ಬೆಂಗಳೂರು: ಜುಲೈ 26ರಂದು ಸಂಜೆಯ ವೇಳೆಗೆ ಮಾಧ್ಯಮಗಳಲ್ಲಿ ಬೆಂಗಳೂರು ನಗರಕ್ಕೆ ರೈಲುಗಳ ಮುಖಾಂತರ ಕುರಿ ಮತ್ತು ಇತರೆ ಪ್ರಾಣಿಗಳ ಮಾಂಸವು ಸರಬರಾಜು ಆಗುತ್ತಿರುವ ಕುರಿತಂತೆ ಸುದ್ದಿಗಳು ಭಿತ್ತರವಾಗಿರುತ್ತದೆ. ಲೋಪದೋಷಗಳು ಕಂಡುಬಂದಲ್ಲಿ ನಿಯಾಮನುಸಾರ ಮುಂದಿನ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಇಲಾಖೆಯ ಆಯುಕ್ತರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಈ ಕುರಿತಂತೆ, ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಇಲಾಖೆ ವತಿಯಿಂದ ಅಗತ್ಯ ಕ್ರಮಗಳನ್ನು ವಹಿಸಲಾಗಿದೆ. ಬೆಂಗಳೂರು ನಗರಕ್ಕೆ ರೈಲುಗಳ ಮುಖಾಂತರ ಕುರಿ ಮತ್ತು ಇತರೆ ಪ್ರಾಣಿಗಳ ಮಾಂಸವು ಸರಬರಾಜು ಆಗುತ್ತಿರುವ ಕುರಿತಂತೆ ಪರಿಶೀಲಿಸಲು ಪೋಲಿಸ್ ಇಲಾಖೆ ಹಾಗೂ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಇಲಾಖೆಯ ಅಧಿಕಾರಿಗಳು ತಪಾಸಣೆ ಮಾಡಿರುತ್ತಾರೆ ಎಂದಿದ್ದಾರೆ.
ಆಹಾರ ಪ್ರಯೋಗಾಲಯಕ್ಕೆ ಮಾಂಸದ ಮಾದರಿ ರವಾನೆ: ಸಂಬಂಧಿಸಿದಂತೆ, ವ್ಯಾಪ್ತಿಯ ಅಂಕಿತಾಧಿಕಾರಿಗಳು ಮತ್ತು ಆಹಾರ ಸುರಕ್ಷತಾಧಿಕಾರಿಗಳು ರೈಲ್ವೆ ನಿಲ್ದಾಣಕ್ಕೆ ಭೇಟಿ ನೀಡಿ ಪರಿಶೀಲಿಸಿರುತ್ತಾರೆ. ಪರಿಶೀಲನೆ ಸಂಧರ್ಭದಲ್ಲಿ ರಾಜಸ್ಥಾನದಿಂದ ಬಂದ ರೈಲಿನ ಮೂಲಕ ಸ್ವೀಕೃತವಾದ ಪಾರ್ಸೆಲ್‌ಗಳನ್ನು ನಿಲ್ದಾಣದ ಹೊರ ಆವರಣದಲ್ಲಿ ಸಾಗಾಣಿಕೆ ವಾಹನದಲ್ಲಿರಿಸಿರುವುದು ಕಂಡುಬಂದಿದೆ. ಒಟ್ಟು 90 ಸಂಖ್ಯೆಯ ಪಾರ್ಸೆಲ್‌ಗಳಿದ್ದು, ಅವುಗಳನ್ನು ಪರಿಶೀಲಿಸಲಾಗಿ ಪ್ರಾಣಿಯ ಮಾಂಸವಿರುವುದು ಕಂಡುಬಂದಿರುತ್ತದೆ. ಯಾವ ಪ್ರಾಣಿಯ ಮಾಂಸವೆಂದು ಖಚಿತಪಡಿಸಿಕೊಳ್ಳಲು ಮಾಂಸದ ಮಾದರಿಯನ್ನು ಸಂಗ್ರಹಿಸಿ, ಆಹಾರ ಪ್ರಯೋಗಾಲಯಕ್ಕೆ ವಿಶ್ಲೇಷಣೆಗಾಗಿ ಸಲ್ಲಿಸಲಾಗಿರುತ್ತದೆ ಎಂದು ತಿಳಿಸಿದೆ.
ವಿಶ್ಲೇಷಣಾ ಫಲಿತಾಂಶದ ಆಧಾರದ ಮೇಲೆ ಮುಂದಿನ ಕಾನೂನಾತ್ಮಕ ಕ್ರಮಗಳನ್ನು ಜರುಗಿಸಲಾಗುತ್ತದೆ. ಪಾರ್ಸೆಲ್‌ಗಳನ್ನು ಕಳುಹಿಸಿದವರ ಮತ್ತು ಸ್ವೀಕರಿಸಿದವರ ಎಫ್‌ಎಸ್‌ಎಸ್‌ಎಐ ಪರವಾನಗೆ ಸೇರಿದಂತೆ ವಿವರವಾದ ಮಾಹಿತಿಗಳನ್ನು ಸಂಗ್ರಹಿಸಲಾಗುತ್ತಿದೆ. ಲೋಪದೋಷಗಳು ಕಂಡುಬಂದಲ್ಲಿ ನಿಯಾಮನುಸಾರ ಮುಂದಿನ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಇಲಾಖೆಯ ಆಯುಕ್ತರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಇದನ್ನೂ ಓದಿ: ಪೊಲೀಸರ ಕರ್ತವ್ಯಕ್ಕೆ ಅಡ್ಡಿ ಆರೋಪ; ಪುನೀತ್ ಕೆರೆಹಳ್ಳಿ ಬಂಧನ