿ ಆಚರಿಸಲಾಗುತ್ತದೆ. ನೆಹರೂ ಅವರಿಗೆ ಮಕ್ಕಳ ಬಗ್ಗೆ ಬಹಳ ಪ್ರೀತಿಯಿದ್ದುದ್ದರಿಂದ ಚಾಚಾ ನೆಹರೂ ಎಂದು ಕರೆಯಲಾಗುತ್ತಿತ್ತು. ಸುಮಾರು 17 ವರ್ಷಗಳ ಕಾಲ ದೇಶದ ಪ್ರಧಾನಿಯಾಗಿ ಮಿಕ್ಸಡ್ ಎಕಾನಮಿ ಜಾರಿ ಮಾಡಿದರು. ಸಮಾಜವಾದಿಯಾಗಿದ್ದ ನೆಹರೂ ಕಾಂಗ್ರೆಸ್ ಪಕ್ಷವನ್ನು ಸಮಾಜವಾದಿಯಾಗಿಸಿದ ರೂವಾರಿ. ನೆಹರೂ, ಲೋಹಿಯಾ ಮೊದಲಾದವರು ಸೇರಿ ಸೋಷಿಯಲಿಸ್ಟ್ ಕಾಂಗ್ರೆಸ್ ಕಟ್ಟಿದರು. 17 ವರ್ಷಗಳಲ್ಲಿ ದೇಶದ ಅನೇಕ ಸಮಸ್ಯೆಗಳನ್ನು ಬಗೆಹರಿಸಿದರು. ಬೃಹತ್ ಕೈಗಾರಿಕೆ, ಅಣೆಕಟ್ಟು, ನೀರಾವರಿ, ಉದ್ಯೋಗ ಸೃಷ್ಟಿ ಮಾಡಿದರು. ವಿಜ್ಞಾನ ಮತ್ತು ವೈಚಾರಿಕತೆಯಲ್ಲಿ ನಂಬಿಕೆ ಇಟ್ಟುಕೊಂಡಿದ್ದ ನೆಹರೂ ಅವರು ಸುದೀರ್ಘ ಕಾಲ ದೇಶದ ಪ್ರಧಾನಿಯಾಗಿದ್ದರು ಎಂದು ತಿಳಿಸಿದರು.

ಇಂದು ಆಧುನಿಕ ಭಾರತವನ್ನು ನಾವು ಕಾಣುತ್ತಿದ್ದರೆ ಅದಕ್ಕೆ ನೆಹರೂ ಅವರ ಕೊಡುಗೆ ಅಪಾರವಾಗಿದೆ. ಆಹಾರ ಸ್ವಾವಲಂಬನೆಗೆ ನೆಹರೂ, ಇಂದಿರಾ ಗಾಂಧಿ, ಜಗಜೀವನ್ ರಾಂ, ಲಾಲ್ ಬಹದ್ದೂರ್ ಶಾಸ್ತ್ರಿ ಅವರೆಲ್ಲರೂ ಕಾರಣ. ಒಂದು ಕಾಲದಲ್ಲಿ ಆಹಾರಕ್ಕೆ ಬೇರೆ ದೇಶಗಳ ಮೇಲೆ ಅವಲಂಬಿಸಿದ್ದೆವು. ಇಂದು ನಾವು ಸ್ವಾವಲಂಬಿಯಾಗಿದ್ದರೆ ಅವರು ಕಾರಣ ಎಂದರು.

ಇದನ್ನೂ ಓದಿ: ಬಿಜೆಪಿಯಿಂದ ಕಾಂಗ್ರೆಸ್​ನ 50 ಶಾಸಕರಿಗೆ ತಲಾ 50 ಕೋಟಿ ರೂಪಾಯಿ ಆಫರ್: ಸಿಎಂ ಸಿದ್ದರಾಮಯ್ಯ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.