ETV Bharat / state

ಬಂಟ್ವಾಳ: ಅನುಮಾನಾಸ್ಪದ ರೀತಿಯಲ್ಲಿ ಕಾಂಗ್ರೆಸ್ ಕಾರ್ಯಕರ್ತನ ಶವ ಪತ್ತೆ; ತನಿಖೆಗೆ ಒತ್ತಾಯಿಸಿದ ಮಾಜಿ ಸಚಿವ ರೈ - CONGRESS WORKER DIED

ಬಂಟ್ವಾಳದಲ್ಲಿ ನೇಣು ಬಿಗಿದುಕೊಂಡಿರುವ ಸ್ಥಿತಿಯಲ್ಲಿ ಅನುಮಾನಾಸ್ಪದವಾಗಿ ಕಾಂಗ್ರೆಸ್ ಕಾರ್ಯಕರ್ತನ ಮೃತದೇಹ ಪತ್ತೆಯಾಗಿದೆ.

ಕಾಂಗ್ರೆಸ್ ಕಾರ್ಯಕರ್ತ
ಕಾಂಗ್ರೆಸ್ ಕಾರ್ಯಕರ್ತ
author img

By ETV Bharat Karnataka Team

Published : Mar 31, 2024, 10:41 PM IST

ಬಂಟ್ವಾಳ : ಬಂಟ್ವಾಳ ತಾಲೂಕಿನ ವಾಮದಪದವಿನಲ್ಲಿ ಅನುಮಾನಾಸ್ಪವಾಗಿ ಕೊಳೆತ ಸ್ಥಿತಿಯಲ್ಲಿ ಕಾಂಗ್ರೆಸ್ ಕಾರ್ಯಕರ್ತವೊಬ್ಬರ ಮೃತದೇಹ ಪತ್ತೆಯಾಗಿದೆ. ಮೃತರನ್ನು ಚೆನ್ನೈತೋಡಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ವಾಮದಪದವು ತಿಮರಡ್ಡ ನಿವಾಸಿ ಪದ್ಮನಾಭ ಸಾಮಂತ್ (34) ಎಂದು ಗುರುತಿಸಲಾಗಿದೆ.

ಪದ್ಮನಾಭ ಸಾಮಂತ್ ಜಿಲ್ಲಾ ಕಾಂಗ್ರೆಸ್ ಹಿಂದುಳಿದ ವರ್ಗಗಳ ಘಟಕದ ಉಪಾಧ್ಯಕ್ಷರಾಗಿದ್ದು, ಭಾನುವಾರ ಬೆಳಗ್ಗೆ ಮೃತದೇಹ ಮರವೊಂದಕ್ಕೆ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದೆ. ಮಾಹಿತಿ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಮಾಜಿ ಸಚಿವ ಬಿ.ರಮಾನಾಥ ರೈ ಸೇರಿದಂತೆ ಕಾಂಗ್ರೆಸ್ ಮುಖಂಡರು ಭೇಟಿ ನೀಡಿದರು.

ಈ ಸಂದರ್ಭ ಪೊಲೀಸ್ ಅಧಿಕಾರಿಗಳೊಂದಿಗೆ ಮಾತನಾಡಿದ ರಮಾನಾಥ ರೈ, ಸಾವಿನ ಕುರಿತು ನಿಷ್ಪಕ್ಷಪಾತವಾದ ತನಿಖೆ ನಡೆಸುವಂತೆ ಒತ್ತಾಯಿಸಿದರು. ನನಗೆ ಬೆದರಿಕೆ ಕರೆಗಳು ಬರುತ್ತಿವೆ ಎಂದು ಸಾಮಂತ್ ಹೇಳುತ್ತಿದ್ದನು. ಅದರಿಂದೇನಾದರೂ ಸಾವನ್ನಪ್ಪಿದನೇ ಅಥವಾ ಬೇರೆ ಯಾವ ಕಾರಣ ಕೃತ್ಯ ನಡೆದಿರಬಹುದು ಎಂಬ ಸಂಶಯಗಳ ನಿವಾರಣೆಯಾಗಬೇಕು ಎಂದರು.

ದೂರಿನಲ್ಲಿ ಏನಿದೆ? : ಈ ಕುರಿತು ಮೃತರ ಸಹೋದರ ನೀಡಿದ ದೂರಿನಂತೆ, ಪದ್ಮನಾಭ ಅವರು ಕ್ಯಾಟರಿಂಗ್ ಕೆಲಸ ಮಾಡಿಕೊಂಡಿದ್ದು, ಮನೆಗೆ 2-3 ದಿನಗಳಿಗೊಮ್ಮೆ ಬರುತ್ತಿದ್ದರು. ಮಾರ್ಚ್ 28ರಂದು ಪದ್ಮನಾಭ ಸಾಮಂತ್​ ಮನೆಯಲ್ಲಿರದೆ ಮೋಟಾರು ಸೈಕಲ್ ಮಾತ್ರ ಮನೆಯಲ್ಲಿದ್ದು, ರಾತ್ರಿ ದೂರವಾಣಿ ಕರೆಮಾಡಿದಾಗ ಕರೆಯನ್ನು ಸ್ವೀಕರಿಸಿರಲಿಲ್ಲ.

ಮಾರ್ಚ್ 31ರಂದು ಬೆಳಗ್ಗೆ ಮೃತದೇಹ ತೋಟದ ಹತ್ತಿರ ಇರುವ ಗುಡ್ಡ ಜಾಗದಲ್ಲಿ ನೇಣು ಬಿಗಿದುಕೊಂಡಿರುವಂತೆ ಮೃತದೇಹ ಕೊಳೆತ ಸ್ಥಿತಿಯಲ್ಲಿ ಅನುಮಾನಾಸ್ಪದವಾಗಿ ಕಂಡು ಬಂದಿದೆ ಎಂದು ದೂರು ನೀಡಿದ್ದಾರೆ. ಈ ಮೇರೆಗೆ ಪುಂಜಾಲಕಟ್ಟೆ ಠಾಣೆಯಲ್ಲಿ 174 (3)(vi) ಸಿಆರ್​ಪಿಸಿ ಯಂತೆ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ಮುಂದುವರೆಸಿದ್ದಾರೆ.

ಇದನ್ನೂ ಓದಿ : ನೀರಿನ ಟ್ಯಾಂಕ್​ಗೆ ಬಿದ್ದು ವ್ಯಕ್ತಿ ಆತ್ಮಹತ್ಯೆ: ದುರ್ವಾಸನೆಯಿಂದ ಘಟನೆ ಬಹಿರಂಗ - Man commits suicide

ETV Bharat Logo

Copyright © 2024 Ushodaya Enterprises Pvt. Ltd., All Rights Reserved.