ಗದಗ: ಕಾಂಗ್ರೆಸ್ ಕಾರ್ಯಕರ್ತನೊಬ್ಬನನ್ನು ಯಾರೋ ದುಷ್ಕರ್ಮಿಗಳು ಕೊಲೆ ಮಾಡಿ ಮರಕ್ಕೆ ನೇಣು ಹಾಕಿರುವ ಘಟನೆ ಜಿಲ್ಲೆಯ ಮುಂಡರಗಿ ತಾಲೂಕಿನ ಡಂಬಳ ಗ್ರಾಮದ ಬಳಿ ಮಂಗಳವಾರ ಬೆಳಕಿಗೆ ಬಂದಿದೆ. ಮೃತರನ್ನು ಡೋಣಿ ಗ್ರಾಮದ ಸ್ಥಳೀಯ ಕಾಂಗ್ರೆಸ್ ಮುಖಂಡ ಶರಣಪ್ಪ ಸಂದಿಗೌಡ್ರ ಎಂದು ಗುರುತಿಸಲಾಗಿದೆ.
ಬೈಕ್‌ನಲ್ಲಿ ಹೋಗುತ್ತಿದ್ದಾಗ ಶರಣಪ್ಪನ ಮೇಲೆ ದಾಳಿ ನಡೆಸಿದ ಹಂತಕರು, ಆತನ ಕಣ್ಣಿಗೆ ಕಾರದ ಪುಡಿ ಎಸೆದು ಕೊಲೆ ಮಾಡಿರುವ ಶಂಕೆ ವ್ಯಕ್ತವಾಗಿದೆ. ಕೊಲೆ ಬಳಿಕ ಆತನ ಮೃತದೇಹವನ್ನು ಮರಕ್ಕೆ ನೇತುಹಾಕಿದ ದುಷ್ಕರ್ಮಿಗಳು ಸ್ಥಳದಿಂದ ಪರಾರಿಯಾಗಿರುವುದಾಗಿ ಪೊಲೀಸ್ ಮೂಲಗಳಿಂದ ತಿಳಿದು ಬಂದಿದೆ.
ಮರದಲ್ಲಿ ನೇತಾಡುತ್ತಿದ್ದ ಶವವನ್ನು ಗ್ರಾಮಸ್ಥರು ಗಮನಿಸಿ ಮುಂಡರಗಿ ಪೊಲೀಸರು ಸ್ಥಳಕ್ಕೆ ಧಾವಿಸಿದ್ದಾರೆ. ಕೊಲೆಯಾದ ಶರಣಪ್ಪ ಡೋಣಿ ಗ್ರಾಮದ ಕಾಂಗ್ರೆಸ್ ಸಾಮಾಜಿಕ ಜಾಲತಾಣದ ಮುಖ್ಯಸ್ಥರಾಗಿದ್ದರು. ಸುದ್ದಿ ತಿಳಿದು ಸ್ಥಳಕ್ಕೆ ಬಂದ ಮುಂಡರಗಿ ಪೊಲೀಸರು ಪರಿಶೀಲನೆ ನಡೆಸಿದ್ದಾರೆ. ಘಟನೆ ಸ್ಥಳೀಯರಲ್ಲಿ ಭಯ ಹುಟ್ಟಿಸಿದೆ.
ಇದನ್ನೂ ಓದಿ: ಬೆಂಗಳೂರು: ಕಾರಿನಲ್ಲಿ ರಿಯಲ್ ಎಸ್ಟೇಟ್ ಉದ್ಯಮಿ ಶವ ಪತ್ತೆ, ಕೊಲೆ ಶಂಕೆ