ETV Bharat / state

ಕರ್ನಾಟಕ ಉಪಸಮರ : ಕಾಂಗ್ರೆಸ್​​ಗೆ ಕೈ ಹಿಡಿದ 'ಗ್ಯಾರಂಟಿ' ಯೋಜನೆಗಳು, ಫಲ ನೀಡಿತು ಅಭ್ಯರ್ಥಿ ಆಯ್ಕೆ ಚತುರತೆ

ಉಪಸಮರದಲ್ಲಿ ಕಾಂಗ್ರೆಸ್ ಕ್ಲೀನ್​ ಸ್ವೀಪ್​ ಮಾಡಿದೆ. ಶಿಗ್ಗಾಂವಿಯಲ್ಲಿ ಯಾಸೀರ್ ಖಾನ್ ಪಠಾಣ, ಸಂಡೂರಲ್ಲಿ ಅನ್ನಪೂರ್ಣ ತುಕಾರಾಮ್ ಹಾಗೂ ಚನ್ನಪಟ್ಟಣದಲ್ಲಿ ಸಿ.ಪಿ.ಯೋಗೇಶ್ವರ್​ ಗೆಲುವಿನ ನಗೆ ಬೀರಿದ್ದಾರೆ. ಕೈ ಅಭ್ಯರ್ಥಿಗಳ ಗೆಲುವಿಗೆ ಕಾರಣಗಳೇನು ಎಂಬ ಮಾಹಿತಿ ಇಲ್ಲಿದೆ.

karnataka by elections
ಗೆದ್ದ ಕಾಂಗ್ರೆಸ್ ಅಭ್ಯರ್ಥಿಗಳು (ETV Bharat)
author img

By ETV Bharat Karnataka Team

Published : 3 hours ago

ಬೆಂಗಳೂರು: ಕರ್ನಾಟಕದಲ್ಲಿ ನಡೆದ 3 ಕ್ಷೇತ್ರಗಳ ಉಪಚುನಾವಣೆಯ ಮತ ಎಣಿಕೆ ಪೂರ್ಣಗೊಂಡಿದ್ದು, ಮೂರಕ್ಕೆ ಮೂರೂ ಕ್ಷೇತ್ರಗಳು ಕಾಂಗ್ರೆಸ್ ಪಾಲಾಗಿವೆ. ಈ ಚುನಾವಣೆಯಲ್ಲಿ ಕನಿಷ್ಠ ಎರಡು ಕ್ಷೇತ್ರಗಳನ್ನಾದರೂ ಗೆಲ್ಲುತ್ತೇವೆ ಎನ್ನುವ ಆತ್ಮವಿಶ್ವಾಸದಲ್ಲಿದ್ದ ಎನ್​ಡಿಎಗೆ ಭಾರೀ ನಿರಾಶೆಯಾಗಿದೆ.

ಜಿದ್ದಾಜಿದ್ದಿನಿಂದ ಕೂಡಿದ್ದ ಚನ್ನಪಟ್ಟಣ ಮತ್ತು ಶಿಗ್ಗಾಂವಿ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳು ಜಯಗಳಿಸಿರುವುದು ಬಿಜೆಪಿ ಮತ್ತು ಜೆಡಿಎಸ್​​ಗೆ ಮುಖಭಂಗವಾದಂತಾಗಿದೆ. ಎರಡೂ ಕ್ಷೇತ್ರಗಳಲ್ಲಿ ಮುಖ್ಯಮಂತ್ರಿಗಳಾಗಿದ್ದವರ ಮಕ್ಕಳು ಸ್ಪರ್ಧೆ ಮಾಡಿದರೂ ಕ್ಷೇತ್ರವನ್ನು ಗೆಲ್ಲಲು ಸಾಧ್ಯವಾಗಲಿಲ್ಲ.

ಜೆಡಿಎಸ್ ಪ್ರಭಾವ ಇರುವ ಚನ್ನಪಟ್ಟಣದಲ್ಲಿ ಕೇಂದ್ರ ಸಚಿವರಾದ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಅವರ ಪುತ್ರ ನಿಖಿಲ್ ಕುಮಾರಸ್ವಾಮಿ ಜೆಡಿಎಸ್ ಅಭ್ಯರ್ಥಿಯಾಗಿ ಕಣಕ್ಕಿಳಿದಿದ್ದರು. ಕಾಂಗ್ರೆಸ್ ಅಭ್ಯರ್ಥಿ ಸಿ.ಪಿ.ಯೋಗೇಶ್ವರ್ ವಿರುದ್ಧ ಫೈಟ್ ನೀಡಿದರೂ ಅಂತಿಮವಾಗಿ ಜೆಡಿಎಸ್ 25 ಸಾವಿರ ಮತಗಳ ಅಂತರದಿಂದ ನಿಖಿಲ್​ ಸೋತರು.

ಶಿಗ್ಗಾಂವಿ ಕ್ಷೇತ್ರದಲ್ಲಿ ಮಾಜಿ ಮುಖ್ಯಮಂತ್ರಿ, ಬಿಜೆಪಿ ಸಂಸದ ಬಸವರಾಜ ಬೊಮ್ಮಾಯಿ ಅವರ ಪುತ್ರ ಭರತ್ ಬೊಮ್ಮಾಯಿ ಬಿಜೆಪಿ ಅಭ್ಯರ್ಥಿಯಾಗಿ ಕಣಕ್ಕಿಳಿದಿದ್ದರೂ, ಕಾಂಗ್ರೆಸ್ ಅಭ್ಯರ್ಥಿ ಯಾಸೀರ್ ಖಾನ್ ಪಠಾಣ ವಿರುದ್ಧ ಜಯಗಳಿಸಲು ಸಾಧ್ಯವಾಗಿಲ್ಲ. ಹಾಗೆಯೇ, ಸಂಡೂರು ಕ್ಷೇತ್ರದಲ್ಲಿಯೂ ಕಾಂಗ್ರೆಸ್ ಅಭ್ಯರ್ಥಿಯಾಗಿ ಕಣಕ್ಕಿಳಿದಿದ್ದ ಸಂಸದ ತುಕಾರಾಮ್ ಅವರ ಪತ್ನಿ ಅನ್ನಪೂರ್ಣ ತುಕಾರಾಮ್ ಅವರು ಬಿಜೆಪಿ ಅಭ್ಯರ್ಥಿ ಬಂಗಾರು ಹನುಮಂತ ವಿರುದ್ಧ ಜಯಭೇರಿ ಬಾರಿಸಿದ್ದಾರೆ.

ಕಾಂಗ್ರೆಸ್ ಗೆಲುವಿಗೆ ಕಾರಣಗಳೇನು?: ಮೂರಕ್ಕೆ ಮೂರೂ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಗೆಲುವಿಗೆ ಕಾರಣಗಳೇನು ಎನ್ನುವ ಬಗ್ಗೆ ಚರ್ಚೆಗಳು ಈಗ ಗಂಭೀರವಾಗಿ ನಡೆದಿವೆ. ಆಡಳಿತ ಪಕ್ಷ ಕಾಂಗ್ರೆಸ್ ರಾಜ್ಯದಲ್ಲಿ ಜಾರಿಗೆ ತಂದಿದ್ದ ಐದು 'ಗ್ಯಾರಂಟಿ' ಯೋಜನೆಗಳು ಮುಖ್ಯಮಂತ್ರಿ ಸಿದ್ದರಾಮಯ್ಯ ಸರ್ಕಾರದ ಕೈ ಹಿಡಿದಿವೆ. ಚುನಾವಣೆ ಸಂದರ್ಭದಲ್ಲಿಯೇ ಮಹಿಳೆಯರ ಖಾತೆಗೆ ಗೃಹ ಲಕ್ಷ್ಮಿ ಯೋಜನೆಯಡಿ 2 ಸಾವಿರ ಹಣವನ್ನು ಖಾತೆಗೆ ಹಾಕಿರುವುದು ಕಾಂಗ್ರೆಸ್ ಅಭ್ಯರ್ಥಿಗಳಿಗೆ ಮಹಿಳಾ ಮತದಾರರ ಹೆಚ್ಚು ಮತ ಪಡೆಯಲು ಹೆಚ್ಚು ಸಹಾಯಕವಾಗಿದೆ ಎಂದು ವಿಶ್ಲೇಷಣೆ ಮಾಡಲಾಗುತ್ತಿದೆ.

ಗ್ಯಾರಂಟಿ ಯೋಜನೆಗಳೇ ಕಾರಣ: ಉಪಚುನಾವಣೆಯಲ್ಲಿ ಮೂರಕ್ಕೆ ಮೂರು ಕ್ಷೇತ್ರಗಳ ಗೆಲುವಿಗೆ ಗ್ಯಾರಂಟಿ ಯೋಜನೆಗಳೇ ಕಾರಣ ಎಂದು ಕೆಪಿಸಿಸಿ ಅಧ್ಯಕ್ಷರಾಗಿರುವ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಪತ್ರಿಕಾಗೋಷ್ಠಿಯಲ್ಲಿ ಸ್ಪಷ್ಟಪಡಿಸಿದ್ದಾರೆ. ಜೊತೆಗೆ, ಕಾಂಗ್ರೆಸ್ ಸರ್ಕಾರದ ಅಭಿವೃದ್ಧಿ ಯೋಜನೆಗಳು ಸಹ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳ ಗೆಲುವಿಗೆ ಸಹಕಾರಿಯಾಗಿದೆ ಎಂದು ಡಿಸಿಎಂ ಅಭಿಪ್ರಾಯಪಟ್ಟಿದ್ದಾರೆ.

ಅಭ್ಯರ್ಥಿಗಳ ಆಯ್ಕೆಯಲ್ಲಿ ಜಾಣತನ: ಕಾಂಗ್ರೆಸ್​​ಗೆ ಈ ಬಾರಿಯ ಉಪಚುನಾವಣೆಯಲ್ಲಿ ಮುಸ್ಲಿಂ ಸಮುದಾಯದ ಮತಗಳು ವಿಭಜನೆಯಾಗದೇ ಸಂಪೂರ್ಣವಾಗಿ ಬಂದಿರುವುದು ಚನ್ನಪಟ್ಟಣ ಮತ್ತು ಶಿಗ್ಗಾಂವಿಯಲ್ಲಿ ಅಭ್ಯರ್ಥಿಗಳು ಗೆಲ್ಲಲು ಅನುಕೂಲವಾಗಿದೆ. ಮುಸ್ಲಿಂ ಸಮುದಾಯದ ಮತಗಳ ಜೊತೆಗೆ, ಕುರುಬ ಸಮುದಾಯದವರು ಚನ್ನಪಟ್ಟಣ ಮತ್ತು ಶಿಗ್ಗಾಂವಿ ಕ್ಷೇತ್ರದಲ್ಲಿ ಕಾಂಗ್ರೆಸ್ ಕೈಹಿಡಿದಿದ್ದು, ಗೆಲುವಿನ ಕಾಣಿಕೆ ನೀಡಿದ್ದಾರೆ. ಕಾಂಗ್ರೆಸ್ ಪಕ್ಷ ಅಭ್ಯರ್ಥಿಗಳ ಆಯ್ಕೆಯಲ್ಲಿಯೂ ಜಾಣತನ ಮೆರೆದಿತ್ತು. ಚನ್ನಪಟ್ಟಣದಲ್ಲಿ ಕಾಂಗ್ರೆಸ್ ಪಕ್ಷ ಬಿಜೆಪಿಯ ಟಿಕೆಟ್ ನಿರೀಕ್ಷೆಯಲ್ಲಿದ್ದ ಸಿ.ಪಿ.ಯೋಗೇಶ್ವರ್​​ಗೆ ಆಪರೇಷನ್ ಹಸ್ತ ಮಾಡಿ, ಟಿಕೆಟ್ ನೀಡಿರುವುದು ಗೆಲುವಿಗೆ ಪ್ರಮುಖ ಕಾರಣವಾಯಿತು.

ಬಂಡಾಯ ಶಮನದಿಂದ ಯಶಸ್ಸು: ಶಿಗ್ಗಾಂವಿ ಕ್ಷೇತ್ರದಲ್ಲಿ ಕಾಂಗ್ರೆಸ್ ಅಳೆದು ತೂಗಿ ಯಾಸೀರ್ ಖಾನ್ ಪಠಾಣ್ ಅವರಿಗೆ ಟಿಕೆಟ್ ನೀಡಿದ್ದು ಸಹ ಗೆಲುವಿಗೆ ಸಹಕಾರಿಯಾಯಿತು. ಕಾಂಗ್ರೆಸ್ ಟಿಕೆಟ್ ನಿರೀಕ್ಷಿಸಿದ್ದ ಅಜ್ಜಂಪೀರ್ ಖಾದ್ರಿ ಕಾಂಗ್ರೆಸ್ ಬಂಡಾಯ ಅಭ್ಯರ್ಥಿಯಾಗಿ ಕಣಕ್ಕಿಳಿದಾಗ ಸಚಿವ ಜಮೀರ್ ಅಹಮದ್​, ಖಾದ್ರಿ ಅವರ ಮನವೊಲಿಸಿ ಮುಸ್ಲಿಂ ಸಮುದಾಯದ ಮತಗಳು ವಿಭಜನೆಯಾಗದಂತೆ ಎಚ್ಚರಿಕೆ ವಹಿಸಿದ್ದರು. ಇದು ಕಾಂಗ್ರೆಸ್ ಅಭ್ಯರ್ಥಿಯು ಬಿಜೆಪಿಯ ಪ್ರಬಲ ಅಭ್ಯರ್ಥಿ ಭರತ್ ಬೊಮ್ಮಾಯಿ ವಿರುದ್ಧ ಜಯ ಗಳಿಸಲು ನೆರವಾಗಿದೆ. ಸಂಡೂರಿನಲ್ಲಿ ಕಾಂಗ್ರೆಸ್ ಪಕ್ಷ ಸಂಸದರಾಗಿದ್ದ ತುಕಾರಾಮ್ ಅವರ ಪತ್ನಿಯನ್ನೇ ಕಣಕ್ಕಿಳಿಸುವ ಮೂಲಕ ತನ್ನದೇ ಕ್ಷೇತ್ರವನ್ನು ಸುಲಭವಾಗಿ ಗೆದ್ದಿದೆ.

ಉಪಚುನಾವಣೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಪ್ರತ್ಯೇಕ ತಂಡ ರಚಿಸಿಕೊಂಡು ಅಬ್ಬರದ ಒಗ್ಗಟ್ಟಿನ ಪ್ರಚಾರ ನಡೆಸಿ, ಅಹಿಂದ ಮತಗಳನ್ನು ಸೆಳೆಯುವಲ್ಲಿ ಯಶಸ್ವಿಯಾಗಿದ್ದರಿಂದ ಮೂರೂ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಗೆಲುವಿನ ನಗೆ ಬೀರಿದೆ.

ಇದನ್ನೂ ಓದಿ: ಉಪಚುನಾವಣೆ ಫಲಿತಾಂಶ 2028ರ ಚುನಾವಣೆಗೆ ರಾಜ್ಯದ ಜನರ ಮುನ್ನುಡಿ: ಡಿಸಿಎಂ ಡಿ.ಕೆ.ಶಿವಕುಮಾರ್

ETV Bharat Logo

Copyright © 2024 Ushodaya Enterprises Pvt. Ltd., All Rights Reserved.